ಶಿರಾಳಕೊಪ್ಪ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಗೊಳಿಸಲು ಆಗ್ರಹಿಸಿ ಪ್ರತಿಭಟನೆ

Date:

ಮತಗಳ್ಳತನದ ರೂವಾರಿ, ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಗೊಳಿಸಲು, SIR ರದ್ದುಗೊಳಿಸುವಂತೆ ಹಾಗೂ ಶಾಂತಿಯುತ ಪ್ರತಿಭಟನಾ ನಿರತರ ಮೇಲೆ ದೆಹಲಿ ಪೊಲೀಸರ ಗೂಂಡಾಗಿರಿಯನ್ನು ಖಂಡಿಸಿ ಶಿವಮೊಗ್ಗ ಜಿಲ್ಲೆಯ ಶಿರಾಳಕೊಪ್ಪದಲ್ಲಿ ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಮತ್ತು ಎಸ್ ಐ ಓ ವತಿಯಿಂದ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು.

- Advertisement -

ಸೋಲಿಡಾರಿಟಿ ಯೂತ್ ಮೂವ್ಮೆಂಟ್ ರಾಜ್ಯ ಮಾಧ್ಯಮ ಕಾರ್ಯದರ್ಶಿ ಇರ್ಷಾದ್ ವೇಣೂರು ಪ್ರತಿಭಟನೆ ಮಾತನಾಡುತ್ತಾ,ಭಾರತೀಯ ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ಈ ಹಿಂದೆ ಇದ್ದ ಅನುಮಾನಗಳೆಲ್ಲವೂ ಆಧಾರರಹಿತವಲ್ಲ ಎಂಬುದನ್ನು 23.09.2026ರ ಇಂಡಿಯನ್ ಎಕ್ಸ್‌ಪ್ರೆಸ್ ವರದಿಯು ದೇಶಾದ್ಯಂತ ಸಂಚಲನ ಮೂಡಿಸಿದೆ. ಈ ಹಿನ್ನೆಲೆಯಲ್ಲಿ ರಾಷ್ಟ್ರಪತಿಯವರು ಕೂಡಲೇ ಮಧ್ಯಪ್ರವೇಶಿಸಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಕೂಡಲೇ ಹುದ್ದೆಯಿಂದ ವಜಾಗೊಳಿಸಬೇಕು ಹಾಗೂ ಎಸ್‌ಐಆರ್ ಪ್ರಕ್ರಿಯೆಯನ್ನೇ ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರದಲ್ಲಿ ಜಿ.ಪಂ ತಾ.ಪಂ ಚುನಾವಣೆಯ ಕಾವು; AI ಪೋಸ್ಟರ್‌ಗಳಲ್ಲೂ...

ಚುನಾವಣೆಯ ದಿನಾಂಕ ಇನ್ನೂ ಪ್ರಕಟವಾಗಿಲ್ಲ. ಅಭ್ಯರ್ಥಿಗಳ ಅಂತಿಮ ಪಟ್ಟಿಯೂ ಸಿದ್ಧವಾಗಿಲ್ಲ. ಆದರೆ, ಗ್ರಾಮೀಣ ರಾಜಕಾರಣದಲ್ಲಿ ಮಾತ್ರ ಈಗಾಗಲೇ ಚುನಾವಣೆಯ ಕಾವು ಏರತೊಡಗಿದೆ. ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ...

ಸ್ಟಿಂಗ್ ಆರೋಪದ ಸುತ್ತ ರಾಜಕೀಯ ಲೆಕ್ಕಾಚಾರ; ಸತ್ಯಾಸತ್ಯತೆ ಹೊಣೆಗಾರಿಕೆಯ...

ಸಿದ್ದರಾಮಯ್ಯ ಅವರ ನಿರಾಕರಣೆ, ಕುಮಾರಸ್ವಾಮಿ ಅವರ ಆರೋಪಗಳು, ಆರ್. ಅಶೋಕ್ ಅವರ ಹಣಕಾಸಿನ ಕುರಿತ ಹೇಳಿಕೆಗಳು ಮತ್ತು ಸರ್ಕಾರದ ತನಿಖೆಯ ಭರವಸೆ—ಇವೆಲ್ಲವೂ ಪ್ರಕರಣದ ವಿವಿಧ ಆಯಾಮಗಳನ್ನು ಪ್ರತಿನಿಧಿಸುತ್ತವೆ. ಆದರೆ ಇವುಗಳಲ್ಲಿ ಯಾವುದೂ ಸ್ವತಃ...

ಬಾಲಿವುಡ್‌ ಮೇಲೆ ಭೂಗತ ಲೋಕದ ಕರಿನೆರಳು: ದಾವೂದ್ ಇಬ್ರಾಹಿಂನಿಂದ...

ಒಂದು ಕಾಲದಲ್ಲಿ ಬಾಲಿವುಡ್ ಸಿನಿಮಾಗಳಿಗೆ ಹಣ ಹೂಡುತ್ತಿದ್ದ, ನಟ-ನಟಿಯರ ವೃತ್ತಿಜೀವನದ ಮೇಲೆ ಪ್ರಭಾವ ಬೀರುತ್ತಿದ್ದ ಭೂಗತ ಲೋಕ, ಈಗ ಗುಂಡಿನ ದಾಳಿ ಮತ್ತು ಜೀವಬೆದರಿಕೆಗಳ ಮೂಲಕ ಮತ್ತೊಮ್ಮೆ ತನ್ನ ಅಸ್ತಿತ್ವ ಪ್ರದರ್ಶಿಸುತ್ತಿದೆ. ದಾವೂದ್...
660252

ಎಸ್‌ಐಆರ್ ಒಂದು ಮನಬಂದಂತೆ ರೂಪಿಸಲಾದ, ಅಸಾಂವಿಧಾನಿಕ ಮತದಾನದ ಹಕ್ಕು ಕಸಿಯುವ ಕ್ರಮ ಮಾತ್ರವಲ್ಲ; ಇದನ್ನು ಕಾನೂನುಬದ್ಧ ಅಧಿಕಾರವಿಲ್ಲದೆ ಜಾರಿಗೊಳಿಸಲಾಗಿದೆ ಎಂದು ತಿಳಿಸಿದರು. ಸಂವಿಧಾನಬದ್ಧವಾಗಿ ಕೆಲಸ ಮಾಡಬೇಕಿದ್ದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ಎಸ್‌ಐಆರ್ ನಡೆಸಲು ಅನುಮೋದಿಸಿರುವುದು ಯಾರ ಅಣತಿಯಂತೆ ಎಂಬುದನ್ನು ತನಿಖೆ ನಡೆಸಿದರಷ್ಟೇ ತಿಳಿಯಬಹುದು. ಹಾಗಾಗಿ, ರಾಷ್ಟ್ರಪತಿಯವರು ಕೂಡಲೇ ಮಧ್ಯಪ್ರವೇಶಿಸಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಕೂಡಲೇ ಹುದ್ದೆಯಿಂದ ವಜಾಗೊಳಿಸಿ, ವಿಚಾರಣೆ ಎದುರಿಸಲು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ.

660251

SIR ಪ್ರಾರಂಭವಾಗುವ ಮೊದಲು ಇದ್ದ ಮತದಾರರ ಪಟ್ಟಿಗಳನ್ನೇ ಮರುಸ್ಥಾಪಿಸಬೇಕು. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ತಕ್ಷಣ ರಾಜೀನಾಮೆ ನೀಡಬೇಕು. ಅವರು ರಾಜೀನಾಮೆ ನೀಡದಿದ್ದರೆ, ಅವರ ವಿರುದ್ಧ ತಕ್ಷಣ ಮಹಾಭಿಯೋಗ ಪ್ರಕ್ರಿಯೆ ಆರಂಭಿಸಬೇಕು. ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿಯವರ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿಯನ್ನು ರಚಿಸಿ, ಸ್ವತಂತ್ರ ತನಿಖೆ ನಡೆಸಬೇಕು. ಅಕ್ರಮದ ವಿರುದ್ಧ ದೇಶದ ನಾಗರಿಕರು ಒಂದಾಗಿ ಹೋರಾಟ ನಡೆಸುವ ಮೂಲಕ ಪ್ರಜಾಪ್ರಭುತ್ವ ಅನುಸರಿಸುವ ನಮ್ಮ ದೇಶವನ್ನು ಕಾಪಾಡಬೇಕು ಎಂದು ತಿಳಿಸಿದರು.‌

ಈ ಸಂದರ್ಭದಲ್ಲಿ ರಾಷ್ಟ್ರಪತಿಯವರಿಗೆ ಉಪತಹಶೀಲ್ದಾರ್ ಅವರ ಮೂಲಕ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಸೋಲಿಡಾರಿಟಿ ಶಿರಾಳಕೊಪ್ಪದ ಮುಖಂಡರಾದ ನಿಝಾಮುದ್ದೀನ್, ರಿಯಾಝ್ ಅಹ್ಮದ್, ಆಸಿಫ್ ಗುಂಡು, ಅಬ್ರಾರ್, ಶಫಿ ಶಿರಾಳಕೊಪ್ಪ, ಆಬಿದ್ ಸಲೀಂ, ಜೋಹರ್ ಅಲಿ, ತನ್ವೀರ್ ಅಹ್ಮದ್, ರಫೀಕ್ ಮುಬೀನ್, ಎಸ್ ಐ ಓ ಮುಖಂಡರಾದ ಲುಕ್ಮಾನ್, ಫಸೀವುದ್ದೀನ್, ಸಿದ್ದೀಕ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರದಲ್ಲಿ ಜಿ.ಪಂ ತಾ.ಪಂ ಚುನಾವಣೆಯ ಕಾವು; AI ಪೋಸ್ಟರ್‌ಗಳಲ್ಲೂ ಆಕಾಂಕ್ಷಿಗಳ ಅಬ್ಬರ!

ಚುನಾವಣೆಯ ದಿನಾಂಕ ಇನ್ನೂ ಪ್ರಕಟವಾಗಿಲ್ಲ. ಅಭ್ಯರ್ಥಿಗಳ ಅಂತಿಮ ಪಟ್ಟಿಯೂ ಸಿದ್ಧವಾಗಿಲ್ಲ. ಆದರೆ,...

ಕನ್ನಡಿಗರಲ್ಲಿ ಸಾವಿರ ಬಾರಿ ಕ್ಷಮೆ ಕೇಳಲೂ ಸಿದ್ಧ: ಸೋನು ನಿಗಮ್‌

ಪಹಲ್ಗಾಮ್‌ ಉಗ್ರರ ದಾಳಿ ಕುರಿತು ನೀಡಿದ್ದ ವಿವಾದಾತ್ಮಕ ಹೇಳಿಕೆಯ ಹಿನ್ನೆಲೆಯಲ್ಲಿ ಕನ್ನಡಿಗರ...

ಅಮೆರಿಕದ ಸರ್ಕಾರಿ ಐಟಿ ವ್ಯವಸ್ಥೆಗಳಲ್ಲಿ ಚೀನಾದ ಎಐ ‘ಡೀಪ್‌ಸೀಕ್’ ಬಳಕೆಗೆ ನಿಷೇಧ

ಅಮೆರಿಕದ ನಾಗರಿಕ ಸರ್ಕಾರಿ ಏಜೆನ್ಸಿಗಳ ಐಟಿ ವ್ಯವಸ್ಥೆಗಳಿಂದ ಚೀನಾ ಮೂಲದ ಕೃತಕ...

ಟೈಗರ್ ಶ್ರಾಫ್ ಫೈರಿಂಗ್ ಪ್ರಕರಣ: 34 ಸಾವಿರಕ್ಕೆ ಸುಪಾರಿ, ವಿದೇಶಿ ಉದ್ಯೋಗದ ಆಮಿಷ!

ಬಾಲಿವುಡ್‌ ನಟ ಟೈಗರ್ ಶ್ರಾಫ್‌ ಫೈರಿಂಗ್‌ ಪ್ರಕರಣದ ತನಿಖೆಯಲ್ಲಿ ಹೊಸ ಸಂಗತಿಗಳು...