ಶಿವಮೊಗ್ಗ | ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸಿ : ರಾಜ್ಯ ಅಸಂಘಟಿತ ಕಾರ್ಮಿಕರ ಸಂಘ ಒತ್ತಾಯ

Date:

ರಾಜ್ಯದಲ್ಲಿ ಆರೋಗ್ಯ ಸೇವೆಗಳ ಬೆನ್ನೆಲುಬಾಗಿ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಮಾಸಿಕ ₹15,000 ಗೌರವಧನ ನೀಡಬೇಕು ಹಾಗೂ ಬಾಕಿ ಇರುವ ಗೌರವಧನ, ಪ್ರೋತ್ಸಾಹ ಧನವನ್ನು ಸಕಾಲದಲ್ಲಿ ಬಿಡುಗಡೆ ಮಾಡಬೇಕು ಎಂದು ರಾಜ್ಯ ಅಸಂಘಟಿತ ಕಾರ್ಮಿಕರ ಸಂಘ ಸರ್ಕಾರವನ್ನು ಒತ್ತಾಯಿಸಿದೆ.

- Advertisement -

ಈ ಸಂಬಂಧ ರಾಜ್ಯ ಅಸಂಘಟಿತ ಕಾರ್ಮಿಕರ ಸಂಘದ ವತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಗಿದ್ದು, ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಹೋರಾಟಕ್ಕೆ ಸಂಘ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದೆ. ರಾಜ್ಯದಲ್ಲಿ 41 ಸಾವಿರಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರು ಆರೋಗ್ಯ ಮತ್ತು ಆರೋಗ್ಯ ಶಿಕ್ಷಣ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಗರ್ಭಿಣಿಯರು, ಬಾಣಂತಿಯರು ಹಾಗೂ ಚಿಕ್ಕ ಮಕ್ಕಳ ಆರೋಗ್ಯ ರಕ್ಷಣೆ, ಪಲ್ಸ್ ಪೋಲಿಯೋ ಸೇರಿದಂತೆ ವಿವಿಧ ಆರೋಗ್ಯ ಕಾರ್ಯಕ್ರಮಗಳ ಯಶಸ್ಸಿನಲ್ಲಿ ಅವರ ಪಾತ್ರ ಮಹತ್ವದ್ದಾಗಿದೆ. ಅಲ್ಲದೆ ಚುನಾವಣಾ ಕಾರ್ಯ, ಮಹಿಳಾ ಸುರಕ್ಷತೆ ಸೇರಿದಂತೆ ಸರ್ಕಾರದ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಸವಣ್ಣನವರಿಂದ ಗಾಂಧಿಯವರೆಗೆ: ಆಯ್ದ ಕಥನಗಳ ಮೂಲಕ ಇತಿಹಾಸವನ್ನು ತಿರುಚುವ...

ಇತಿಹಾಸವನ್ನು ವಿಮರ್ಶಿಸುವ ಹಕ್ಕು ಎಲ್ಲರಿಗೂ ಇದೆ; ಆದರೆ ಇತಿಹಾಸವನ್ನು ತಿರುಚುವ ಹಕ್ಕು ಯಾರಿಗೂ ಇಲ್ಲ. ಬಸವಣ್ಣನವರನ್ನು ವೈದಿಕ ಚೌಕಟ್ಟಿಗೆ ಸೀಮಿತಗೊಳಿಸುವುದಾಗಲಿ, ಗಾಂಧಿಯವರ ಹತ್ಯೆಯನ್ನು ಗೋಡ್ಸೆಯ ಸಮರ್ಥನೆಯ ಮೂಲಕ ನ್ಯಾಯೀಕರಿಸುವುದಾಗಲಿ ಇತಿಹಾಸದ ಸಮಗ್ರ ಅಧ್ಯಯನಕ್ಕೆ...

ಕೋಲಾರ ಕ್ಲಾಕ್ ಟವರ್ ವಿವಾದ: ಜಿಲ್ಲಾಡಳಿತದ ನಿರ್ಧಾರದತ್ತ ಜನರ...

ಕೋಲಾರ ನಗರದ ಇತಿಹಾಸ ಪ್ರಸಿದ್ಧ ಕ್ಲಾಕ್‌ ಟವರ್‌ನಲ್ಲಿ ಸಂಸದರ ಅನುದಾನದಲ್ಲಿ ಅಳವಡಿಸಲಾಗುತ್ತಿರುವ ಎಚ್‌ಎಂಟಿ ಗಡಿಯಾರದಲ್ಲಿ ಸಂಸದ ಮಲ್ಲೇಶ್‌ ಬಾಬು ಹೆಸರಿರಬೇಕೋ, ಬೇಡವೋ ಎಂದು ಕಳೆದ ಮೂರ್ನಾಲ್ಕು ದಿನಗಳಿಂದ ನಡೆಯುತ್ತಿರುವ ಚರ್ಚೆ ಈಗ ವಿವಾದದ...

ಅಧಿಕೃತ ಕೆಲಸಕ್ಕೆ WHATSAPP ವೆಬ್ ಅಪಾಯಕಾರಿ ಏಕೆ? ಗೃಹ...

ಕಚೇರಿ, ಸಾರ್ವಜನಿಕ ಅಥವಾ ಹಲವರು ಹಂಚಿಕೊಂಡು ಬಳಸುವ ಕಂಪ್ಯೂಟರ್‌ಗಳಲ್ಲಿ WHATSAPP ವೆಬ್ ಬಳಸುವವರಿಗೆ ಕೇಂದ್ರ ಗೃಹ ಸಚಿವಾಲಯ ಮಹತ್ವದ ಭದ್ರತಾ ಎಚ್ಚರಿಕೆ ನೀಡಿದೆ. ಸಚಿವಾಲಯದ ಅಧೀನದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರದ...

ಇಷ್ಟೆಲ್ಲಾ ಜವಾಬ್ದಾರಿಗಳನ್ನು ಹೊತ್ತಿರುವ ಆಶಾ ಕಾರ್ಯಕರ್ತೆಯರಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಂದ ದೊರೆಯಬೇಕಾದ ಗೌರವಧನ ಹಾಗೂ ಪ್ರೋತ್ಸಾಹಧನವನ್ನು ಸಕಾಲದಲ್ಲಿ ನೀಡದೆ ವಿಳಂಬ ಮಾಡುತ್ತಿರುವುದು ಖಂಡನೀಯ. ಅವರ ನ್ಯಾಯಯುತ ಬೇಡಿಕೆಯನ್ನು ಸರ್ಕಾರ ಕೂಡಲೇ ಈಡೇರಿಸಬೇಕು ಎಂದು ಸಂಘ ಆಗ್ರಹಿಸಿದೆ.

ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಆಶಾ ಕಾರ್ಯಕರ್ತೆಯರಿಗೆ ₹15 ಸಾವಿರ ಗೌರವಧನ ನೀಡುವ ಬೇಡಿಕೆಯನ್ನು ತಕ್ಷಣ ಜಾರಿಗೊಳಿಸಬೇಕು. ಇಲ್ಲವಾದಲ್ಲಿ ರಾಜ್ಯ ಅಸಂಘಟಿತ ಕಾರ್ಮಿಕರ ಸಂಘವೂ ಬೀದಿಗಿಳಿದು ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.

ಈ ಸಂದರ್ಭದಲ್ಲಿ ಸಂಘದ ಸಂಸ್ಥಾಪಕ ಕುಪೇಂದ್ರ ಆಯನೂರು, ರಾಜ್ಯಾಧ್ಯಕ್ಷ ಪ್ರದೀಪ್ ಹೊನ್ನಪ್ಪ, ಉಪಾಧ್ಯಕ್ಷೆ ಸುರೇಖಾ ಪಾಲಾಕ್ಷಪ್ಪ, ಪ್ರಧಾನ ಕಾರ್ಯದರ್ಶಿ ಇಂದು ಬಿ. ಗೌಡ, ಸಂಘಟನಾ ಕಾರ್ಯದರ್ಶಿ ಮಮತಾ ರಾಘವೇಂದ್ರ, ಕಾನೂನು ಸಲಹೆಗಾರ ಚೇತನ್ ಲಕ್ಕಪ್ಪ, ಖಜಾಂಚಿ ಶಶಿಕುಮಾರ್, ಜಿಲ್ಲಾಧ್ಯಕ್ಷ ರಮೇಶ್ ಮಡಿವಾಳ ಬಂದಗದ್ದೆ, ಮಹಾನಗರ ಅಧ್ಯಕ್ಷ ವೈ. ಚಂದ್ರಶೇಖರ್, ತಾಲೂಕು ಅಧ್ಯಕ್ಷರಾದ ರಾಘವೇಂದ್ರ ಕಲ್ಲುಕೊಪ್ಪ, ಗಣಪತಿ ತಾಳಗುಪ್ಪ, ರಾಜೇಶ್ ಶೇಟ್, ಮಂಜಪ್ಪ ಮೇಲಿನ ಹನಸವಾಡಿ, ಸುರೇಶ್ ಗಾಮ, ಸಂದೀಪ್ ಮಳಲಗದ್ದೆ ಸೇರಿದಂತೆ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು l ಮನೆ ಮನೆ ಬ್ಯಾರಿ ಕವಿಗೋಷ್ಠಿ

ರಾಷ್ಟ್ರ ಮತ್ತು ರಾಜ್ಯದ ಹಲವು ಭಾಷೆಗಳಿಗೆ ಬ್ಯಾರಿ ಸಾಹಿತ್ಯ ಕೃತಿಗಳು ಭಾಷಾಂತರವಾಗುವ...

108 ವರ್ಷಗಳ ಸರ್ಕಾರಿ ಶಾಲೆಯ ಜಾಗದಲ್ಲಿ ಅಪಾರ್ಟ್‌ಮೆಂಟ್: ಕಾಮಗಾರಿ ಸ್ಥಗಿತಕ್ಕೆ ಆಗ್ರಹಿಸಿ ಪ್ರತಿಭಟನೆ

ಮೈಸೂರು ಗ್ರಾಹಕರ ಪರಿಷತ್, ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಸಂಘಟನೆ (ಎಐಡಿಎಸ್‌ಒ)...

ಪಾಕಿಸ್ತಾನಕ್ಕೆ ಐತಿಹಾಸಿಕ ಕ್ಷಣ: ಬಾಹ್ಯಾಕಾಶಕ್ಕೆ ಪಾಕ್‌ನ ಮೊದಲ ಗಗನಯಾತ್ರಿ ಪ್ರಯಾಣ!

ಬಾಹ್ಯಾಕಾಶ ಅನ್ವೇಷಣೆಯ ಕ್ಷೇತ್ರದಲ್ಲಿ ಪಾಕಿಸ್ತಾನ ಐತಿಹಾಸಿಕ ಮೈಲಿಗಲ್ಲೊಂದನ್ನು ಸ್ಥಾಪಿಸಿದೆ. ಬುಧವಾರ ಮುಂಜಾನೆ...

ಬೆಂಗಳೂರು | ಸರ್ಕಾರಿ ಶಾಲೆಗಳ ದತ್ತು ಪ್ರಕ್ರಿಯೆಗೆ ವಿರೋಧ; ನ.26ರಂದು ವಿದ್ಯಾರ್ಥಿ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ

ರಾಜ್ಯ ಸರ್ಕಾರವು ಸರ್ಕಾರಿ ಕನ್ನಡ ಶಾಲೆಗಳನ್ನು ಖಾಸಗಿಯವರಿಗೆ ದತ್ತು (ಮೆಂಟರಿಂಗ್) ನೀಡಲು...