ವಿದ್ಯಾರ್ಥಿಗಳೆದರು ಹರೀಶ್ ಪೂಂಜಾ ದ್ವೇಷ ಭಾಷಣ; ಕ್ರಮಕ್ಕೆ ಸಚಿವ ಮಧು ಬಂಗಾರಪ್ಪ ಸೂಚನೆ

Date:

ಜನಪ್ರತಿನಿಧಿಯಾಗಿ ಹೇಗೆ ಮಾತನಾಡಬೇಕು ಎಂಬ ಕನಿಷ್ಠ ಪರಿಜ್ಞಾನವೂ ಇಲ್ಲದೆ ಶಾಲಾ ಮಕ್ಕಳ ಮುಂದೆ ದ್ವೇಷಪೂರಿತ ಹಾಗೂ ಅಸಂವಿಧಾನಿಕ ಮಾತುಗಳನ್ನಾಡಿರುವುದು ಸರಿಯಲ್ಲ. ಮಕ್ಕಳಲ್ಲಿ ಕೆಟ್ಟ ವಿಚಾರಗಳನ್ನು ಬಿತ್ತುವುದೇ ಬಿಜೆಪಿ ನಾಯಕರ ಚಾಳಿಯಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

- Advertisement -

ಬೆಳ್ತಂಗಡಿ ಶಾಸಕರಾಗಿರುವ ಹರೀಶ್‌ ಪೂಂಜಾ ಬೆಳ್ತಂಗಡಿ ತಾಲ್ಲೂಕಿನ ಪುಂಜಾಲಕಟ್ಟೆಯ ಕರ್ನಾಟಕ ಪಬ್ಲಿಕ್‌ ಶಾಲೆ (ಕೆಪಿಎಸ್‌)ಯ ನೂತನ ಸಭಾಭವನ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ಕಾಂಗ್ರೆಸ್‌ ಪಕ್ಷದ ಬಗ್ಗೆ ಅವಾಚ್ಯ ಶಬ್ದಗಳನ್ನು ಬಳಸಿದ್ದರಲ್ಲದೆ, ದ್ವೇಷ ಭಾಷಣ ಮಾಡಿದ್ದರು. ಈ ಬಗ್ಗೆ ಸಚಿವ ಮಧು ಬಂಗಾರಪ್ಪ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರನ್ನು ಅವರ ಗೃಹ ಕಚೇರಿಯಲ್ಲಿ ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಶಾಲಾ ಮಕ್ಕಳ ಮುಂದೆ ರಾಜಕೀಯ ದ್ವೇಷದ ಭಾಷಣ ಮಾಡಿದ ಶಾಸಕ ಹರೀಶ್ ಪೂಂಜಾ ವಿರುದ್ಧ ಕ್ರಮ ಕೈಗೊಳ್ಳುವಂತೆ ಈಗಾಗಲೇ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಲಾಗಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಿಡಿಪಿ ಅಂಕಿಅಂಶಗಳ ಆಚೆಗಿನ ವಾಸ್ತವ: ಭಾರತದ ಆರ್ಥಿಕ ಸವಾಲುಗಳ...

ಜಾಗತಿಕ ಆರ್ಥಿಕತೆಯು ಭೌಗೋಳಿಕ-ರಾಜಕೀಯ ಸಂಘರ್ಷಗಳು ಮತ್ತು ತಂತ್ರಜ್ಞಾನದ ಕ್ಷಿಪ್ರ ಬದಲಾವಣೆಗಳ ನಡುವೆ ತೊಳಲಾಡುತ್ತಿರುವ ಹೊತ್ತಿನಲ್ಲಿ, ಭಾರತದ ಆರ್ಥಿಕತೆಯ ನಿಜವಾದ ಸ್ಥಿತಿಗತಿ ಏನು? ನಾವು ಸಾಗುತ್ತಿರುವ ಹಾದಿ ನಮ್ಮನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿಸಬಲ್ಲದೇ? ಈ...

ಇಸ್ರೇಲ್ ಪ್ರಧಾನಿ ಪಟ್ಟಕ್ಕೇರಲು ಗಾಡಿ ಐಸೆನ್ಕೋಟ್ ಮಾಡಿಕೊಳ್ಳಬೇಕಾದ ಪ್ರಮುಖ...

ಇಸ್ರೇಲ್‌ನ ಚುನಾವಣೆ ಮುಗಿದ್ದು, ಅತಂತ್ರ ಪರಿಸ್ಥಿತಿ ಇದೆ. ಹೊಸ ಸರ್ಕಾರ ರಚನೆಗೆ ಮಾಜಿ ಸೇನಾ ಮುಖ್ಯಸ್ಥ, ನ್ಯಾಷನಲ್ ಯೂನಿಟಿ ಪಕ್ಷದ ನಾಯಕ ಗಾಡಿ ಐಸೆನ್ಕೋಟ್ ಅವರನ್ನು ಅಧ್ಯಕ್ಷರು ಆಹ್ವಾನಿಸಿದ್ದಾರೆ. ಆದರೆ, ಅವರ ಪಕ್ಷವು...

ಕರ್ನಾಟಕ ಏಕೀಕರಣಕ್ಕೆ 70 ವರ್ಷ: ಕನ್ನಡ ಅನ್ನದ ಭಾಷೆಯಾಗುವುದೆಂದು?

ಕರ್ನಾಟಕ ಏಕೀಕರಣಗೊಂಡು ಈ ವರ್ಷಕ್ಕೆ 70 ವರ್ಷ. ಆದರೆ, ಎಪ್ಪತ್ತು ವರ್ಷಗಳ ಕನ್ನಡ ನಾಡಿನ ನಡೆಯತ್ತ ಒಂದು ನೋಟ ಹರಿಸಿದರೆ ಕಾಣಿಸುವ ಚಿತ್ರವೇ ಬೇರೆಯಾಗಿದೆ. “ಇಷ್ಟು ವರ್ಷವಾದರೂ, ಕನ್ನಡ ಅನ್ನದ ಭಾಷೆಯಾಗಿ ಉಳಿದಿಲ್ಲ....

“ರಾಜಕಾರಣವನ್ನು ರಾಜಕೀಯ ವೇದಿಕೆಗಳಿಗೆ ಸೀಮಿತಗೊಳಿಸಬೇಕು. ಶಾಲೆಗಳಲ್ಲಿ ಈ ರೀತಿ ಮಾತನಾಡುವುದು ಸರಿಯಲ್ಲ. ಶಾಸಕರಿಗೆ ಕನಿಷ್ಠ ಸಾಮಾನ್ಯ ತಿಳುವಳಿಕೆ ಇರಬೇಕಲ್ಲವೇ? ಅವರ ಮನಸ್ಸಿನಲ್ಲಿ ವಿಷವಿದ್ದರೆ ಅದನ್ನೇ ಹೊರಹಾಕುತ್ತಾರೆ. ಈ ವಿಚಾರವನ್ನು ನಾವು ಸುಮ್ಮನೆ ಬಿಡುವುದಿಲ್ಲ. ಶಾಸಕರು ಏನು ಮಾತನಾಡಿದ್ದಾರೆ ಎಂಬ ಬಗ್ಗೆ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದು, ವರದಿಯ ಆಧಾರದ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ದೂರು ನೀಡಲು ಮುಂದೆ ಬಂದರೂ ಸ್ವಾಗತಿಸುತ್ತೇವೆ. ಆದರೆ, ದೂರುಗಳಿಗಾಗಿ ಕಾಯದೆ ಇಲಾಖೆಯಿಂದಲೇ ಕ್ರಮ ಕೈಗೊಳ್ಳುತ್ತೇವೆ” ಎಂದರು.

ಶಾಲೆಗಳಲ್ಲಿ ರಾಜಕೀಯಕ್ಕೆ ಅವಕಾಶವಿಲ್ಲ :

“ಶಾಲೆಗಳು ದೇವಸ್ಥಾನಗಳಿದ್ದಂತೆ. ಅಂತಹ ಪವಿತ್ರ ಸ್ಥಳದಲ್ಲಿ ರಾಜಕೀಯ ಮಾತನಾಡುವ ಅಗತ್ಯವೇನಿತ್ತು ಎಂದು ಪ್ರಶ್ನಿಸಿದ ಸಚಿವರು, ರಾಜಕಾರಣಕ್ಕಾಗಿ ಈಗಾಗಲೇ ದೇವಸ್ಥಾನಗಳನ್ನು ಬಳಸಿಕೊಂಡಿರುವವರು ಇದೀಗ ಶಾಲೆಗಳಿಗೂ ನೇರವಾಗಿ ಪ್ರವೇಶಿಸುತ್ತಿದ್ದಾರೆ. ಜನರು ಇಂತಹ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಶಿಕ್ಷಣ ಸಚಿವನಾಗಿ ಈ ಕೃತ್ಯವನ್ನು ತೀವ್ರವಾಗಿ ಖಂಡಿಸುತ್ತೇನೆ. ಅವರು ಕ್ಷಮೆ ಕೇಳುತ್ತಾರೋ ಇಲ್ಲವೋ ಎಂಬುದು ಮುಖ್ಯವಲ್ಲ. ಕಾನೂನು ಪ್ರಕಾರ ಕೈಗೊಳ್ಳಬೇಕಾದ ಕ್ರಮವನ್ನು ಖಂಡಿತ ಕೈಗೊಳ್ಳುತ್ತೇವೆ” ಎಂದು ಎಚ್ಚರಿಸಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ರಸ್ತೆ ದಾಟಲು ನಿಂತಾಗ ಬೈಕ್ ಡಿಕ್ಕಿ; ವೃದ್ಧ ಕೊನೆಯುಸಿರು

ರಸ್ತೆ ದಾಟಲು ನಿಂತಿದ್ದ ವೃದ್ಧರೊಬ್ಬರಿಗೆ ವೇಗವಾಗಿ ಬಂದ ಬೈಕ್ ಡಿಕ್ಕಿ ಹೊಡೆದ...

ಜಾರ್ಖಂಡ್‌ನಲ್ಲಿ ಕಲ್ಲಿದ್ದಲು ಗಣಿಗಾರಿಕೆಗೆ ಅಸ್ತು: 6 ಲಕ್ಷ ಮರಗಳ ಮಾರಣಹೋಮ, ಆನೆಗಳ ಆವಾಸಸ್ಥಾನಕ್ಕೆ ಕುತ್ತು 

 ಜಾರ್ಖಂಡ್‌ನ ಚತ್ರಾ ಜಿಲ್ಲೆಯಲ್ಲಿ ಕಲ್ಲಿದ್ದಲು ಗಣಿಗಾರಿಕೆಗಾಗಿ ಬೃಹತ್ ಪ್ರಮಾಣದ ಅರಣ್ಯ ಭೂಮಿಯನ್ನು...

ಯುದ್ಧ ನಿಲ್ಲುವವರೆಗೆ ಹಾನಿಗೊಳಗಾದ ಪರಮಾಣು ಕೇಂದ್ರಗಳ ತಪಾಸಣೆಗೆ ವಿಶ್ವಸಂಸ್ಥೆಗಿಲ್ಲ ಅವಕಾಶ: ಇರಾನ್ ಸ್ಪಷ್ಟನೆ

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧವು ಶಾಶ್ವತವಾಗಿ ಅಂತ್ಯಗೊಳ್ಳುವವರೆಗೆ ಮತ್ತು ತಮ್ಮ ಷರತ್ತುಗಳನ್ನು ಅಮೆರಿಕ...

ಛತ್ ಪೂಜೆ: ಬಂಗಾಳದ ರಾಂಪುರಹಾಟ್‌ನಲ್ಲಿ ಮುಸ್ಲಿಂ ವ್ಯಕ್ತಿಗೆ ಸೇರಿದ ಏಕೈಕ ಮಾಂಸದಂಗಡಿ ಬಂದ್

ಈ ಬಾರಿಯ ಛತ್ ಪೂಜೆಯು ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ರಾಂಪುರಹಾಟ್...