ಶಿಕಾರಿಪುರ | ಕವಿ, ಬರಹಗಾರರಿಂದ ಮನಸ್ಸು ಒಂದಾಗಿಸುವ ಕೆಲಸವಾಗಲಿ: ಡಾ. ಸರ್ಫ್ರಾಜ್ ಚಂದ್ರಗುತ್ತಿ

Date:

ಕವಿ ಹಾಗೂ ಬರಹಗಾರರು ತಮ್ಮ ಬರವಣಿಗೆ ಮೂಲಕ ಮನಸ್ಸುಗಳನ್ನು ಕೂಡಿಸುವ ಕೆಲಸ ಮಾಡಬೇಕು ಎಂದು ಸಾಗರ ಲೇಖಕ ಡಾ.ಸರ್ಫ್ರಾಜ್ ಚಂದ್ರಗುತ್ತಿ ಸಲಹೆ ನೀಡಿದರು. ಶಿಕಾರಿಪುರ ಪಟ್ಟಣದ ಕನ್ನಡ ಸಾಹಿತ್ಯ ಪರಿಷತ್ತಿನ ಕನ್ನಡ ಸಾಹಿತ್ಯ ಭವನದಲ್ಲಿ ಶುಕ್ರವಾರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಆಯೋಜಿಸಿದ್ದ ದಸರಾ ಕಾವ್ಯ ಸಂಭ್ರಮ(ಕವಿಗೋಷ್ಠಿ) ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

- Advertisement -

ಯಾವುದು ಯಾವುದೋ ವಿಷಯಗಳಿಗೆ ನಾವೆಲ್ಲಾ ಪ್ರಕ್ಸುಬ್ಧರಾಗಿದ್ದೇವೆ ಹಾಗೂ ಮನಸ್ಸುಗಳು ಛಿದ್ರವಾಗಿದ್ದಾವೆ. ಜಾತಿ,ಮತ,ಧರ್ಮ,ಭಾಷೆ ಎಲ್ಲವನ್ನು ರಾಜಕೀಕರಣಗೊಳಿಸಿ ನಾವೆಲ್ಲಾ ಬೇರ್ಪಟ್ಟಿರುವ ಈ ಹೊತ್ತಲ್ಲಿ ನಮ್ಮ ಮನಸ್ಸುಗಳನ್ನು ಜೋಡಿಸಲು ಒಂದು ಹಣತೆ ಹೆಚ್ಚಬೇಕಾಗಿದೆ. ರಾಷ್ಟ್ರಕವಿ ಜಿ.ಎಸ್. ಶಿವರುದ್ರಪ್ಪ ಅವರ ಹಣತೆ ಹಚ್ಚುವ ಪದ್ಯ ಅದನ್ನು ಹೇಳುತ್ತದೆ. ಯುವಕರೇ ನೀವು ಬೆಂಕಿ ಆಗಬೇಡಿ,ಬೆಳಕಾಗಿ ಎಂದು ಜಿ.ಎಸ್. ಶಿವರುದ್ರಪ್ಪ ಹೇಳಿದ್ದಾರೆ. ಸಮಾಜದ ಸ್ವಾಸ್ಥ್ಯ ಕಾಪಾಡುವ ಬಹುದೊಡ್ಡ ಜವಾಬ್ದಾರಿ ಕವಿಗಳು ಹಾಗೂ ಬರಹಗಾರರ ಮೇಲಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಲ್ಬೇನಿಯಾದಲ್ಲೇಕೆ ಜನಾಕ್ರೋಶ ಭುಗಿಲೆದ್ದಿದೆ? ಸುಪ್ರೀಂ ಕೋರ್ಟ್, ಪಾರ್ಲಿಮೆಂಟನ್ನು ಸುಟ್ಟದ್ದು...

ಅಲ್ಬೇನಿಯಾ ರಾಜಧಾನಿ ತಿರಾನಾದ ಬೀದಿಗಳಿಂದ ಜಾಗತಿಕ ರಾಜಧಾನಿಗಳವರೆಗೆ… ಬೆಲೆ ಏರಿಕೆ, ಭ್ರಷ್ಟಾಚಾರ ಮತ್ತು ಶಿಕ್ಷಣದ ಬಿಕ್ಕಟ್ಟಿನ ವಿರುದ್ಧ ಯುವ ಸಮೂಹ ಬೀದಿಗಿಳಿದಿದೆ. ಪ್ರಧಾನಿ ಎಡಿ ರಾಮಾ ಸರ್ಕಾರದ ವಿರುದ್ಧ ಅಲ್ಬೇನಿಯಾದಲ್ಲಿ ಭುಗಿಲೆದ್ದ ಜನಾಕ್ರೋಶ...

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ರಾಯಚೂರು | ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ತಾಲೂಕು ಜಾನಪದ ಪರಿಷತ್ ಅಧ್ಯಕ್ಷ ಬಿ. ಪಾಪಯ್ಯ ಮಾತನಾಡಿ, ಪದೇ ಪದೇ ತೋಚಿದನ್ನು ಗೀಚಿದಾಗ ನೀವು ಕವಿಯಾಗಲು ಸಾಧ್ಯತೆ ಇದೆ. ಮನಸ್ಸಿನ ಭಾವನೆಗಳನ್ನು ಕ್ರೂಡಿಕರಿಸಿದಾಗ ಕವಿಯಾಗಲು ಅವಕಾಶ ಇದೆ. ಈ ಕವಿಗೋಷ್ಠಿ ವೇದಿಕೆಯನ್ನು ನೀವು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಹೆಚ್.ಎಸ್. ರಘು ಮಾತನಾಡಿ, ಯುವ ಕವಿ ಸಮುದಾಯವನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಹಲವು ವರ್ಷಗಳಿಂದ ಕವಿಗೋಷ್ಠಿ ಕಾರ್ಯಕ್ರಮ ಆಯೋಜಿಸುತ್ತಿದೆ. ಕವಿಗಳಾಗಿ ಹಾಗೂ ಬರಹಗಾರರಾಗಿ ಹೊರಹೊಮ್ಮುವ ಮೂಲಕ ನೀವು ಸಾಹಿತ್ಯ ಕ್ಷೇತ್ರಕ್ಕೆ ಕೊಡುಗೆ ನೀಡಬೇಕು.

ಕಾವ್ಯ ಸಂಭ್ರಮದಲ್ಲಿ ೩೫ಕ್ಕೂ ಹೆಚ್ಚು ಕವಿಗಳು ತಮ್ಮ ಕವನ ವಾಚನ ಮಾಡಿದರು.ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎಂ.ನವೀನ್ ಕುಮಾರ್, ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಶಿವರಂಜನಿ ಸುದರ್ಶನ್, ಸೆಲೆಬ್ರೇಷನ್ ವರ್ಲ್ಡ್ ಮಾಲೀಕ ವೀರನಗೌಡ, ತಾಲೂಕು ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಅಧ್ಯಕ್ಷ ಎಸ್.ಎನ್. ನರಸಿಂಹಸ್ವಾಮಿ, ಕನ್ನಡ ಸಾಹಿತ್ಯ ಪರಿಷತ್ ಪದಾಧಿಕಾರಿಗಳಾದ ಶಿವಲಿಂಗಪ್ಪ ಪಾರಿವಾಳ, ಡಾ.ಪ್ರಕಾಶ್, ಜಿಯಾವುಲ್ಲಾ, ಜಿ.ಎಚ್ ತಿಪ್ಪೇಶ್ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾರ್ವಜನಿಕ ಆಸ್ತಿ ಹರಾಜು ರದ್ದುಪಡಿಸುವ ಅಧಿಕಾರ ಸರ್ಕಾರಿ ಸಂಸ್ಥೆಗಳಿಗೆ ಇದೆ: ಸುಪ್ರೀಂ ಕೋರ್ಟ್

ಸಾರ್ವಜನಿಕ ಆಸ್ತಿಗಳ ಮಾರಾಟ ಅಥವಾ ಗುತ್ತಿಗೆ ಪ್ರಕ್ರಿಯೆಯಲ್ಲಿ ಹೆಚ್ಚಿನ ಆದಾಯ ಗಳಿಸುವ...

ಕೇಂದ್ರದ ಪ್ರಸ್ತಾವನೆ ತಿರಸ್ಕರಿಸಿದ ಲಡಾಖ್ ಹೋರಾಟಗಾರರು; ಬೇಡಿಕೆ ಈಡೇರುವವರೆಗೆ ಹೋರಾಟ ಮುಂದುವರಿಸಲು ನಿರ್ಧಾರ

ಲಡಾಖ್‌ಗೆ ಪ್ರತ್ಯೇಕ ವಿಧಾನಸಭೆ, ಹೆಚ್ಚಿನ ಶಾಸನಾಧಿಕಾರ ಹಾಗೂ ಸಂವಿಧಾನಾತ್ಮಕ ರಕ್ಷಣೆ ನೀಡಬೇಕೆಂಬ...

ತಮಿಳುನಾಡು ವಿದ್ಯಾರ್ಥಿಗಳಿಗೆ ಹಾರ್ವರ್ಡ್, ಆಕ್ಸ್‌ಫರ್ಡ್‌ನಲ್ಲಿ ಉಚಿತ ಶಿಕ್ಷಣ: ಪ್ರತಿಯಾಗಿ ರಾಜ್ಯದಲ್ಲೇ 3 ವರ್ಷ ಸೇವೆ ಕಡ್ಡಾಯ

ಜಗತ್ತಿನ ಅತ್ಯುನ್ನತ ಶಿಕ್ಷಣ ಸಂಸ್ಥೆಗಳಾದ ಹಾರ್ವರ್ಡ್, ಸ್ಟ್ಯಾನ್‌ಫೋರ್ಡ್, ಆಕ್ಸ್‌ಫರ್ಡ್ ಮತ್ತು ಕೇಂಬ್ರಿಡ್ಜ್‌ನಂತಹ...