ಶಿವಮೊಗ್ಗ | ಆಧಾರ್‌ ತಿದ್ದುಪಡಿಗೆ ಒಂದೇ ಕೇಂದ್ರ; ನಿತ್ಯವು ಪರದಾಡುತ್ತಿರುವ ಜನ

Date:

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯಲ್ಲಿನ ಕೇಂದ್ರ ಮುಖ್ಯ ಅಂಚೆ ಕಚೇರಿ ಎದುರು ಪ್ರತಿದಿನ ಆಧಾರ್‌ ತಿದ್ದುಪಡಿಗಾಗಿ ಜನರು ಸರತಿ ಸಾಲಲ್ಲಿ ನಿಂತಿರುವುದು ಸಾಮಾನ್ಯವೆಂಬಂತಾಗಿದೆ. ಸರ್ಕಾರದ ವಿವಿಧ ಸೌಲಭ್ಯ ಪಡೆಯಲು ಆಧಾರ್ ತಿದ್ದುಪಡಿ ಕಡ್ಡಾಯವಾಗಿದೆ. ಆದರೆ, ಇದರಿಂದಾಗಿ ಸಾರ್ವಜನಿಕರು ನಿತ್ಯವೂ ಆಧಾರ್‌ ತಿದ್ದುಪಡಿಗಾಗಿ ಪರದಾಡುವಂತಾಗಿದೆ.

- Advertisement -

ಇಲ್ಲಿ ಇದೊಂದೇ ತಿದ್ದುಪಡಿ ಕೇಂದ್ರ ಇರುವುದರಿಂದ ಜನರ ಅಲೆದಾಟ ತಪ್ಪುತ್ತಿಲ್ಲ. ತಾಲೂಕು ಕಚೇರಿ, ನಾಡಕಚೇರಿ, ಕರ್ನಾಟಕ ಗ್ರಾಮೀಣ ಬ್ಯಾಂಕ್‌ಗಳಲ್ಲಿ ಈ ಹಿಂದೆ ತಿದ್ದುಪಡಿಗೆ ಅವಕಾಶ ಕಲ್ಪಿಸಲಾಗಿತ್ತು. ಈಗ ಮುಖ್ಯ ಅಂಚೆ ಕಚೇರಿಯಲ್ಲಿ ಮಾತ್ರ ತಿದ್ದುಪಡಿಗೆ ಅವಕಾಶ ಕಲ್ಪಿಸಲಾಗಿದೆ. ಇದಕ್ಕೆ ಒಬ್ಬ ಸಿಬ್ಬಂದಿ ನಿಯೋಜನೆಗೊಂಡಿದ್ದು ದಿನವೊಂದಕ್ಕೆ 30ಕ್ಕಿಂತ ಅಧಿಕ ತಿದ್ದುಪಡಿ ಸಾಧ್ಯವಾಗುತ್ತಿಲ್ಲ. ಸೌಲಭ್ಯ ವಂಚಿತರು ಅಂಗಲಾಚಿದರೂ ತಿದ್ದುಪಡಿಗೆ ಅವಕಾಶ ಸಿಗುತ್ತಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ಸಾರ್ವಜನಿಕರು ಬೆಳಿಗ್ಗೆ 6ಗಂಟೆಯಿಂದಲೇ ಸರತಿ ಸಾಲಿನಲ್ಲಿ ನಿಲ್ಲಬೇಕಾಗಿದೆ. ಕಚೇರಿ ತೆರೆಯುವುದರೊಳಗೆ ಆ ದಿನದ ತಿದ್ದುಪಡಿ ಕೋಟಾ ಮುಕ್ತಾಯಗೊಳ್ಳುತ್ತಿದೆ. ಹಳ್ಳಿಗಳಿಂದ ಮುಂಜಾನೆ ಬರಲು ಸಮರ್ಪಕ ಬಸ್‌ ಸೌಲಭ್ಯ ಇಲ್ಲದ ಕಾರಣ ಗ್ರಾಮೀಣ ಪ್ರದೇಶದ ಜನರು ಆಧಾರ್ ತಿದ್ದುಪಡಿಗೆ ತೊಂದರೆ ಎದುರಿಸುತ್ತಿದ್ದಾರೆ.

ವಿಳಾಸ, ಫೋಟೊ,‌ ಜನನ ಪ್ರಮಾಣಪತ್ರ, ಮೊಬೈಲ್‌ ಸಂಖ್ಯೆ, ಹೆಸರು ಬದಲಾವಣೆ, ಲಿಂಗ, ಬಯೊಮೆಟ್ರಕ್ ಸೇರಿದಂತೆ 10ವರ್ಷ ಮೇಲ್ಪಟ್ಟವರ ಎಲ್ಲಾ ಕಾರ್ಡ್‌ಗಳನ್ನು ನವೀಕರಿಸಬೇಕಿದೆ. ಇಲ್ಲದಿದ್ದರೆ ಪಡಿತರ ಸೌಲಭ್ಯ, ಗೃಹಲಕ್ಷ್ಮಿ ಯೋಜನೆ, ಉಚಿತ ಬಸ್‌, ಬ್ಯಾಂಕ್‌ ಖಾತೆ, ಪ್ಯಾನ್‌ ಕಾರ್ಡ್‌, ಮತದಾರರ ಚೀಟಿ ನವೀಕರಣ, ವ್ಯಾಸಂಗ ದೃಢೀಕರಣ ಮುಂತಾದ ಸೌಲಭ್ಯಗಳಿಂದ ವಂಚಿತರಾಗುವಂತಾಗುತ್ತಿದೆ.

ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ ಈಚೆಗೆ ತೆರೆದ ಕರ್ನಾಟಕ ಒನ್‌ ಕೇಂದ್ರ ಕೆಲಸ ಮಾಡುತ್ತಿಲ್ಲ. ತಾಲೂಕು ಆಡಳಿತದಲ್ಲೂ ಸಿಬ್ಬಂದಿ ಕೊರತೆ ಹೆಚ್ಚಿದ್ದು ಸೇವೆ ನೀಡಲು ತೊಂದರೆಯಾಗುತ್ತಿದೆ. ಮೇಗರವಳ್ಳಿ, ದೇವಂಗಿ, ಬೆಜ್ಜವಳ್ಳಿ ಅಟಲ್‌ ಜನಸ್ನೇಹಿ ಕೇಂದ್ರ (ನಾಡಕಚೇರಿ)ಯಲ್ಲಿ ಆಧಾರ್‌ ತಿದ್ದುಪಡಿಯಾಗುತ್ತಿಲ್ಲ. ಕೋಣಂದೂರು ನಾಡಕಚೇರಿಯಲ್ಲಿ ಮಾತ್ರ ಈ ಸೌಲಭ್ಯ ಇದೆ. ವಿದ್ಯುತ್‌ ಸಮಸ್ಯೆ, ಸರ್ವರ್‌ ಸಮಸ್ಯೆ ಹೆಚ್ಚಿದ್ದು ಜನರು ತೊಂದರೆಗೆ ಸಿಲುಕಿದ್ದಾರೆ. ಅಲ್ಲದೇ 20 ಕಿ.ಮೀ. ದೂರದಿಂದ ತಾಲ್ಲೂಕು ಕೇಂದ್ರಕ್ಕೆ ದಿನವಿಡೀ ಅಲೆಯುವಂತಾಗಿದೆ ಎಂದು ಸಾರ್ವಜನಿಕರು ತಮ್ಮ ಅಸಮಾಧಾನ ತೋಡಿಕೊಳ್ಳುತ್ತಿದ್ದಾರೆ.

ಸಾಮಾನ್ಯ ಕೇಂದ್ರಗಳಲ್ಲೂ ನಿರೀಕ್ಷಿತ ಪ್ರಮಾಣದ ಕೆಲಸ ಮಾಡಿಕೊಳ್ಳಲು ಸಾಧ್ಯವಾಗದೆ ಸಾರ್ವಜನಿಕರು ಪರದಾಡುತ್ತಿದ್ದು ಇದಕ್ಕೆಲ್ಲಾ ಒಂದು ಪರಿಹಾರ ನೀಡಿ ಎಂದು ಆಗ್ರಹಿಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜೋಯ್ಡಾ | ದೂರು ಹಿಂಪಡೆಯಲು ರೂ.10 ಲಕ್ಷ ಬೇಡಿಕೆ! ಅಬಕಾರಿ ನಿರೀಕ್ಷಕರಿಂದ ದೂರು

ಉತ್ತರ ಕನ್ನಡ ಜಿಲ್ಲೆ, ಜೋಯ್ಡಾದ ಅನಮೋಡ ಅಬಕಾರಿ ಇಲಾಖೆಯ ಅಧಿಕಾರಿಗಳ ವಿರುದ್ಧ...

ಗದಗ | ಗ್ರಾಮೀಣ ವಿದ್ಯಾರ್ಥಿಗಳಲ್ಲಿ ಡಿಜಿಟಲ್ ಸಾಕ್ಷರತೆ, ತಾಂತ್ರಿಕ ಕೌಶಲ್ಯ ಬೆಳೆಸುವುದು ಅಗತ್ಯ: ಆರ್.ಎಸ್ ಬುರಡಿ

ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಲ್ಲಿ ಡಿಜಿಟಲ್ ಸಾಕ್ಷರತೆ ಹಾಗೂ ತಾಂತ್ರಿಕ ಕೌಶಲ್ಯಗಳನ್ನು ಬೆಳೆಸುವುದರ...

ವಿಜಯಪುರ | ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ Gen Z ಪೀಳಿಗೆ ತನ್ನ ಶಕ್ತಿ ಪ್ರದರ್ಶಿಸಬೇಕು: ಪ್ರದೀಪ್ ಪಾಟೀಲ್

ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಹಾಗೂ ನಗರ ಸ್ಥಳೀಯ...

ವಿಜಯಪುರ | ವಾಣಿಜ್ಯ ಮಳಿಗೆಗಳಲ್ಲಿ ಕನ್ನಡ ನಾಮಫಲಕ ಬಳಸುವಂತೆ ಜಾಗೃತಿ ಅಭಿಯಾನ

ಕನ್ನಡ ರಾಜ್ಯೋತ್ಸವದ ಅಂಗವಾಗಿ ನಗರದ ಅಂಗಡಿ-ಮುಂಗಟ್ಟುಗಳು, ವಾಣಿಜ್ಯ ಮಳಿಗೆಗಳು ಹಾಗೂ ವಿವಿಧ...