ಶಿವಮೊಗ್ಗ | ಕಾರಾಗೃಹದ ಆವರಣಕ್ಕೆ ನಿಷೇಧಿತ ವಸ್ತುಗಳನ್ನು ಎಸೆಯಲು ಯತ್ನ: ಓರ್ವ ಆರೋಪಿಯ ಬಂಧನ

Date:

ಶಿವಮೊಗ್ಗದ ಸೋಗಾನೆ ಕೇಂದ್ರ ಕಾರಾಗೃಹದ ಆವರಣಕ್ಕೆ ನಿಷೇಧಿತ ವಸ್ತುಗಳನ್ನು ಎಸೆಯಲು ಯತ್ನಿಸಿದ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಮೂವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಓರ್ವ ಆರೋಪಿಯನ್ನು ಬಂಧಿಸಲಾಗಿದೆ.

- Advertisement -

ಶಿವಮೊಗ್ಗದ ಸೋಗಾನೆ ಕೇಂದ್ರ ಕಾರಾಗೃಹದ ಕಾಂಪೌಂಡ್ ಬಳಿ ಕಪ್ಪು ಬಣ್ಣದ ಕವರ್ ಹಿಡಿದುಕೊಂಡು ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಓಡಿ ಹೋಗುತ್ತಿರುವುದನ್ನು ಜೈಲು ಸಿಬ್ಬಂದಿ ಗಮನಿಸಿದ್ದಾರೆ. ಕೂಡಲೇ ಎಚ್ಚೆತ್ತ ಸಿಬ್ಬಂದಿ ಆತನನ್ನು ಹಿಡಿಯಲು ಬೆನ್ನಟ್ಟಿದಾಗ, ಆ ವ್ಯಕ್ತಿ ನಿರ್ಮಾಣ ಹಂತದ ಕಾರಾಗೃಹದ ಕಾಂಪೌಂಡ್ ಹಾರಿ ನೀಲಗಿರಿ ತೋಪಿನ ಕಡೆಗೆ ಪರಾರಿಯಾಗಲು ಯತ್ನಿಸಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗೆಲ್ಲಬಹುದಾಗಿದ್ದ ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ ಪಲ್ಟಿ ಹೊಡೆದದ್ದು...

ಪದವೀಧರ ಮತ್ತು ಶಿಕ್ಷಕ ಕ್ಷೇತ್ರಗಳಿಂದ ವಿಧಾನ ಪರಿಷತ್ತಿಗೆ ನಡೆದ ನಾಲ್ಕು ಎಮ್ಮೆಲ್ಸಿ ಸ್ಥಾನಗಳ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಒಂದೇ ಒಂದು ಸೀಟನ್ನೂ ಪಡೆಯಲಾಗದೆ ಮುಗ್ಗರಿಸಿರುವುದು ರಾಜಕೀಯ ಪಡಸಾಲೆಯಲ್ಲಿ ನಾನಾ ನಮೂನೆಯ ವ್ಯಾಖ್ಯಾನ-ವಿಶ್ಲೇಷಣೆ ಹುಟ್ಟುಹಾಕಿದೆ....

ಗ್ರಾಮೀಣ ಜಾನಪದ ಪರಂಪರೆಯನ್ನು ಜೀವಂತವಾಗಿರಿಸಿದ ಚಾಮರಾಜನಗರದ ಗೌರಮ್ಮ

ಹಳ್ಳಿಗಳ ಮಣ್ಣಿನ ಸೊಗಡು, ಮಹಿಳೆಯರ ಬದುಕಿನ ಅನುಭವ, ಕುಟುಂಬದ ಸಂಪ್ರದಾಯ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಹಾಡಿನ ಮೂಲಕ ಅಭಿವ್ಯಕ್ತಿಸುವ ಸೋಬಾನೆ ಪದಗಳ ಗಾಯನಕ್ಕೆ ದಶಕಗಳಿಂದ ತಮ್ಮ ಬದುಕನ್ನೇ ಮುಡಿಪಾಗಿಟ್ಟಿರುವ ಚಾಮರಾಜನಗರದ ಹಿರಿಯ ಜಾನಪದ...

ನವೆಂಬರ್ 1 | ಕರ್ನಾಟಕ ರಾಜ್ಯೋತ್ಸವ ಮಾತ್ರವಲ್ಲ; ಭಾರತದ...

ನವೆಂಬರ್ 1 ಕನ್ನಡಿಗರ ಹೆಮ್ಮೆಯ ಕರ್ನಾಟಕ ರಾಜ್ಯೋತ್ಸವ. ಇದೇ ದಿನ ದೇಶದ ಎಂಟು ರಾಜ್ಯಗಳು ಮತ್ತು ಐದು ಕೇಂದ್ರಾಡಳಿತ ಪ್ರದೇಶಗಳ ರಚನೆ, ಮರುರಚನೆ ಹಾಗೂ ವಿಮೋಚನೆಯ ಇತಿಹಾಸವೂ ಇದೆ. ಭಾಷಾವಾರು ರಾಜ್ಯಗಳಿಗಾಗಿ ನಡೆದ...

ನಂತರ ಕಾರಾಗೃಹದ ಸುತ್ತಮುತ್ತ ಹುಡುಕಾಟ ನಡೆಸಿದಾಗ, ಸಿರಿಯೂರು ರಸ್ತೆಯ ಬಳಿ ಓಡಾಡುತ್ತಿದ್ದ ಹೊನ್ನೇಶ ಪಿ.ಜಿ ಎಂಬಾತನನ್ನು ಪೊಲೀಸರು, ಜೈಲು ಸಿಬ್ಬಂದಿ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ಸಿಕ್ಕಿಬಿದ್ದ ಆರೋಪಿಯು ತಾನು ತನ್ನ ಸ್ನೇಹಿತರಾದ ಕರೀಂ ಹಾಗೂ ಪುನೀತ್ ಎಂಬುವವರ ಜೊತೆ ದ್ವಿಚಕ್ರ ವಾಹನದಲ್ಲಿ ಬಂದು, ಜೈಲಿನ ಒಳಗೆ ನಿಷೇಧಿತ ವಸ್ತುವನ್ನು ಎಸೆಯಲು ಯತ್ನಿಸಿರುವುದಾಗಿ ಬಾಯಿಬಿಟ್ಟಿದ್ದಾನೆ. ಅಲ್ಲದೆ, ಕಾರಾಗೃಹದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾದ ಮತ್ತೊಬ್ಬ ಆರೋಪಿಯನ್ನು ಕರೀಂ ಎಂದು ಗುರುತಿಸಲಾಗಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪರೀಕ್ಷಾ ಸುಧಾರಣಾ ಸಮಿತಿ ಅವಧಿ ವಿಸ್ತರಣೆ; 50 ಸಾವಿರಕ್ಕೂ ಹೆಚ್ಚು ಸಲಹೆ ಪಡೆದ ನಿಲೇಕಣಿ ಸಮಿತಿ!

ದೇಶದ ಪ್ರಮುಖ ಸ್ಪರ್ಧಾತ್ಮಕ ಹಾಗೂ ಪ್ರವೇಶ ಪರೀಕ್ಷೆಗಳಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ...

ಬಾಗಲಕೋಟೆ | ಕಬ್ಬು ಬೆಳೆಗಾರರ ಸಭೆ ವಿವಾದ: ರೂ.25 ಲಕ್ಷ ಮಾನನಷ್ಟ ಮೊಕದ್ದಮೆ ಎಚ್ಚರಿಕೆ ನೀಡಿದ ಶಾಸಕ ಟಿ ಪಾಟೀಲ

ಬೆಳಗಾವಿ ಸುವರ್ಣಸೌಧದಲ್ಲಿ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ ಅಧ್ಯಕ್ಷತೆಯಲ್ಲಿ ನಡೆದ ಕಬ್ಬು ಬೆಳೆಗಾರರ...

ಬೀದರ್‌ | ಬೀದಿ ನಾಯಿಗಳ ಹಾವಳಿ: ಕ್ರಮಕ್ಕೆ ಆಗ್ರಹ

ಬೀದರ್ ನಗರದ ಮೈಲೂರಿನ ಸಿಎಂಸಿ ಕಾಲೊನಿಯಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ...

ಟ್ರೇಲರ್ vs ನನ್ನ ಮುಟ್ಟಲು ಸಾಧ್ಯವಿಲ್ಲ; ಸ್ಟಿಂಗ್ ಆಪರೇಷನ್‌ನಲ್ಲಿ ಎಚ್‌ಡಿಕೆ ಹೆಸರು!

ಕರ್ನಾಟಕ ರಾಜಕಾರಣವನ್ನು ತಲ್ಲಣಗೊಳಿಸಿರುವ ರಹಸ್ಯ ಸ್ಟಿಂಗ್ ಕಾರ್ಯಾಚರಣೆ ಪ್ರಕರಣದ ತನಿಖೆ ತೀವ್ರಗೊಂಡಿದೆ‌....