ಶಿವಮೊಗ್ಗ | ವ್ಯಾಪಕವಾಗಿದೆ ಕಡಿಮೆ ಕೂಲಿಗೆ ಕಾರ್ಮಿಕರನ್ನು ದುಡಿಸುವ ದಂಧೆ

Date:

ಕೆಲಸ ಹುಡುಕಿ ಬರುವ ಕೂಲಿ ಕಾರ್ಮಿಕರನ್ನು ಕಡಿಮೆ ಕೂಲಿಗೆ ದುಡಿಸಿಕೊಳ್ಳುವ ದಂಧೆ ಮಲೆನಾಡಿನಲ್ಲಿ ವ್ಯಾಪಕವಾಗಿದೆ. ಕೂಲಿಯಾಳುಗಳ ಅಸಹಾಯಕತೆಯನ್ನು ಬಂಡವಾಳವಾಗಿಸಿಕೊಂಡು ಅವರನ್ನು ವಂಚಿಸಲಾಗುತ್ತಿದೆ.

ಮನೆ, ಜಮೀನು, ಹೋಟೆಲ್‌ ಹಾಗೂ ಇತರೆ ಉದ್ಯಮಗಳಲ್ಲಿ ಬೇಕಾಬಿಟ್ಟಿಯಾಗಿ ಕಾರ್ಮಿಕರಿಂದ ಕೆಲಸ ಮಾಡಿಸಿಕೊಳ್ಳಲಾಗುತ್ತಿದೆ. ಜಮೀನ್ದಾರರ ಮನೆಗಳಲ್ಲಿ ಹೀಗೆ ಬೆವರು ಹರಿಸಿ ದುಡಿಯುತ್ತಿರುವವರಿಗೆ ಅವರ ಶ್ರಮಕ್ಕೆ ತಕ್ಕ ಕೂಲಿ ಸಿಗುತ್ತಿಲ್ಲ ಎಂದು ತಿಳಿದುಬಂದಿದೆ.

ಬಸ್‌, ರೈಲು ನಿಲ್ದಾಣ ಸೇರಿದಂತೆ ಇತರೆ ಸ್ಥಳಗಳಲ್ಲಿ ಅಸಹಾಯಕ ಸ್ಥಿತಿಯಲ್ಲಿರುವ ವ್ಯಕ್ತಿಗಳನ್ನು ಕರೆಯೊಯ್ದು ಸ್ಥಳೀಯ ಮೇಸ್ತ್ರಿ ಬಳಿ ವ್ಯವಹಾರ ಕುದುರಿಸಿ, ಬಿಟ್ಟು ಹೋಗಲಾಗುತ್ತದೆ. ಈಚೆಗೆ ಗುತ್ತಿ ಎಡೇಹಳ್ಳಿ ಗ್ರಾಮದಲ್ಲಿ 19 ಕೂಲಿ ಕಾರ್ಮಿಕರನ್ನು ಬಂಧಮುಕ್ತಗೊಳಿಸಿದ ಪ್ರಕರಣ ಇದಕ್ಕೆ ತಾಜಾ ಉದಾಹರಣೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಹೊಟ್ಟೆ ತುಂಬ ಊಟ, ಹೆಂಡ ನೀಡಿ ಕಾರ್ಮಿಕರನ್ನು ಕೆಲಸಕ್ಕೆ ಬಳಕೆ ಮಾಡಿಕೊಳ್ಳಲಾಗುತ್ತಿದೆ. ಗುತ್ತಿಎಡೇಹಳ್ಳಿ ಗ್ರಾಮದಲ್ಲಿದ್ದ 19 ಕೂಲಿ ಕಾರ್ಮಿಕರೂ 40 ವರ್ಷ ಮೇಲ್ಪಟ್ಟ ಪುರುಷರಾಗಿದ್ದಾರೆ. ಅವರಲ್ಲಿ, ಹೆಚ್ಚಿನವರು ದಾವಣಗೆರೆ, ಚಿಕ್ಕಮಗಳೂರು, ಶಿಕಾರಿಪುರ, ಹಾವೇರಿ, ಭದ್ರಾವತಿ, ಹೊನ್ನಾಳಿಯವಾಗಿದ್ದಾರೆ. ಅಲ್ಲದೆ, ಅವರೊಂದಿಗೆ ಬಿಹಾರ, ಛತ್ತೀಸಗಢ, ಉತ್ತರಪ್ರದೇಶ, ಜಾರ್ಖಂಡ್ ರಾಜ್ಯದವರೂ ಇದ್ದಾರೆ.

ಹಿಂದಿ ಹೊರತಾಗಿ ಬೇರೆ ಭಾಷೆ ತಿಳಿಯದ ಹೊರ ರಾಜ್ಯದವರು ತಮ್ಮ ಕುಟುಂಬ ವರ್ಗದವರನ್ನು ಸಂಪರ್ಕಿಸದಂತೆ ಮೊಬೈಲ್‌ ಫೋನ್‌ ಕೂಡ ಕಿತ್ತುಕೊಳ್ಳಲಾಗುತ್ತದೆ ಎಂದು ನೊಂದವರು ಮಾದ್ಯಮದವರಿಗೆ ಮಾಹಿತಿ ನೀಡಿದ್ದಾರೆ.

ತೀರ್ಥಹಳ್ಳಿ ತಾಲೂಕಿನ ಅನೇಕ ಭಾಗಗಳಲ್ಲಿ ಜಮೀನುಗಳಲ್ಲಿ ದುಡಿಯುವ ಹೊರ ಜಿಲ್ಲೆ, ರಾಜ್ಯಗಳ ದೊಡ್ಡ ಶ್ರಮಿಕ ವರ್ಗವೇ ಇದೆ. ಮನೆ ಕೆಲಸದಿಂದ ಹಿಡಿದು ತೋಟದ ಬೇಸಾಯ, ಗದ್ದೆನಾಟಿ, ಕೊಯ್ಲು, ಗಾರೆ ಕೆಲಸ, ಹೋಟೆಲ್‌, ಲಾಡ್ಜ್‌, ಲೈಟಿಂಗ್‌, ಸೌಂಡ್ಸ್‌, ಜಾನುವಾರು ಸಾಕಾಣಿಕೆ, ತೋಟದ ನಿರ್ವಹಣೆ, ಬೇಕರಿ, ಇಂಡಸ್ಟ್ರೀ, ಕಬ್ಬಿಣ, ಸಿಮೆಂಟ್‌ ಅಂಗಡಿಗಳಲ್ಲಿ ದಿನಗೂಲಿಗೆ ಕೆಲಸ ಮಾಡುತ್ತಿದ್ದಾರೆ. ಕಡಿಮೆ ಕೂಲಿಗೆ ಸಿಗುತ್ತಾರೆ ಎಂಬ ಕಾರಣಕ್ಕೆ ಕಾರ್ಮಿಕರ ಹಿನ್ನೆಲೆ, ದಾಖಲೆಗಳನ್ನು ಕೂಡಾ ಪರಿಶೀಲನೆ ಮಾಡದೇ ಕೆಲಸ ಮಾಡಿಸುತ್ತಿದ್ದಾರೆ ಎಂದು ಸ್ಥಳೀಯರು ಆರೋಪಿಸುತ್ತಾರೆ.

ಗ್ರಾಮೀಣ ಹಾಗೂ ಪಟ್ಟಣದಲ್ಲಿ ದಿನಗೂಲಿಗೆ ಬರುವ ಅನ್ಯ ರಾಜ್ಯ, ಜಿಲ್ಲೆಗಳ ಕಾರ್ಮಿಕರಿಗೆ ಗುರುತಿನ ಚೀಟಿ ನೀಡುವುದಿಲ್ಲ. ಅನೇಕ ಕಡೆಗಳಲ್ಲಿ ಕಾರ್ಮಿಕರ ಮೂಲವನ್ನು ಬಚ್ಚಿಡಲಾಗುತ್ತದೆ. ಗ್ರಾಮೀಣ ಭಾಗದಲ್ಲಿ ಕೂಲಿಯಾಳುಗಳಿಗೆ ಹೆಂಡದ ಆಮಿಷ ತೋರಿಸಿ ಹೆಚ್ಚು ಕೆಲಸ ಮಾಡಿಸಿಕೊಳ್ಳಲಾಗುತ್ತದೆ ಎನ್ನುತ್ತಿದ್ದಾರೆ ಜಿಲ್ಲೆಯ ಸಾರ್ವಜನಿಕರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‌ರಾಯಚೂರು | ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಸ್ಪರ್ಧೆ: ಬಿ.ವಿ ನಾಯಕ

ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ರಾಯಚೂರು ಕ್ಷೇತ್ರದಲ್ಲಿ ಸ್ಪರ್ಧಿಸಲು ನಾನು ಆಕಾಂಕ್ಷಿಯಾಗಿದ್ದೇನೆ....

ತುಮಕೂರು | ಕಲೆಯ ಗ್ರಹಿಕೆ ಮೇಲೆ ನಿರ್ಬಂಧ ಹೇರುವುದು ಅಪಾಯಕಾರಿ: ವಿಮರ್ಶಕ ರಾಘವೇಂದ್ರರಾವ್

ಕಲೆಯ ಗ್ರಹಿಕೆ ಮೇಲೆ ನಿರ್ಬಂಧಗಳನ್ನು ಹೇರುವುದು ಅಪಾಯಕಾರಿಯಾಗಿದೆ. ಗ್ರಹಿಕೆಯು ನಿಯಮಬದ್ಧವಾಗಿದ್ದರೂ ನಿರ್ಬಂಧ...

ಗದಗ | ಪ್ರತಿಯೊಬ್ಬರಿಗೂ ಮುಖ್ಯವಾದ ಸಂಪತ್ತು ಆರೋಗ್ಯ; ಎಂಎಲ್‌ಸಿ ಸಂಕನೂರ

ಪ್ರತಿಯೊಬ್ಬರಿಗೂ ಆರೋಗ್ಯ ಸಂಪತ್ತು ಮುಖ್ಯವಾದ ಸಂಪತ್ತಾಗಿದೆ. ನೌಕರರು ತಮ್ಮ ಆರೋಗ್ಯ ಸಂರಕ್ಷಣೆಗೆ...

ತುಮಕೂರಿನಲ್ಲಿ ನೊಳಂಬ ಲಿಂಗಾಯತರಿಗೆ ಟಿಕೆಟ್ ನೀಡುವಂತೆ ಸ್ವಾಮೀಜಿಗಳ ಒತ್ತಾಯ

ಮುಂದಿನ ಲೋಕಸಭಾ ಚುನಾವಣೆಗೆ ತುಮಕೂರು ಕ್ಷೇತ್ರದಲ್ಲಿ ನೊಳಂಬ ಲಿಂಗಾಯತರಿಗೆ ಟಿಕೆಟ್ ಕೊಡುವಂತೆ...