ಭದ್ರಾವತಿ | ಆಶ್ರಿತ ಸಂಸ್ಥೆ, ಸರ್ಕಾರಿ ಬಾಲಕಿಯರ ಪ್ರೌಢಶಾಲೆ ಸಹಯೋಗದಲ್ಲಿ ಮಕ್ಕಳ ದಿನಾಚರಣೆ

Date:

ಭದ್ರಾವತಿಯ ನ್ಯೂಟೌನ್ ನಗರದಲ್ಲಿರುವ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಆಶ್ರಿತ ಸಂಸ್ಥೆ ಮತ್ತು ಸರ್ಕಾರಿ ಬಾಲಕಿಯರ ಪ್ರೌಢಶಾಲೆಯ ಸಹಯೋಗದಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮವನ್ನು ಮಕ್ಕಳ ಹಕ್ಕುಗಳು, ಮಕ್ಕಳ ರಕ್ಷಣೆ, ಶಿಕ್ಷಣದ ಮಹತ್ವ ಹಾಗೂ ಮಕ್ಕಳ ಸರ್ವತೋಮುಖ ಅಭಿವೃದ್ಧಿಯ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಆಯೋಜಿಸಲಾಗಿತ್ತು.

- Advertisement -

ಕಾರ್ಯಕ್ರಮದಲ್ಲಿ ಪ್ರೌಢಶಾಲಾ ವಿಭಾಗದ ಇಂಚಾರ್ಜ್ ಮುಖ್ಯ ಶಿಕ್ಷಕರಾದ ಸೀಮಾ ಎಂ.ಇ ಮಕ್ಕಳ ದಿನಾಚರಣೆಯ ಮಹತ್ವ, ಭಾರತದ ಮೊದಲ ಪ್ರಧಾನಮಂತ್ರಿ ಪಂಡಿತ್ ಜವಾಹರಲಾಲ್ ನೆಹರು ಅವರ ಜನ್ಮದಿನದ ವಿಶೇಷತೆ ಹಾಗೂ ಮಕ್ಕಳ ಮೇಲಿನ ಪ್ರೀತಿ, ಕಾಳಜಿ ಮತ್ತು ಜವಾಬ್ದಾರಿಗಳ ಕುರಿತು ಮಾಹಿತಿ ನೀಡಲಾಯಿತು. ಇದೇ ಸಂದರ್ಭದಲ್ಲಿ ಆಶ್ರಿತ ಸಂಸ್ಥೆಯ ಜಿಲ್ಲಾ ಸಂಯೋಜಕರಾದ ಹನುಮಂತಪ್ಪ ನವರು ಮಕ್ಕಳ ಹಕ್ಕುಗಳು, ಬಾಲ್ಯವಿವಾಹ ನಿಷೇಧ, ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ, ಹೆಣ್ಣುಮಕ್ಕಳ ಶಿಕ್ಷಣ, ಮಕ್ಕಳ ಸುರಕ್ಷತೆ ಮತ್ತು ಮಕ್ಕಳಿಗೆ ಸಂಬಂಧಿಸಿದ ಕಾನೂನುಗಳ ಕುರಿತು ವಿದ್ಯಾರ್ಥಿನಿಯರಿಗೆ ಅರಿವು ಮೂಡಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಾಗಲಕೋಟೆ | ಸಾಕ್ಷರತೆಯಲಿ ಹಿಂದುಳಿದ ಜಿಲ್ಲೆ ʻಅಕ್ಷರ ಕ್ರಾಂತಿಗೆʼ...

ಮುಳುಗಡೆ ನಗರಿ ಬಾಗಲಕೋಟೆ ಜಿಲ್ಲೆ ಇಂದು ಕಬ್ಬಿನ ಬೆಲೆ ಹೋರಾಟದಲ್ಲಿ ಗೆಲುವು ಸಾಧಿಸಿ ಸಂಭ್ರಮಿಸುತ್ತಿದೆ. ಇದೇ ಸಂಭ್ರಮ ಶಿಕ್ಷಣ ಕ್ಷೇತ್ರದಲ್ಲಿಯೂ ಕಾಣಿಸಿಕೊಳ್ಳಬೇಕಿದೆ. ಆದರೆ, ಸಾಕ್ಷರತೆ, ಶಿಕ್ಷಕರ ಕೊರತೆ ಹಾಗೂ ಡಿಜಿಟಲ್ ಸೌಲಭ್ಯಗಳ ಅಭಾವ...

25ರ ಹರೆಯದಲ್ಲೇ ಬ್ರಿಟಿಷ್ ಸಾಮ್ರಾಜ್ಯಕ್ಕೆ ಸಿಂಹಸ್ವಪ್ನವಾದ ಆದಿವಾಸಿ ಕ್ರಾಂತಿಕಾರಿ...

ಕೇವಲ 25 ವರ್ಷಗಳ ಬದುಕಿನಲ್ಲಿ ಬ್ರಿಟಿಷ್ ಸಾಮ್ರಾಜ್ಯಶಾಹಿ ಆಡಳಿತಕ್ಕೆ ಸವಾಲು ಹಾಕಿ, ಸಾವಿರಾರು ಆದಿವಾಸಿಗಳನ್ನು ಸಂಘಟಿಸಿ, ಭೂಮಿಯ ಹಕ್ಕು ಮತ್ತು ಸ್ವಯಂ ಆಡಳಿತಕ್ಕಾಗಿ ಬೃಹತ್ ಚಳವಳಿಯನ್ನು ಕಟ್ಟಿದ ಬಿರ್ಸಾ ಮುಂಡಾ ಅವರು ಕೇವಲ...

ನಾರ್ವೆಯ ಪತ್ರಕರ್ತೆ ಹೆಲ್ಲೆ ಲಿಂಗ್ ವೀಸಾ ರದ್ದತಿ ಪ್ರಕರಣ:...

ನಿರಂತರ ಹೋರಾಟದ ಮೂಲಕ ಗಳಿಸಿದ ಸ್ವಾತಂತ್ರ್ಯ, 'ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು' ಸಿದ್ಧಾಂತದ ಸಂವಿಧಾನದ ಮೂಲಕ ಸ್ಥಾಪಿಸಿದ ಪ್ರಜಾಪ್ರಭುತ್ವದ ಮೌಲ್ಯಗಳು ಮತ್ತು ಅವುಗಳನ್ನು ಕಾಪಾಡುವಲ್ಲಿ ಆಡಳಿತದ ಹೊಣೆಗಾರಿಕೆ ಭಾರತದ ಜಾಗತಿಕ ಪ್ರತಿಷ್ಠೆಯ ಮೂಲಾಧಾರಗಳಾಗಿವೆ. ನಾರ್ವೆಯ...

ಮಕ್ಕಳು ತಮ್ಮ ಹಕ್ಕುಗಳ ಬಗ್ಗೆ ತಿಳಿದುಕೊಳ್ಳುವುದರ ಜೊತೆಗೆ, ಯಾವುದೇ ರೀತಿಯ ಶೋಷಣೆ, ದೌರ್ಜನ್ಯ ಅಥವಾ ಬಾಲ್ಯವಿವಾಹದಂತಹ ಸಮಸ್ಯೆಗಳು ಎದುರಾದಾಗ ಮಕ್ಕಳ ಸಹಾಯವಾಣಿ 1098 ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು ಹಾಗೂ ಶಿಕ್ಷಣದ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ತಿಳಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕ ವೃಂದದವರಾದ ಶಪಿನಾಜ್ ಬಾನು ಕೋಟೇಶ್ವರಿ ಎನ್ ಮಂಜುಳಾ ಜಯಲಕ್ಷ್ಮಿ ಎನ್ ಜಿ ನೂರ್ ಫಾತಿಮಾ ಫಾರ್ನಾಜ್ ಅಶ್ವಿನಿ ಹಪ್ತಾಜ್ ಅಹಮದ್ ಮೆಹಬೂಬ್ ಆಲಿಖಾನ್ ಹಾಗೂ ಅಧ್ಯಾಪಕೇತರ ವೃಂದದವರು ಹಾಜರಿದ್ದರು ಆಶ್ರಿತ ಸಂಸ್ಥೆಯ ಪ್ರತಿನಿಧಿಗಳು ಹಾಗೂ ವಿದ್ಯಾರ್ಥಿನಿಯರು ಭಾಗವಹಿಸಿದ್ದರು.

ಮಕ್ಕಳಲ್ಲಿ ಆತ್ಮವಿಶ್ವಾಸ, ಜಾಗೃತಿ ಮತ್ತು ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸುವ ನಿಟ್ಟಿನಲ್ಲಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಂಜಾಬ್‌ನಲ್ಲಿ 5,000ಕ್ಕೂ ಹೆಚ್ಚು ಕೃಷಿ ತ್ಯಾಜ್ಯ ಸುಡುವ ಪ್ರಕರಣ ದಾಖಲು: 1 ಕೋಟಿ ರೂ. ದಂಡ ವಿಧಿಸಿದ ಸರ್ಕಾರ

ದೆಹಲಿ ಮತ್ತು ಉತ್ತರ ಭಾರತದಲ್ಲಿ ಹೆಚ್ಚುತ್ತಿರುವ ವಾಯುಮಾಲಿನ್ಯದ ನಡುವೆಯೇ, ಪಂಜಾಬ್‌ನಲ್ಲಿ ಕೃಷಿ...

50% ಸಮಾನ ಹೆಚ್ಚಳ ಷರತ್ತು; ಕೇಂದ್ರದ ಕ್ಷೇತ್ರ ಮರುವಿಂಗಡಣೆ ಮಸೂದೆಗೆ ಸುಪ್ರಿಯಾ ಸುಳೆ ಬೆಂಬಲ

ಲೋಕಸಭಾ ಕ್ಷೇತ್ರಗಳ ಸಂಖ್ಯೆಯನ್ನು ಎಲ್ಲ ರಾಜ್ಯಗಳಲ್ಲೂ ಯಾವುದೇ ತಾರತಮ್ಯವಿಲ್ಲದೆ '50%ರಷ್ಟು ಸಮಾನ’ವಾಗಿ...

ಭಾರತದ ಪ್ರಜಾಪ್ರಭುತ್ವವು 2014ರಲ್ಲಿಯೇ ನಾಶವಾಗಿದೆ: ರಾಹುಲ್ ಗಾಂಧಿ

ಭಾರತದ ಪ್ರಜಾಪ್ರಭುತ್ವವು ಸಾರ್ವಜನಿಕರ ಆಸ್ತಿಯಾಗಿದೆ. ಆದರೆ, ಅದು 2014ರಲ್ಲಿಯೇ ನಾಶವಾಗಿದೆ ಎಂದು...