ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್‌ಗೆ ಕಪ್ಪು ಬಾವುಟದ ಸ್ವಾಗತ: ರೈತ ನಾಯಕರ ನಿರ್ಧಾರ

Date:

ಹಿರಿಯ ರೈತ ನಾಯಕ ದಲ್ಲೇವಾಲ ಅವರ ಪ್ರಾಣ ಉಳಿಸಲು ಆಗ್ರಹಿಸಿ ಕೇಂದ್ರ ಕೃಷಿ ಸಚಿವರಿಗೆ ಕಪ್ಪು ಬಾವುಟದ ಸ್ವಾಗತ ಕೋರಿ ಪ್ರತಿಭಟನೆ ನಡೆಸಲು ಸಂಯುಕ್ತ ಹೋರಾಟ ಕರ್ನಾಟಕ ವೇದಿಕೆ ನಿರ್ಧರಿಸಿದೆ.

- Advertisement -

ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಶಿವಮೊಗ್ಗ ಜಿಲ್ಲೆ ಸಾಗರಕ್ಕೆ ಶನಿವಾರ (ಜ.18) ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಶುಕ್ರವಾರ ಆನ್ ಲೈನ್ ಮೂಲಕ ತುರ್ತು ಸಂಯುಕ್ತ ಹೋರಾಟ ಕರ್ನಾಟಕ ವೇದಿಕೆ ಪದಾಧಿಕಾರಿಗಳು ಸಭೆ ಸೇರಿ ಕೇಂದ್ರ ಕೃಷಿ ಸಚಿವರನ್ನು ಕಪ್ಪು ಪ್ರದರ್ಶನ ಮೂಲಕ ಸ್ವಾಗತಿಸಲು ನಿರ್ಧರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಸಭೆಯಲ್ಲಿ ರೈತ ನಾಯಕರಾದ ಬಡಗಲಪುರ ನಾಗೇಂದ್ರ, ಹೆಚ್ ಆರ್ ಬಸವರಾಜಪ್ಪ, ಎಸ್ ಆರ್ ಹಿರೇಮಠ್, ಕೆ ವಿ ಭಟ್, ನೂರ್ ಶ್ರೀಧರ್, ಟಿ ಯಶವಂತ, ವಸಂತ ಭಾಗವಹಿಸಿದ್ದರು.

“ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಖಾತರಿಗೆ ಕಾನೂನು, ಸಾಲ ಮನ್ನಾ, ಕೃಷಿ ಮಾರುಕಟ್ಟೆ ಕುರಿತ ರಾಷ್ಟ್ರೀಯ ನೀತಿ ಚೌಕಟ್ಟು ವಾಪಸ್ಸಾತಿ ಸೇರಿದಂತೆ ಐತಿಹಾಸಿಕ ದೆಹಲಿ ಹೋರಾಟದ ಹಕ್ಕೊತ್ತಾಯಗಳನ್ನು ಈಡೇರಿಸುವಂತೆ ಆಗ್ರಹಿಸಿ ಅಮರಣಾಂತ ಉಪವಾಸ ನಡೆಸುತ್ತಿರುವ ಹಿರಿಯ ರೈತ ನಾಯಕ ದಲ್ಲೇವಾಲ ಅವರ ಪ್ರಾಣವನ್ನು ಉಳಿಸಲು ಕೇಂದ್ರ ಸರ್ಕಾರ ಆಸಕ್ತಿ ವಹಿಸದೆ ಅತೀವ ನಿರ್ಲಕ್ಷ್ಯ ತೋರಿ ಇಡೀ ದೇಶದ ರೈತಾಪಿ ಸಮುದಾಯಕ್ಕೆ ಅವಮಾನ ಎಸಗಿದೆ. ಈ ಹಿನ್ನೆಲೆಯಲ್ಲಿ ಸಾಗರಕ್ಕೆ ಭೇಟಿ ನೀಡುತ್ತಿರುವ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ರವರಿಗೆ ಕಪ್ಪು ಬಾವುಟದ ಸ್ವಾಗತ ಕೋರುವ ಮೂಲಕ ಪ್ರತಿಭಟಿಸಲು ಸಭೆ ತೀರ್ಮಾನಿಸಿದೆ” ಎಂದು ಸಂಯುಕ್ತ ಹೋರಾಟ ಕರ್ನಾಟಕ ವೇದಿಕೆ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರೂಪಾಯಿ ಮೌಲ್ಯ ಕುಸಿತವೂ, ವಿಶ್ವಗುರುವಿನತ್ತ ಮೋದಿ ಭಾರತವೂ

“ಅತ್ಯಂತ ಕಷ್ಟದಲ್ಲಿ ಇರುವ ಅಡಿಕೆ ಬೆಳೆಗಾರರ ಸಮಾವೇಶಕ್ಕೆ ಕೇಂದ್ರ ಕೃಷಿ ಸಚಿವರು ಬರುವುದು ಮತ್ತು ಈ ಬೆಳೆಗಾರರ ಅಹವಾಲು ಆಲಿಸುವುದು ಸ್ವಾಗತಾರ್ಹ ವಿಷಯ ಆಗಿದ್ದರೂ ಇಡೀ ದೇಶದ ಕೃಷಿ ಉಳಿಸಲು ಹಾಗೂ ರೈತರನ್ನು ಕಾಪಾಡಲು ದಲ್ಲೆವಾಲರವರ ಉಪವಾಸ ಸತ್ಯಾಗ್ರಹ ಕೊನೆಗಾಣಿಸಲು ಅಗತ್ಯ ಕ್ರಮ ಕೈಗೊಳ್ಳುವುದು ಕೂಡ ಬಹಳ ಮುಖ್ಯ ವಾಗಿದೆ. ಆದರೆ, ಕೇಂದ್ರ ಕೃಷಿ ಸಚಿವರು ಹಾಗೂ ಕೇಂದ್ರ ಸರ್ಕಾರ ದಲ್ಲೇವಾಲರವರ ಪ್ರಾಣ ಉಳಿಸಲು ಕ್ರಮ ಕೈಗೊಳ್ಳದೇ ರೈತ ಸಮುದಾಯವನ್ನು ಅಪಮಾನಿಸುತ್ತಿದೆ ಮತ್ತು ಕೆರಳಿಸುತ್ತಿದೆ” ಎಂದು ಪದಾಧಿಕಾರಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಪ್ರತಿಭಟನೆಯಲ್ಲಿ ಶಿವಮೊಗ್ಗ ಹಾಗೂ ಸುತ್ತಲಿನ ಜಿಲ್ಲೆ ಗಳ ಸಂಯಕ್ತ ಹೋರಾಟ ಕರ್ನಾಟಕದ ಎಲ್ಲಾ ಸಹಭಾಗಿ ಸಂಘಟನೆಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕೇಂದ್ರ ಕೃಷಿ ಸಚಿವರಿಗೆ ರೈತ ಸಮುದಾಯದ ಆಕ್ರೋಶವನ್ನು ವ್ಯಕ್ತಪಡಿಸಬೇಕು” ಎಂದು ಸಭೆ ವಿನಂತಿಸಿದೆ.

ಪ್ರತಿಭಟನೆ ಸ್ಥಳ ,ವೇಳೆ ಮತ್ತಿತರ ಅಗತ್ಯ ಮಾಹಿತಿಗಾಗಿ ರಾಜ್ಯ ರೈತ ಸಂಘ ರಾಜ್ಯ ಪ್ರಧಾನ ಕಾರ್ಯದರ್ಶಿ ವಸಂತ ಅವರನ್ನು (ಮೊ.78925 39141) ಅವರನ್ನು ಸಂಪರ್ಕಿಸಿ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಹಾವು ಕಡಿತದಿಂದ ರೈತ ಅಸ್ವಸ್ಥ: ಆಸ್ಪತ್ರೆಗೆ ಸಾಗಿಸಲು ʻ108ʼ ಸಿಬ್ಬಂದಿ ನಕಾರ

ಶಿವಮೊಗ್ಗ ಜಿಲ್ಲೆಯ ನಗರ ಸಮೀಪದ ಕರಿಮನೆಯ ಕಾಡಿಗೆರೆ ಗ್ರಾಮದ ರೈತ ಜಮೀನಿನಲ್ಲಿ...

ಶಿವಮೊಗ್ಗ | ವನ್ಯಜೀವಿ ಸಪ್ತಾಹ-2026ರ ಅಂಗವಾಗಿ ಸೈಕಲ್ ಜಾಥಾ

ಶಿವಮೊಗ್ಗ ವನ್ಯಜೀವಿ ವಿಭಾಗದ ವತಿಯಿಂದ 72ನೇ ವನ್ಯಜೀವಿ ಸಪ್ತಾಹ-2026ರ ಅಂಗವಾಗಿ ಅಕ್ಟೋಬರ್...

ಶಿವಮೊಗ್ಗ | ಸಿಇಒ ಹೇಮಂತ್‌ಗೆ ಬೀಳ್ಕೊಡುಗೆ; ನೂತನ ಸಿಇಒ ರಿಷಿ ಆನಂದ್‌ ಸ್ವಾಗತಿಸಿದ ಜಿ.ಪಂ

ಶಿವಮೊಗ್ಗ ಜಿಲ್ಲಾಡಳಿತ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ನಿಕಟಪೂರ್ವ...

ದೆಹಲಿಯಲ್ಲಿ ಪತ್ರಕರ್ತೆಯರ ಮೇಲೆ ಪೊಲೀಸ್ ದೌರ್ಜನ್ಯ: ಕ್ರಮಕ್ಕೆ ಶಿವಮೊಗ್ಗ ಕಾನಿಪಸ ಆಗ್ರಹ

ದೆಹಲಿಯ ಜಂತರ್‌ ಮಂತರ್‌ನಲ್ಲಿ ಮುಖ್ಯ ಚುನಾವಣಾ ಆಯುಕ್ತರ ರಾಜಿನಾಮೆಗೆ ಆಗ್ರಹಿಸಿ ನಡೆಯುತ್ತಿರುವ...