ಶಂಕರಘಟ್ಟ | ‘ಕನ್ನಡ ಭಾರತಿ’ ಎಂ.ಎ ಕನ್ನಡ ಪ್ರವೇಶಾತಿ ಆರಂಭ; ಆಗಸ್ಟ್ 31 ಕೊನೆಯ ದಿನ

Date:

ಕುವೆಂಪು ವಿಶ್ವವಿದ್ಯಾಲಯದ ಕನ್ನಡ ಭಾರತಿಯಲ್ಲಿ 2026-27ನೇ ಸಾಲಿನ ಎಂ.ಎ. ಕನ್ನಡ ಪದವಿ ಕೋರ್ಸ್‌ಗೆ ಪ್ರವೇಶಾತಿ ಪ್ರಕ್ರಿಯೆ ಆರಂಭವಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 31, 2026 ಕೊನೆಯ ದಿನಾಂಕ ಎಂದು ವಿಭಾಗದ ಪ್ರಕಟಣೆ ತಿಳಿಸಿದೆ.

- Advertisement -

ಕನ್ನಡ ಭಾರತಿ ವಿಭಾಗವು ವಿದ್ಯಾರ್ಥಿಗಳಿಗೆ ವಿಶೇಷ ಸೌಲಭ್ಯಗಳನ್ನು ಒದಗಿಸುತ್ತಿದ್ದು, ನೆಟ್‌ (ಜೆ.ಆರ್.ಎಫ್) ಮತ್ತು ಕೆಸೆಟ್‌ ಪರೀಕ್ಷೆಗಳ ಸಿದ್ಧತೆಗೆ ಅಗತ್ಯ ಸಲಹೆಗಳನ್ನು ನೀಡಲಾಗುತ್ತಿದೆ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಕೂಲವಾಗುವಂತೆ ಪಠ್ಯಕ್ರಮವನ್ನು ರೂಪಿಸಲಾಗಿದ್ದು, ಕನ್ನಡ ಭಾಷೆ ಮತ್ತು ಸಾಹಿತ್ಯ ಸಂಬಂಧಿತ ಕಲಿಕೆಯ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ಸಕ್ರಿಯವಾಗಿ ತೊಡಗಿಸಿಕೊಳ್ಳಲು ಅವಕಾಶ ನೀಡಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಅಂತರರಾಷ್ಟ್ರೀಯ ಮತ್ತು ರಾಷ್ಟ್ರಮಟ್ಟದ ವಿಚಾರ ಸಂಕಿರಣಗಳನ್ನು ನಿಯಮಿತವಾಗಿ ಏರ್ಪಡಿಸಲಾಗುತ್ತಿದೆ. ಸಾಹಿತ್ಯ, ಸಿನಿಮಾ, ಸಾಂಸ್ಕೃತಿಕ, ಭಾಷಾ, ರಂಗಭೂಮಿ, ದೂರದರ್ಶನ ಮತ್ತು ಆಕಾಶವಾಣಿ ಕ್ಷೇತ್ರಗಳಿಂದ ಸಂಪನ್ಮೂಲ ವ್ಯಕ್ತಿಗಳನ್ನು ಆಹ್ವಾನಿಸಿ ವಿದ್ಯಾರ್ಥಿಗಳೊಂದಿಗೆ ಚರ್ಚೆ ನಡೆಸಲಾಗುತ್ತದೆ. ವಿದ್ಯಾರ್ಥಿಗಳೇ ನಡೆಸುವ ಸಾಹಿತ್ಯ ಸಂಘದ ಮೂಲಕ ಸಾಹಿತ್ಯಿಕ, ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳನ್ನು ನಿರಂತರವಾಗಿ ಆಯೋಜಿಸಲಾಗುತ್ತಿದೆ.

ಇದಲ್ಲದೆ, ಸಹ್ಯಾದ್ರಿ ಸದನ, ಸಹ್ಯಾದ್ರಿ ಉತ್ಸವ, ಭಿತ್ತಿಪತ್ರ, ಸಂಶೋಧನಾ ಸಮ್ಮೇಳನ ಮತ್ತು ಪ್ರಕಟಣೆಗಳಂತಹ ಪಠ್ಯೇತರ ಚಟುವಟಿಕೆಗಳನ್ನು ನಿಯಮಿತವಾಗಿ ಕೈಗೊಳ್ಳಲಾಗುತ್ತಿದೆ.

2023ರಿಂದ 2026ರವರೆಗಿನ ಅವಧಿಯಲ್ಲಿ ವಿಭಾಗದ 30 ವಿದ್ಯಾರ್ಥಿಗಳು ನೆಟ್, 40 ವಿದ್ಯಾರ್ಥಿಗಳು ಕೆಸೆಟ್ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರುವುದು ಗಮನಾರ್ಹ ಸಾಧನೆಯಾಗಿದೆ.

ಆಸಕ್ತರು ನೇರವಾಗಿ ಸಂಪರ್ಕಿಸಬಹುದು. ಸಂಪರ್ಕ ಸಂಖ್ಯೆ: 6360657361, ಇಮೇಲ್: [email protected]. ವಿಳಾಸ: ಕನ್ನಡ ಭಾರತಿ, ಕುವೆಂಪು ವಿಶ್ವವಿದ್ಯಾಲಯ, ಶಂಕರಘಟ್ಟ.

ಸೀಟುಗಳು ಸೀಮಿತವಾಗಿರುವುದರಿಂದ ಆಸಕ್ತ ವಿದ್ಯಾರ್ಥಿಗಳು ತ್ವರಿತವಾಗಿ ಅರ್ಜಿ ಸಲ್ಲಿಸಿ ಪ್ರವೇಶ ಪಡೆಯುವಂತೆ ಪ್ರಕಟ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...

ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 10ನೇ ವರ್ಷದ ಸ್ವಚ್ಛತಾ ಆಂದೋಲನ

ಗಾಂಧಿ ಜಯಂತಿ ಅಂಗವಾಗಿ ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಳೆ...