ಶಿವಮೊಗ್ಗ | ಮಹಿಳೆ ವಿರುದ್ದ ಅವಹೇಳನಕಾರಿ ಕಾಮೆಂಟ್; ಚಕ್ರವರ್ತಿ ಸೂಲಿಬೆಲೆಗೆ ಪೊರಕೆ ಸ್ವಾಗತ

Date:

ಮಹಿಳೆ ವಿರುದ್ದ ಚಕ್ರವರ್ತಿ ಸೂಲಿಬೆಲೆಯ ಅವಹೇಳನಕಾರಿ ಕಾಮೆಂಟ್​ ಹಿನ್ನಲೆ ಚಕ್ರವರ್ತಿ ಸೂಲಿಬೆಲೆ ವಿರುದ್ದ ಶಿವಮೊಗ್ಗದಲ್ಲಿ ಪೊರಕೆ ಸ್ವಾಗತ ಪ್ರತಿಭಟನೆ ನಡೆಸಿದರು.

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ವತಿಯಿಂದ ಬಿ ಎಚ್ ರಸ್ತೆಯ ಕರ್ನಾಟಕ ಸಂಘದ ಬಳಿ ಪ್ರತಿಭಟನೆ ನಡೆಸಿದರು.

ಸೂಲಿಬೆಲೆ ಚಕ್ರವರ್ತಿ ಫೇಸ್​ ಬುಕ್​ನಲ್ಲಿ ಅವಾಚ್ಯ ಶಬ್ದದಿಂದ ಕಾಮೆಂಟ್ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಕೆಲವು ದಿನಗಳ ಹಿಂದೆ ಕೆಪಿಸಿಸಿ ಸಾಮಾಜಿಕ ಜಾಲತಾಣದ ರಾಜ್ಯ ಉಪಾಧ್ಯಕ್ಷೆ ಸೌಗಂಧಿಕ ರಘುನಾಥ್ ಅವರು ಸೂಲಿಬೆಲೆ ಅವರ ವಿರುದ್ದ ಶಿವಮೊಗ್ಗದ ವಿನೋಬನಗರದ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ದೂರಿನನ್ವಯ ಎಫ್‌ಐಆರ್ ದಾಖಲಿಸಿಕೊಂಡ ಪೊಲೀಸರು ಸೂಲಿಬೆಲೆಗೆ ನೊಟೀಸ್ ನೀಡಿ ಠಾಣೆಗೆ ಬಂದು ಹೇಳಿಕೆ ನೀಡುವಂತೆ ನಿರ್ದೇಶನ ನೀಡಿದ್ದರು.

ಈ ಸುದ್ದಿ ಓದಿದ್ದೀರಾ? ಮಾಜಿ ಸಚಿವ ಹಾಲಪ್ಪ ಆಚಾರ್ ಗನ್‌ಮ್ಯಾನ್‌ ವಿರುದ್ಧ ವಂಚನೆ ಆರೋಪ; ದೂರು ದಾಖಲು

ಚಕ್ರವರ್ತಿ ಸೂಲಿಬೆಲೆ ವಿನೋಬನಗರ ಪೊಲೀಸ್‌ ಠಾಣೆಗೆ ಬಂದ ವೇಳೆ ಮಹಿಳೆಯರು ಸೇರಿದಂತೆ ಇತರ ಸಂಘಟನೆ ಕಾರ್ಯಕರ್ತರು ಕೈಯಲ್ಲಿ ಪೊರಕೆ ಹಿಡಿದು ಚಕ್ರವರ್ತಿ ಸೂಲಿಬೆಲೆ ವಿರುದ್ದ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದು, ಚಕ್ರವರ್ತಿ ಸೂಲಿಬೆಲೆಯನ್ನು ಬಂಧಿಸುವಂತೆ ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಕಾಂಗ್ರೆಸ್ ಪರಿಶಿಷ್ಟ ಪಂಗಡ ಘಟಕದ ಕಾರ್ಯಕರ್ತರ ಸಮಾವೇಶ

ಕ್ಷೇತ್ರದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಅವರಿಗೆ ಮತ ನೀಡಿ ಗೆಲ್ಲಿಸಿದ ಪರಿಣಾಮ ಇಲ್ಲಿ...

ಶಿವಮೊಗ್ಗ | ಭದ್ರಾ ಅಣೆಕಟ್ಟೆಯಿಂದ ನದಿಗೆ ನೀರು ಬಿಡದಿರುವಂತೆ ಒತ್ತಾಯಿಸಿ ರೈತ ಸಂಘದ ಮನವಿ

ಭದ್ರಾ ಅಣೆಕಟ್ಟೆಯಿಂದ ನದಿಗೆ ನೀರು ಬಿಡಬೇಡಿ, ಒಂದು ವೇಳೆ ಬಿಟ್ಟರೆ ಲಕ್ಷಾಂತರ...

ಶಿವಮೊಗ್ಗ | ಬಿಜೆಪಿ ಶ್ರೀಮಂತರ ಓಲೈಕೆ ರಾಜಕಾರಣ ಮಾಡುತ್ತಿದೆ: ಕಿಮ್ಮ‌ನೆ ರತ್ನಾಕರ

ಬಿಜೆಪಿಯಿಂದ ಶ್ರೀಮಂತರ ಓಲೈಕೆಯ ರಾಜಕಾರಣ ನಡೆಯುತ್ತಿದೆ‌. ಅದನ್ನು ತಡೆಯಬೇಕಿದೆ ಎಂದು ಮಾಜಿ...