ಮಹಿಳೆ ವಿರುದ್ದ ಚಕ್ರವರ್ತಿ ಸೂಲಿಬೆಲೆಯ ಅವಹೇಳನಕಾರಿ ಕಾಮೆಂಟ್ ಹಿನ್ನಲೆ ಚಕ್ರವರ್ತಿ ಸೂಲಿಬೆಲೆ ವಿರುದ್ದ ಶಿವಮೊಗ್ಗದಲ್ಲಿ ಪೊರಕೆ ಸ್ವಾಗತ ಪ್ರತಿಭಟನೆ ನಡೆಸಿದರು.
ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ವತಿಯಿಂದ ಬಿ ಎಚ್ ರಸ್ತೆಯ ಕರ್ನಾಟಕ ಸಂಘದ ಬಳಿ ಪ್ರತಿಭಟನೆ ನಡೆಸಿದರು.
ಸೂಲಿಬೆಲೆ ಚಕ್ರವರ್ತಿ ಫೇಸ್ ಬುಕ್ನಲ್ಲಿ ಅವಾಚ್ಯ ಶಬ್ದದಿಂದ ಕಾಮೆಂಟ್ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಕೆಲವು ದಿನಗಳ ಹಿಂದೆ ಕೆಪಿಸಿಸಿ ಸಾಮಾಜಿಕ ಜಾಲತಾಣದ ರಾಜ್ಯ ಉಪಾಧ್ಯಕ್ಷೆ ಸೌಗಂಧಿಕ ರಘುನಾಥ್ ಅವರು ಸೂಲಿಬೆಲೆ ಅವರ ವಿರುದ್ದ ಶಿವಮೊಗ್ಗದ ವಿನೋಬನಗರದ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ದೂರಿನನ್ವಯ ಎಫ್‌ಐಆರ್ ದಾಖಲಿಸಿಕೊಂಡ ಪೊಲೀಸರು ಸೂಲಿಬೆಲೆಗೆ ನೊಟೀಸ್ ನೀಡಿ ಠಾಣೆಗೆ ಬಂದು ಹೇಳಿಕೆ ನೀಡುವಂತೆ ನಿರ್ದೇಶನ ನೀಡಿದ್ದರು.
ಈ ಸುದ್ದಿ ಓದಿದ್ದೀರಾ? ಮಾಜಿ ಸಚಿವ ಹಾಲಪ್ಪ ಆಚಾರ್ ಗನ್‌ಮ್ಯಾನ್ ವಿರುದ್ಧ ವಂಚನೆ ಆರೋಪ; ದೂರು ದಾಖಲು
ಚಕ್ರವರ್ತಿ ಸೂಲಿಬೆಲೆ ವಿನೋಬನಗರ ಪೊಲೀಸ್ ಠಾಣೆಗೆ ಬಂದ ವೇಳೆ ಮಹಿಳೆಯರು ಸೇರಿದಂತೆ ಇತರ ಸಂಘಟನೆ ಕಾರ್ಯಕರ್ತರು ಕೈಯಲ್ಲಿ ಪೊರಕೆ ಹಿಡಿದು ಚಕ್ರವರ್ತಿ ಸೂಲಿಬೆಲೆ ವಿರುದ್ದ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದು, ಚಕ್ರವರ್ತಿ ಸೂಲಿಬೆಲೆಯನ್ನು ಬಂಧಿಸುವಂತೆ ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.