ಶಿವಮೊಗ್ಗ | ಅನುಮಾನಾಸ್ಪದ ಬಾಕ್ಸ್‌ನಲ್ಲಿದ್ದದ್ದು ಅಡಿಗೆ ಉಪ್ಪು; ಎಸ್‌ಪಿ ಸ್ಪಷ್ಟನೆ

Date:

ಶಿವಮೊಗ್ಗ ರೈಲ್ವೆ ನಿಲ್ದಾಣದ ಬಳಿ ಪತ್ತೆಯಾದ ಪೆಟ್ಟಿಗೆಯಲ್ಲಿ ಇದ್ದದ್ದು ಅಡಿಗೆ ಉಪ್ಪು ಮತ್ತು ಕೆಲವು ತ್ಯಾಜ್ಯ ವಸ್ತುಗಳು ಎಂಬುದು ಖಚಿತವಾಗಿದೆ. ಆ ಬಗ್ಗೆ ಖಚಿತಪಡಿಸಿಕೊಂಡ ಬಳಿಕ ಅದನ್ನು ಸ್ಪೋಟಿಸಲಾಗಿದೆ ಎಂದು ಶಿವಮೊಗ್ಗ ಎಸ್‌ಪಿ ಮಿಥುನ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ನವೆಂಬರ್ ೦3ರ ರಾತ್ರಿ ಸುಮಾರು 12:30ಕ್ಕೆ ವಾಹನದಲ್ಲಿ ಇಬ್ಬರು ಬಂದಿರುವುದು ಸಿಸಿಟಿವಿಯಲ್ಲಿ ದಾಖಲಾಗಿತ್ತು. ಆ ಇಬ್ಬರನ್ನು ಪತ್ತೆ ಹಚ್ಚಲಾಗಿದೆ. ಮೇಲ್ನೋಟಕ್ಕೆ ಕ್ರಿಮಿನಲ್ ಹಿನ್ನೆಲೆ ಅನಿಸುತ್ತಿದ್ದು, ಮತ್ತಷ್ಟು ತನಿಖೆಮಾಡಿ ತಿಳಿಸುತ್ತೇವೆ ಎಂದು ಅವರು ಹೇಳಿದ್ದಾರೆ.

ರೈಲ್ವೆ ನಿಲ್ದಾಣದ ಪಾರ್ಕಿಂಗ್ ಸ್ಥಳದಲ್ಲಿ ಎರಡು ಅನುಮಾನಾಸ್ಪದ ಬಾಕ್ಸ್ ಪತ್ತೆಯಾಗಿದ್ದು ಆತಂಕಕ್ಕೆ ಕಾರಣವಾಗಿತ್ತು. ಈ ಹಿನ್ನೆಲೆ ಬೆಂಗಳೂರಿನಿಂದ ಬಾಂಬ್‌ ನಿಷ್ಕ್ರಿಯ ದಳ ಸ್ಥಳಕ್ಕೆ ಆಗಮಿಸಿತ್ತು. ಹಲವು ಬಾರಿ ಪ್ರಯತ್ನಿಸಿದರೂ ಬಾಕ್ಸ್‌ ತೆರೆಯಲು ಸಾಧ್ಯವಾಗಿರಲಿಲ್ಲ. ಈ ಹಿನ್ನೆಲೆ ಸ್ಪೋಟಕ ಅಳವಡಿಸಿ ರಾತ್ರಿ 2.40ಕ್ಕೆ ಸ್ಪೋಟಿಸಿ ಒಂದು ಬಾಕ್ಸ್‌ನ ಬೀಗ ತೆರೆಯಲಾಗಿತ್ತು. ಅದರಲ್ಲಿ ಕೆಲವು ಪತ್ರಿಕೆಗಳು, ಬಿಳಿ ಬಣ್ಣದ ಪುಡಿ ಇರುವ ಪ್ಯಾಕೆಟ್‌ ದೊರಕಿತ್ತು. ರಾತ್ರಿ 3.24ಕ್ಕೆ ಮತ್ತೊಂದು ಬಾಕ್ಸ್ ತೆರೆದಾಗ, ಅದರಲ್ಲಿಯು ಪತ್ರಿಕೆ ಮತ್ತು ಬಿಳಿ ಬಣ್ಣದ ಪುಡಿ ಪತ್ತೆಯಾಗಿತ್ತು. ಪೆಟ್ಟಿಗೆ ಮತ್ತು ಬಿಳಿ ಬಣ್ಣದ ಪೌಡರ್‌ ಇರುವ ಚೀಲಗಳನ್ನು ಬಾಂಬ್‌ ನಿಷ್ಕ್ರಿಯ ದಳ ವಶಕ್ಕೆ ಪಡೆದು ಅವುಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ರವಾನಿಸಿತ್ತು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಮಳೆ ಹೆಚ್ಚಾಗಿದ್ದ ಕಾರಣ ಸ್ವಲ್ಪ ಸಮಯ ಕಾರ್ಯಾಚರಣೆ ವಿಳಂಬವಾಗಿದ್ದು, ಪುನಃ ಕಾರ್ಯಾಚರಣೆ ಪ್ರಾರಂಭವಾಗಿತ್ತು. ಗೋಣಿ ಚೀಲದಿಂದ ಸುತ್ತಿರುವ ಕಬ್ಬಿಣದ ಬಾಕ್ಸ್ ಗಳ ಮೇಲೆ ಮೇಡ್ ಇನ್ ಬಾಂಗ್ಲಾದೇಶ, ಫುಡ್ ಗ್ರೇನ್ಸ್ ಎಂದು ಬರೆಯಲಾಗಿದೆ. ಸರ್ವಮಂಗಳ ಎಂಬ ಹೆಸರು ಬರೆದು ಸ್ಟಾಂಡ್ ರೋಡ್, ಕೋಲ್ಕತ್ತ ಎಂಬ ವಿಳಾಸ ಇತ್ತು. ತಪಾಸಣೆ ವೇಳೆ ಎಲ್ಲ ಸುರಕ್ಷತಾ ಕ್ರಮಗಳನ್ನು ಅನುಸರಿಸಲಾಗಿದೆ ಎಂದು ಎಸ್‌ಪಿ ತಿಳಿಸಿದ್ದಾರೆ.

ಇನ್ನು ಬಾಕ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸಿಸಿಟಿವಿ ಪರಿಶೀಲನೆ ನಡೆಸಿದ್ದು, ಅನುಮಾನಾಸ್ಪದವಾಗಿ ಕಾರು ಬಂದಿರುವುದು ಪತ್ತೆಯಾಗಿದೆ. ಕಾರಿನ ನಂಬರ್ ಆಧರಿಸಿ ಪೊಲೀಸ್ ಇಲಾಖೆ ತನಿಖೆ ಆರಂಭಿಸಿದೆ. ತಿಪಟೂರಿನಲ್ಲಿ ವ್ಯಕ್ತಿಯೊಬ್ಬನ ವಿಚಾರಣೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಶಿವಮೊಗ್ಗದಲ್ಲಿ ಮತ್ತೊಬ್ಬನ ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಇಡಿಯ ಪ್ರದೇಶದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಇಂಧನ ಬೆಲೆ ಏರಿಕೆ ಖಂಡಿಸಿ ಎಸ್‌ಯುಸಿಐ ಪ್ರತಿಭಟನೆ

ಪೆಟ್ರೋಲ್, ಡಿಸೇಲ್ ದರ ಏರಿಕೆ ವಿರೋಧಿಸಿ ವಿಜಯಪುರದಲ್ಲಿ ಎಸ್‌ಯುಸಿಐ ಕಾರ್ಯಕರ್ತರು ಪ್ರತಿಭಟನೆ...

ಹಾವೇರಿ | ಬಸ್ ನಿಲುಗಡೆಗೆ ಒತ್ತಾಯಿಸಿ ವಿದ್ಯಾರ್ಥಿನಿಯರಿಂದ ದಿಢೀರ್ ಪ್ರತಿಭಟನೆ

ಶ್ರೀಕಂಠಪ್ಪ ಬಡಾವಣೆಯ ಬಳಿ ಕೆಎಸ್‌ಆರ್‌ಟಿಸಿ ಬಸ್‌ಗಳ ನಿಲುಗಡೆಗಾಗಿ ಆಗ್ರಹಿಸಿ ಹಾವೇರಿ ನಗರದ ಹೊರವಲಯದ...

ಧಾರವಾಡ | ಕಲ್ಲು ಕ್ವಾರಿಯ ನೀರಿನಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ಸಾವು

ಮೊಬೈಲ್‌ನಲ್ಲಿ ರೀಲ್ಸ್‌ ಮಾಡುತ್ತಿದ್ದ ಇಬ್ಬರು ವಿದ್ಯಾರ್ಥಿಗಳು ನೀರು ತುಂಬಿದ್ದ ಕಲ್ಲು ಕ್ವಾರಿಗೆ...