ಶಿವಮೊಗ್ಗ | ಅಡುಗೆ ಸಹಾಯಕಿಗೆ ಜಾತಿ ನಿಂದನೆ; ಪ್ರಕರಣ ದಾಖಲಿಸಿದರೂ ಕ್ರಮ ಕೈಗೊಳ್ಳದ ಪೊಲೀಸ್‌ ಇಲಾಖೆ; ಆರೋಪ

Date:

Advertisements

ಅಡುಗೆ ಸಹಾಯಕಿಗೆ ಜಾತಿ ನಿಂದನೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಶಾಲಾಭಿವೃದ್ಧಿ ಸಮಿತಿಯವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಚಿಕ್ಕಗೊಪ್ಪೇನಹಳ್ಳಿ ಗ್ರಾಮಸ್ಥರು ಮತ್ತು ಸಂತ್ರಸ್ಥೆಯ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲೆಯ ಭದ್ರಾವತಿ ಡಿವೈಎಸ್‌ಪಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ್ದು, “ಗ್ರಾಮದ ಎ ಕೆ ಕಾಲೋನಿ ನಿವಾಸಿ ರೂಪಾ, ಅಕ್ಷರ ದಾಸೋಹ ಮಾರ್ಗಸೂಚಿ ಅನ್ವಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಡುಗೆ ಸಹಾಯಕಿಯಾಗಿ ನೇಮಕವಾಗಿದ್ದಾರೆ. ಶಾಲಾಭಿವೃದ್ಧಿ ಸಮಿತಿಯವರು ರೂಪಾ ಅವರಿಗೆ ಬೆದರಿಕೆ ಒಡ್ಡಿ, ಜಾತಿ ನಿಂದನೆ ಮಾಡಿದ್ದಾರೆ. ಕೂಡಲೇ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ಪ್ರತಿಭಟನಾನಿರತರು ಆಗ್ರಹಿಸಿದರು.

ಪ್ರತಿಭಟನೆ ನೇತೃತ್ವ ವಹಿಸಿದ್ದ ಸುರೇಶ್ ಈ ದಿನ.ಕಾಮ್ ಜೊತೆ ಮಾತನಾಡಿ, “ನಾವು ಎರಡು ವಿಷಯವನ್ನು ಇಟ್ಟುಕೊಂಡು ಪ್ರತಿಭಟನೆ ಮಾಡುತ್ತಿದ್ದೇವೆ. ಇತ್ತೀಚೆಗೆ ಖ್ಯಾತ ಬಹುಬಾಷಾ ನಟ ಪ್ರಕಾಶ್ ರಾಜ್ ಅವರು ಸಂವಾದ ಕಾರ್ಯಕ್ರಮ ನಡೆಸಿದ್ದು, ಅವರು ಕಾರ್ಯಕ್ರಮ ಮುಗಿಸಿ ಹೋದ ಬಳಿಕ ಕೆಲವರು ಕಾರ್ಯಕ್ರಮ ನಡೆದ ಸ್ಥಳದಲ್ಲಿ ಗಂಜಲ ಹಾಕಿ ತೊಳೆದು ಅವಮಾನ ಮಾಡಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೇಸು ದಾಖಲು ಮಾಡಿದ್ದರೂ ಈವರೆಗೆ ಯಾವುದೇ ಪ್ರಕರಣ ದಾಖಲಾಗಿಲ್ಲ” ಎಂದು ಆರೋಪಿಸಿದರು.

Advertisements

“ನಗರದ ಎ ಕೆ ಕಾಲೋನಿಯ ಶಾಲೆಯಲ್ಲಿ ಬಿಸಿಯೂಟದ ಸಹಾಯಕಿಯಾಗಿ ಎಸ್ ಸಿ(ಮಾದಿಗ) ಸಮುದಾಯಕ್ಕೆ ಸೇರಿದ ಮಹಿಳೆ ಕೆಲಸಕ್ಕೆ ನೇಮಕವಾಗಿದ್ದು, ಆ ಮಹಿಳೆ ಅಡುಗೆ ಮಾಡಿದರೆ ಊಟ ಮಾಡುವುದಿಲ್ಲವೆಂದು ಜಾತಿ ನಿಂದನೆ ಮಾಡಿದ್ದಾರೆ. ಈ ಬಗ್ಗೆ ಈಗಾಗಲೇ ಶಾಲೆಯ ಎಸ್‌ಡಿಎಂಸಿಯ ಒಂಬತ್ತು ಮಂದಿ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯಿದೆ(ಅಟ್ರಾಸಿಟಿ) ಅಡಿ ಪ್ರಕರಣ ದಾಖಲು ಮಾಡಿದರೂ ಕೂಡ ಯಾವುದೇ ಕ್ರಮ ಕೈಗೊಳ್ಳದೇ ಇರುವುದು ಬೇಸರ ತಂದಿದೆ. ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಡಿವೈಎಸ್‌ಪಿ ನಾಗರಾಜ್‌, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಬಿಇಒ ಎ ಕೆ ನಾಗೇಂದ್ರಪ್ಪ ಪ್ರತಿಭಟನಾಕಾರರನ್ನು ಸಮಾಧಾನ ಪಡಿಸಿದರು.

ಬಾಲಕೃಷ್ಣ, ಸುರೇಶ್‌, ಸುಧೀಂದ್ರ, ಮಂಜುನಾಥ್‌, ಚನ್ನಪ್ಪ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಕಾಂಗ್ರೆಸ್ ಕಚೇರಿಯಲ್ಲಿ ಅರಸು ಮತ್ತು ರಾಜೀವ್‍ಗಾಂಧಿಯವರ ಜನ್ಮದಿನಾಚರಣೆ

ಶಿವಮೊಗ್ಗ, ನಗರದ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಹಿಂದುಳಿದ ವರ್ಗಗಳ ನಾಯಕ ಹಾಗೂ...

ಶಿವಮೊಗ್ಗ | ಆರು ಜಿಲ್ಲೆಯ ಮುಖಂಡರಿಂದ ಅಹಿಂದ ಸಮಾವೇಶದ ಪೂರ್ವಭಾವಿ ಸಭೆ : ತೀ.ನ. ಶ್ರೀನಿವಾಸ್

ಶಿವಮೊಗ್ಗ, ಮಲೆನಾಡು ರೈತರ ಸಮಸ್ಯೆ ಹಾಗೂ ಕಾಂತ್‌ರಾಜ್ ವರದಿಯ ಜಾರಿಗೆ ಆಗ್ರಹಿಸಿ...

ಶಿವಮೊಗ್ಗ | ಜೆಡಿಎಸ್‌ನಿಂದ ತುಂಗೆಗೆ ಬಾಗಿನ ಅರ್ಪಣೆ

ಶಿವಮೊಗ್ಗ, ನಗರ ಮಧ್ಯದಲ್ಲಿ ಹರಿಯುತ್ತಿರುವ ತುಂಗಾನದಿ ಪ್ರತಿವರ್ಷದಂತೆ ಈ ಬಾರಿಯೂ ತುಂಬಿ...

ಸೊರಬ | 30 ಅಡಿ ಬಾವಿಗೆ ಬಿದ್ದ ಆಕಳು ರಕ್ಷಣೆ

ಸೊರಬ, ಪಟ್ಟಣದ ಹೊಸಪೇಟೆ ಬಡಾವಣೆಯಲ್ಲಿ ಬಾವಿಗೆ ಬಿದ್ದ ಆಕಳನ್ನು ಅಗ್ನಿಶಾಮಕದಳದ ಸಿಬ್ಬಂದಿ...

Download Eedina App Android / iOS

X