ಶಿವಮೊಗ್ಗ | ಇಸ್ಪೀಟ್ ದಂಧೆ ಹೆಚ್ಚಳ; ಪೊಲೀಸ್‌ ಇಲಾಖೆ ನಿರ್ಲಕ್ಷ್ಯ

Date:

ಭದ್ರಾವತಿ ತಾಲೂಕಿನ ರಾಜಕಾರಣಿಯೊಬ್ಬರ ಪುತ್ರನೊಬ್ಬ ಜೂಜು ಕೋರರನ್ನು ಕೂಡಿಸಿಕೊಂಡು ಜೂಜಾಟ ಆರಂಭಿಸಿದ್ದಾರೆ. ಅಲ್ಲದೆ, ಬಹಳಷ್ಟು ದಂಧೆ ನಡೆಸುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿದೆ. ಶಿವಮೊಗ್ಗ ಜಿಲ್ಲಾ ಎಸ್‌ಪಿ ಅವರು ಕೂಡಲೇ ಕ್ರಮ ಕೈಗೊಂಡು ಜೂಜಾಟಕ್ಕೆ ಕಡಿವಾಣ ಹಾಕಬೇಕು ಎಂದು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಸಾಮಾಜಿಕ ಕಾರ್ಯಕರ್ತ ದೀಪು ಶೆಟ್ಟಿಗಾರ್ ವಿಡಿಯೋ ಮೂಲಕ ಅಗ್ರಹಿಸಿದ್ದಾರೆ.

- Advertisement -

ದೀಪು ಶೆಟ್ಟಿಗಾರ್ ಅವರಿಗೆ ಭದ್ರಾವತಿಯಿಂದ ಸುಮಾರು 18 ಕರೆಗಳು ಬಂದಿದ್ದು, ದಂಧೆ ನಡೆಯುತ್ತಿರುವ ಕುರಿತು ಸಾರ್ವಜನಿಕರು ಮಾಹಿತಿ ನೀಡಿರುವುದಾಗಿ ವಿಡಿಯೋ ಮೂಲಕ ವಿವರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

“ರಾಜಕಾರಣಿಯ ಪುತ್ರನೊಬ್ಬ ಒಸಿ ದಂಧೆಯ ಮೂಲಕ ದಿನಕ್ಕೆ 7 ಲಕ್ಷಕ್ಕೂ ಅಧಿಕ ಅಕ್ರಮವಾಗಿ ಹಣ ಗಳಿಸುತ್ತಿದ್ದು, ಇದರ ಕುರಿತು ಪೊಲೀಸ್ ಇಲಾಖೆಗೂ ಮಾಹಿತಿ ಇದೆ. ಆದರೂ ಯಾವುದೇ ಕ್ರಮ ಜರುಗಿಸುತ್ತಿಲ್ಲ, ಬಂಧಿಸುತ್ತಿಲ್ಲ ಮತ್ತು ಈ ದಂಧೆ ನಿಲ್ಲಿಸುವಲ್ಲಿ ಪೊಲೀಸ್‌ ಇಲಾಖೆ ವಿಫಲವಾಗಿದೆಯೆಂದು ಭದ್ರಾವತಿ ಸಾರ್ವಜನಿಕರು ಆರೋಪಿಸುತ್ತಿದ್ದಾರೆ” ಎಂದು ಬೇಸರ ವ್ಯಕ್ತಪಡಿಸುತ್ತಿದ್ದಾರೆ.

ಸಾಮಾಜಿಕ ಕಾರ್ಯಕರ್ತ ದೀಪು ಶೆಟ್ಟಿಗಾರ್ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ದಂಧೆ ಕುರಿತು ವಿಡಿಯೋ ಹೊರಬಂದ ನಾಲ್ಕು ದಿನ ನಿಲ್ಲಿಸುತ್ತಾರೆ ಮತ್ತೆ ಪ್ರಾರಂಭ ಮಾಡುತ್ತಾರೆ. ಆದರೆ ಸಂಪೂರ್ಣವಾಗಿ ನಿಯಂತ್ರಣ ಮಾಡುತ್ತಿಲ್ಲ” ಎಂದು ತಿಳಿಸಿದ್ದಾರೆ.

“ರಾಜಕೀಯ ಅಧಿಕಾರ ಬಳಸಿಕೊಂಡು ಸ್ಥಳೀಯ ಪೊಲೀಸ್ ಠಾಣೆ ವ್ಯಾಪ್ತಿಯ ಅಧಿಕಾರಿಗಳನ್ನು ನಿಯಂತ್ರಣಕ್ಕೆ ತೆಗೆದುಕೊಂಡು, ತಂದೆಯ ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡು ದಂಧೆಯನ್ನು ಮುಂದುವರೆಸುತ್ತಿದ್ದಾರೆಂದು ಅಥಳೀಯರು ಮಾಹಿತಿ ನೀಡಿದ್ದಾರೆ. ಶಿವಮೊಗ್ಗ ಜಿಲ್ಲಾ ವರಿಷ್ಠಾಧಿಕಾರಿಗಳು ಇಂತಹ ಅಕ್ರಮ ಚಟುವಟಿಕೆಗಳ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುತ್ತಿರುವುದಾಗಿ  ಸಾರ್ವಜನಿಕರಿಗೆ ತಿಳಿಸಿದ್ದಾರೆ” ಎಂದು ದೀಪು ಶೆಟ್ಟಿಗಾರ್ ಮಾಹಿತಿ ನೀಡಿದರು.

ಸ್ಥಳೀಯ ನಿವಾಸಿಗಳು ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಶಿವಮೊಗ್ಗ ನಗರದಲ್ಲೇ ಸುಮಾರು 50ಕ್ಕೂ ಅಧಿಕ ಮಂದಿ ಒಸಿ ದಂಧೆಯ ಏಜೆಂಟ್ ಅಥವಾ ಬ್ರೋಕರ್‌ಗಳು ಇದ್ದಾರೆ. ಉದಾಹರಣೆಗೆ ₹10ಕ್ಕೆ ₹800 ಡ್ರಾ. ಅರ್ಧಗಂಟೆಗೆ ಒಮ್ಮೆ ಲಾಟರಿ ಇದನ್ನು ʼಓಪನ್ ಕ್ಲೋಸ್ʼ ಎಂದು ಕರೆಯಲಾಗಿದೆ. ಇದರ ಬ್ರೋಕರ್‌ಗಳಿಗೆ ಬಂದಂತಹ ಲಾಭದಲ್ಲಿ ಕಮಿಷನ್ ಕೊಡಬೇಕಾಗಿದೆ ಮತ್ತು ಏಜೆಂಟ್‌ಗಳಿಗೆ ಟ್ರಿಪ್ ಆಯೋಜನೆ ಮಾಡಲಾಗುತ್ತದೆ” ಎಂದು ತಿಳಿಸಿದರು.

ಸಾರ್ವಜನಿಕ ಸ್ಥಳಗಳಾದ ಪೆಟ್ಟಿಗೆ ಅಂಗಡಿ, ಲಾಡ್ಜ್, ಮನೆ, ಸಣ್ಣಸಣ್ಣ ಕ್ಷೌರದಂಗಡಿಗಳಲ್ಲಿ ಈ ದಂಧೆ  ಹೆಚ್ಚಾಗಿ ಕಂಡುಬಂದಿದ್ದು, ಸಾಮಾನ್ಯ ಕೂಲಿ ಕಾರ್ಮಿಕರು ಈ ದಂಧೆಯ ಮೋಸಕ್ಕೆ ಒಳಗಾಗುತ್ತಿದ್ದಾರೆ. ಇದೊಂದು ಅಕ್ರಮ ಚಟುವಟಿಕೆ ಆಗಿದ್ದು, ಕಾನೂನು ಬಾಹಿರವಾಗಿದೆ. ಇದನ್ನು ತಡೆಗಟ್ಟಲು ಉನ್ನತ ಪೊಲೀಸ್ ಅಧಿಕಾರಿಗಳು ಮನಸ್ಸು ಮಾಡಿದರೆ ಕಷ್ಟವೇನು ಆಗುವುದಿಲ್ಲ” ಎಂದು ಸಾರ್ವಜನಿಕರು ಅಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಲೋಕಸಭಾ ಚುನಾವಣೆಯಲ್ಲಿ ಫ್ಯಾಸಿಸ್ಟ್‌ ಶಕ್ತಿ ಸೋಲಿಸಲು ತಯಾರಿ ಅಗತ್ಯ: ಶ್ರೀನಾಥ್ ಪೂಜಾರಿ

ದೀಪು ಶೆಟ್ಟಿಗಾರ್ ಭದ್ರಾವತಿಯಲ್ಲಿ ಇಸ್ಪೀಟ್ ಒಸಿ ಮತ್ತು ಅಕ್ರಮ್ ಚಟುವಟಿಕೆಯಲ್ಲಿ ರಾಜಕಾರಣಿಯೊಬ್ಬರ ಮಗ ಇದೆಲ್ಲ ನಡೆಸುತ್ತಿದ್ದಾರೆ ಎಂಬ ವಿಡಿಯೋ ಹರಿಬಿಟ್ಟ ನಂತರ ಕಾಂಗ್ರೆಸ್‌ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಗಲಬೆಗಳು ಶುರುವಾಗಿದ್ದು, ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ‌ ಹಾಕುತ್ತಿರುವ ಪೋಸ್ಟ್‌ಗಳು ವೈರಲ್ ಆಗುತ್ತಿವೆ.

“ಇಸ್ಪೀಟು, ಓಸಿ, ಕ್ರಿಕೆಟ್ ಬೆಟ್ಟಿಂಗ್‌ನಂತಹ ಅಕ್ರಮ ದಂಧೆಗಳು ಮತ್ತು ಪೊಲೀಸ್ ಸ್ಟೇಷನ್​ನಗಳ ಲಕ್ಷ ಲಕ್ಷ ಮಾಮೂಲು ಅತಿರೇಕದ ಕಾರಣದಿಂದ ಗಲಾಟೆಗಳು ಹೆಚ್ಚಾಗಲು ಕಾರಣವಾಗಿದೆ” ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ‘SIR’ ವಿರುದ್ಧ ಮಾನಸಗಂಗೋತ್ರಿಯಲ್ಲಿ ಪ್ರತಿಭಟನಾ ಜಾಥಾ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ವಿರೋಧಿಸಿ, ಸಂವಿಧಾನದ...

ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ: ಸಿಎಂ ಡಿ ಕೆ ಶಿವಕುಮಾರ್

“ಕರಾವಳಿಯ ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ”...

ಕೋಲಾರ | ಟಾಟಾ ಎಲೆಕ್ಟ್ರಾನಿಕ್ಸ್‌ನಲ್ಲಿ ಮಹಿಳಾ ಕಾರ್ಮಿಕರ ಸಾವು: ಸಮಗ್ರ ತನಿಖೆಗೆ ಸಿಐಟಿಯು ಒತ್ತಾಯ

ನರಸಾಪುರ ಕೈಗಾರಿಕಾ ಪ್ರದೇಶದ ಟಾಟಾ ಎಲೆಕ್ಟ್ರಾನಿಕ್ಸ್ ಕಂಪನಿಯಲ್ಲಿ ಮಹಿಳಾ ಕಾರ್ಮಿಕರ ಸಾವಿನ...

ಮಹಿಳೆಯರ ಸ್ವಾವಲಂಬನೆಗೆ ಬಿ.ಎಸ್ ಡಬ್ಲ್ಯೂ ಹೊಲಿಗೆ ತರಬೇತಿ ಶಿಬಿರ ಪೂರಕ: ರಾಮಕೃಷ್ಣ

"ಮಹಿಳೆಯರು ಕೌಶಲ್ಯಾಧಾರಿತ ತರಬೇತಿಯನ್ನು ಪಡೆದು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಉಚಿತ ಹೊಲಿಗೆ ತರಬೇತಿ...