ಶಿವಮೊಗ್ಗ | ಮೀಲಾದುನ್ನಬಿ ಮೆರವಣಿಗೆಯ ವೇಳೆ ಕಿಡಿಗೇಡಿಗಳಿಂದ ಕಲ್ಲು ತೂರಾಟ; ಪರಿಸ್ಥಿತಿ ಉದ್ವಿಗ್ನ

Date:

Advertisements

ಮೀಲಾದುನ್ನಬಿಯ ಅಂಗವಾಗಿ ಶಿವಮೊಗ್ಗದ ಗಾಂಧಿ ಬಜಾರ್‌ನಲ್ಲಿರುವ ಮಸೀದಿ ಮುಂಭಾಗದಿಂದ ಹೊರಟಿದ್ದ ಮೆರವಣಿಗೆಯ ಮೇಲೆ ಕಿಡಿಗೇಡಿಗಳು ರಾಗಿಗುಡ್ಡ ಎಂಬಲ್ಲಿ ಕಲ್ಲು ತೂರಾಟ ನಡೆಸಿದ ಪರಿಣಾಮ ಉದ್ನಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.

ಮೆರವಣಿಗೆ ಸಂದರ್ಭ ರಾಗಿಗುಡ್ಡದಲ್ಲಿ ಸಂಜೆ ವೇಳೆ ಘಟನೆ ನಡೆದಿದ್ದು, ವಾಹನಗಳು, ಮನೆಗಳು, ಮೇಲೆ ದುಷ್ಕರ್ಮಿಗಳು ಕಲ್ಲು ತೂರಿದ್ದಾರೆ. ಅಲ್ಲದೇ ಸ್ಥಳದಲ್ಲಿ ಬಂದೋಬಸ್ತಿನಲ್ಲಿ ನಿಯೋಜಿತರಾಗಿದ್ದ ಪೊಲೀಸರು, ಮಾಧ್ಯಮದವರ ಮೇಲೂ ಕಲ್ಲು ತೂರಾಟ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

shimoga

ಈ ಹಿನ್ನೆಲೆಯಲ್ಲಿ ರಾಗಿಗುಡ್ಡ ಪ್ರದೇಶದಲ್ಲಿ 144 ಸೆಕ್ಷನ್‌ ಜಾರಿಗೊಳಿಸಲಾಗಿದ್ದು, ಕಲ್ಲು ತೂರಾಟ ಸಂಬಂಧ ಸುಮಾರು ಏಳು ಮಂದಿಯನ್ನು ಪೊಲೀಸರು ಹಲವರನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೇ, ಘಟನೆಯ ವೇಳೆ ಲಘು ಲಾಠಿ ಪ್ರಹಾರ ಕೂಡ ನಡೆದಿದೆ ಎಂದು ವರದಿಯಾಗಿದೆ.

Advertisements

ಪರಿಸ್ಥಿತಿ ಕೈಮೀರುವ ಮುನ್ನ ಶಿವಮೊಗ್ಗ ಜಿಲ್ಲಾಧಿಕಾರಿ ಸೆಲ್ವಮಣಿಯವರು 144 ಸೆಕ್ಷನ್‌ ಜಾರಿಗೊಳಿಸಿ, ನಿಷೇಧಾಜ್ಞೆ ಹೇರಿದ್ದಾರೆ. ಕಲ್ಲು ತೂರಾಟದ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಅವರು ಮೊಕ್ಕಾಂ ಹೂಡಿದ್ದಾರೆ.

shimoga car kallu

ಗಾಂಧಿಬಜಾರ್ ಜಾಮೀಯಾ ಮಸೀದಿಯಿಂದ ಆರಂಭವಾದ ಮೆರವಣಿಗೆಯು ನಾಗಪ್ಪನ ಕೇರಿ, ಲಷ್ಕರ್ ಮೊಹಲ್ಲಾ, ಸಿ.ಆರ್.ಎನ್.ರಸ್ತೆ, ಓಲ್ಡ್ ಬಾರ್ ಲೈನ್, ಪೆನ್ಯನ್ ಮೊಹಲ್ಲಾ, ಬಿ.ಎಚ್.ರಸ್ತೆ, ಮೀನಾಕ್ಷಿ ಭವನ, ಟ್ಯಾಂಕ್ ಮೊಹಲ್ಲಾ, ಟ್ಯಾಂಕ್ ಬಂಡ್ ರಸ್ತೆ, ಬಾಪೂಜಿನಗರ ಮುಖ್ಯರಸ್ತೆ, ಬಾಲರಾಜ್ ಅರಸ್ ರಸ್ತೆ, ಮಹಾವೀರ ವೃತ್ತ, ಸೀನಪ್ಪ ಶೆಟ್ಟಿ ವೃತ್ತ, ನೆಹರು ರಸ್ತೆ, ಅಮೀರ್ ಅಹಮ್ಮದ್ ರಸ್ತೆ, ಬಿ.ಎಚ್.ರಸ್ತೆ, ಅಶೋಕ ವೃತ್ತ, ಎನ್.ಟಿ.ರಸ್ತೆ, ಗುರುದೇವ ರಸ್ತೆ, ಕ್ಲಾರ್ಕ್‌ಪೇಟೆ, ನೂರಾನಿ ಮಸೀದಿ, ಕೆ.ಆರ್.ಪುರಂ ರಸ್ತೆ ಮಾರ್ಗವಾಗಿ ಅಮೀರ್ ಅಹಮ್ಮದ್ ವೃತ್ತ ತಲುಪಬೇಕಿತ್ತು. ಈ ನಡುವೆಯೇ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿರುವುದಾಗಿ ವರದಿಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X