ಶಿವಮೊಗ್ಗ | ಸಂಸದರ ಕಚೇರಿ ಎದುರು ಅಂಗನವಾಡಿ ನೌಕರರ ಪ್ರತಿಭಟನೆ

Date:

ದೇಶದ ಮಾನವ ಸಂಪನ್ಮೂಲದ ಬೆಳವಣಿಗೆಗೆ ಪೂರಕವಾಗಿ 1974ರಲ್ಲಿ ಆರಂಭವಾದ ರಾಷ್ಟ್ರೀಯ ಮಕ್ಕಳ ನೀತಿಗೆ ಸಂಬಂದಿಸಿದ ಐಸಿಡಿಎಸ್‌-1975 ಜಾರಿಗೆ ಬಂದು 45ವರ್ಷಗಳು ಕಳೆದಿವೆ. ಆದರೂ, ಈ ಯೋಜನೆಯನ್ನು ಬಲಿಷ್ಠಗೊಳಿಸಲು ಇಲಾಖೆಯಾಗಿ ಪರಿಗಣಿಸದೆ, ಸತತವಾಗಿ ಅನುದಾನ ಕಡಿತಗೊಳಿಸಿ ಬಲಹೀನಗೊಳಿಸಲಾಗುತ್ತಿದೆ ಎಂದು ಆರೋಪಿಸಿ ಸಿಐಟಿಯು ನೇತೃತ್ವದಲ್ಲಿ ಅಂಗನವಾಡಿ ನೌಕರರು ಪ್ರತಿಭಟನೆ ನಡೆಸಿದ್ದಾರೆ.

- Advertisement -

ಶಿವಮೊಗ್ಗದಲ್ಲಿ ಸಂಸದ ಬಿ.ವೈ ರಾಘವೇಂದರ ಅವರ ಕಚೇರಿ ಎದುರು ನೌಕರರು ಪ್ರತಿಭಟನೆ ನಡೆಸಿದ್ದಾರೆ. “ಐಸಿಡಿಎಸ್‌ ಯೋಜನೆಯಡಿ ದೇಶದಲ್ಲಿ ಸುಮಾರು 11 ಕೋಟಿ ಮಕ್ಕಳು ಮತ್ತು 2 ಕೋಟಿ ಗರ್ಭಿಣಿ, ಬಾಣಂತಿಯರು ಫಲಾನುಭವಿಗಳಾಗಿದ್ದಾರೆ. ಯೋಜನೆಯಿಂದ ಅಪೌಷ್ಠಿಕತೆ, ತಾಯಿ ಮಕ್ಕಳ ಮರಣ ತಡೆಯಲು ಸಾಧ್ಯವಾಗಿದೆ. ಆದರೆ, ಅನುದಾನ ಕಡಿತದಿಂದಾಗಿ ಯೋಜನೆಯ ಫಲಾನುಭವಿಗಳಿಗೆ ಆಹಾರ, ಶಿಕ್ಷಣಕ್ಕೆ ತುಂಬಾ ತೊಂದರೆಯಾಗಲಿದೆ. ಇದರಿಂದ ಅಪೌಷ್ಠಿಕತೆಯ ಮಟ್ಟ ಹೆಚ್ಚಾಗಲಿದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಈಗಾಗಲೇ ಭಾರತ ಹಸಿವಿನ ಸೂಚ್ಯಾಂಕದಲ್ಲಿ 112ನೇ ಸ್ಥಾನದಲ್ಲಿದೆ. 68% ಮಕ್ಕಳು ಅಪೌಷ್ಠಿಕತೆಯಿಂದ ಬಳಲುತ್ತಿದ್ದಾರೆ. ದೇಶದಲ್ಲಿ ಪ್ರತೀ ಮೂರು ಮಕ್ಕಳಲ್ಲಿ ಒಂದು ಮಗು ಕಡಿಮೆ ತೂಕ ಹೊಂದಿರುವುದಾಗಿ ಎನ್‌ಎಫ್‌ಎಚ್ಎಸ್‌-5ರ ಅಂಕಿ ಅಂಶಗಳೇ ಹೇಳುತ್ತಿವೆ. ಅಲ್ಲದೆ, ದೇಶದಲ್ಲಿ ಐಸಿಡಿಎಸ್‌ ಯೋಜನೆಯ 2,000 ಪ್ರಾಜೆಕ್ಟ್‌ಗಳಲ್ಲಿ ಸುಮಾರು 13.5 ಲಕ್ಷ ಅಂಗನವಾಡಿ ಕೇಂದ್ರಗಳಲ್ಲಿ 26 ಲಕ್ಷ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಸುಮಾರು 49 ವರ್ಷಗಳಿಂದ ದುಡಿಯುತ್ತಿದ್ದಾರೆ. ಅವರಿಗೆ ಕನಿಷ್ಠ ವೇತನ, ಪಿಎಫ್, ಇಎಸ್‌ಐ, ಪಿಂಚಣಿ ಮುಂತಾದ ಸೌಲಭ್ಯಗಳು ದೊರೆಯುತ್ತಿಲ್ಲ” ಎಂದು ಅಸಮಧಾನ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸರ್ಕಾರದ ಪೋಷಣ್ ಅಭಿಯಾನ, ಪೋಷಣ್ ಟ್ಯಾಕರ್, ಮಾತೃವಂದನ ಸರ್ವೆಗಳು ಸೇರಿದಂತೆ ನಾನಾ ಕೆಲಸಗಳನ್ನು ಅಂಗನವಾಡಿ ಆರ್ಯಕರ್ತೆರು ಮಾಡುತ್ತಿದ್ದಾರೆ. ಆದರೆ, ಅವರಿಗೆ ಕನಿಷ್ಠ ಸೌಲಭ್ಯಗಳನ್ನು ನೀಡದಿರುವುದು ವಿಷಾದನೀಯ. 45 ಮತ್ತು 46ನೇ ಕಾರ್ಮಿಕ ಸಮ್ಮೇಳನದಲ್ಲಿ ಅಂಗನವಾಡಿ ಕಾರ್ಯಕರ್ತೆ ಸಹಾಯಕಿಯರನ್ನು ಕೆಲಸಗಾರರೆಂದು ಪರಿಗಣಿಸಿ ಅವರಿಗೆ ಕನಿಷ್ಠ ವೇತನ, ಇಎಸ್‌ಐ, ಪಿಎಫ್‌ ಸೌಲಭ್ಯ ನೀಡಿ, ಕೆಲಸವನ್ನು ಕಾಯಂಗೊಳಿಸಬೇಕೆಂದು ಶಿಫಾರಸು ಮಾಡಲಾಗಿದೆ. ಇದೇ ರೀತಿಯ ಶಿಫಾರಸನ್ನು ರಾಜ್ಯ ಸಭೆಯ ಸಂಸದೀಯ ಸಮಿತಿಯೊಂದು ಇತ್ತೀಚಿಗೆ ಮಾಡಿದೆ. ಈ ಕುರಿತಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅಗತ್ಯ ರೂಪು ರೇಷೆಗಳನ್ನು ರಚಿಸಬೇಕು” ಎಂದು ಹೇಳಿದ್ದಾರೆ.

ಪ್ರತಿಭಟನಾಕಾರರ ಹಕ್ಕೊತ್ತಾಯಗಳು

1. ದೇಶದ ಎಲ್ಲಾ ಅಂಗನವಾಡಿ ಕಾರ್ಯಕರ್ತೆ, ಸಹಾಯಕರಿಗೆ ಕನಿಷ್ಠವೇತನ 31,000 ಜಾರಿಗೊಳಿಸಬೇಕು

2. ಸಾಮಾಜಿಕ ಭದ್ರತೆಗಳಾದ EȘI, PF, ಪೆನ್ಮನ್, NPS ಬದಲಿಗೆ OP ಜಾರಿಗೊಳಿಸಬೇಕು.

3. ICDSನ್ನು ಇಲಾಖೆಯಾಗಿ ಪರಿಗಣಿಸಿ ನೌಕರರನ್ನು ಕಾಯಂಗೊಳಿಸಬೇಕು.

4. ICDSಗೆ ಕಡಿತಮಾಡಿರುವ 8200 ಕೂಡಲೇ ಬಿಡುಗಡೆಗೊಳಿಸಬೇಕು

5. ಆಹಾರ, ಆರೋಗ್ಯ, ಶಿಕ್ಷಣವನ್ನು ದೇಶದ ಎಲ್ಲಾ ಜನರಿಗೆ ಖಾತ್ರಿಗೊಳಿಸಿ ದೇಶವನ್ನು ಅಭಿವೃದ್ಧಿಪಡಿಸಬೇಕು

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | 7,561 ಮತದಾರರ ಹೆಸರು ಪರಿಷ್ಕರಣೆ: ಅಕ್ರಮದ ಆರೋಪ

ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬಳ್ಳಾರಿ ನಗರ ಕ್ಷೇತ್ರದ 7,561 ಮತದಾರರ ಹೆಸರುಗಳನ್ನು ಮರುಪರಿಶೀಲನೆಗೆ...

ಭದ್ರಾವತಿ | ಕಾಂಗ್ರೆಸ್‌ನಲ್ಲಿ ನಿಷ್ಠಾವಂತರಿಗೆ ಸೂಕ್ತ ಪ್ರತಿಫಲ ಸಿಗುತ್ತದೆ: ಸಿ.ಜಿ. ಮಧುಸೂದನ್

ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಸಿ.ಜಿ. ಮಧುಸೂದನ್ ಅವರು ಶನಿವಾರ...