ಈ ದಿನ.ಕಾಮ್‌ ಇಂಪ್ಯಾಕ್ಟ್‌ | ಬಾಬು ಲೇಔಟ್‌ಗೆ ಮೂಲಸೌಕರ್ಯ ಪೂರೈಕೆ; ಅಧಿಕಾರಿಗಳ ಭರವಸೆ

Date:

ಶಿವಮೊಗ್ಗದ ಗೋಪಾಲಗೌಡ ಬಡಾವಣೆ ಮತ್ತು ಅನುಪಿನಕಟ್ಟೆಯ ನಂತರ ಇರುವ ಗೋವಿಂದಾಪುರದ ಬಾಬು ಲೇಔಟ್‌ನ ನಿವಾಸಿಗಳು ಮೂಲಸೌಕರ್ಯವಿಲ್ಲದೆ ನರಳುತ್ತಿದ್ದ ನಿವಾಸಿಗಳಿಗೆ ಪಿಡಿಒ ಮತ್ತು ತಹಶೀಲ್ದಾರರು ಮೂಲ ಸೌಕರ್ಯ ಒದಗಿಸುವ ಭರವಸೆ ನೀಡಿದ್ದಾರೆ.

- Advertisement -

ಅಲ್ಲಿಯ ನಿವಾಸಿಗಳು ಮೂಲಸೌಕರ್ಯದಿಂದ ವಂಚಿತರಾಗಿರುವುದನ್ನು ಕಂಡು ಈ ದಿನ.ಕಾಮ್‌ ನವೆಂಬರ್‌ 2 ರಂದು, ʼಶಿವಮೊಗ್ಗ | ಬಾಬು ಲೇಔಟ್‌ನಲ್ಲಿ ಮೂಲ ಸೌಕರ್ಯ ಕೊರತೆ; ನಿವಾಸಿಗಳ ಪರದಾಟʼ ಎಂಬ ತಲೆಬರಹದಡಿ ವರದಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಸಂಪರ್ಕಿಸಿದ್ದು, ಮೂಲ ಸೌಕರ್ಯ ಕಲ್ಪಿಸುವ ಭರವಸೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ಪಿಡಿಒ ಭಾಗ್ಯ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, ಬಾಬು ಲೇಔಟ್‌ನ ಮಾಲೀಕರಿಂದ ಮತ್ತು ಅಲ್ಲಿಯ ನಿವಾಸಿಗಳಿಂದ ಸೌಲಭ್ಯಕ್ಕಾಗಿ ಮನವಿ ಕೊಡಿಸುವಂತೆ ತಿಳಿಸಿದ್ದು, ಬಳಿಕ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

ತಹಶೀಲ್ದಾರ್ ನಾಗರಾಜ್ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, ನಮ್ಮ ಕಚೇರಿ ಸಿಬ್ಬಂದಿಗಳೊಂದಿಗೆ ಸಭೆ ನಡೆಸಿ ಬಾಬು ಲೇಔಟ್‌ನಲ್ಲಿ ಮೂಲಸೌಕರ್ಯ ಇಲ್ಲದಿರುವ ಕುರಿತು ಮಾಹಿತಿ ಪಡೆದು ಕೊಳ್ಳುತ್ತೇನೆ ಎಂದಿದ್ದರು. ಅಂತೆಯೇ ಸೋಮವಾರ ಬೆಳಿಗ್ಗೆ ಸಭೆ ನಡೆಸಿ ಬಾಬು ಲೇಔಟ್‌ ಮತ್ತು ಈ ದಿನ.ಕಾಮ್ ಸುದ್ದಿ ಕುರಿತು ಪ್ರಸ್ತಾಪಿಸಿದ್ದಾರೆ.

ಗ್ರಾಮ ಲೆಕ್ಕಾಧಿಕಾರಿಯವರು ಈ ದಿನ.ಕಾಮ್ನೊಂದಿಗೆ ಮಾತನಾಡಿ, ಲೇಔಟ್‌ ಕುರಿತು ಪಿಡಿಒ ಜತೆಗೆ ಮಾತುಕತೆ ನಡೆಸಿ ವಿಷಯ ತಿಳಿಸುತ್ತೇವೆ. ಹಾಗೆಯೇ ಸ್ಥಳೀಯ ನಿವಾಸಿಗಳಿಂದ ಮೂಲ ಸೌಕರ್ಯ ಕುರಿತು ಮನವಿ ನೀಡಲು ತಿಳಿಸಿ” ಎಂದು ಸೂಚಿಸಿದ್ದಾರೆ.

“ಮೂಲಸೌಕರ್ಯ ಒದಗಿಸುವಂತೆ ಸ್ಥಳೀಯ ನಿವಾಸಿಗಳು ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಕೊಡಲು ಒಪ್ಪಿದ್ದಾರೆ. ಮುಂದಿನ ದಿನಗಳಲ್ಲಿ ಇಲ್ಲಿನ ನಿವಾಸಿಗಳ ಜೀವನೋಪಾಯಕ್ಕೆ ಅನುಕೂಲವಾಗಲಿದೆಯೇ ಎಂದು ಕಾಯ್ದು ನೋಡಬೇಕು” ಎಂದು ಸಾರ್ವಜನಿಕರು ಆಶಯ ವ್ಯಕ್ತಪಡಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಫಾರಂ-7 ದುರುಪಯೋಗ; ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್‌ ಯತ್ನಕ್ಕೆ ತೀವ್ರ ವಿರೋಧ

ಕರ್ನಾಟಕದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ನಡೆಯುತ್ತಿರುವ ಬೆನ್ನಲ್ಲೇ ಮತದಾರರ...

ಶಿವಮೊಗ್ಗ | ಜಿಪಂ, ತಾಪಂ ಮೀಸಲಾತಿ ಕರಡು ಪಟ್ಟಿ ಬಿಡುಗಡೆ; ಆಕ್ಷೇಪಣೆ ಸಲ್ಲಿಸಲು ಅ. 19 ಕೊನೆಯ ದಿನಾಂಕ

ಶಿವಮೊಗ್ಗ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣಾ ಕ್ಷೇತ್ರಗಳ ಮೀಸಲಾಟ ಕರಡು...

ರಾಯಚೂರು | ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಕೃಷಿ ವಿವಿಯಲ್ಲಿ ವರ್ಗಾವಣೆ ಆದೇಶ: ಉಲ್ಲಂಘನೆ ಆರೋಪ

ಈಶಾನ್ಯ ಶಿಕ್ಷಕರ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದರೂ ರಾಯಚೂರಿನ ಕೃಷಿ ವಿಜ್ಞಾನಗಳ...

ರಾಯಚೂರು | ಹೊನ್ನಕುಣಿ ಕ್ರಾಸ್‌ನಿಂದ ಸಿರಿವಾರದವರೆಗೆ 8 ಸೇತುವೆಗಳ ಕಾಮಗಾರಿ ತಕ್ಷಣ ಆರಂಭಿಸಲು ಒತ್ತಾಯ

ದೇವದುರ್ಗ ತಾಲ್ಲೂಕಿನ ಮನಗೂಳಿ–ಬಿಚ್ಚಾಲಿ–61 ರಾಜ್ಯ ಹೆದ್ದಾರಿಯ ಹೊನ್ನಕುಣಿ ಕ್ರಾಸ್‌ನಿಂದ ಸಿರಿವಾರದವರೆಗೆ ನಿರ್ಮಿಸಬೇಕಿರುವ...