ಶಿವಮೊಗ್ಗ | ಸಿಡಿಲು ಬಡಿದು ಸಹೋದರರ ಸಾವು

Date:

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದು ಸಹೋದರರಿಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕು ಹುಣಸೆಕಟ್ಟೆ ಜಂಕ್ಷನ್ ಬಳಿ ಮಂಗಳವಾರ ರಾತ್ರಿ ಸಂಭವಿಸಿದೆ.

- Advertisement -

ಗೌಳಿಗರ ಕ್ಯಾಂಪ್ ನಿವಾಸಿಗಳಾದ ಬೀರು(32) ಮತ್ತು ಸುರೇಶ್(35) ಮೃತಪಟ್ಟ ಯುವಕರು. ಇವರು ತಮ್ಮ ಜಮೀನಿನಲ್ಲಿ ಭತ್ತ ಕಟಾವ್ ಮಾಡಿ ರಾಶಿ ಹಾಕಿದ್ದರು. ಕಳೆದ ರಾತ್ರಿ ಮಳೆಯಾಗಿದ್ದರಿಂದ ಭತ್ತವನ್ನು ರಕ್ಷಿಸಲು ಜಮೀನಿಗೆ ತೆರಳಿದ್ದರು. ಈ ಸಂದರ್ಭ ಸಿಡಿಲು ಬಡಿದು ಬೀರು ಮತ್ತು ಸುರೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಶಾಸ್ತ್ರೀಯ ಪರಂಪರೆಗೆ ಸಮಕಾಲೀನ...

ಈ ಬಾರಿಯ ಸಾಹಿತ್ಯದ ನೊಬೆಲ್‌ ಪುರಸ್ಕಾರ ಕೆನಡಾದ ಆನ್‌ ಕಾರ್ಸನ್‌ ಅವರ ಮುಡಿಗೇರಿದೆ. ಇವರು ಕವಯತ್ರಿ, ಪ್ರಬಂಧಗಾರ್ತಿ ಹಾಗೂ ಅನುವಾದಕಿ. ಕ್ಲಾಸಿಕಲ್‌ ಗ್ರೀಕ್‌ ಸಾಹಿತ್ಯದ ಪ್ರೇಮಿಯಾದ ಕಾರ್‌ಸನ್‌ ಶಾಸ್ತ್ರೀಯ ಮಾದರಿಯನ್ನು ಸಮಕಾಲೀನ ಸಂದರ್ಭಗಳಲ್ಲಿ...

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ಜಮೀನಿಗೆ ಹೋದ ಸಹೋದರರು ತುಂಬಾ ಹೊತ್ತಾದರೂ ಹಿಂದಿರುಗದ ಹಿನ್ನೆಲೆಯಲ್ಲಿ ಮನೆಮಂದಿ ಜಮೀನಿನ ಬಳಿ ಹುಡುಕಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ಈ ಸುದ್ದಿ ಓದಿದ್ದೀರಾ? ಬಾಗಲಕೋಟೆ | ಬ್ಯಾರೇಜಿಗೆ ನೀರು ತುಂಬಲು ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿ ಧರಣಿ

ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಮೃತದೇಹಗಳನ್ನು ಭದ್ರಾವತಿ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ. ಭದ್ರಾವತಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮೇವಿನ ಬಿತ್ತನೆ ಬೀಜ ಉಚಿತ ಪೂರೈಕೆ; ರೈತರಿಂದ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ ಮಳೆಯ ಪ್ರಮಾಣ ತೀರಾ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ...

ಉಡುಪಿ | ಅ.11ರಿಂದ 21ರವರೆಗೆ ಉಚ್ಚಿಲ ದಸರಾ: ಅ.12ರಂದು ಮಹಿಳಾ ದಸರಾ ಉದ್ಘಾಟಿಸಲಿರುವ ಸಿಎಂ

ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ವ್ಯವಸ್ಥಾಪನೆಯ ಉಚ್ಚಿಲ ಶ್ರೀ ಮಹಾಲಕ್ಷ್ಮೀ...

ಹಾವೇರಿ | ಅಂಚೆ ಇಲಾಖೆಯಲ್ಲಿ ನೇರ ಸಂದರ್ಶನ

ಭಾರತೀಯ ಅಂಚೆ ಇಲಾಖೆಯಲ್ಲಿ ಪೋಸ್ಟಲ್ ಲೈಫ್ ಇನ್ಸೂರೆನ್ಸ್ (ಪಿಎಲ್‌ಐ-ಅಂಚೆ ಜೀವವಿಮೆ) ಮತ್ತು...

ಬಸವನ ಬಾಗೇವಾಡಿ | ತಾಲೂಕು ಆಸ್ಪತ್ರೆಯಲ್ಲಿ ಔಷಧ ಕೊರತೆ: ಡಿಎಚ್‌ಒ ಸ್ಪಷ್ಟನೆಗೆ ರೈತ ಸಂಘ ಆಗ್ರಹ

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕು ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ಅಗತ್ಯ...