ಚೋಟಾ ಸಹಿ, ಉದ್ದ ಸಹಿ ಮಾಡಿ ನನ್ನ ತಂದೆಯನ್ನು ಕೇಸಿಗೆ ಸಿಕ್ಕಿಸಲಿಲ್ಲ; ವಿಜಯೇಂದ್ರ ವಿರುದ್ದ ಸಚಿವ ಮಧು ವಾಗ್ದಾಳಿ

Date:

ಚೆಕ್‌ ಬೌನ್ಸ್‌ ಪ್ರಕರಣದಲ್ಲಿ ಕೋರ್ಟ್‌ ತೀರ್ಪು ಬಂದ ಬಳಿಕ ನನ್ನ ರಾಜೀನಾಮೆಗೆ ಒತ್ತಾಯಿಸಿರುವ ಬಿಜೆಪಿಗರು ಮೊದಲು ಯತ್ನಾಳ್ ಆರೋಪಕ್ಕೆ ಉತ್ತರಿಸಲಿ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿರುಗೇಟು ನೀಡಿದ್ದಾರೆ. ವಿಪಕ್ಷ ನಾಯಕ ಆರ್ ಆಶೋಕ್ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

- Advertisement -

ಚೆಕ್‌ ಬೌನ್ಸ್‌ ಪ್ರಕರಣವೊಂದರಲ್ಲಿ ಸಚಿವ ಮಧು ಬಂಗಾರಪ್ಪ ಅವರಿಗೆ 6 ಕೋಟಿ ರೂ. ದಂಡ ವಿಧಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ನೀಡಿದೆ. ಈ ಬೆನ್ನಲ್ಲೇ, ಮಧು ಬಂಗಾರಪ್ಪ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆರ್ ಅಶೋಕ್ ಮತ್ತು ವಿಜಯೇಂದ್ರ ಒತ್ತಾಯಿಸುತ್ತಿದ್ದಾರೆ. ಅವರ ಒತ್ತಾಯಕ್ಕೆ ಮಧು ಬಂಗಾರಪ್ಪ ತಿರುಗೇಟು ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಧು ಬಂಗಾರಪ್ಪ ಮಾತನಾಡಿ, “ಚೆಕ್ ಬೌನ್ಸ್ ಪ್ರಕರಣ ವ್ಯವಹಾರಿಕ ವಿಷಯ. ಅದು ಖಾಸಗಿ ವಿಷಯ. ನನ್ನ ಖಾಸಗಿ ವಿಷಯವನ್ನು ಮುಂದಿಟ್ಟುಕೊಂಡು ಬಿಜೆಪಿ ನೀಚತನದ ರಾಜಕಾರಣ ಮಾಡುತ್ತಿದೆ. ಕೊರೋನಾ ಸಮಯದಲ್ಲಿ ಬಿಜೆಪಿ ಸರ್ಕಾರ 40,000 ಕೋಟಿ ರೂ. ಭ್ರಷ್ಟಾಚಾರ ನಡೆಸಿದೆ ಎಂದು ಸ್ವತಃ ಬಿಜೆಪಿ ಶಾಸಕ ಯತ್ನಾಳ್ ಅವರೇ ಆರೋಪಿಸಿದ್ದಾರೆ. ಯತ್ನಾಳ್ ಯಾರ ವಿರುದ್ದ ಆರೋಪ ಮಾಡಿದ್ದಾರೆ ಎಂಬುದಕ್ಕೆ ವಿಜಯೇಂದ್ರ ಉತ್ತರಿಸಲಿ” ಎಂದು ಸವಾಲು ಹಾಕಿದ್ದಾರೆ.

“ನನ್ನ ತಂದೆ ಬಂಗಾರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ನಾನು ಅವರನ್ನು ಪವಿತ್ರವಾಗಿ ನೋಡಿಕೊಂಡಿದ್ದೇನೆ. ಚೋಟಾ ಸಹಿ, ಉದ್ದ ಸಹಿ ಮಾಡಿ ನನ್ನ ತಂದೆಯನ್ನು ಕೇಸಿಗೆ ಸಿಲುಕಿಸಲಿಲ್ಲ. ನನ್ನ ವಿರುದ್ದ ಟ್ವೀಟ್ ಮಾಡುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರನಿಗೆ ಮಾನ, ಮರ್ಯಾದೆ ಇದ್ದರೆ ರಾಜೀನಾಮೆ ಕೊಡಲಿ” ಎಂದಿದ್ದಾರೆ.

“ಉಪಮುಖ್ಯಮಂತ್ರಿಯಾಗಿದ್ದ ಅಶೋಕ್ ಅವರ ವಿರುದ್ಧವೂ ಭ್ರಷ್ಟಾಚಾರದ ಆರೋಪಗಳು ಕೇಳಿ ಬಂದಿವೆ. ಎಂಎಲ್‌ಸಿ ರವಿಕುಮಾರ್ ಜೀವನದಲ್ಲಿ ಒಂದು ಗ್ರಾಮ ಪಂಚಾಯತಿ ಚುನಾವಣೆಯನ್ನು ಎದುರಿಸಲಿಲ್ಲ. ನಳೀನ್ ಕುಮಾರ್ ಕಟೀಲ್‌ಗೆ ಧಮ್ಮು, ತಾಕತ್ತು ಇದ್ದರೆ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಲಿ, ನಾನೇ ಕರಾವಳಿಗೆ ಬರುತ್ತೇನೆ” ಎಂದು ಸವಾಲು ಹಾಕಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | 22ನೇ ಶರಣ ತತ್ವ ಕಮ್ಮಟಕ್ಕೆ ಸಚಿವ ಎಂ.ಬಿ ಪಾಟೀಲರಿಗೆ ಆಹ್ವಾನ

ವಿಜಯಪುರದ ವೀರಶೈವ ಲಿಂಗಾಯತ ಸಾಂಸ್ಕೃತಿಕ ಭವನದಲ್ಲಿ ಅಕ್ಟೋಬರ್ 29ರಿಂದ ನವೆಂಬರ್ 1ರವರೆಗೆ...

ಬೀಳಗಿ | ಛಾಯಾಗ್ರಾಹಕರಿಗಾಗಿ ಆಕಾಡೆಮಿ ಸ್ಥಾಪಿಸಲು ವಿಠ್ಠಲ ಹಿರೇಮಠ ಆಗ್ರಹ

ಛಾಯಾಗ್ರಾಹಕರ ವೃತ್ತಿ ಭದ್ರತೆ, ಕುಟುಂಬದ ಕಲ್ಯಾಣ ಹಾಗೂ ಸರಕಾರದ ಸೌಲಭ್ಯಗಳನ್ನು ಒದಗಿಸಲು...

ಅಂದು ಬೆಂಬಲ, ಇಂದು ಪಶ್ಚಾತಾಪ: 2023ರ ಚುನಾವಣಾ ಆಯುಕ್ತರ ಕಾಯ್ದೆಗೆ ಬೆಂಬಲ ನೀಡಿ ತಪ್ಪು ಮಾಡಿದೆ ಎಂದ ಜಗನ್ ಮೋಹನ್ ರೆಡ್ಡಿ

ಆಂಧ್ರಪ್ರದೇಶದ ರಾಜಕಾರಣದಲ್ಲಿ ಮತ್ತೊಮ್ಮೆ ಭಾರೀ ಸಂಚಲನ ಮೂಡಿಸಿರುವ ಬೆಳವಣಿಗೆ ನಡೆದಿದೆ. ಮಾಜಿ...

ಮೈಸೂರು | ಕಲಾ ಜಾತ್ರೆ ಯಶಸ್ವಿ: ಕಲಾವಿದರಿಗೆ ಶಾಶ್ವತ ಕಲಾ ಕೇಂದ್ರ ಸ್ಥಾಪಿಸಲು ಅರುಣ್ ಯೋಗಿರಾಜ್ ಸಲಹೆ

ಮೈಸೂರು ದಸರಾ ಮಹೋತ್ಸವದ ಅಂಗವಾಗಿ ದಸರಾ ಲಲಿತಕಲೆ ಮತ್ತು ಕರಕುಶಲಕಲೆ ಹಾಗೂ...