ಶಿವಮೊಗ್ಗ | ಕೆಎಸ್‌ಆರ್‌ಟಿಸಿ ಬಸ್‌ ಚಾಲಕನಿಗೆ ಹಲ್ಲೆ; ಖಾಸಗಿ ಬಸ್‌ ಮಾಲೀಕನ ವಿರುದ್ಧ ಎಫ್ಐಆರ್

Date:

ಮಲೆನಾಡು ಭಾಗದಲ್ಲಿ ಸರ್ಕಾರಿ ಬಸ್‌ಗಳು ಓಡಾಡುವುದು ಕಡಿಮೆ. ಅಂತಹದರಲ್ಲಿ ಓಡಾಡುವ ಕೆಲವು ಬಸ್‌ಗಳ ಚಾಲಕರ ಮೇಲೆ ಖಾಸಗಿ ಬಸ್ ಮಾಲೀಕರು ದರ್ಪ ತೋರುತ್ತಿದ್ದು, ಕೆಎಸ್‌ಆರ್‌ಟಿಸಿ ಚಾಲಕ ಮತ್ತು ನಿರ್ವಾಹಕರ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ.

ಶನಿವಾರ ಬೆಳಿಗ್ಗೆ 9ರ ಸುಮಾರಿಗೆ ಶಿವಮೊಗ್ಗದಿಂದ ತೀರ್ಥಹಳ್ಳಿಯ ಮುಖ್ಯ ಬಸ್‌ ನಿಲ್ದಾಣಕ್ಕೆ ಕೆಎಸ್‌ಆರ್‌ಟಿಸಿ ಬಸ್ ಬಂದಿದೆ. ತೀರ್ಥಹಳ್ಳಿಯ ಬಸ್‌ ನಿಲ್ದಾಣದಲ್ಲಿ ಖಾಸಗಿ ಬಸ್ಸಿನ ಮಾಲೀಕ ಮಧು ಎಂಬಾತ ಕೆಎಸ್‌ಆರ್‌ಟಿಸಿ ಬಸ್ ಅಡ್ಡಗಟ್ಟಿ ಚಾಲಕನನ್ನು ಕೆಳಗಿಳಿಸಿ ಬಸ್‌ನ ಕೀ ತೆಗೆದುಕೊಂಡು ಡ್ರೈವರ್ ಹಾಗೂ ಕಂಡಕ್ಟರ್‌ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಶಕ್ತಿಯೋಜನೆ ಉಪಯೋಗಿಸಿಕೊಂಡು ನಮ್ಮ ಬಸ್‌ಗಳಿಗೆ ನಷ್ಟ ಉಂಟು ಮಾಡುತ್ತಿದ್ದೀರಾ ಎಂದು ರಂಪಾಟ ಮಾಡಿ ಹಲ್ಲೆ ನಡೆಸಿದ್ದಾರೆ.

“ಬಡವರು ಮತ್ತು ಕೆಲಸ ಮಾಡುವ ಮಹಿಳೆಯರು ಸೇರಿದಂತೆ ಶಾಲೆ ಕಾಲೇಜು ವಿದ್ಯಾರ್ಥಿನಿಯರಿಗೆ ಅನುಕೂಲವಾಗಲೆಂದು ಕಾಂಗ್ರೆಸ್‌ ಸರ್ಕಾರ ಶಕ್ತಿ ಯೋಜನೆಯನ್ನು ಜಾರಿಗೆ ತಂದಿದೆ. ಖಾಸಗಿ ಮಾಲೀಕರಿಗೆ ನಷ್ಟ ಉಂಟಾಗುತ್ತಿದೆ ಎಂಬ ಕಾರಣಕ್ಕೆ ಆ ಕೋಪವನ್ನು ಕೆಎಸ್‌ಆರ್‌ಟಿಸಿ ಬಸ್ ಡ್ರೈವರ್ ಮತ್ತು ಕಂಡಕ್ಟರ್‌ಗಳ ಮೇಲೆ ತೋರಿಸುವುದು ಯಾವ ನ್ಯಾಯ” ಎಂದು ಸಾರ್ವಜನಿಕರು ಪ್ರಶ್ನಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ವಿಜಯಪುರ | ʼಕರ್ನಾಟಕದ ಸಾಮಾಜಿಕ ನ್ಯಾಯಕ್ಕಾಗಿ ಚಲೋ ಬೆಳಗಾವಿʼ

ಈ ಘಟನೆ ಕುರಿತು ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಖಾಸಗಿ ಬಸ್‌ ಮಾಲೀಕನ ವಿರುದ್ಧ ಸರ್ಕಾರಿ ಉದ್ಯೋಗಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಗ್ಯಾರಂಟಿ ಯೋಜನೆಯ ಅನುಷ್ಠಾನ ಪ್ರಾಧಿಕಾರದ ಸಭೆ

ರಾಜ್ಯದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ‌ ಕೆ ಶಿವಕುಮಾರ್,...

ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗೆಲುವು ಗ್ಯಾರಂಟಿ: ಸದಾಶಿವ ಉಳ್ಳಾಲ್ ವಿಶ್ವಾಸ

ಉಳುವವನೇ ಭೂಮಿಯೊಡೆಯ, ಲೋನ್ ಮೇಳ, ಬ್ಯಾಂಕ್ ರಾಷ್ಟ್ರೀಕರಣ, ಮಂಗಳೂರಿಗೆ ಎನ್‌ಎಂಪಿಟಿ, ವಿಮಾನ...

ವಿಜಯಪುರ ಲೋಕಸಭಾ ಕ್ಷೇತ್ರ; 21 ಅಭ್ಯರ್ಥಿಗಳಿಂದ 35 ನಾಮಪತ್ರ ಸಲ್ಲಿಕೆ

ಲೋಕಸಭಾ ಚುನಾವಣೆ-2024ಕ್ಕೆ ಸಂಬಂಧಿಸಿದಂತೆ ವಿಜಯಪುರ ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರಕ್ಕೆ ಏಪ್ರಿಲ್‌...

ದಾವಣಗೆರೆ | ಜಾತ್ಯತೀತ ಪಕ್ಷಕ್ಕೆ ಮತ ಹಾಕುವಂತೆ ಮಾನವ ಬಂಧುತ್ವ ವೇದಿಕೆ ಮನವಿ

ಮತದಾನದ ಹಕ್ಕು ಸಂವಿಧಾನ ನೀಡಿರುವ ಅತ್ಯಂತ ಶ್ರೇಷ್ಟವಾದದ್ದು ಮತ್ತು ಪವಿತ್ರವಾದ ಅವಕಾಶ....