ಶಿವಮೊಗ್ಗ | ಭ್ರೂಣ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿರುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕ್ಕೆ ಆಗ್ರಹ

Date:

Advertisements

ಭ್ರೂಣಹತ್ಯೆಯಲ್ಲಿ ಭಾಗಿಯಾಗಿರುವವರು ಎಷ್ಟೇ ಪ್ರಭಾವಿಗಳಾಗಿದ್ದರೂ ಅವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು ಹಾಗೂ ತಪ್ಪಿತಸ್ಥರನ್ನು ಗಲ್ಲಿಗೇರಿಸಬೇಕು ಎಂದು ಎನ್‌ಎಸ್‌ಯುಐ ರಾಜ್ಯ ಕಾರ್ಯದರ್ಶಿ ಎಚ್ ಎಸ್ ಬಾಲಾಜಿ ಒತ್ತಾಯಿಸಿದ್ದಾರೆ.

ಶಿವಮೊಗ್ಗ ನಗರದಲ್ಲಿ ಪತ್ರಿಕಾ ಹೇಳಿಕೆ ನೀಡಿದ್ದು, “ಮೈಸೂರು ಹಾಗೂ ಮಂಡ್ಯ ಪ್ರದೇಶದಲ್ಲಿ ಭ್ರೂಣ ಹತ್ಯೆ ಜಾಲದ ಬಗೆಗಿನ ಸುದ್ದಿ ಇಡೀ ರಾಜ್ಯವನ್ನೇ ಬೆಚ್ಚಿ ಬೀಳುವಂತೆ ಮಾಡಿದೆ. ಜೀವ ಉಳಿಸಬೇಕಾದ ವೈದ್ಯರೇ ಇಂತಹ ಅಮಾನವೀಯ ಕೃತ್ಯಕ್ಕೆ ಕೈ ಹಾಕಿದ್ದು ಮನುಕುಲವೇ ತಲೆ ತಗ್ಗಿಸುವಂತಾಗಿದೆ” ಎಂದರು.

“ತಕ್ಷಣದ ಮಾಹಿತಿ ಪ್ರಕಾರ ಮೂರು ತಿಂಗಳಲ್ಲಿ 242 ಭ್ರೂಣ ಹತ್ಯೆ ಮಾಡಲಾಗಿದ್ದು, ಆರೋಪಿಗಳೇ ಒಪ್ಪಿಕೊಂಡಂತೆ ಎರಡು ವರ್ಷಗಳಿಂದ ಭ್ರೂಣಹತ್ಯೆ ಪ್ರಕರಣ ಮಾಡುತ್ತಿದ್ದಾರೆ. ಇದರ ಲೆಕ್ಕದಂತೆ ಒಂದು ವರ್ಷಕ್ಕೆ ಕನಿಷ್ಠ 1,000 ಭ್ರೂಣ ಹತ್ಯೆ ಮಾಡುತ್ತಿದ್ದಾರೆ. ಎರಡು ವರ್ಷಕ್ಕೆ 2,000 ಭ್ರೂಣ ಹತ್ಯೆ ಮಾಡಿರಬಹುದು” ಎಂದು ಶಂಕೆ ವ್ಯಕ್ತಪಡಿಸಿದರು.

Advertisements

“ಪೊಲೀಸರ ತನಿಖೆಯಲ್ಲಿ ಮೂರು ವರ್ಷದಿಂದ ಕೃತ್ಯವೆಸಗಿರುವುದು ಗೊತ್ತಾಗಿದೆ. ಅಲ್ಲಿಗೆ 3,000ದಷ್ಟು ಭ್ರೂಣ ಹತ್ಯೆ ಮಾಡಿರುವ ಸಾಧ್ಯತೆ ಇದೆ ಎಂದು ಪೊಲೀಸ್ ಅಧಿಕಾರಿಗಳೇ ಮಾಹಿತಿ ನೀಡಿರುವುದು ಆತಂಕಕ್ಕೀಡಾಗುವಂತೆ ಮಾಡಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಭ್ರೂಣ ಲಿಂಗ ಪತ್ತೆ ಮತ್ತು ಹತ್ಯೆ ಪ್ರಕರಣ: ಮತ್ತೊಬ್ಬ ಆರೋಪಿ ಬಂಧನ

“ವೈದ್ಯರು ತಮ್ಮ ವೃತ್ತಿ ಧರ್ಮ ಮರೆಯದೇ ನೈತಿಕ ಮೌಲ್ಯ ಉಳಿಸಿಕೊಳ್ಳಬೇಕು. ಭ್ರೂಣಹತ್ಯೆಯಿಂದ ಉಂಟಾಗಬಹುದಾದ ಸಮಸ್ಯೆ ಹಾಗೂ ಸಾಮಾಜಿಕ ಅಸಮತೋಲನದ ಬಗ್ಗೆ ಅರಿವು ಮೂಡಿಸಿದಲ್ಲಿ ಮಾತ್ರ ಈ ಪಿಡುಗು ನಿವಾರಣೆ ಮಾಡಲು ಸಾಧ್ಯ” ಎಂದು ಬಾಲಾಜಿ ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

Download Eedina App Android / iOS

X