ಶಿಕಾರಿಪುರ ಪಟ್ಟಣದ ಗಬ್ಬೂರು ಸಮೀಪ ಗುರುವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಶಿಕಾರಿಪುರ ತಾಲೂಕಿನ ಕುಸ್ಕೂರು ಗ್ರಾಮದ ಚಂದ್ರನಾಯ್ಕ್ (41) ಎಂದು ಗುರುತಿಸಲಾಗಿದೆ.
ಈ ಘಟನೆ ಶಿಕಾರಿಪುರ ಗಣಪತಿ ದೇವಸ್ಥಾನದ ಬಳಿ ನಿನ್ನೆ ನಡೆದಿದೆ. ಚಂದ್ರನಾಯ್ಕ್ ಅವರು ಶಿಕಾರಿಪುರದಿಂದ ತಮ್ಮ ಗ್ರಾಮದ ಕುಸ್ಕೂರಿಗೆ ಬೈಕ್‌ನಲ್ಲಿ ತೆರಳುತ್ತಿದ್ದಾಗ, ಶಿರಾಳಕೊಪ್ಪದಿಂದ ಶಿಕಾರಿಪುರದ ಕಡೆಗೆ ಬರುತ್ತಿದ್ದ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ತೀವ್ರ ಗಾಯಗಳ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಶಿಕಾರಿಪುರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.





