ಶಿವಮೊಗ್ಗ | ಶಿಕ್ಷಣ ಸಚಿವರಿಗೆ ಅವಮಾನ; ತಪ್ಪಿತಸ್ಥರ ಬಂಧನಕ್ಕೆ ಆಗ್ರಹ

Date:

ಶಿಕ್ಷಣ ಸಚಿವರ ಬಗ್ಗೆ ಅವಹೇಳನಕಾರಿ ಹೇಳಿಕೆ ಪೋಸ್ಟ್‌ ಮಾಡಿರುವವರ ವಿರುದ್ಧ ಪ್ರಕರಣ ದಾಖಲಿಸುವಂತೆ ಆಗ್ರಹಿಸಿ ಶಿವಮೊಗ್ಗ ಜಿಲ್ಲಾ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿನಯ್ ತಾಂದ್ಲೇ ಅವರು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗೆ ಮನವಿ ಸಲ್ಲಿಸಿದರು.

- Advertisement -

“ಶರತ್ ಕಲ್ಯಾಣಿ ಎಂಬಾತ ಫೇಸ್‌ಬುಕ್‌ನಲ್ಲಿ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ವಿರುದ್ಧ ಅವಹೇಳನಕಾರಿಯಾಗಿ ಬರೆಯುವ ಮೂಲಕ ತೇಜೋವಧೆ ಮಾಡಿರುತ್ತಾನೆ. ಮಧು ಬಂಗಾರಪ್ಪ ಅವರ ಮನೆಯ ವಿಚಾರವನ್ನು, ವೈಯಕ್ತಿಕ ವಿಚಾರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವಿಕೃತವಾಗಿ ಬರೆಯುವ ಮೂಲಕ ಶಿಕ್ಷಣ ಸಚಿವರ ಹೆಸರಿಗೆ ಕಳಂಕ ತರುವ ಪ್ರಯತ್ನ ಮಾಡಿದ್ದಾನೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

“ಸಚಿವರಿಗೆ ಅವಮಾನ ಮಾಡಿರುವ ಶರತ್ ಕಲ್ಯಾಣಿ ಎಂಬಾತನ ವಿರುದ್ಧ ಎಫ್‌ಐಆರ್ ದಾಖಲಿಸಿ, ತಕ್ಷಣವೇ ಬಂಧಿಸಬೇಕು ಹಾಗೂ ಈತನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು” ಎಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಜನವರಿ 20ರೊಳಗೆ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಘೋಷಿಸಿ: ಬಸವ ಜಯಮೃತ್ಯುಂಜಯ ಸ್ವಾಮೀಜಿ

ಈ ಸಂದರ್ಭದಲ್ಲಿ ಕಾಂಗ್ರೆಸ್ ಯುವ ಮುಖಂಡ ಡಾ.ಶರತ್ ಮರಿಯಪ್ಪ, ಎನ್‌ಎಸ್‌ಯುಐ ರಾಜ್ಯ ಕಾರ್ಯದರ್ಶಿ ಬಾಲಾಜಿ ಹೆಚ್ ಎಸ್, ಯುವ ಕಾಂಗ್ರೆಸ್ ಜಿಲ್ಲಾ  ಪ್ರಧಾನ ಕಾರ್ಯದರ್ಶಿ ಸಂದೀಪ್ ಆಟೋಕ್, ಭರತ್ ದರ್ಶನ್, ಮಂಜುನಾಥ್ ಸೊರಬ, ದರ್ಶನ್ ಬಿ, ಜಗದೀಶ್, ಕಿಸಾನ್ ಸೆಲ್ ಅಧ್ಯಕ್ಷ
ಗಿರೀಶ್, ಪ್ರದೀಪ್, ಸುಕೇಶ್ ಜಿ, ಕಾಂಗ್ರೆಸ್ ಪದವೀಧರ ಘಟಕದ ಅರ್ಜುನ ಪಂಡಿತ್, ಪುನೀಲ್, ನವೀನ ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...