ಸಾಗರ | ತಾಲೂಕು ಮಟ್ಟದ ಪ್ರಜಾಸೇವೆ ಸಭೆ; 500ಕ್ಕೂ ಹೆಚ್ಚು ಅರ್ಜಿಗಳ ಸ್ವೀಕಾರ

Date:

ಸಾಗರ ತಾಲೂಕಿನಲ್ಲಿ ಮನೆ ಬಾಗಿಲಿಗೆ ಬಂತು ಸರ್ಕಾರ–ಸೇವೆಗೆ ಇರಲಿದೆ ಸಹಕಾರ ಎಂಬ ಧ್ಯೇಯದೊಂದಿಗೆ ರಾಜ್ಯ ಸರ್ಕಾರ ಆರಂಭಿಸಿರುವ ಪ್ರಜಾಸೇವೆ ಆಂದೋಲನಕ್ಕೆ ಜನಸಾಮಾನ್ಯರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದರು.

- Advertisement -

ಸಾಗರ ನಗರದ ಐತಿಹಾಸಿಕ ಗಾಂಧಿ ಮೈದಾನದಲ್ಲಿ ಇಂದು ನಡೆದ ಸಾಗರ ತಾಲ್ಲೂಕು ಮಟ್ಟದ ಪ್ರಜಾಸೇವೆ ಆಂದೋಲನ ಸಭೆಯನ್ನು ಉದ್ಘಾಟಿಸಿ, ಮಾತನಾಡಿ, “ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸೆಪ್ಟೆಂಬರ್ 5ರಂದು ಕೂಡ್ಲಿಗಿಯಲ್ಲಿ ರಾಜ್ಯಮಟ್ಟದ ಪ್ರಜಾಸೇವೆ ಆಂದೋಲನಕ್ಕೆ ಚಾಲನೆ ನೀಡಿದ್ದಾರೆ. ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಜನರ ಬಳಿಗೆ ತೆರಳಿ, ಸಾಧ್ಯವಾದಷ್ಟು ಸಮಸ್ಯೆಗಳನ್ನು ಸ್ಥಳದಲ್ಲೇ ಪರಿಹರಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ರೂಪಿಸಲಾಗಿದೆ. ಇದಕ್ಕಾಗಿ ಸರ್ಕಾರ ಪ್ರತ್ಯೇಕ ಇಲಾಖೆಯನ್ನು ಸಹ ತೆರೆದಿದ್ದು, ಆಡಳಿತವನ್ನು ಜನರ ಬಳಿಗೆ ಕೊಂಡೊಯ್ಯುವ ಪ್ರಯತ್ನಕ್ಕೆ ಮತ್ತಷ್ಟು ವೇಗ ನೀಡಲಾಗಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...
531fc8a4 0c1a 4ae3 a6c8 44e4a6a3d4e4 1

ಪ್ರಜಾಸೇವೆ ಆಂದೋಲನ ನಿರಂತರವಾಗಿ ನಡೆಯಬೇಕು ಎಂಬುದು ಮುಖ್ಯಮಂತ್ರಿಗಳ ಆಶಯವಾಗಿದೆ. ಜಿಲ್ಲಾ ಉಸ್ತುವಾರಿ ಸಚಿವನಾಗಿ ಮೊದಲ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಶಿಕಾರಿಪುರದಲ್ಲಿ ಸೆಪ್ಟೆಂಬರ್ 8ರಂದು ನಡೆಸಿದ್ದೇನೆ. ಅಕ್ಟೋಬರ್ 3ರಂದು ನನ್ನ ಸೊರಬ ವಿಧಾನಸಭಾ ಕ್ಷೇತ್ರದಲ್ಲಿ ತಾಲ್ಲೂಕು ಮಟ್ಟದ ಸಭೆ ನಡೆಸಿ ಜನರ ಸಮಸ್ಯೆಗಳನ್ನು ನೇರವಾಗಿ ಆಲಿಸಿದ್ದೇನೆ. ಇದೀಗ ಸಾಗರದಲ್ಲಿ ಸಭೆ ನಡೆಸುತ್ತಿರುವುದು ಸಂತೋಷ ತಂದಿದೆ ಎಂದು ಮಧು ಬಂಗಾರಪ್ಪ ಹೇಳಿದರು.ಅರ್ಜಿಗಳಿಗೆ ಆನ್‌ಲೈನ್‌ನಲ್ಲಿ ಮಾಹಿತಿಪ್ರಜಾಸೇವೆ ಆಂದೋಲನದಲ್ಲಿ ಸಾರ್ವಜನಿಕರು ಸಲ್ಲಿಸುವ ಅರ್ಜಿಗಳಿಗೆ ಹೆಚ್ಚಿನ ಮಾನ್ಯತೆ ಇದೆ. ಅರ್ಜಿ ಯಾವ ಹಂತದಲ್ಲಿದೆ ಎಂಬ ಮಾಹಿತಿಯೂ ಆನ್‌ಲೈನ್‌ನಲ್ಲಿ ಲಭ್ಯವಾಗಲಿದೆ. ಸಲ್ಲಿಕೆಯಾಗಿರುವ ಅರ್ಜಿಗಳ ಸ್ಥಿತಿಗತಿಯನ್ನು ಮುಖ್ಯಮಂತ್ರಿಗಳ ಕಚೇರಿಯೇ ನೇರವಾಗಿ ಪರಿಶೀಲನೆ ನಡೆಸಲಿದೆ.

ಇದಕ್ಕಾಗಿಯೇ ಹೊಸ ಇಲಾಖೆಯನ್ನು ಸ್ಥಾಪಿಸಲಾಗಿದೆ ಎಂದು ತಿಳಿಸಿದ ಅಧಿಕಾರಿಗಳು ಅರ್ಜಿಗಳನ್ನು ತ್ವರಿತವಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು ಎಂದು ಸಚಿವರು ಸೂಚಿಸಿದರು.ಈ ಕಾರ್ಯಕ್ರಮದಿಂದ ರಾಜ್ಯದ ಯಾವ ಭಾಗದಲ್ಲಿ ಯಾವೆಲ್ಲಾ ಸಮಸ್ಯೆಗಳಿವೆ, ಯಾವ ಸಮಸ್ಯೆ ಹೆಚ್ಚಾಗಿದೆ ಎಂಬುದು ಸರ್ಕಾರಕ್ಕೆ ನೇರವಾಗಿ ಗೊತ್ತಾಗಲಿದೆ. ಇದರಿಂದ ಮುಂದೆ ಆಡಳಿತಾತ್ಮಕ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗಲಿದೆ ಎಂದು ಸಚಿವ ಮಧು ಬಂಗಾರಪ್ಪ ವಿವರಿಸಿದರು.

Advertisements

ಗ್ಯಾರಂಟಿ ಯೋಜನೆಗಳಿಂದ ಆರ್ಥಿಕ ಶಕ್ತಿರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಲಕ್ಷಾಂತರ ಕುಟುಂಬಗಳ ಆರ್ಥಿಕ ಶಕ್ತಿಯನ್ನು ಹೆಚ್ಚಿಸಿವೆ. ಯುವಕರ ಸಬಲೀಕರಣಕ್ಕೂ ಸರ್ಕಾರ ಆದ್ಯತೆ ನೀಡುತ್ತಿದ್ದು, ಪ್ರತಿ ಗ್ರಾಮದಲ್ಲಿ ಭಾರತ್ ಜೋಡೋ ಯುವಕರ ಸಂಘಗಳನ್ನು ಸ್ಥಾಪಿಸಲಾಗುತ್ತಿದೆ. ಪ್ರತಿ ಸಂಘಕ್ಕೆ ವಾರ್ಷಿಕವಾಗಿ ₹10 ಲಕ್ಷ ಅನುದಾನ ನೀಡುವ ಯೋಜನೆಯಿದ್ದು, ಯುವಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಚಿವರು ಕರೆ ನೀಡಿದರು.

ರಾಜ್ಯದಲ್ಲಿ ಕೆಪಿಎಸ್ ಶಾಲೆಗಳ ಕ್ರಾಂತಿದೇಶದ ಪ್ರಗತಿಗೆ ಶಿಕ್ಷಣವೇ ಬುನಾದಿ. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಲಾಗುತ್ತಿದೆ. ರಾಜ್ಯದಲ್ಲಿ ಕೆಪಿಎಸ್ ಶಾಲೆಗಳ ಮೂಲಕ ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆ ತರಲಾಗುವುದು ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.ಸುಮಾರು ₹4,500 ಕೋಟಿ ವೆಚ್ಚದಲ್ಲಿ ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೆಪಿಎಸ್ ಶಾಲೆಗಳನ್ನು ನಿರ್ಮಿಸುವ ಯೋಜನೆ ರೂಪಿಸಲಾಗಿದೆ. ಪೂರ್ವ ಪ್ರಾಥಮಿಕ ಶಿಕ್ಷಣದಿಂದ ಪಿಯುಸಿ ವರೆಗೆ ಒಂದೇ ಕ್ಯಾಂಪಸ್‌ನಲ್ಲಿ ಶಿಕ್ಷಣ ಪಡೆಯುವ ವ್ಯವಸ್ಥೆ ಇರಲಿದೆ. ಶಿಕ್ಷಣ ಸಂಪೂರ್ಣ ಉಚಿತವಾಗಿದ್ದು, ಕೆಪಿಎಸ್ ಶಾಲೆಗಳಿಗೆ ಬರುವ ಮಕ್ಕಳಿಗೆ ಉಚಿತ ಶಾಲಾ ವಾಹನ ವ್ಯವಸ್ಥೆ ಕಲ್ಪಿಸುವ ಉದ್ದೇಶವೂ ಇದೆ ಎಂದು ತಿಳಿಸಿದರು.

ನವೆಂಬರ್‌ನಲ್ಲಿ ಶಿವಮೊಗ್ಗದಲ್ಲಿ ದೊಡ್ಡ ಕಾರ್ಯಕ್ರಮ ಆಯೋಜಿಸಿ ಕೆಪಿಎಸ್ ಶಾಲೆಗಳ ಕಟ್ಟಡ ನಿರ್ಮಾಣಕ್ಕೆ ಚಾಲನೆ ನೀಡಲಾಗುವುದು. ಕೆಪಿಎಸ್ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣದ ಜೊತೆಗೆ ಸಂಗೀತ, ಕಂಪ್ಯೂಟರ್ ಸೇರಿದಂತೆ ವಿವಿಧ ವಿಷಯಗಳಿಗೆ ಅಗತ್ಯವಿರುವ ಶಿಕ್ಷಕರನ್ನು ಒದಗಿಸಲಾಗುವುದು ಎಂದು ಸಚಿವರು ಹೇಳಿದರು.4 ತಾಸು ವೇದಿಕೆಯಲ್ಲೇ ಕುಳಿತು ಅರ್ಜಿ ಆಲಿಸಿದ ಸಚಿವರುಬೆಳಿಗ್ಗೆ 11 ಗಂಟೆಗೆ ಆರಂಭವಾದ ಪ್ರಜಾಸೇವೆ ಸಭೆಯಲ್ಲಿ ಸಚಿವ ಮಧು ಬಂಗಾರಪ್ಪ ಅವರು ಮಧ್ಯಾಹ್ನ 3 ಗಂಟೆಯವರೆಗೂ ವೇದಿಕೆಯಲ್ಲೇ ಕುಳಿತು ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದರು. ವಿವಿಧ ಇಲಾಖೆಗಳ ಸಮಸ್ಯೆಗಳನ್ನು ಒಂದೊಂದಾಗಿ ಪರಿಶೀಲಿಸಿ, ಸಾಧ್ಯವಾದಷ್ಟು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಕಲ್ಪಿಸಲು ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ವಿವಿಧ ಇಲಾಖೆಗೆ ಸಂಬಂಧಿಸಿದಂತೆ 500ಕ್ಕೂ ಹೆಚ್ಚು ಅರ್ಜಿಗಳು ಸ್ವೀಕೃತವಾದವು. ಅರ್ಜಿಗಳನ್ನು ಪರಿಶೀಲಿಸಿದ ಸಚಿವರು ಸಂಬಂಧಪಟ್ಟ ಅಧಿಕಾರಿಗಳಿಗೆ ವರ್ಗಾಯಿಸಿ, ತ್ವರಿತವಾಗಿ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದರು. ಕಂದಾಯ ಇಲಾಖೆಗೆ ಸಂಬಂಧಿಸಿದ ಅರ್ಜಿಗಳೇ ಹೆಚ್ಚಿನ ಸಂಖ್ಯೆಯಲ್ಲಿದ್ದವು.ಸಾಗರವನ್ನು ಬರಪೀಡಿತ ತಾಲೂಕು ಎಂದು ಘೋಷಿಸಲು ಮನವಿಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಕರ್ನಾಟಕ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಅಧ್ಯಕ್ಷತೆ ವಹಿಸಿ ಮಾತನಾಡುತ್ತ, ಸಾಗರ ತಾಲ್ಲೂಕನ್ನು ಬರಪೀಡಿತ ಎಂದು ಘೋಷಿಸಬೇಕೆಂಬುದು ಕ್ಷೇತ್ರದ ಜನರ ಒಕ್ಕೊರಲಿನ ಬೇಡಿಕೆಯಾಗಿದೆ. ಈ ಕುರಿತು ಜಿಲ್ಲಾ ಉಸ್ತುವಾರಿ ಸಚಿವರು ಗಮನಹರಿಸಿ, ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಬೇಕು ಎಂದು ಮನವಿ ಮಾಡಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ. ನಿಖಿಲ್, ಡಿಎಫ್‌ಒ ಮೊಹಮ್ಮದ್ ಫಯಾಜುದ್ದೀನ್ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ವನ್ಯಜೀವಿ ಸಂರಕ್ಷಣೆಗೆ ಬೈಕ್ ಜಾಥಾ :

ಇದೇ ಸಂದರ್ಭದಲ್ಲಿ “ವನ್ಯಜೀವಿ ವಾಸಸ್ಥಳಗಳನ್ನು ಸಂರಕ್ಷಿಸೋಣ” ಎಂಬ ಆಶಯದೊಂದಿಗೆ ಕರ್ನಾಟಕ ಸರ್ಕಾರದ ಅರಣ್ಯ ಇಲಾಖೆ ಹಾಗೂ ಸಾಗರ ಅರಣ್ಯ ವಿಭಾಗದ ವತಿಯಿಂದ ಆಯೋಜಿಸಿದ್ದ ‘ವನ್ಯಜೀವಿ ಸಪ್ತಾಹ–2026’ರ ವಿಶೇಷ ಬೈಕ್ ಜಾಥಾಕ್ಕೆ ಸಚಿವ ಮಧು ಬಂಗಾರಪ್ಪ ಚಾಲನೆ ನೀಡಿದರು.ಸಾಗರದ ಐತಿಹಾಸಿಕ ಗಾಂಧಿ ಮೈದಾನದಿಂದ ಆರಂಭವಾದ ಬೈಕ್ ಜಾಥಾದಲ್ಲಿ ಸಾಗರದ ಯುವಕರು, ಪರಿಸರ ಪ್ರೇಮಿಗಳು ಹಾಗೂ ಸಾರ್ವಜನಿಕರು ಪಾಲ್ಗೊಂಡು ವನ್ಯಜೀವಿ ಸಂರಕ್ಷಣೆಯ ಕುರಿತು ಜಾಗೃತಿ ಮೂಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ: ಜನಸಾಮಾನ್ಯರ ನಿರೀಕ್ಷೆಗಳೇನು?–ಭಾಗ 3

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ,...

ಮೈಸೂರು | ‘SIR’ ಫಾರಂ-7 ದುರ್ಬಳಕೆ: ಬಿಜೆಪಿ ಪದಾಧಿಕಾರಿ ಸೇರಿ ಮೂವರ ವಿರುದ್ಧ FIR!

ಮೈಸೂರಿನಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ 'ಫಾರಂ-7'...

AI ಗೆ ಸಂಪೂರ್ಣ ನಿಯಂತ್ರಣ ಬೇಡ, ಕೆಲ ಅಪಾಯಗಳನ್ನು ಸ್ವೀಕರಿಸೋಣ: ಸ್ಯಾಮ್ ಆಲ್ಟ್‌ಮನ್

AI ತಂತ್ರಜ್ಞಾನದಿಂದ ಉಂಟಾಗಬಹುದಾದ ಕೆಲವು ಅಪಾಯಗಳನ್ನು ಒಪ್ಪಿಕೊಂಡರೂ, ಅದರ ಮೂಲಕ ದೊರೆಯುವ...

ಶಿವಮೊಗ್ಗ | ಬಿರ್ಲಾ ಎಸ್ಟೇಟ್ ಹೆಸರಿನಲ್ಲಿ ದೋಖಾ; 8 ಲಕ್ಷ ರೂ. ಕಳೆದುಕೊಂಡ ಉದ್ಯಮಿ!

ಕಡಿಮೆ ದರಕ್ಕೆ ಕಬ್ಬಿಣದ ಸರಳುಗಳನ್ನು ನೀಡುತ್ತೇವೆ ಎಂದು ನಂಬಿಸಿ, ಶಿವಮೊಗ್ಗದ ಉದ್ಯಮಿಯೊಬ್ಬರಿಗೆ...