ಶಿಕ್ಷಣ ಸಚಿವರ ಬಗ್ಗೆ ಅವಹೇಳನಕಾರಿ ಹೇಳಿಕೆ ಪೋಸ್ಟ್ ಮಾಡಿರುವವರ ವಿರುದ್ಧ ಪ್ರಕರಣ ದಾಖಲಿಸುವಂತೆ ಆಗ್ರಹಿಸಿ ಶಿವಮೊಗ್ಗ ಜಿಲ್ಲಾ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿನಯ್ ತಾಂದ್ಲೇ ಅವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ ಸಲ್ಲಿಸಿದರು.
“ಶರತ್ ಕಲ್ಯಾಣಿ ಎಂಬಾತ ಫೇಸ್‌ಬುಕ್‌ನಲ್ಲಿ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ವಿರುದ್ಧ ಅವಹೇಳನಕಾರಿಯಾಗಿ ಬರೆಯುವ ಮೂಲಕ ತೇಜೋವಧೆ ಮಾಡಿರುತ್ತಾನೆ. ಮಧು ಬಂಗಾರಪ್ಪ ಅವರ ಮನೆಯ ವಿಚಾರವನ್ನು, ವೈಯಕ್ತಿಕ ವಿಚಾರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವಿಕೃತವಾಗಿ ಬರೆಯುವ ಮೂಲಕ ಶಿಕ್ಷಣ ಸಚಿವರ ಹೆಸರಿಗೆ ಕಳಂಕ ತರುವ ಪ್ರಯತ್ನ ಮಾಡಿದ್ದಾನೆ” ಎಂದು ಆರೋಪಿಸಿದರು.
“ಸಚಿವರಿಗೆ ಅವಮಾನ ಮಾಡಿರುವ ಶರತ್ ಕಲ್ಯಾಣಿ ಎಂಬಾತನ ವಿರುದ್ಧ ಎಫ್‌ಐಆರ್ ದಾಖಲಿಸಿ, ತಕ್ಷಣವೇ ಬಂಧಿಸಬೇಕು ಹಾಗೂ ಈತನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು” ಎಂದು ಮನವಿ ಮಾಡಿದರು.
ಈ ಸುದ್ದಿ ಓದಿದ್ದೀರಾ? ಜನವರಿ 20ರೊಳಗೆ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಘೋಷಿಸಿ: ಬಸವ ಜಯಮೃತ್ಯುಂಜಯ ಸ್ವಾಮೀಜಿ
ಈ ಸಂದರ್ಭದಲ್ಲಿ ಕಾಂಗ್ರೆಸ್ ಯುವ ಮುಖಂಡ ಡಾ.ಶರತ್ ಮರಿಯಪ್ಪ, ಎನ್‌ಎಸ್‌ಯುಐ ರಾಜ್ಯ ಕಾರ್ಯದರ್ಶಿ ಬಾಲಾಜಿ ಹೆಚ್ ಎಸ್, ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂದೀಪ್ ಆಟೋಕ್, ಭರತ್ ದರ್ಶನ್, ಮಂಜುನಾಥ್ ಸೊರಬ, ದರ್ಶನ್ ಬಿ, ಜಗದೀಶ್, ಕಿಸಾನ್ ಸೆಲ್ ಅಧ್ಯಕ್ಷ
ಗಿರೀಶ್, ಪ್ರದೀಪ್, ಸುಕೇಶ್ ಜಿ, ಕಾಂಗ್ರೆಸ್ ಪದವೀಧರ ಘಟಕದ ಅರ್ಜುನ ಪಂಡಿತ್, ಪುನೀಲ್, ನವೀನ ಸೇರಿದಂತೆ ಇತರರು ಇದ್ದರು.