ಶಿಕಾರಿಪುರದಲ್ಲಿ ‘ಭಾರತ್ ಜೋಡೋ 2.0’ ಪಾದಯಾತ್ರೆಗೆ ಚಾಲನೆ

Date:

ಇಂದು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಕಿಟ್ಟದಹಳ್ಳಿ ಗ್ರಾಮದಿಂದ ‘ಭಾರತ್ ಜೋಡೋ 2.0’ ಪಾದಯಾತ್ರೆಗೆ ಅಧಿಕೃತವಾಗಿ ಚಾಲನೆ ನೀಡಲಾಗಿದೆ. 2022ರಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಭಾರತ್ ಜೋಡೋ ಯಾತ್ರೆಯು ಕರ್ನಾಟಕಕ್ಕೆ ಪ್ರವೇಶಿಸಿದ ನಾಲ್ಕನೇ ವಾರ್ಷಿಕೋತ್ಸವದ ನೆನಪಿಗೆ ಈ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ.

ಸುಮಾರು 9-10 ಕಿಲೋಮೀಟರ್ ಉದ್ದದ ಪಾದಯಾತ್ರೆಯು ಕಿಟ್ಟದಹಳ್ಳಿಯಿಂದ ಆರಂಭವಾಗಿ ಕೋಟೆ, ಹೊಸನಗರ ಕ್ರಾಸ್ ಮತ್ತು ನೆಲವಾಗಿಲು ಮಾರ್ಗವಾಗಿ ಶಿಕಾರಿಪುರ ಪಟ್ಟಣವನ್ನು ತಲುಪಿ, ಅಲ್ಲಿ APMC ಆವರಣದಲ್ಲಿ ಬೃಹತ್ ಸಾರ್ವಜನಿಕ ಸಭೆ ನಡೆಯಲಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ನೇತೃತ್ವದಲ್ಲಿ ನಡೆಯುತ್ತಿರುವ ಈ ಪಾದಯಾತ್ರೆಯಲ್ಲಿ ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ, ಮುಜರಾಯಿ ಸಚಿವ ಕೆ.ಎಸ್. ಬಸವಂತಪ್ಪ ಹಾಗೂ ಇತರ ಹಿರಿಯ ನಾಯಕರು ಭಾಗವಹಿಸುತ್ತಿದ್ದಾರೆ.

ಕಾಂಗ್ರೆಸ್ 2023ರ ವಿಧಾನಸಭಾ ಚುನಾವಣೆಯಲ್ಲಿ ಸೋತ 84 ಕ್ಷೇತ್ರಗಳಲ್ಲಿ 84 ದಿನಗಳ ಕಾಲ ಪಾದಯಾತ್ರೆ ನಡೆಸುವುದಾಗಿ ಘೋಷಿಸಿದ್ದು, ಪ್ರತಿ ಕ್ಷೇತ್ರದಲ್ಲಿ ಸುಮಾರು 10 ಕಿಲೋಮೀಟರ್ ನಡಿಗೆಯೊಂದಿಗೆ ಸಾರ್ವಜನಿಕ ಸಭೆ ನಡೆಸಲಾಗುವುದು. ಯಾತ್ರೆಯಲ್ಲಿ SIR ಪ್ರಕ್ರಿಯೆಯಲ್ಲಿ ಮತದಾರರ ಹೆಸರುಗಳು ಅಳಿಸಲಾಗುತ್ತಿದೆ ಎಂಬ ಆರೋಪ, ರೈತರ ಸಮಸ್ಯೆಗಳು, ಬರ, ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಮತ್ತು ಸಾಂವಿಧಾನಿಕ ಮೌಲ್ಯಗಳ ರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸಲಾಗುವುದು ಎಂದು ಕಾಂಗ್ರೆಸ್‌ ನಾಯಕರು ಹೇಳಿದ್ದಾರೆ.

- Advertisement -

ಈ ವೇಳೆ ಮಾತನಾಡಿದ ಬಿ.ಕೆ ಹರಿಪ್ರಸಾದ್‌ ದೇಶದಲ್ಲಿ ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ಬಿಜೆಪಿ ಹುಟ್ಟುಹಾಕಿರುವ ದ್ವೇಷದ ಹಾದಿಯಲ್ಲಿ ಕಾಂಗ್ರೆಸ್‌ ಪ್ರೀತಿಯ ಅಂಗಡಿ ತೆರೆಯಲಿದೆ ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬರ: ಪರಿಹಾರ ಮತ್ತು ಪರ್ಯಾಯ ಮಾರ್ಗಗಳತ್ತ ಒಂದು ನೋಟ

ಬರ ಸಮಸ್ಯೆಯನ್ನು ನಿಭಾಯಿಸುವಲ್ಲಿ ಮಹಾರಾಷ್ಟ್ರವು ಮಾದರಿ ಕಾರ್ಯಾಚರಣೆ ಕೈಗೊಂಡಿದೆ. ಮತ್ತು ಅದರಲ್ಲಿ ಅದು ಬಹುಪಾಲು ಯಶಸ್ಸನ್ನೂ ಸಾಧಿಸಿದೆ. ಬೃಹತ್ ನೀರಾವರಿ ಯೋಜನೆಗಳಿಗೆ ಕೊಡುವ ಆದ್ಯತೆ ಮತ್ತು ಮಹತ್ವವನ್ನು ಸಣ್ಣ ನೀರಾವರಿ ಯೋಜನೆಗಳಿಗೂ ನೀಡಬೇಕೆನ್ನುವುದೇ...

ಹಮ್ ಔರತೇಂ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

ಪಾದಯಾತ್ರೆಯ ಸಂದರ್ಭದಲ್ಲಿ ಬಿ.ಕೆ. ಹರಿಪ್ರಸಾದ್ ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರರ ವಿರುದ್ಧ ತೀವ್ರ ಟೀಕೆ ಮಾಡಿದ್ದು, ವಿಜಯೇಂದ್ರ ಕಾಂಗ್ರೆಸ್ ಧ್ವಜಗಳು ಮತ್ತು ಪೋಸ್ಟರ್‌ಗಳನ್ನು ಹರಿದು ಹಾಕಿಸಿದ್ದಾರೆ ಎಂದು ಆರೋಪಿಸಿದರು.

ಶಿಕಾರಿಪುರವು ವಿಜಯೇಂದ್ರರ ಕ್ಷೇತ್ರವಾಗಿದ್ದು, ಹಿಂದೆ ಅವರ ತಂದೆ ಬಿ.ಎಸ್. ಯಡಿಯೂರಪ್ಪರ ಬಲವಾದ ಕೋಟೆಯಾಗಿತ್ತು. ಇಲ್ಲಿಂದಲೇ ಯಾತ್ರೆ ಆರಂಭಿಸುವುದರಿಂದ ಬಿಜೆಪಿ ಭದ್ರ ಕೋಟೆಯಲ್ಲಿ ಕಾಂಗ್ರೆಸ್‌ ಬಲಗೊಳಿಸುವುದು ಪಕ್ಷದ ಉದ್ದೇಶವಾಗಿದೆ ಎಂದು ನಾಯಕರು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಈಜಲು ತೆರಳಿದ ಯುವಕರು ನೀರುಪಾಲು; ಬೈಂದೂರಿನಲ್ಲಿ ಕೊಲೆ ಯತ್ನ ಆರೋಪಿಗಳ ಆತ್ಮಹತ್ಯೆ

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ಹೆರ್ಮುಂಡೆಯಲ್ಲಿ ಸ್ನೇಹಿತರೊಂದಿಗೆ ಈಜಲು...

ಬೀದರ್‌ | ಹಾಲಿಗಿಂತ ನೀರು ದುಬಾರಿಯಾಗುವ ಕಾಲ ದೂರವಿಲ್ಲ: ಮಾರುತಿ ಬೌದ್ಧೆ

ನಿಸರ್ಗದತ್ತವಾಗಿ ಉಚಿತವಾಗಿ ದೊರೆಯಬೇಕಾದ ನೀರು ಮುಂದೊಂದು ದಿನ ಹಾಲಿನ ದರಕ್ಕಿಂತಲೂ ದುಬಾರಿಯಾಗಿ...

ಬಿಹಾರದಲ್ಲಿ ಮತ್ತೊಂದು ಆಘಾತಕಾರಿ ಕೃತ್ಯ: ಬೈಕ್ ತಡೆದು ಅಪ್ರಾಪ್ತರ ಮೇಲೆ ಗೂಂಡಾಗಿರಿ

ನೆತ್ತಿಯ ಮೇಲೆ ಸೂರ್ಯ ಉರಿಯುತ್ತಿದ್ದ ಆ ಮಧ್ಯಾಹ್ನ, ವಾತಾವರಣದಲ್ಲಿ ವಿಚಿತ್ರವಾದ ಮೌನ...

ನಿಯಮಗಿರಿ ಗಣಿಗಾರಿಕೆ ಪುನರಾರಂಭದ ಕುಮ್ಮಕ್ಕು: ಜಲಮೂಲ, ಅಸ್ತಿತ್ವ ರಕ್ಷಣೆಗೆ ಸಿಡಿದೆದ್ದ ಪರಿಸರ ಪ್ರೇಮಿಗಳು!

ಒಡಿಶಾದ ರಾಯಗಡ ಮತ್ತು ಕಾಲಾಹಾಂಡಿ ಜಿಲ್ಲೆಗಳ ಗಡಿಭಾಗದಲ್ಲಿರುವ ಪ್ರಸಿದ್ಧ ನಿಯಮಗಿರಿ ಬೆಟ್ಟ...