ನವೆಂಬರ್ 21ರಿಂದ ಶಿವಮೊಗ್ಗ ವಿಮಾನ ನಿಲ್ದಾಣದಿಂದ ವಿಮಾನ ಹಾರಾಟ ಸ್ಥಗಿತ ಸಾಧ್ಯತೆ!

Date:

ಶಿವಮೊಗ್ಗ ವಿಮಾನ ನಿಲ್ದಾಣದಿಂದ ವಿಮಾನಯಾನ ಸೇವೆ ಸ್ಥಗಿತಗೊಳ್ಳುವ ಆತಂಕ ಎದುರಾಗಿದೆ. ವಿಮಾನಗಳ ಹಾರಾಟ ಆರಂಭವಾಗಲು ಕನಿಷ್ಠ ಮೂರು ತಿಂಗಳ ಕಾಲಾವಕಾಶ ಬೇಕಾಗಬಹುದು ಎಂದು ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ನಂಜನಯ್ಯನಮಠ್ ತಿಳಿಸಿದ್ದಾರೆ.

- Advertisement -

ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಉಡಾನ್ ಯೋಜನೆಯ ಅವಧಿ 2026ಕ್ಕೆ ಮುಕ್ತಾಯಗೊಂಡಿರುವ ಹಿನ್ನೆಲೆಯಲ್ಲಿ ವಿಮಾನಯಾನ ಸೇವೆ ಮುಂದುವರಿಸುವ ಕುರಿತು ಕೇಂದ್ರದ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಲಾಗಿದೆ. ತಾವು ಕೂಡ ದೆಹಲಿಗೆ ತೆರಳಿ ಮನವಿ ಸಲ್ಲಿಸಿದ್ದು, ಸಂಸದ ಬಿ.ವೈ. ರಾಘವೇಂದ್ರ ಅವರೊಂದಿಗೂ ಚರ್ಚಿಸಲಾಗಿದೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಎಸ್‌ಐಆರ್‌ | ಪ್ರಜಾಪ್ರಭುತ್ವದ ಕಾವಲುಗಾರನಿಗೆ ʼಕನ್ನಡಕʼ ಬೇಕಿದೆ…

ತನ್ನ ನಿಷ್ಪಕ್ಷಪಾತ ಧೋರಣೆಯಿಂದಾಗಿ ಅತ್ಯುನ್ನತ ಗೌರವಕ್ಕೆ ಪಾತ್ರವಾಗಿದ್ದ ಚುನಾವಣೆ ಅಯೋಗ ಇಂದು ತನ್ನ ನಿಷ್ಪಕ್ಷಪಾತತೆಯನ್ನೇ ಜನ ಪರೀಕ್ಷೆಗೆ ಒಡ್ಡಿಕೊಂಡಿದೆ. ಆಯೋಗದ ನಿರ್ಣಯಗಳನ್ನು ಅನುಮಾನಿಸಿ ಬೀದಿ ಹೋರಾಟಗಳು, ಹರತಾಳಗಳು ಭುಗಿಲೆದ್ದಿವೆ. ಇಷ್ಟಕ್ಕೆ, ನಿಲ್ಲದೆ ಮುಖ್ಯ...

ಟ್ರಂಪ್‌ಗೆ ಮುಖಭಂಗ, ಯುರೋಪಿನಲ್ಲಿ ಆತಂಕ; ಜಗತ್ತಿನಲ್ಲಿ ಬದಲಾಗುತ್ತಿರುವ ಬಲಪಂಥೀಯ...

2026ರ ಅಮೆರಿಕ ಮತ್ತು ಬ್ರೆಜಿಲ್‌ನ ಚುನಾವಣಾ ಫಲಿತಾಂಶಗಳು ಜಾಗತಿಕ ಮಟ್ಟದಲ್ಲಿ ರಾಜಕೀಯ ಒಲವಿನ ಬದಲಾವಣೆಯನ್ನು ದೃಢಪಡಿಸಿವೆ. ಡೆಮಾಕ್ರಟರು ಸಾಧಿಸಿದ 255 ಹೌಸ್ ಮತ್ತು 54 ಸೆನೆಟ್ ಸ್ಥಾನಗಳ ಜಯ, ಹಾಗೂ ಬ್ರೆಜಿಲ್‌ನಲ್ಲಿನ ಅಧಿಕಾರ...

ಹೆಣ್ಣು-ಹಣ-ಚಾರಣ ಹಗರಣ: ಜಾಗತಿಕ ಚಿಪ್ ಸಾಮ್ರಾಜ್ಯದಲ್ಲಿ ಅಲ್ಲೋಲ ಕಲ್ಲೋಲ...

ಚಿಪ್ ಸಾಮ್ರಾಜ್ಯದ ಸಿಇಒ ಸುತ್ತ ಹೆಣೆದುಕೊಂಡಿರುವ ವಿವಾಹೇತರ ಸಂಬಂಧ, ಚೀನಿ ಚಾರಣ ಜಾಲ ಮತ್ತು ಭದ್ರತಾ ಆರೋಪಗಳು ಜಾಗತಿಕ ಮಾರುಕಟ್ಟೆಯನ್ನು ಅಲ್ಲೋಲ ಕಲ್ಲೋಲಗೊಳಿಸಿವೆ. ತಂತ್ರಜ್ಞಾನ ದೈತ್ಯರ ಒಳಸುಳಿಗಳೇನು? ಭಾರತದ ಡಿಜಿಟಲ್ ಹಾಗೂ ಸೆಮಿಕಂಡಕ್ಟರ್...
Aeroplane

ಶಿವಮೊಗ್ಗದಿಂದ ವಿಮಾನಯಾನ ಸೇವೆ ಪುನರಾರಂಭಿಸಲು ಉಡಾನ್ ಯೋಜನೆಯನ್ನು ಮತ್ತೆ ಜಾರಿಗೊಳಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಅಗತ್ಯ ಪ್ರಕ್ರಿಯೆಗಳು ಪೂರ್ಣಗೊಂಡು ವಿಮಾನಗಳ ಹಾರಾಟ ಆರಂಭವಾಗಲು ಅಂದಾಜು ಮೂರು ತಿಂಗಳು ಬೇಕಾಗಬಹುದು ಎಂದರು. ಶಿವಮೊಗ್ಗ ವಿಮಾನ ನಿಲ್ದಾಣವು 4C ಕೆಟಗರಿಗೆ ಸೇರಿದ್ದು, ಏರ್‌ಬಸ್ A320 ಮಾದರಿಯ ವಿಮಾನಗಳ ಹಾರಾಟಕ್ಕೂ ಸಾಮರ್ಥ್ಯ ಹೊಂದಿದೆ.

ಪ್ರಸ್ತುತ ಸ್ಟಾರ್ ಏರ್ ಸಂಸ್ಥೆಯು ಉಡಾನ್ ಯೋಜನೆಯಡಿ ದೊರೆಯುತ್ತಿದ್ದ ವಯಬಿಲಿಟಿ ಗ್ಯಾಪ್ ಫಂಡಿಂಗ್ (VGF) ನೆರವಿನೊಂದಿಗೆ ಶಿವಮೊಗ್ಗದಿಂದ ತಿರುಪತಿ, ಹೈದರಾಬಾದ್ ಹಾಗೂ ಗೋವಾಕ್ಕೆ ವಿಮಾನಯಾನ ಸೇವೆ ಒದಗಿಸುತ್ತಿದೆ. ಆದರೆ, ಈ ಆರ್ಥಿಕ ನೆರವಿನ ಅವಧಿ ಮುಕ್ತಾಯಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ನವೆಂಬರ್ 21, 2026ರಿಂದ ವಿಮಾನಯಾನ ಸೇವೆಗಳನ್ನು ಸ್ಥಗಿತಗೊಳಿಸಲು ಸ್ಟಾರ್ ಏರ್ ಸಂಸ್ಥೆ ಉದ್ದೇಶಿಸಿದೆ.

ಈ ಹಿಂದೆ ಇಂಡಿಗೋ ಸಂಸ್ಥೆ ನಿರ್ವಹಿಸುತ್ತಿದ್ದ ಬೆಂಗಳೂರು-ಶಿವಮೊಗ್ಗ ವಿಮಾನಯಾನ ಸೇವೆಯೂ ಸ್ಥಗಿತಗೊಂಡಿತ್ತು. ಈ ಮಾರ್ಗದಲ್ಲಿ ಶೇ.75ಕ್ಕಿಂತ ಹೆಚ್ಚು ಪ್ರಯಾಣಿಕರ ಭರ್ತಿ ಇದ್ದರೂ ಕಾರ್ಯಾಚರಣೆಗೆ ಸಂಬಂಧಿಸಿದ ಸಮಸ್ಯೆಗಳು ಹಾಗೂ VGF ನೆರವಿನ ಕೊರತೆಯಿಂದ ಸೇವೆ ಸ್ಥಗಿತಗೊಂಡಿದೆ ಎಂದು ರಾಜ್ಯ ಸರ್ಕಾರ ಕೇಂದ್ರಕ್ಕೆ ಸಲ್ಲಿಸಿರುವ ಪತ್ರದಲ್ಲಿ ಉಲ್ಲೇಖಿಸಿದೆ.

ಒಟ್ಟಾರೆ, ಸ್ಟಾರ್ ಏರ್ ಸೇವೆಯೂ ಸ್ಥಗಿತಗೊಂಡರೆ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ನಿಗದಿತ ವಾಣಿಜ್ಯ ವಿಮಾನಗಳ ಹಾರಾಟವೇ ಇಲ್ಲದಂತಾಗುವ ಆತಂಕ ಎದುರಾಗಿದೆ. ವಿಮಾನ ನಿಲ್ದಾಣದ ಭವಿಷ್ಯ ಹಾಗೂ ವಿಮಾನಯಾನ ಸೇವೆಯ ಪುನರಾರಂಭ ಕೇಂದ್ರ ಸರ್ಕಾರದ ನಿರ್ಧಾರದ ಮೇಲೆ ಅವಲಂಬಿತವಾಗಿದೆ.

+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಿರಿಯೂರು ಉಪಚುನಾವಣೆ- ಕಾಂಗ್ರೆಸ್ ವಿರುದ್ಧ NDA ಅಭ್ಯರ್ಥಿ ಹೂಡಲು ಕುಮಾರಸ್ವಾಮಿ ಒಲವು

ರಾಜ್ಯ ರಾಜಕೀಯದಲ್ಲಿ ಭಾರಿ ಕುತೂಹಲ ಕೆರಳಿಸಿರುವ ಚಿತ್ರದುರ್ಗದ ಹಿರಿಯೂರು ವಿಧಾನಸಭಾ ಕ್ಷೇತ್ರದ...

ಜಮ್ಮು-ಕಾಶ್ಮೀರ | ನಾಪತ್ತೆಯಾಗಿದ್ದ ಇಬ್ಬರು ಪೊಲೀಸರು ಶವವಾಗಿ ಪತ್ತೆ!

ಜಮ್ಮು-ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯ ದಚ್ಚನ್‌ನ ಎತ್ತರದ ಅರಣ್ಯ ಪ್ರದೇಶದಲ್ಲಿ ಬುಧವಾರ ನಾಪತ್ತೆಯಾಗಿದ್ದ...

ಕೇಂದ್ರದ ಸ್ವಚ್ಛ ಸರ್ವೇಕ್ಷಣಾ ಪ್ರಶಸ್ತಿ 2025-26: ನವಿ ಮುಂಬೈ ದೇಶದ ಅತ್ಯಂತ ಸ್ವಚ್ಛ ನಗರ!

ಕೇಂದ್ರ ಗೃಹ ಮತ್ತು ನಗರ ವ್ಯವಹಾರಗಳ ಸಚಿವಾಲಯ ನೀಡುವ ವಾರ್ಷಿಕ 'ಸ್ವಚ್ಛ...

ಪಶ್ಚಿಮ‌ ಬಂಗಾಳದಲ್ಲಿ ಸುವೇಂದು- ಅಭಿಷೇಕ್ ಕಲಹ ತಾರಕಕ್ಕೆ

ಪಶ್ಚಿಮ ಬಂಗಾಳದ ರಾಜಕಾರಣದಲ್ಲಿ ದಿನಕ್ಕೊಂದು ತಿರುವು ಪಡೆಯುತ್ತಿರುವ ರಾಜಕೀಯ ಬೆಳವಣಿಗೆಗಳಲ್ಲಿ, ಸಿಎಂ...