ಶಿವಮೊಗ್ಗ | ಶೋಷಿತರ ಜಾಗೃತಿಗಾಗಿ ರಾಜ್ಯ ಸಮಾವೇಶ

Date:

ಸಂವಿಧಾನದ ಆಶಯವಾದ ಸಮಸಮಾಜ ಕಟ್ಟಲು ಕಾಂತರಾಜ ಆಯೋಗದ ವರದಿ ಜಾರಿಗೆ ಒತ್ತಾಯಿಸಿ, ಸಂವಿಧಾನ, ಸಮಾಜಿಕ ನ್ಯಾಯ, ಸ್ವಾಭಿಮಾನದ ಸಂರಕ್ಷಣೆಗಾಗಿ ಶಿವಮೊಗ್ಗದಲ್ಲಿ ಶೋಷಿತರ ಜಾಗೃತಿಗಾಗಿ ರಾಜ್ಯ ಸಮಾವೇಶವನ್ನು ಆಯೋಜಿಸಲಾಗಿದೆ.

- Advertisement -

ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಕೂಟ, ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಹಾಗೂ ಹಿಂದುಳಿದ ಜನ ಜಾಗೃತಿ ವೇದಿಕೆ ನೇತೃತ್ವದಲ್ಲಿ ಸಮಾವೇಶ ನಡೆಯಲಿದೆ. ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ಸಂಘಟನೆಗಳ ಮುಖಂಡರು ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಸಂವಿಧಾನದ ಪರಿಚ್ಛೇದ 15(4), 16(4) ಹಿಂದುಳಿದ ಜಾತಿ-ವರ್ಗಗಳ ಅಭಿವೃದ್ಧಿಗೆ ಶೈಕ್ಷಣಿಕ ಹಾಗು ಸಾಮಾಜಿಕ ಸಮೀಕ್ಷೆ ಅತ್ಯಂತ ಅವಶ್ಯಕ ಎಂಬುದನ್ನು ಒತ್ತಿ ಹೇಳಿದೆ. ಇದೇ ಅಂಶವನ್ನು ಭಾರತದ ಸುಪ್ರೀಂ ಕೋರ್ಟ್, ವಿವಿಧ ರಾಜ್ಯಗಳ ಹೈಕೋರ್ಟ್‌ಗಳು ಮತ್ತು 1953ರ ನಂತರ ನೇಮಿಸಲ್ಪಟ್ಟ ವಿವಿಧ ಹಿಂದುಳಿದ ಆಯೋಗಗಳ ವರದಿಗಳು ಅಭಿಪ್ರಾಯವನ್ನು ವ್ಯಕ್ತಪಡಿಸಿವೆ. ಈ ಅಂಶಗಳನ್ನು ಆಧರಿಸಿ ಕಾಂಗ್ರೆಸ್‌ ಸರ್ಕಾರವು 2014ರಲ್ಲಿ ಕಾಂತರಾಜ ಅವರ ನೇತೃತ್ವದಲ್ಲಿ ಆಯೋಗ ರಚಿಸಿತ್ತು. 158.47 ಕೋಟಿ ರೂ. ವೆಚ್ಚದಲ್ಲಿ ಸಮೀಕ್ಷೆ ನಡೆಸಿ, ವರದಿಯನ್ನು ಸಿದ್ದಪಡಿಸಿದೆ. ಆದರೆ, ರಾಜಕೀಯ ಕುತಂತ್ರ ಹಾಗೂ ತಾಂತ್ರಿಕ ಕಾರಣಗಳಿಂದ ಸರ್ಕಾರಕ್ಕೆ ವರದಿ ಸಲ್ಲಿಕೆಯಾಗದೆ ಯಳಿದಿದೆ” ಎಂದು ಮುಖಂಡರು ಹೇಳಿದ್ದಾರೆ.

“2018ರ ಬಳಿಕ ಮುಖ್ಯಮಂತ್ರಿಗಳಾಗಿ ಅಧಿಕಾರಕ್ಕೆ ಬಂದ ಎಚ್.ಡಿ ಕುಮಾರಸ್ವಾಮಿ, ಬಿ.ಎಸ್. ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಅವಧಿಯಲ್ಲಿ ವರದಿ ವರದಿ ಸ್ವೀಕರಿಸುವ ಯಾವುದೇ ಕ್ರಮವಾಗಲಿಲ್ಲ. ಈಗ ಕಾಂಗ್ರೆಸ್‌ ಸರ್ಕಾರವೇ ಅಧಿಕಾರದಲ್ಲಿದೆ. ವರದಿಯನ್ನು ಶೀಘ್ರವೇ 2023ರಲ್ಲೇ ಬಿಡುಗಡೆ ಮಾಡಬೇಕು. ಈ ವರದಿಯ ಚರ್ಚೆಗೆ ಸರ್ಕಾರ ಅವಕಾಶ ಮಾಡಿಕೊಡಬೇಕು” ಎಂದು ಒತ್ತಾಯಿಸಿದ್ದಾರೆ.

“ಕೆಲವರು, ‘ಹೋಟೆಲ್ ಕೊಠಡಿಯಲ್ಲಿ ಕುಳಿತು ಅಂಕಿ-ಅಂಶ ಸಂಗ್ರಹಿಸಲಾಗಿದೆ’ ಎಂಬ ಬಾಲಿಶ ಹೇಳಿಕೆ ನೀಡುತ್ತಿದ್ದಾರೆ. ರಾಜ್ಯದಾದ್ಯಂತ ಲಕ್ಷಾಂತರ ನೌಕರರು ಮನೆಮನೆಗೆ ತೆರಳಿ ಸಂಗ್ರಹಿಸಿರುವ ಮಾಹಿತಿಯನ್ನು ಹೋಟೆಲ್ ಕೊಠಡಿಯಲ್ಲಿ ಕುಳಿತು ಸಂಗ್ರಹಿಸಲಾಗಿದೆ ಎನ್ನುವುದು ಎಷ್ಟರಮಟ್ಟಿಗೆ ಸರಿ? ಹೋಟೆಲ್ ಕೊಠಡಿಯಲ್ಲಿ ಕುಳಿತು ಮನೆಮನೆಗಳ ಜಾತಿ, ಉದ್ಯೋಗ, ಶಿಕ್ಷಣ, ರಾಜಕೀಯ ಅಧಿಕಾರ, ಸಾಮಾಜಿಕ ಮತ್ತು ಆರ್ಥಿಕ ಅಂಶಗಳನ್ನು ಸಂಗ್ರಹಿಸಲು ಸಾಧ್ಯವೆ? ಒಂದು ವೇಳೆ ಹಾಗೆ ಸಂಗ್ರಹಿಸಿದ್ದರೆ ಅದರ ಸಮಗ್ರ ತನಿಖೆಗೆ ಒತ್ತಾಯಿಸಲಿ. ಒಂದು ಹೋಟೆಲ್ ಕೊಠಡಿಯಲ್ಲಿ ಲಕ್ಷಾಂತರ ಸಮೀಕ್ಷೆದಾರರು ಸೇರಲು ಸಾಧ್ಯವೆ? ಯಾವ ವಿಚಾರವಂತರೂ ಈ ರೀತಿಯ ಮಾತನ್ನು ಆಡುವುದಿಲ್ಲ. ಈ ಮಾತುಗಳು ಸಮೀಕ್ಷೆ ಮಾಡಿರುವ ಆಯೋಗ ಮತ್ತು ನೌಕರರ ಪರಿಶ್ರಮಕ್ಕೆ ಅವಮಾನ ಮಾಡಿದಂತಾಗುವುದಿಲ್ಲವೆ? ಸಾರ್ವಜನಿಕವಾಗಿ ಮಾತನಾಡುವಾಗ ನಾಲಿಗೆಯ ತೆವಲು ತಣಿಸುವ ಮಾತಿಗೆ ಗಮನ ಕೊಡದ ವಿಚಾರವಂತರು ಮೆಚ್ಚುವಂತಿರಬೇಕು ಎಂಬುದನ್ನು ಮನಸೋಇಚ್ಛೆ ಮಾತನಾಡುವವರು ಯೋಚಿಸಬೇಕು” ಎಂದಿದ್ದಾರೆ.

“ದೇಶದ ಅಭಿವೃದ್ಧಿ ಎಂದರೆ ಒಂದೆರಡು ಜಾತಿ-ಜನಾಂಗಗಳ ಅಭಿವೃದ್ಧಿಯಲ್ಲ. ಎಲ್ಲ ಜಾತಿ-ಜನಾಂಗಗಳ ಅಭಿವೃದ್ಧಿ. ಈ ಅಭಿವೃದ್ಧಿಯನ್ನೇ ಎಲ್ಲರನೂ ಒಳಗೊಳ್ಳುವ ಅಭಿವೃದ್ಧಿ ಎನ್ನುವುದು. ಇಂತಹ ಅಭಿವೃದ್ಧಿ ಶೀಘ್ರವೇ ಬರಲಿ ಎಂಬುದು ಸಮಾವೇಶದ ಆಶಯವಾಗಿದೆ” ಎಂದು ಹೇಳಿದ್ದಾರೆ.

ಸಭೆಯಲ್ಲಿ ಪ್ರೊ. ಹೆಚ್. ರಾಚಪ್ಪ, ತೀ.ನ. ಶ್ರೀನಿವಾಸ್, ಪ್ರೊ. ಉಮೇಶ್ ಯಾದವ್, ಪ್ರೊ ಜಿ. ಪರಮೇಶ್ವರಪ್ಪ, ಪ್ರೊ. ಪ್ರಭಾಕರ್, ಪ್ರೊ. ಸಿ.ಬಿ. ಮನೋಹರಕುಮಾರ್, ಬಿ. ಜನಮೇಜಿರಾವ್, ರಾಮಕೃಷ್ಣ ಉರಣಕರ್, ಆರ್.ಟಿ. ನಟರಾಜ್ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...

ಉಡುಪಿ | ಜನರ ಬಳಿಗೇ ಅಧಿಕಾರಿಗಳು ತೆರಳಿ ಸಮಸ್ಯೆ ಪರಿಹರಿಸಬೇಕು: ಗುರುರಾಜ್ ಶೆಟ್ಟಿ ಗಂಟಿಹೊಳೆ

ಪ್ರಜಾಸೇವಾ ಆಂದೋಲನ ಸಭೆಯು ಜನಪರ ಕಾಳಜಿಯ ಕಾರ್ಯಕ್ರಮವಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ...