ಲಕ್ಕವಳ್ಳಿ | ಭದ್ರಾ ನೀರು ಕುಡಿಯುವ ಬಳಕೆಗೆ ಮೀಸಲು: ರೈತರಲ್ಲಿ ಹೆಚ್ಚಿದ ಆತಂಕ

Date:

ಲಕ್ಕವಳ್ಳಿಯ ಭದ್ರಾ ಜಲಾಶಯದ ನೀರು ಕುಡಿಯಲು ಮಾತ್ರ ಬಳಸುವಂತೆ ಶಿವಮೊಗ್ಗ ಜಿಲ್ಲಾಡಳಿತ ಸೂಚಿಸಿದೆ. ಮುಂಗಾರು ಕೊರತೆಯ ಪರಿಣಾಮ ಜಲಾಶಯದ ನೀರಿನ ಸಂಗ್ರಹ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದ್ದು, ರೈತರಲ್ಲಿ ತೀವ್ರ ಆತಂಕ ಸೃಷ್ಟಿಸಿದೆ.

- Advertisement -

ಶಿವಮೊಗ್ಗ ಜಿಲ್ಲೆಯ ಲಕ್ಕವಳ್ಳಿಯ ಭದ್ರಾ ಜಲಾಶಯ ಈ ಭಾಗದ ರೈತರ ಜೀವನಾಡಿ. ಮಳೆ ಕೊರತೆ ಹೀಗೆಯೇ ಮುಂದುವರೆದರೆ ನೀರಿನ ತೀವ್ರ ಅಭಾವ ಸೃಷ್ಟಿಯಾಗುವ ಸಾಧ್ಯತೆಯನ್ನು ಊಹಿಸಲಾಗಿದೆ. ಜಲಸಂಪನ್ಮೂಲ ಇಲಾಖೆ ಮತ್ತು ಮೈಸೂರು ಪ್ರಾದೇಶಿಕ ಆಯುಕ್ತರ ನಿರ್ದೇಶನದ ಮೇರೆಗೆ ಶಿವಮೊಗ್ಗ ಜಿಲ್ಲಾಧಿಕಾರಿ ಭನ್ವರ್ ಸಿಂಗ್ ಮೀನಾ ಭದ್ರಾ ಜಲಾಶಯದ ನೀರನ್ನು ಕುಡಿಯಲು ಮಾತ್ರವೇ ಮೀಸಲಿರಿಸುವ ಆದೇಶವನ್ನು ಹೊರಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಸವಣ್ಣನವರಿಂದ ಗಾಂಧಿಯವರೆಗೆ: ಆಯ್ದ ಕಥನಗಳ ಮೂಲಕ ಇತಿಹಾಸವನ್ನು ತಿರುಚುವ...

ಇತಿಹಾಸವನ್ನು ವಿಮರ್ಶಿಸುವ ಹಕ್ಕು ಎಲ್ಲರಿಗೂ ಇದೆ; ಆದರೆ ಇತಿಹಾಸವನ್ನು ತಿರುಚುವ ಹಕ್ಕು ಯಾರಿಗೂ ಇಲ್ಲ. ಬಸವಣ್ಣನವರನ್ನು ವೈದಿಕ ಚೌಕಟ್ಟಿಗೆ ಸೀಮಿತಗೊಳಿಸುವುದಾಗಲಿ, ಗಾಂಧಿಯವರ ಹತ್ಯೆಯನ್ನು ಗೋಡ್ಸೆಯ ಸಮರ್ಥನೆಯ ಮೂಲಕ ನ್ಯಾಯೀಕರಿಸುವುದಾಗಲಿ ಇತಿಹಾಸದ ಸಮಗ್ರ ಅಧ್ಯಯನಕ್ಕೆ...

ಕೋಲಾರ ಕ್ಲಾಕ್ ಟವರ್ ವಿವಾದ: ಜಿಲ್ಲಾಡಳಿತದ ನಿರ್ಧಾರದತ್ತ ಜನರ...

ಕೋಲಾರ ನಗರದ ಇತಿಹಾಸ ಪ್ರಸಿದ್ಧ ಕ್ಲಾಕ್‌ ಟವರ್‌ನಲ್ಲಿ ಸಂಸದರ ಅನುದಾನದಲ್ಲಿ ಅಳವಡಿಸಲಾಗುತ್ತಿರುವ ಎಚ್‌ಎಂಟಿ ಗಡಿಯಾರದಲ್ಲಿ ಸಂಸದ ಮಲ್ಲೇಶ್‌ ಬಾಬು ಹೆಸರಿರಬೇಕೋ, ಬೇಡವೋ ಎಂದು ಕಳೆದ ಮೂರ್ನಾಲ್ಕು ದಿನಗಳಿಂದ ನಡೆಯುತ್ತಿರುವ ಚರ್ಚೆ ಈಗ ವಿವಾದದ...

ಅಧಿಕೃತ ಕೆಲಸಕ್ಕೆ WHATSAPP ವೆಬ್ ಅಪಾಯಕಾರಿ ಏಕೆ? ಗೃಹ...

ಕಚೇರಿ, ಸಾರ್ವಜನಿಕ ಅಥವಾ ಹಲವರು ಹಂಚಿಕೊಂಡು ಬಳಸುವ ಕಂಪ್ಯೂಟರ್‌ಗಳಲ್ಲಿ WHATSAPP ವೆಬ್ ಬಳಸುವವರಿಗೆ ಕೇಂದ್ರ ಗೃಹ ಸಚಿವಾಲಯ ಮಹತ್ವದ ಭದ್ರತಾ ಎಚ್ಚರಿಕೆ ನೀಡಿದೆ. ಸಚಿವಾಲಯದ ಅಧೀನದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರದ...

ಜಲಾಶಯದ ಪ್ರಸ್ತುತ ಒಳಹರಿವು 13,123 ಕ್ಯೂಸೆಕ್‌ಗಳಿದ್ದರೂ, ನೀರನ್ನು ಸಂರಕ್ಷಿಸುವ ಸಲುವಾಗಿ ಆಡಳಿತವು ಹೊರಹರಿವನ್ನು 218 ಕ್ಯೂಸೆಕ್‌ಗಳಿಗೆ ನಿರ್ಬಂಧಿಸಿದೆ. ಇದರಲ್ಲಿ, 50 ಕ್ಯೂಸೆಕ್‌ಗಳನ್ನು ಎಡದಂಡೆ ಕಾಲುವೆಗೆ ಮತ್ತು 10 ಕ್ಯೂಸೆಕ್‌ಗಳನ್ನು ಬಲದಂಡೆ ಕಾಲುವೆಗೆ ಬಿಡಲಾಗುತ್ತಿದೆ. ಸುಮಾರು 6 ಕ್ಯೂಸೆಕ್ ನೀರು ಆವಿಯಾಗುವಿಕೆಯಿಂದಾಗಿ ಖಾಲಿಯಾಗುತ್ತಿದೆ.

71.535 ಟಿಎಂಸಿ ಸಾಮರ್ಥ್ಯದ ಭದ್ರಾ ಜಲಾಶಯದಲ್ಲಿ ಈಗ 31.257 ಟಿಎಂಸಿ ನೀರಿನ ಶೇಖರಣೆ ಇದ್ದು, ಕಳೆದ ವರ್ಷ ಈ ವೇಳೆಗೆ ನೀರಿನ ಮಟ್ಟ 173.7 ಅಡಿ ತಲುಪಿತ್ತು. ಈ ಬಾರಿ ಕೇವಲ 146 ಅಡಿ ಇದ್ದು, ಸಾಮಾನ್ಯವಾಗಿ ಕೃಷಿಗೆ ಕಾಲುವೆಗಳ ನೀರನ್ನು ಅವಲಂಬಿಸಿರುವ ಸುತ್ತಲಿನ ರೈತರಿಗೆ ಅಗತ್ಯ ನೀರಾವರಿ ಸೌಲಭ್ಯ ಒದಗಿಸುವುದು ಸವಾಲಾಗಿ ಪರಿಣಮಿಸಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು l ಮನೆ ಮನೆ ಬ್ಯಾರಿ ಕವಿಗೋಷ್ಠಿ

ರಾಷ್ಟ್ರ ಮತ್ತು ರಾಜ್ಯದ ಹಲವು ಭಾಷೆಗಳಿಗೆ ಬ್ಯಾರಿ ಸಾಹಿತ್ಯ ಕೃತಿಗಳು ಭಾಷಾಂತರವಾಗುವ...

108 ವರ್ಷಗಳ ಸರ್ಕಾರಿ ಶಾಲೆಯ ಜಾಗದಲ್ಲಿ ಅಪಾರ್ಟ್‌ಮೆಂಟ್: ಕಾಮಗಾರಿ ಸ್ಥಗಿತಕ್ಕೆ ಆಗ್ರಹಿಸಿ ಪ್ರತಿಭಟನೆ

ಮೈಸೂರು ಗ್ರಾಹಕರ ಪರಿಷತ್, ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಸಂಘಟನೆ (ಎಐಡಿಎಸ್‌ಒ)...

ಕೋಲಾರ ಕ್ಲಾಕ್ ಟವರ್ ವಿವಾದ: ಜಿಲ್ಲಾಡಳಿತದ ನಿರ್ಧಾರದತ್ತ ಜನರ ಚಿತ್ತ

ಕೋಲಾರ ನಗರದ ಇತಿಹಾಸ ಪ್ರಸಿದ್ಧ ಕ್ಲಾಕ್‌ ಟವರ್‌ನಲ್ಲಿ ಸಂಸದರ ಅನುದಾನದಲ್ಲಿ ಅಳವಡಿಸಲಾಗುತ್ತಿರುವ...

ಕಡಲ ಅಲೆಗಳ ನಡುವೆ ಜೀವ ಉಳಿಸುವ ಕಾವಲುಗಾರರು: ಕಾಪು ಬೀಚ್‌ನ ರಿಯಲ್ ಹೀರೋಗಳು!

ಸಮಾಜದ ಕಣ್ಣಿಗೆ ಸದಾ ಕಾಣಿಸಿಕೊಳ್ಳದಿದ್ದರೂ, ಅಪಾಯದ ಅಲೆಗಳ ನಡುವೆ ಸಿಲುಕಿದವರ ಪಾಲಿಗೆ...