ದೆಹಲಿಯಲ್ಲಿ ಪತ್ರಕರ್ತೆಯರ ಮೇಲೆ ಪೊಲೀಸ್ ದೌರ್ಜನ್ಯ: ಕ್ರಮಕ್ಕೆ ಶಿವಮೊಗ್ಗ ಕಾನಿಪಸ ಆಗ್ರಹ

Date:

ದೆಹಲಿಯ ಜಂತರ್‌ ಮಂತರ್‌ನಲ್ಲಿ ಮುಖ್ಯ ಚುನಾವಣಾ ಆಯುಕ್ತರ ರಾಜಿನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಪತ್ರಕರ್ತೆಯರ ಮೇಲೆ ಪೊಲೀಸರು ನಡೆಸಿದ ದೌರ್ಜನ್ಯ ಖಂಡಿಸಿ, ಕಾರ್ಯನಿರತ ಪತ್ರಕರ್ತರ ಸಂಘದ ಶಿವಮೊಗ್ಗ ಜಿಲ್ಲಾ ಶಾಖೆಯಿಂದ ಪ್ರತಿಭಟನೆ ನಡೆಸಲಾಯಿತು. ಪತ್ರಕರ್ತೆಯರನ್ನು ಹೀನಾಯವಾಗಿ ನಡೆಸಿಕೊಂಡ ಅಧಿಕಾರಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಯಿತು.

ಪತ್ರಕರ್ತರನ್ನು ಪೊಲೀಸ್ ಅಧಿಕಾರಿಗಳು ಅನುಚಿತವಾಗಿ ನಿಂದಿಸಿ, ಲೈಂಗಿಕ ಕಿರುಕುಳ ನಡೆಸುವುದು ಅಲ್ಲದೇ, ಅಧಿಕಾರಿಯ ವಿರುದ್ಧ ದೂರು ದಾಖಲಿಸಲು ಹೋದ ಪತ್ರಕರ್ತರನ್ನು ಪೊಲೀಸರು ಗಂಟೆಗಟ್ಟಲೆ ಕಾಯಿಸಿ, ಎಫ್‌ಐಆರ್ ದಾಖಲಿಸಲು ಹಿಂದೇಟು ಹಾಕಿ, ಅಕಾರಣವಾಗಿ ಪ್ರಕರಣ ದಾಖಲಿಸುತ್ತಿರುವುದು ಕಾನೂನುಬಾಹಿರ ಎಂದು ಸಂಘ ಆರೋಪಿಸಿದೆ.

- Advertisement -

ಸ್ವತಂತ್ರ ಮಾಧ್ಯಮಗಳು ಹಾಗೂ ಡಿಜಿಟಲ್ ಮಾಧ್ಯಮ ಪತ್ರಕರ್ತರೊಂದಿಗೆ ಪೊಲೀಸರು ಹಿಂಸಾತ್ಮಕವಾಗಿ ವರ್ತಿಸುತ್ತಿದ್ದಾರೆ ಎಂದು ಸಂಘ ಆಕ್ಷೇಪಿಸಿದೆ. ಅಲ್ಲದೆ ಪ್ರತಿಭಟನಾಕಾರರ ಜೊತೆ ಕೆಲ ಪತ್ರಕರ್ತರನ್ನು ವಶಕ್ಕೆ ಪಡೆದಿರುವುದನ್ನು ವಿರೋಧಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಪ್ಲಾಟ್‌ಫಾರ್ಮ್‌ ಮೇಲೆ ಹರಿವ ಚರಂಡಿ ನೀರು;...

"ಚರಂಡಿ ನೀರಿನ್ಯಾಗ ದಿನ ಹೋಗಾಕ ಹತ್ತಿವಿ…" ಇದು ವಿಜಯಪುರ ಕೇಂದ್ರ ಬಸ್ ನಿಲ್ದಾಣಕ್ಕೆ ಪ್ರತಿನಿತ್ಯ ಆಗಮಿಸುವ ಸಾವಿರಾರು ಪ್ರಯಾಣಿಕರ ಅಳಲು. ಪ್ಲಾಟ್‌ಫಾರ್ಮ್‌-1ರಲ್ಲಿ ಕೊಳಚೆ ನೀರು ಹರಿಯುತ್ತಿದ್ದರೂ, ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ಜವಾಬ್ದಾರಿಯಿಂದ...

ಏಷ್ಯನ್ ಗೇಮ್ಸ್ : ತಂಡಗಳ ಯಶಸ್ಸಿನ ನಡುವೆ ವೈಯಕ್ತಿಕ...

ಭಾರತದ ಸಾಂಪ್ರದಾಯಿಕ ಕ್ರೀಡಾ ಶಕ್ತಿಗಳಾದ ಅಥ್ಲೆಟಿಕ್ಸ್ ಮತ್ತು ಶೂಟಿಂಗ್ ವಿಭಾಗಗಳು ಈ ಬಾರಿ ನಿರೀಕ್ಷಿತ ಮಟ್ಟದಲ್ಲಿ ಮಿಂಚದೆ ಹಿನ್ನಡೆ ಅನುಭವಿಸಿವೆ. ಕಳೆದ ಹಾಂಗ್‌ಝೌ ಏಷ್ಯನ್ ಗೇಮ್ಸ್‌ನಲ್ಲಿ ಈ ಎರಡು ವಿಭಾಗಗಳಿಂದ ಬರೋಬ್ಬರಿ 51...

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಈ ಹಿನ್ನೆಲೆಯಲ್ಲಿ ಸಂಘದ ಅಧ್ಯಕ್ಷ ವೈದ್ಯನಾಥ್ ಹೆಗ್ಡೆ, ರಾಜ್ಯಸಮಿತಿ ನಿರ್ದೇಶಕರು ಕೆ.ವಿ. ಶಿವಕುಮಾರ್ ಮತ್ತು ಎನ್. ರವಿಕುಮಾರ್ ಹಾಗೂ ಪ್ರಧಾನ ಕಾರ್ಯದರ್ಶಿ ಆರ್.ಎಸ್. ಹಾಲಸ್ವಾಮಿ ನೇತೃತ್ವದಲ್ಲಿ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಗಿದ್ದು, ಪತ್ರಕರ್ತರ ಮೇಲೆ ಹಲ್ಲೆ ನಡೆಸಿದ ಪೊಲೀಸ್ ಅಧಿಕಾರಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಂಘ ಒತ್ತಾಯಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಲಾರಿ ಚಾಲಕನಿಗೆ ಚಾಕು ಇರಿದು ದುಷ್ಕರ್ಮಿಗಳು ಪರಾರಿ!

ಶಿವಮೊಗ್ಗ ನಗರದ ಮಂಜುನಾಥ ಬಡಾವಣೆಯ ಕೆ.ಎಸ್.ಆರ್.ಟಿ.ಸಿ. ಬಸ್ ಡಿಪೋ ಎದುರು ಶನಿವಾರ...

ರಷ್ಯಾದಲ್ಲಿ ನ್ಯುಮೋನಿಕ್ ಪ್ಲೇಗ್ ಭೀತಿ: ಲ್ಯಾಬ್ ಸಿಬ್ಬಂದಿ ಸಾವು, 200 ಮಂದಿ ಮೇಲೆ ನಿಗಾ

ರಷ್ಯಾದ ಇರ್ಕುಟ್ಸ್ಕ್ (Irkutsk) ಪ್ರದೇಶದಲ್ಲಿ ಶಂಕಿತ ನ್ಯುಮೋನಿಕ್ ಪ್ಲೇಗ್‌ಗೆ ಲ್ಯಾಬ್ ಉದ್ಯೋಗಿಯೊಬ್ಬರು...

ದೀಪ್ಕೆ, ಇತರೆ ಸಿಜೆಪಿ ನಾಯಕರ ಬಂಧನಕ್ಕೆ ಸರ್ಕಾರ ಸಂಚು: ಜೈಲಿಗೆ ಹೋಗಲು ಹೆದರಲ್ಲ ಎಂದ ಸೌರವ್ ದಾಸ್

ಅಕ್ಟೋಬರ್ 10 ರಂದು ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯಲಿರುವ ಬೃಹತ್ ಪ್ರತಿಭಟನೆಗೂ...

ಕುಮಟಾ | ಖೋ-ಖೋದಲ್ಲಿ ಸತತ 5ನೇ ಬಾರಿ ವಿಭಾಗ ಮಟ್ಟಕ್ಕೆ ಆಯ್ಕೆ; 3 ಕಿ.ಮೀ. ನಡಿಗೆಯಲ್ಲಿ ವಿನುತಾ ರಾಜ್ಯ ಮಟ್ಟಕ್ಕೆ

ಕುಮಟಾ: ಭಟ್ಕಳದಲ್ಲಿ ನಡೆದ ಪ್ರೌಢಶಾಲೆಗಳ ಜಿಲ್ಲಾ ಮಟ್ಟದ ಇಲಾಖಾ ಕ್ರೀಡಾಕೂಟದಲ್ಲಿ ಕುಮಟಾ...