ಸಾಗರ | ಸರ್ಕಾರ ಮತ್ತು ಜನರ ನಡುವೆ ಕೊಂಡಿಯಾಗಿ ಕಾರ್ಯನಿರ್ವಹಿಸಿ: ಶಾಸಕ ಬೇಳೂರು

Date:

ಪ್ರಜಾಸೇವೆ ಎಂದರೆ ಅಧಿಕಾರಿಗಳು ಸರ್ಕಾರಿ ಕಚೇರಿಯಲ್ಲಿದ್ದು ಕರ್ತವ್ಯ ನಿರ್ವಹಿಸುವುದು ಮಾತ್ರವಲ್ಲ, ಜನರ ನೋವು-ನಲಿವುಗಳಿಗೆ ಸ್ಪಂದಿಸಿ, ಅವರ ಸಮಸ್ಯೆಗಳಿಗೆ ಪರಿಹಾರ ಕಂಡುಹಿಡಿದು, ಸರ್ಕಾರ ಮತ್ತು ಜನರ ನಡುವಿನ ವಿಶ್ವಾಸದ ಸೇತುವೆಯಾಗಿ ಕಾರ್ಯನಿರ್ವಹಿಸಬೇಕು ಎಂದು ಸಾಗರ ವಿಧಾನ ಸಭಾ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು.

- Advertisement -

ಅವರು ಆನಂದಪುರದ ಕಡ್ಲೆಹಂಕ್ಲು ಮಾರಿಕಾಂಬಾ ದೇವಸ್ಥಾನದ ಆವರಣದಲ್ಲಿ ಆಯೋಜಿಸಲಾಗಿದ್ದ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಸಭೆಯನ್ನು ಉದ್ಘಾಟಿಸಿ ಮಾತನಾಡಿ, “ಪ್ರಜಾಸೇವೆಯ ಮೂಲ ಉದ್ದೇಶವೇ ಜನರ ಕಲ್ಯಾಣ, ಜನರ ಸಮಸ್ಯೆಗಳಿಗೆ ಸ್ಪಂದನೆ ಹಾಗೂ ಸರ್ಕಾರದ ಸೇವೆಗಳನ್ನು ಅರ್ಹ ಫಲಾನುಭವಿಗಳಿಗೆ ಪಾರದರ್ಶಕವಾಗಿ ತಲುಪಿಸುವುದು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಿದ್ದರಾಮಯ್ಯ ನಿರ್ಗಮನ ‘ಅಹಿಂದ’ ಮರಕ್ಕೆ ಕೊಡಲಿ ಏಟು: ಸಮುದಾಯದ...

ಒಂದು ಕಾಲದಲ್ಲಿ ರಾಜ್ಯದ ರಾಜಕಾರಣದ ಗತಿಯನ್ನೇ ಬದಲಿಸಿದ್ದ 'ಅಹಿಂದ' ಚಳವಳಿ ಇಂದು ನಾವಿಕನಿಲ್ಲದ ದೋಣಿಯಾಗಿದೆ. ಸಿದ್ದರಾಮಯ್ಯ ನಿರ್ಗಮನ, ಸ್ಟಿಂಗ್ ಆಪರೇಷನ್ ಆರೋಪ, ಸತೀಶ್ ಜಾರಕಿಹೊಳಿ ಹಿಂದಕ್ಕೆ ಮತ್ತು ಕೆ.ಎನ್. ರಾಜಣ್ಣನವರ ಅನಿಶ್ಚಿತತೆ… ಈ...

ಅಲ್ಬೇನಿಯಾದಲ್ಲೇಕೆ ಜನಾಕ್ರೋಶ ಭುಗಿಲೆದ್ದಿದೆ? ಸುಪ್ರೀಂ ಕೋರ್ಟ್, ಪಾರ್ಲಿಮೆಂಟನ್ನು ಸುಟ್ಟದ್ದು...

ಅಲ್ಬೇನಿಯಾ ರಾಜಧಾನಿ ತಿರಾನಾದ ಬೀದಿಗಳಿಂದ ಜಾಗತಿಕ ರಾಜಧಾನಿಗಳವರೆಗೆ… ಬೆಲೆ ಏರಿಕೆ, ಭ್ರಷ್ಟಾಚಾರ ಮತ್ತು ಶಿಕ್ಷಣದ ಬಿಕ್ಕಟ್ಟಿನ ವಿರುದ್ಧ ಯುವ ಸಮೂಹ ಬೀದಿಗಿಳಿದಿದೆ. ಪ್ರಧಾನಿ ಎಡಿ ರಾಮಾ ಸರ್ಕಾರದ ವಿರುದ್ಧ ಅಲ್ಬೇನಿಯಾದಲ್ಲಿ ಭುಗಿಲೆದ್ದ ಜನಾಕ್ರೋಶ...

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

“ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರೇ ಕೇಂದ್ರಬಿಂದುವಾಗಿದ್ದು, ಆಡಳಿತವು ಜನಸ್ನೇಹಿ, ಜವಾಬ್ದಾರಿಯುತ ಮತ್ತು ಪರಿಣಾಮಕಾರಿಯಾಗಿರಬೇಕು ಎಂದ ಅವರು ಸಮಾಜದ ಎಲ್ಲ ವರ್ಗಗಳ ಜನರ ಜೀವನಮಟ್ಟ ಸುಧಾರಿಸಿ, ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡುವುದು ಸರ್ಕಾರದ ಆಶಯವಾಗಿದೆ” ಎಂದರು.

“ಈ ಆಂದೋಲನದಲ್ಲಿ ಸ್ವೀಕರಿಸಲಾಗುವ ಸಾರ್ವಜನಿಕರ ಕುಂದುಕೊರತೆಗಳಿಗೆ ನಿಗದಿಪಡಿಸಿದ ಕಾಲಮಿತಿಯಲ್ಲಿ ಪರಿಹಾರ ಒದಗಿಸಲಾಗುವುದು. ಸರ್ಕಾರದ ವಿವಿಧ ಇಲಾಖೆಗಳಿಂದ ಅನುಷ್ಠಾನಗೊಳ್ಳುವ ಜನಪರ ಯೋಜನೆಗಳು ಮತ್ತು ಅವುಗಳ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವುದಾಗಿದೆ” ಎಂದು ತಿಳಿಸಿದರು.

ಎಲ್ಲರೂ ಸ್ವಂತ ಸೂರನ್ನು ಹೊಂದಬೇಕೆಂಬ ಸದಾಶಯದಿಂದ ನಿವೇಶನ ರಹಿತರಿಗೆ ನಿವೇಶನ ಒದಗಿಸಲು ಉದ್ದೇಶಿಸಿದೆ. ಅದಕ್ಕಾಗಿ ಪ್ರತಿ ಜಿಲ್ಲೆಯಲ್ಲಿ ಅರ್ಹರಾದ 50000 ಫಲಾನುಭವಿಗಳನ್ನು ಗುರುತಿಸಿ ನಿವೇಶನ ನೀಡಲಿದೆ. ಸಾಗರ ತಾಲೂಕಿನ ಸುಮಾರು 8000 ಜನರಿಗೆ ನಿವೇಶನ ಕೊಡಿಸುವ ಆಶಯ ನನಗಿದೆ ಎಂದರು. ಕಾರ್ಯಕ್ರಮದಲ್ಲಿ ಹೊಲಕ್ಕೆ ಕಾಲುದಾರಿ ನಿರ್ಮಿಸಿ, ಕುಡಿಯುವ ನೀರು ಪೂರೈಸಿ, ಭಾಗ್ಯಲಕ್ಷ್ಮಿ ಸೌಲಭ್ಯ ಕೊಡಿಸಿ, ಅಂಗವಿಕಲರ ವೇತನ ಕೊಡಿಸಿ, ವಿದ್ಯುತ್ ಸೌಲಭ್ಯ ಕಲ್ಪಿಸಿ, ಜಮೀನಿನ ಹಕ್ಕುಪತ್ರ ಕೊಡಿಸಿ, ದುರ್ಬಲ ಮರಗಳನ್ನು ಉರುಳಿಸಿ ಇನ್ನೂ ಮುಂತಾದ ವಿಷಯಗಳ ಅರ್ಜಿಗಳು ಸಲ್ಲಿಕೆಯಾದವು.ಬೆಳಿಗ್ಗೆ 9ಗಂಟೆಯಿಂದಲೇ ಗ್ರಾಮೀಣ ಜನರು ತಮ್ಮ ಅಹವಾಲುಗಳನ್ನು ಸಲ್ಲಿಸಲು ಸರದಿ ಸಾಲಿನಲ್ಲಿ ನಿಂತಿದ್ದರು.

ಕಾರ್ಯಕ್ರಮದ ನಡುವೆ ರೈತರಿಗೆ ಮೇವಿನ ಬೀಜದ ಪ್ಯಾಕೆಟ್ ಗಳನ್ನು ಶಾಸಕರು ವಿತರಿಸಿದರು. ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಸಿಇಓ ರಿಷಿ ಆನಂದ್, ಎಸಿ ವೀರೇಶ್ ಕುಮಾರ್, ಎಎಸ್ಪಿ ಬೆನಕಪ್ಪ, ಡಾ. ಪ್ರತಿಭಾ ಆರ್, ಮೌನೇಶ್, ಸುಜಾತಾ, ನಂದಿನಿ, ಸಂತೋಷಕುಮಾರ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು, ನೂರಾರು ಸಂಖ್ಯೆಯ ಗ್ರಾಮಸ್ಥರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿಕಾರಿಪುರ | ಕವಿ, ಬರಹಗಾರರಿಂದ ಮನಸ್ಸು ಒಂದಾಗಿಸುವ ಕೆಲಸವಾಗಲಿ: ಡಾ. ಸರ್ಫ್ರಾಜ್ ಚಂದ್ರಗುತ್ತಿ

ಕವಿ ಹಾಗೂ ಬರಹಗಾರರು ತಮ್ಮ ಬರವಣಿಗೆ ಮೂಲಕ ಮನಸ್ಸುಗಳನ್ನು ಕೂಡಿಸುವ ಕೆಲಸ...

ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುವ ಆಸೆ: ಕೊಲೆ ಅಪರಾಧಿಯ ಶಿಕ್ಷೆಗೆ ಅಲಹಾಬಾದ್ ಹೈಕೋರ್ಟ್ ತಡೆ

2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಅಥವಾ ಸಾಧ್ಯವಾದರೆ...

ರಾಯಚೂರು | ನಕಲಿ ವೈದ್ಯರ ಕ್ಲಿನಿಕ್‌ಗಳ ಮೇಲೆ ಆರೋಗ್ಯ ಇಲಾಖೆ ದಾಳಿ; ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ

ಜಿಲ್ಲೆಯಾದ್ಯಂತ ವಿವಿಧೆಡೆ ವೈದ್ಯಕೀಯ ಪದವಿ ಪಡೆಯದೆ ವೈದ್ಯ ವೃತ್ತಿ ನಡೆಸುತ್ತಿದ್ದರೆನ್ನಲಾದ ನಕಲಿ...