ಭದ್ರಾವತಿ | ಬಾಲ್ಯವಿವಾಹ ಮುಕ್ತ ಸಮಾಜ ನಿರ್ಮಾಣಕ್ಕೆ ಸಂಘಟಿತ ಪ್ರಯತ್ನ ಅಗತ್ಯ: ಗಣ್ಯರ ಅಭಿಮತ

Date:

ಆಶ್ರಿತ ಸಂಸ್ಥೆ, ಶಿವಮೊಗ್ಗ ಹಾಗೂ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ ಮತ್ತು ನಗರಸಭೆ, ಭದ್ರಾವತಿ ಸಂಬಂಧಿಸಿದ ಇಲಾಖೆಗಳ ಸಹಭಾಗಿತ್ವದಲ್ಲಿ ಗುರುವಾರ ಭದ್ರಾವತಿ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಅಂತಾರಾಷ್ಟ್ರೀಯ ಬಾಲ್ಯ, ಆರಂಭಿಕ ಮತ್ತು ಬಲವಂತದ ವಿವಾಹ ನಿರ್ಮೂಲನೆ ದಿನಾಚರಣೆಯ ಕಾರ್ಯಕ್ರಮ ನಡೆಯಿತು.

- Advertisement -

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಹೇಮಂತ್ ಕುಮಾರ ಅವರು, ಬಾಲ್ಯವಿವಾಹವು ಮಕ್ಕಳ ಶಿಕ್ಷಣ, ಆರೋಗ್ಯ, ವ್ಯಕ್ತಿತ್ವ ವಿಕಸನ ಹಾಗೂ ಭವಿಷ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಪ್ರತಿಯೊಂದು ಮಗುವಿಗೂ ಶಿಕ್ಷಣ ಪಡೆಯುವ, ತನ್ನ ಕನಸುಗಳನ್ನು ನನಸಾಗಿಸಿಕೊಳ್ಳುವ ಮತ್ತು ಗೌರವಯುತ ಜೀವನ ನಡೆಸುವ ಹಕ್ಕಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ಬಿಸ್ಲೆರಿ’ ವಿರುದ್ಧದ ಕ್ರಮಕ್ಕೂ ನೀರು ಮಾರುಕಟ್ಟಗೆ ‘ಅಂಬಾನಿ’ ಪ್ರವೇಶಕ್ಕೂ...

ಭಾರತದ ಪ್ಯಾಕೇಜ್ಡ್ ಕುಡಿಯುವ ನೀರಿನ ಮಾರುಕಟ್ಟೆಯಲ್ಲಿ ಸುಮಾರು 35ರಿಂದ 36%ರಷ್ಟು ಮಾರುಕಟ್ಟೆ ಪಾಲನ್ನು ಬಿಸ್ಲೆರಿ ಹೊಂದಿದೆ. ಬಿಸ್ಲೆರಿ ನೀರಿನ ಸಂಸ್ಥೆ ‘ಬಿಸ್ಲೆರಿ ಇಂಟರ್‌ನ್ಯಾಷನಲ್ ಪ್ರೈವೇಟ್ ಲಿಮಿಟೆಡ್’ ವಿರುದ್ಧ ಭಾರತೀಯ ಆಹಾರ ಸುರಕ್ಷತೆ ಮತ್ತು...

ಸಂವಿಧಾನ ದಿನ | ಸಂವಿಧಾನಕ್ಕೆ ಮೋದಿ ಸರ್ಕಾರ ಮತ್ತು...

ಭಾರತವು ಸಂವಿಧಾನ ದಿನವನ್ನು ಆಚರಿಸುತ್ತಿರುವ ಈ ಸಂದರ್ಭದಲ್ಲಿ, ದೇಶದ ಪ್ರಜಾಸತ್ತಾತ್ಮಕ ವ್ಯವಸ್ಥೆ ಮತ್ತು ಸಂವಿಧಾನದ ಮೂಲ ಆಶಯಗಳು ಅಭೂತಪೂರ್ವ ಬಿಕ್ಕಟ್ಟಿಗೆ ಸಿಲುಕಿವೆ. 2014ರಲ್ಲಿ ಅಧಿಕಾರಕ್ಕೆ ಬಂದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ...

ಯುಪಿ ಚುನಾವಣೆ: ಆಡಳಿತ ಯಂತ್ರ, ಜಾತಿ ಸಮೀಕರಣ ಮತ್ತು...

2027ರ ಉತ್ತರ ಪ್ರದೇಶ ಚುನಾವಣೆಗೆ ಮುನ್ನ ಮತದಾರರ ಪಟ್ಟಿಯಲ್ಲಿನ ಲಿಂಗ ಅಂತರ, ಜಾತಿ ಸಮೀಕರಣ ಹಾಗೂ ಮೈತ್ರಿ ಪಕ್ಷಗಳ ಸೀಟು ಹಂಚಿಕೆಯ ಚೌಕಾಸಿ ಹೊಸ ಪ್ರಶ್ನೆಗಳನ್ನು ಹುಟ್ಟುಹಾಕಿವೆ. ಸಾಮಾಜಿಕ ನ್ಯಾಯದ ಹೆಸರಿನಲ್ಲಿ ನಡೆಯುತ್ತಿರುವ...

ಬಾಲ್ಯವಿವಾಹವನ್ನು ತಡೆಗಟ್ಟುವುದು ಕೇವಲ ಸರ್ಕಾರ ಅಥವಾ ಒಂದು ಇಲಾಖೆಯ ಜವಾಬ್ದಾರಿಯಲ್ಲ. ಪೋಷಕರು, ಶಿಕ್ಷಕರು, ಸ್ಥಳೀಯ ಸಂಸ್ಥೆಗಳು, ಸಂಘ-ಸಂಸ್ಥೆಗಳು ಹಾಗೂ ಸಾರ್ವಜನಿಕರು ಒಟ್ಟಾಗಿ ಕಾರ್ಯನಿರ್ವಹಿಸಬೇಕು. ಬಾಲ್ಯವಿವಾಹ ಮುಕ್ತ ಭದ್ರಾವತಿ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಕರೆ ನೀಡಿದರು.

ಮಾಜಿ ನಗರಸಭಾ ಅಧ್ಯಕ್ಷರಾದ ಬಿ.ಕೆ. ಮೋಹನ್ ಅವರು ಮಾತನಾಡಿ, ಬಾಲ್ಯವಿವಾಹವು ಸಮಾಜದ ಅಭಿವೃದ್ಧಿಗೆ ಅಡ್ಡಿಯಾಗುವ ಸಾಮಾಜಿಕ ಪಿಡುಗಾಗಿದೆ. ಮಕ್ಕಳ ಬಾಲ್ಯವನ್ನು ಕಸಿದುಕೊಳ್ಳುವ ಇಂತಹ ಪದ್ಧತಿಯನ್ನು ತೊಡೆದುಹಾಕಲು ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಜನಜಾಗೃತಿ ಮೂಡಿಸಬೇಕು.. ಬಾಲ್ಯವಿವಾಹದಿಂದ ಬಾಲಕಿಯರ ಶಿಕ್ಷಣ ಮೊಟಕುಗೊಳ್ಳುವುದು, ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುವುದು. ಈ ಕುರಿತು ಕೆಲವು ನಿದರ್ಶನಗಳನ್ನು ವಿವರಿಸುತ್ತಾ, ಬಾಲ್ಯವಿವಾಹ ತಡೆಗಟ್ಟಲು ಪೋಷಕರಲ್ಲಿ ಅರಿವು ಮೂಡಿಸುವುದು, ಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡುವುದು ಅಗತ್ಯವಾಗಿದೆ.

ಶಿವಮೊಗ್ಗ ಜಿಲ್ಲೆಯಲ್ಲಿ ಆಶ್ರಿತ ಸಂಸ್ಥೆಯು ಬಾಲ್ಯವಿವಾಹ ಮತ್ತು ಬಾಲಕಾರ್ಮಿಕ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸುವುದರ ಜೊತೆಗೆ ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ಕಾರ್ಯನಿರ್ವಹಿಸುತ್ತಿರುವುದು ಸಂತಸದ ವಿಚಾರವಾಗಿದೆ. ಇಂತಹ ಸಮಾಜಮುಖಿ ಕಾರ್ಯಗಳು ನಿರಂತರವಾಗಿ ಮುಂದುವರಿಯಬೇಕು. ಸಂಸ್ಥೆಯ ಕಾರ್ಯಗಳಿಗೆ ತಮ್ಮ ಹರ್ಷ ಮತ್ತು ಮೆಚ್ಚುಗೆಯನ್ನು ವ್ಯಕ್ತಪಡಿಸಿದರು, ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಗ್ರೇಡ್-1 ಎಂ. ಶಿವಕುಮಾರ್ ಅವರು ಮಾತನಾಡಿ, ಸಮಾಜದಲ್ಲಿ ಇಂದಿಗೂ ಬಾಲ್ಯವಿವಾಹದಂತಹ ಅನಿಷ್ಟ ಪದ್ಧತಿಗಳು ಕಂಡುಬರುತ್ತಿದ್ದು, ಅವುಗಳನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ನಿರಂತರ ಜಾಗೃತಿ ಅಗತ್ಯವಾಗಿದೆ. ಹೆಣ್ಣುಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು.

ಮಕ್ಕಳ ಹಕ್ಕುಗಳ ರಕ್ಷಣೆ ಹಾಗೂ ಬಾಲ್ಯವಿವಾಹ ತಡೆಗಟ್ಟುವಲ್ಲಿ ಪ್ರತಿಯೊಂದು ಇಲಾಖೆಯೂ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.ಶ್ರೀಮತಿ ಸುಶೀಲಾ ಬಾಯಿ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳು, ಭದ್ರಾವತಿ ಅವರು ಮಾತನಾಡಿ, ಬಾಲ್ಯವಿವಾಹದಿಂದ ಬಾಲಕಿಯರ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಉಂಟಾಗುವ ದುಷ್ಪರಿಣಾಮಗಳ ಕುರಿತು ಸಮಗ್ರ ಮಾಹಿತಿ ನೀಡಿದರು.

ಅಪ್ರಾಪ್ತ ವಯಸ್ಸಿನಲ್ಲಿ ವಿವಾಹವಾಗುವುದರಿಂದ ಗರ್ಭಧಾರಣೆ, ತಾಯಿ ಮತ್ತು ಶಿಶು ಮರಣದ ಅಪಾಯ, ಅಪೌಷ್ಟಿಕತೆ ಹಾಗೂ ವಿವಿಧ ಆರೋಗ್ಯ ಸಮಸ್ಯೆಗಳು ಉಂಟಾಗುವ ಸಾಧ್ಯತೆಗಳಿವೆ. ಬಾಲಕಿಯರ ಆರೋಗ್ಯ, ಶಿಕ್ಷಣ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ಬಾಲ್ಯವಿವಾಹವನ್ನು ಸಂಪೂರ್ಣವಾಗಿ ತಡೆಗಟ್ಟಬೇಕು. ಈ ನಿಟ್ಟಿನಲ್ಲಿ ಪೋಷಕರು ಮತ್ತು ಸಾರ್ವಜನಿಕರು ಜಾಗೃತರಾಗಬೇಕು ಎಂದು ತಿಳಿಸಿದರು.

ಕುವೆಂಪು ವಿಶ್ವವಿದ್ಯಾಲಯ, ಶಂಕರಘಟ್ಟದ ಸಿಂಡಿಕೇಟ್ ಸದಸ್ಯರು ಹಾಗೂ ವಕೀಲರಾದ ಎಂ. ಶಿವಕುಮಾರ್ ಅವರು ಮಾತನಾಡಿ, ಬಾಲ್ಯವಿವಾಹ ಮತ್ತು ಬಾಲಕಾರ್ಮಿಕ ಪದ್ಧತಿಗೆ ಸಂಬಂಧಿಸಿದಂತೆ ಜಾರಿಯಲ್ಲಿರುವ ಕಾನೂನುಗಳು, ಕಾಯ್ದೆಗಳು ಹಾಗೂ ಮಕ್ಕಳ ಹಕ್ಕುಗಳ ರಕ್ಷಣೆಗೆ ಇರುವ ಕಾನೂನುಬದ್ಧ ಅವಕಾಶಗಳ ಕುರಿತು ಸವಿಸ್ತಾರವಾದ ಮಾಹಿತಿ ನೀಡಿದರು. ಬಾಲ್ಯವಿವಾಹ ನಿಷೇಧ ಕಾಯ್ದೆ ಮತ್ತು ಬಾಲಕಾರ್ಮಿಕ ನಿಷೇಧ ಹಾಗೂ ನಿಯಂತ್ರಣ ಕಾಯ್ದೆಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಅಗತ್ಯವಾಗಿದೆ. ಮಕ್ಕಳನ್ನು ಬಾಲ್ಯವಿವಾಹ ಮತ್ತು ಬಾಲಕಾರ್ಮಿಕ ಪದ್ಧತಿಯಿಂದ ರಕ್ಷಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.

ಆಶ್ರಿತ ಸಂಸ್ಥೆಯ ಜಿಲ್ಲಾ ಸಂಯೋಜಕರಾದ ಹನುಮಂತಪ್ಪನವರು ಮಾತನಾಡಿ, ನವೆಂಬರ್ 27ರಂದು ಆಚರಿಸಲಾಗುವ ಅಂತಾರಾಷ್ಟ್ರೀಯ ಬಾಲ್ಯವಿವಾಹ ಮತ್ತು ಬಲವಂತದ ವಿವಾಹ ನಿರ್ಮೂಲನೆ ದಿನಾಚರಣೆಯ ಮಹತ್ವ ಹಾಗೂ ಅದರ ಹಿನ್ನೆಲೆಯ ಕುರಿತು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಭದ್ರಾವತಿಯ ಗ್ರೇಡ್-2 ತಹಶೀಲ್ದಾರರಾದ ಸುರೇಶ್, ಕಾರ್ಮಿಕ ಇಲಾಖೆಯ ಕಾರ್ಮಿಕ ನಿರೀಕ್ಷಕರಾದ ಶ್ರೀಮತಿ ಸುಪಿತಾ ಜೆ.ವಿ. ರಕ್ಷಿತ್ ಬಿ.ಎಂ., ತಾಲ್ಲೂಕು ಆರೋಗ್ಯ ನಿವೃತ್ತ ಪ್ರಾಂಶುಪಾಲರಾದ ಶ್ರೀ ಶಿವಬಸಪ್ಪ, ಶಿಕ್ಷಣ ಸುಧಾರಣಾ ಸಮಿತಿಯ ಅಧ್ಯಕ್ಷರಾದ ಸಿ. ಜಯಪ್ಪ, ಎಸ್.ಕೆ. ಸುದೀಂದರ್, ಭೂ ನ್ಯಾಯ ಮಂಡಳಿ ಸಮಿತಿ ಸದಸ್ಯರಾದ ಶ್ರೀ ಪುಟ್ಟರಾಜ್, ರಾಜು BL ಹಾಗೂ ಎಸ್.ಕೆ. ಸುಧೀಂದ್ರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಗಣ್ಯರು ಹಾಗೂ ಮಹಿಳೆಯರು ಸಾರ್ವಜನಿಕರು ಭಾಗವಹಿಸಿದ್ದರು.

ಬಾಲ್ಯವಿವಾಹ ಮುಕ್ತ ಗ್ರಾಮ, ತಾಲ್ಲೂಕು ಮತ್ತು ಜಿಲ್ಲೆ ನಿರ್ಮಾಣಕ್ಕೆ ಸಾರ್ವಜನಿಕರ ಸಹಭಾಗಿತ್ವ ಅತ್ಯಗತ್ಯವಾಗಿದ್ದು, ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ಪ್ರತಿಯೊಬ್ಬರೂ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂಬ ಸಂದೇಶವನ್ನು ಕಾರ್ಯಕ್ರಮದ ಮೂಲಕ ಸಾರಲಾಯಿತು.

ವಿವಿಧ ಇಲಾಖೆಗಳ ಅಧಿಕಾರಿಗಳು, ಗಣ್ಯರು ಹಾಗೂ ಸಾರ್ವಜನಿಕರ ಸಹಕಾರದೊಂದಿಗೆ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಮ್ಮ ಮತ-ನಮ್ಮ ಬದುಕು: ಮತದಾನದ ಹಕ್ಕು ಕಸಿಯುವ ಪ್ರಯತ್ನದ ವಿರುದ್ಧ ಸಿಎಂ ಎಚ್ಚರಿಕೆ

ಸದ್ಯ ಮತದಾರರ ಪಟ್ಟಿಯಿಂದ ಹಿಂದುಳಿದವರು, ಅಲ್ಪಸಂಖ್ಯಾತರು ಮತ್ತು ದಲಿತರ ಮತಗಳನ್ನು ತೆಗೆದುಹಾಕುವ...

ಮಂಡ್ಯ | ಸಂವಿಧಾನವು ಪ್ರತಿಯೊಬ್ಬರ ಸಾಮಾಜಿಕ ಸಮಾನತೆಯ ದಾರಿದೀಪ : ಜಿಲ್ಲಾಧಿಕಾರಿ

ಸಮಾನತೆ, ಸಾಮಾಜಿಕ ನ್ಯಾಯ, ಸ್ವಾತಂತ್ರ್ಯ ಹಾಗೂ ಸಹೋದರತ್ವದ ಮೌಲ್ಯಗಳನ್ನು ಪ್ರತಿಪಾದಿಸುವ...

ಶಿಕ್ಷಕರ ನೇಮಕಾತಿ ನಿಗದಿತ ವೇಳೆಗೆ ಪೂರ್ಣಗೊಳಿಸಲು ಸಚಿವ ಮಧು ಬಂಗಾರಪ್ಪ ಸೂಚನೆ

ಸರ್ಕಾರಿ ಶಾಲಾ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯನ್ನು ತ್ವರಿತಗೊಳಿಸಿ, ಜನವರಿಯೊಳಗೆ ಪರೀಕ್ಷಾ ಪ್ರಕ್ರಿಯೆ...

ವಿಜಯಪುರ |ಸಂವಿಧಾನ ಎಲ್ಲ ಭಾರತೀಯರ ಆಸ್ತಿ ;ಪ್ರೊ ಬಿ ಎಲ್ ಲಕ್ಕಣ್ಣನವರ

ಸಂವಿಧಾನ ಯಾವುದೇ ಧರ್ಮ ಅಥವಾ ಜನಾಂಗಕ್ಕೆ ಸೀಮಿತವಾದುದಲ್ಲ. ಅದು ಇಡೀ ಭಾರತೀಯರ...