ಶಿವಮೊಗ್ಗ ವಿಮಾನ ನಿಲ್ದಾಣದ ಖಾಸಗೀಕರಣಕ್ಕೆ ಆಸ್ಪದವಿಲ್ಲ: ಸಚಿವ ಮಧು ಬಂಗಾರಪ್ಪ

Date:

ಶಿವಮೊಗ್ಗ ವಿಮಾನ ನಿಲ್ದಾಣವನ್ನು ರಾಜ್ಯ ಸರ್ಕಾರ ಸ್ಥಗಿತಗೊಳಿಸುತ್ತಿದೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರ ಆರೋಪಕ್ಕೆ ಪ್ರತಿಕ್ರಿಯಿಸಿ, ವಿಮಾನ ನಿಲ್ದಾಣದ ಅಭಿವೃದ್ಧಿಗೆ ರಾಜ್ಯ ಸರ್ಕಾರ ತನ್ನಿಂದ ಸಾಧ್ಯವಾದ ಎಲ್ಲ ಸಹಕಾರವನ್ನೂ ನೀಡುತ್ತಿದೆ. ಉಡಾನ್ ಯೋಜನೆ ಕೇಂದ್ರ ಸರ್ಕಾರದ್ದಾಗಿದ್ದು, ಈ ಬಗ್ಗೆ ಕೇಂದ್ರದೊಂದಿಗೆ ಮಾತನಾಡಬೇಕಿದೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.

- Advertisement -

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಸುಮಾರು 200 ಕೋಟಿ ರೂ. ಯೋಜನೆ ಎಂದು ಆರಂಭವಾದ ಶಿವಮೊಗ್ಗ ವಿಮಾನ ನಿಲ್ದಾಣದ ಕಾಮಗಾರಿಗೆ ಅಂತಿಮವಾಗಿ 600 ಕೋಟಿ ರೂ.ವರೆಗೂ ವೆಚ್ಚವಾಗಿದೆ. ರಾಜ್ಯ ಸರ್ಕಾರದ ಶ್ರಮ ಮತ್ತು ಹಣದಲ್ಲಿ ಯೋಜನೆ ರೂಪಿಸಿ, ನಂತರ ಅದನ್ನು ಮುಚ್ಚುವ ಹಂತಕ್ಕೆ ತಂದು ಅಂಬಾನಿ, ಅದಾನಿ ಅವರಂಥ ಖಾಸಗಿ ಉದ್ಯಮಿಗಳಿಗೆ ಮಾರಾಟ ಮಾಡುವ ಉದ್ದೇಶ ಬಿಜೆಪಿಯದ್ದಾಗಿದೆ ಎಂದು ಆರೋಪಿಸಿದರು. ಈ ಸಂಬಂಧ ಸಚಿವ ಎಂ.ಬಿ. ಪಾಟೀಲ್ ಅವರೊಂದಿಗೂ ಚರ್ಚಿಸಿದ್ದೇನೆ. ಯಾವುದೇ ಕಾರಣಕ್ಕೂ ಶಿವಮೊಗ್ಗ ವಿಮಾನ ನಿಲ್ದಾಣವನ್ನು ಖಾಸಗೀಕರಣಕ್ಕೆ ಬಿಟ್ಟುಕೊಡುವುದಿಲ್ಲ. ಈ ಕುರಿತು ಕೇಂದ್ರ ಸರ್ಕಾರಕ್ಕೂ ಪತ್ರ ಬರೆಯಲಾಗುವುದು” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಾಂಘೈ ಕೌಶಲ್ಯ ಶೃಂಗಸಭೆಯಲ್ಲಿ ಮಿಂಚಿದ ಕರ್ನಾಟಕದ ಪ್ರತಿಭೆಗಳು…ಪದಕಗಳ ಸೂರೆ

ಚೀನಾದ ಶಾಂಘೈನಲ್ಲಿ ನಡೆದ ಜಾಗತಿಕ 'ಕೌಶಲ್ಯ ಒಲಿಂಪಿಕ್ಸ್' ವೇದಿಕೆಯಲ್ಲಿ ನಮ್ಮ ಕರುನಾಡಿನ ಯುವಪ್ರತಿಭೆಗಳು ಹೊಸ ಇತಿಹಾಸ ಬರೆದಿದ್ದಾರೆ. ಕೇವಲ ಕನಸುಗಳನ್ನಷ್ಟೇ ಹೊತ್ತೊಯ್ದಿದ್ದ ನಮ್ಮ ನಾಡಿನ ಪ್ರತಿಭೆಗಳು, ತಮ್ಮ ಬೆವರು, ಕಠಿಣ ಪರಿಶ್ರಮ ಹಾಗೂ...

ಗಾಂಧೀಜಿ ತತ್ವಗಳ ಪ್ರಸ್ತುತತೆ: ಸಮಾನತೆಯ ಸಮಾಜಕ್ಕೆ ಶ್ರಮದ ಘನತೆಯೇ...

ಸರ್ವಜನರ ಹಿತ, ಎಲ್ಲ ಕೆಲಸಗಳಿಗೂ ಸಮಾನ ಗೌರವ ಮತ್ತು ಶಾರೀರಿಕ ಶ್ರಮದ ಘನತೆ-ಗಾಂಧೀಜಿ ಪ್ರತಿಪಾದಿಸಿದ ಈ ಮೂರು ಮೌಲ್ಯಗಳು ಇಂದಿನ ಅಸಮಾನತೆಯ ಸಮಾಜದಲ್ಲಿ ಹೆಚ್ಚು ಪ್ರಸ್ತುತವಾಗಿವೆ. ಆದರೆ ಅವುಗಳನ್ನು ವೈಯಕ್ತಿಕ ಬದುಕು, ಸಾಮಾಜಿಕ...

ಜಿಡಿಪಿ ಅಂಕಿಅಂಶಗಳ ಆಚೆಗಿನ ವಾಸ್ತವ: ಭಾರತದ ಆರ್ಥಿಕ ಸವಾಲುಗಳ...

ಜಾಗತಿಕ ಆರ್ಥಿಕತೆಯು ಭೌಗೋಳಿಕ-ರಾಜಕೀಯ ಸಂಘರ್ಷಗಳು ಮತ್ತು ತಂತ್ರಜ್ಞಾನದ ಕ್ಷಿಪ್ರ ಬದಲಾವಣೆಗಳ ನಡುವೆ ತೊಳಲಾಡುತ್ತಿರುವ ಹೊತ್ತಿನಲ್ಲಿ, ಭಾರತದ ಆರ್ಥಿಕತೆಯ ನಿಜವಾದ ಸ್ಥಿತಿಗತಿ ಏನು? ನಾವು ಸಾಗುತ್ತಿರುವ ಹಾದಿ ನಮ್ಮನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿಸಬಲ್ಲದೇ? ಈ...

“ಚುನಾವಣೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವಿಮಾನ ನಿಲ್ದಾಣ ಉದ್ಘಾಟಿಸಿ ಪ್ರಚಾರ ಪಡೆದುಕೊಂಡರು. ಆದರೆ, ಉದ್ಘಾಟನೆಯ ಬಳಿಕ ಆರಂಭದಲ್ಲಿ ಹಲವು ತಿಂಗಳು ವಿಮಾನ ಹಾರಾಟವೇ ಇರಲಿಲ್ಲ. ರಾಜ್ಯ ಸರ್ಕಾರವೇ ಪ್ರಯತ್ನಪಟ್ಟು ವಿಮಾನ ಸಂಚಾರ ಆರಂಭಿಸಲು ಶ್ರಮಿಸಿತು” ಎಂದು ಹೇಳಿದರು.

ಬಿಜೆಪಿ ದ್ವೇಷದ ರಾಜಕಾರಣ ಮಾಡುತ್ತಿದೆ

ಕಾಂಗ್ರೆಸ್ ನಾಯಕರ ಫೋನ್ ಕದ್ದಾಲಿಕೆ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಸಚಿವರು, “ಐಟಿ ಮತ್ತು ಇ.ಡಿ. ಸಂಸ್ಥೆಗಳನ್ನು ಬಳಸಿಕೊಂಡು ಎಷ್ಟು ಕಾಂಗ್ರೆಸ್ ನಾಯಕರ ಮೇಲೆ ದಾಳಿ ನಡೆಸಲಾಗಿದೆ? ಬಿಜೆಪಿ ನಾಯಕರ ವಿರುದ್ಧ ಎಷ್ಟು ಕ್ರಮ ಕೈಗೊಳ್ಳಲಾಗಿದೆ? ಎಂದು ಪ್ರಶ್ನಿಸಿದರು. ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಿಜೆಪಿ ಹಾಳು ಮಾಡುತ್ತಿರುವಷ್ಟು ಬೇರೆ ಯಾರೂ ಮಾಡಿಲ್ಲ. ಬಿಜೆಪಿಗೆ ಸಮರ್ಥ ನಾಯಕತ್ವದ ಕೊರತೆಯಿದೆ. ಸಮಾಜದಲ್ಲಿ ಕೆಟ್ಟ ವಿಚಾರಗಳನ್ನು ಹರಡುವುದೇ ಬಿಜೆಪಿಯ ರಾಜಕಾರಣವಾಗಿದೆ” ಎಂದು ಟೀಕಿಸಿದರು.

ಹಿರಿಯೂರು ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು

ಹಿರಿಯೂರು ಉಪಚುನಾವಣೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಚುನಾವಣೆಯಲ್ಲಿ ಗೆಲ್ಲಲು ಬಿಜೆಪಿ ಏನೇ ತಂತ್ರ, ಹುನ್ನಾರ ರೂಪಿಸಿದರೂ ಅಂತಿಮವಾಗಿ ಗೆಲುವು ಕಾಂಗ್ರೆಸ್ ಪಕ್ಷದ್ದೇ ಆಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಇಂಧನ-ಆಹಾರ ದರ ಏರಿಕೆ: ಅಕ್ಟೋಬರ್ ಸಗಟು ಹಣದುಬ್ಬರ 12.29%ಗೆ ಜಿಗಿತ!

ದೇಶದ ಜನಸಾಮಾನ್ಯರು ಮತ್ತು ಉದ್ಯಮ ವಲಯಕ್ಕೆ ಬೆಲೆ ಏರಿಕೆಯ ಬಿಸಿ ಮತ್ತಷ್ಟು...

ವಿದ್ಯಾರ್ಥಿಗಳೆದರು ಹರೀಶ್ ಪೂಂಜಾ ದ್ವೇಷ ಭಾಷಣ; ಕ್ರಮಕ್ಕೆ ಸಚಿವ ಮಧು ಬಂಗಾರಪ್ಪ ಸೂಚನೆ

ಜನಪ್ರತಿನಿಧಿಯಾಗಿ ಹೇಗೆ ಮಾತನಾಡಬೇಕು ಎಂಬ ಕನಿಷ್ಠ ಪರಿಜ್ಞಾನವೂ ಇಲ್ಲದೆ ಶಾಲಾ ಮಕ್ಕಳ...

ಜಿಡಿಪಿ ಅಂಕಿಅಂಶಗಳ ಆಚೆಗಿನ ವಾಸ್ತವ: ಭಾರತದ ಆರ್ಥಿಕ ಸವಾಲುಗಳ ಕುರಿತು ರಘುರಾಮ್ ರಾಜನ್ ಒಳನೋಟ

ಜಾಗತಿಕ ಆರ್ಥಿಕತೆಯು ಭೌಗೋಳಿಕ-ರಾಜಕೀಯ ಸಂಘರ್ಷಗಳು ಮತ್ತು ತಂತ್ರಜ್ಞಾನದ ಕ್ಷಿಪ್ರ ಬದಲಾವಣೆಗಳ ನಡುವೆ...

ಕುಮಟಾ–ಹೊನ್ನಾವರ ಕ್ಷೇತ್ರಕ್ಕೆ ರೂ.12 ಲಕ್ಷ ಅನುದಾನ; ಮನ್ಸೂರ್ ಅಲಿ ಖಾನ್‌ಗೆ ನಿವೇದಿತ್ ಆಳ್ವಾ ಕೃತಜ್ಞತೆ

ಕುಮಟಾ–ಹೊನ್ನಾವರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಶಾಲಾ ಮೂಲಸೌಕರ್ಯ ಹಾಗೂ ಸಾರ್ವಜನಿಕ ಸೌಲಭ್ಯಗಳ...