ಶಿವಮೊಗ್ಗ | ಮಧು ಬಂಗಾರಪ್ಪ ಅವರ ವಿರುದ್ಧ ಅವಹೇಳನಕಾರಿ ಪೋಸ್ಟ್‌; ಪ್ರಕರಣ ದಾಖಲಿಸಲು ಒತ್ತಾಯ

Date:

ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ವಿರುದ್ಧ ಫೇಸ್ಬುಕ್‌ನಲ್ಲಿ ಶರತ್ ಕಲ್ಯಾಣಿ ಎಂಬುವವರು ಅವಹೇಳನಕಾರಿಯಾಗಿ ಪೋಸ್ಟ್‌ ಹಾಕಿದ್ದು, ಸಚಿವರ ತೇಜೋವಧೆ ಮಾಡಿದ್ದಾರೆ. ಅವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಬೇಕು ಎಂದು ಶಿವಮೊಗ್ಗ ಜಿಲ್ಲಾ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿನಯ್ ತಾಂದ್ಲೇ ಆಗ್ರಹಿಸಿದ್ದಾರೆ.

- Advertisement -

ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಈ ಬಗ್ಗೆ ಮನವಿ ಸಲ್ಲಿಸಿರುವ ಅವರು, ಶರತ್ ಕಲ್ಯಾಣಿ ಎಂಬಾತ ಫೇಸ್ಬುಕ್‌ನಲ್ಲಿ ಮಧು ಬಂಗಾರಪ್ಪ ಅವರ ಮನೆಯ ವಿಚಾರವನ್ನು, ವೈಯಕ್ತಿಕ ವಿಚಾರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವಿಕೃತವಾಗಿ ಬರೆಯುವ ಮೂಲಕ ಶಿಕ್ಷಣ ಸಚಿವರ ಹೆಸರಿಗೆ ಕಳಂಕ ತರುವ ಪ್ರಯತ್ನ ಮಾಡಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಆದ್ದರಿಂದ, ಸಚಿವರಿಗೆ ಅವಮಾನ ಮಾಡಿರುವ ಶರತ್ ಕಲ್ಯಾಣಿ ಎಂಬಾತನ ವಿರುದ್ಧ ಎಫ್‌ಐಆರ್ ದಾಖಲಿಸಿ, ತಕ್ಷಣವೇ ಬಂಧಿಸಬೇಕು ಹಾಗೂ ಈತನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮನವಿಮಾಡಿದ್ದಾರೆ.

ಈ ಸಂದರ್ಭದಲ್ಲಿ  ಯುವ ಕಾಂಗ್ರೆಸ್ ಮುಖಂಡರಾದ ಡಾ. ಶರತ್ ಮರಿಯಪ್ಪ,ಎನ್‌ಎಸ್‌ಯುಐ ರಾಜ್ಯ ಕಾರ್ಯದರ್ಶಿ ಬಾಲಾಜಿ ಎಚ್.ಎಸ್, ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂದೀಪ್ ಆಟೋಕ್, ಭರತ್ ದರ್ಶನ್, ಮಂಜುನಾಥ್ ಸೊರಬ, ದರ್ಶನ್.ಬಿ, ಜಗದೀಶ್, ಕಿಸಾನ್ ಸೆಲ್ ಅಧ್ಯಕ್ಷ ಗಿರೀಶ್, ಪ್ರದೀಪ್, ಸುಕೇಶ್ .ಜಿ, ಕಾಂಗ್ರೆಸ್ ಪದವೀಧರ ಘಟಕದ ಅರ್ಜುನ ಪಂಡಿತ್, ಪುನೀಲ್, ನವೀನ ಮತ್ತಿತರರು ಹಾಜರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭದ್ರಾವತಿ | ಜುಗಾರಿ ಅಡ್ಡೆ ಬಗ್ಗೆ ಮಾಹಿತಿ ನೀಡಿದ್ದಕ್ಕೆ ಸಾಮಾಜಿಕ ಕಾರ್ಯಕರ್ತನ ಮೇಲೆ ಹಲ್ಲೆ!

ಭದ್ರಾವತಿ ಅಕ್ರಮ ಇಸ್ಪೀಟು, ತೂರಾ ಬಿಲ್ಲೆ ಜುಗಾರಿ ಅಡ್ಡೆ ಮಾಹಿತಿ ನೀಡಿದಕ್ಕೆ...

ಶಿಕಾರಿಪುರದಿಂದಲೇ ರಾಜಕೀಯ ‘ಶಿಕಾರಿ’ ಆರಂಭ: ಸಚಿವ ಮಧು ಬಂಗಾರಪ್ಪ

ಶಿಕಾರಿಪುರದಿಂದ ರಾಜಕೀಯ ‘ಶಿಕಾರಿ’ ಇಂದಿನಿಂದಲೇ ಆರಂಭವಾಗಿದೆ. ಶಿಕಾರಿಯಾಡುವ ಜವಾಬ್ದಾರಿಯನ್ನು ಇಲ್ಲಿನ ಜನತೆ...

SIR: ಕೊಡಗಿನ ಬ್ಯಾಡಗೊಟ್ಟದಲ್ಲಿ 66 ಮುಸ್ಲಿಂ ಮತಗಳ ಅಳಿಸುವಿಕೆಗೆ Form-7 ಅರ್ಜಿ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯ ಸಂದರ್ಭದಲ್ಲಿ ಮತದಾರರ...

ಅ.4ರಿಂದ ವಿಜಯಪುರ – ತಿರುಪತಿ ದಸರಾ ಎಕ್ಸ್‌ಪ್ರೆಸ್ ರೈಲು ಸೇವೆ ಆರಂಭ

ದಸರಾ ಹಬ್ಬದ ಹಿನ್ನೆಲೆಯಲ್ಲಿ ತಿರುಪತಿ–ವಿಜಯಪುರ ನಡುವೆ ಪ್ರಯಾಣಿಕರ ಅನುಕೂಲಕ್ಕಾಗಿ ಸಾಪ್ತಾಹಿಕ ವಿಶೇಷ...