ಮುಂದಿನ ವರ್ಷದಿಂದ ದ್ವಿಭಾಷಾ ಸೂತ್ರ ಜಾರಿ, ಕೆಪಿಎಸ್‌ ಶಾಲೆಗಳಿಗೆ ಉಚಿತ ಬಸ್‌ ಸೌಲಭ್ಯ

Date:

ಸರ್ಕಾರಿ ಶಾಲೆಗಳ ಬಲವರ್ಧನೆ ಮತ್ತು ಖಾಸಗಿ ಶಾಲೆಗಳ ಪೈಪೋಟಿಯನ್ನು ಸಮರ್ಥವಾಗಿ ಎದುರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಕನ್ನಡದ ಜೊತೆಗೆ ಆಂಗ್ಲ (ಇಂಗ್ಲಿಷ್) ಮಾಧ್ಯಮವನ್ನು ಒಳಗೊಂಡ ‘ದ್ವಿಭಾಷಾ ಮಾಧ್ಯಮವನ್ನು (ಬೈಲಿಂಗ್ವಲ್ ಮೀಡಿಯಂ) ಜಾರಿಗೆ ತರಲು ಸಿದ್ಧತೆ ನಡೆಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಮಧು ಬಂಗಾರಪ್ಪ ತಿಳಿಸಿದರು.

- Advertisement -

ಮಂಗಳವಾರ ತಮ್ಮ ಕಚೇರಿಯಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, “ಶಿಕ್ಷಣ ಇಲಾಖೆಯ ಸುಧಾರಣೆಗಳು ಮತ್ತು ಜಿಲ್ಲೆಯ ಪ್ರಮುಖ ಅಭಿವೃದ್ಧಿ ಮತ್ತು ಭೂಹಕ್ಕು ಸಮಸ್ಯೆಗಳ ಕುರಿತು ವಿವರಿಸಿದರು. ಕರ್ನಾಟಕ ಪಬ್ಲಿಕ್ ಶಾಲೆಗಳ ಅಭಿವೃದ್ಧಿ ಮತ್ತು ಉನ್ನತೀಕರಣಕ್ಕಾಗಿ ರಾಜ್ಯ ಸರ್ಕಾರವು ಅಂತಾರಾಷ್ಟ್ರೀಯ ಹಣಕಾಸು ಸಂಸ್ಥೆಗಳು, ಪ್ರಾದೇಶಿಕ ಅಭಿವೃದ್ಧಿ ಮಂಡಳಿಗಳು, ಕಾರ್ಪೊರೇಟ್ ಸಂಸ್ಥೆಗಳು ಹಾಗೂ ತನ್ನದೇ ಬಜೆಟ್ ಮೂಲಕ ಬೃಹತ್ ಅನುದಾನವನ್ನು ಕ್ರೋಢೀಕರಿಸುತ್ತಿದ್ದು, ಎಡಿಬಿ ರೂ.2500 ಕೋಟಿ ನೀಡಲಿದೆ. ಸರ್ಕಾರ ಪ್ರತಿ ಶಾಲೆಗೆ ಸರಾಸರಿ ರೂ.2 ರಿಂದ 4 ಕೋಟಿ ವೆಚ್ಚ ಮಾಡಲಿದೆ. ಕರ್ನಾಟಕ ಪಬ್ಲಿಕ್ ಶಾಲೆಗಳ ವಿಸ್ತರಣೆ ಮತ್ತು ಉನ್ನತೀಕರಣಕ್ಕೆ ಈಗಾಗಲೇ ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ಧವಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಂವಿಧಾನದ ಒಂಬತ್ತನೇ ಅನುಸೂಚಿ: ಉದ್ದೇಶ, ಕಾಯ್ದೆಗಳ ಸೇರ್ಪಡೆ ಮತ್ತು...

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೀಸಲಾತಿ ಕೋಟಾ ಹೆಚ್ಚಿಸಿ ರಾಜ್ಯ ರೂಪಿಸಿದ ಕಾಯ್ದೆಯನ್ನು ಉಚ್ಚ ನ್ಯಾಯಾಲಯ ರದ್ದುಗೊಳಿಸಿರುವುದನ್ನು, ಪರ್ಯಾಯ ಕಂಡುಕೊಳ್ಳದೆ, ರಕ್ಷಿಸಿಕೊಳ್ಳುವ ಉದ್ದೇಶದಿಂದ ಅನುಸೂಚಿ 9ಕ್ಕೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ರವಾನಿಸಿದೆ....

ಭತ್ತಕ್ಕೆ ಬೆಲೆಯಿಲ್ಲ, ಅಕ್ಕಿ ದರ ಇಳಿಯುತ್ತಲೇ ಇಲ್ಲ!

ಮುಂಗಾರು ಹಂಗಾಮಿನಲ್ಲಿ ದೇಶಾದ್ಯಂತ ಭತ್ತ ಬಿತ್ತನೆ ಪ್ರದೇಶದಲ್ಲಿ ಗಣನೀಯ ಇಳಿಕೆಯಾಗಿದೆ. ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದ ಅಂಕಿಅಂಶಗಳ ಪ್ರಕಾರ, 2025-26ನೇ ಸಾಲಿನಲ್ಲಿ 449.18 ಲಕ್ಷ ಹೆಕ್ಟೇರ್‌ಗಳಷ್ಟಿದ್ದ ಭತ್ತ ಬಿತ್ತನೆ ಪ್ರದೇಶ,...

ಸಾಮಾಜಿಕ ಜಾಲತಾಣದಲ್ಲಿ Belonging ಆತ್ಮಕಥನ ಬಿಡುಗಡೆ ಸಮಾರಂಭದ ಪಟಗಳದೇ...

ಒಬ್ಬ ತಾಯಿಯ ಬದುಕಿನ ಪುಟಗಳು ಪುಸ್ತಕವಾಗಿ ಹೊರಬಂದ ದಿನ, ಮಕ್ಕಳ ಕಣ್ಣಲ್ಲಿ ಹೆಮ್ಮೆ ಮತ್ತು ವಾತ್ಸಲ್ಯ ಒಟ್ಟಿಗೆ ತುಂಬಿಕೊಂಡಿತ್ತು. ತಾಯಿಯ ಮಾತುಗಳನ್ನು ತದೇಕಚಿತ್ತದಿಂದ ಆಲಿಸುತ್ತಿದ್ದ ರಾಹುಲ್ ಗಾಂಧಿ, ತನ್ನ ಬದುಕಿನ ಅಮೋಘ ಕ್ಷಣಗಳನ್ನು...

“ಈ ಮಹತ್ವಾಕಾಂಕ್ಷಿ ಕಾರ್ಯಕ್ರಮದ ಉದ್ಘಾಟನೆಗೆ ಮಾನ್ಯ ಮುಖ್ಯಮಂತ್ರಿಗಳು ಆಗಮಿಸಲಿಸಬೇಕೆಂಬ ಆಸೆ ಮತ್ತು ವಿಶ್ವಾಸವಿದೆ. ಕೆಪಿಎಸ್ ಶಾಲೆಗಳಲ್ಲಿ ಸುಸಜ್ಜಿತ ಕಟ್ಟಡಗಳು, ಸ್ಮಾರ್ಟ್ ಕ್ಲಾಸ್‌ಗಳು, ವಿಜ್ಞಾನ ಮತ್ತು ಕಂಪ್ಯೂಟರ್ ಪ್ರಯೋಗಾಲಯಗಳು, ಗ್ರಂಥಾಲಯ, ಶುದ್ಧ ಕುಡಿಯುವ ನೀರು ಹಾಗೂ ಉತ್ತಮ ಶೌಚಾಲಯದ ವ್ಯವಸ್ಥೆ ಇರಲಿದೆ. ಅಲ್ಲದೆ, ಮುಂಬರುವ ಜೂನ್ ಮಾಹೆಯಿಂದ ರಾಜ್ಯದ ಎಲ್ಲಾ 1,600 ಕೆಪಿಎಸ್ ಶಾಲೆಗಳ ಮಕ್ಕಳ ಸಾರಿಗೆ ವ್ಯವಸ್ಥೆಗಾಗಿ ಬಸ್ ಸೌಲಭ್ಯವನ್ನು ಕಲ್ಪಿಸಲಾಗುವುದು” ಎಂದರು.

ಇದೇ ವೇಳೆ, ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದ ಸಿಇಟಿ ಪರೀಕ್ಷೆಯ ದಿನಾಂಕವನ್ನು ಶೀಘ್ರದಲ್ಲೇ ಘೋಷಣೆ ಮಾಡಲಾಗುವುದು ಎಂದು ಸಚಿವರು ಮಾಹಿತಿ ನೀಡಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತ ‘ಆರ್ಥಿಕ ದುರಂತ’ದ ಅಂಚಿನಲ್ಲಿದೆ; ಉತ್ಪಾದನಾ ವಲಯದ ಪುನಶ್ಚೇತನಕ್ಕೆ ರಾಹುಲ್ ಗಾಂಧಿ ಕರೆ!

 ನಿರುದ್ಯೋಗ, ಕುಸಿದಿರುವ ಉತ್ಪಾದನಾ ವಲಯ ಮತ್ತು ಶಿಕ್ಷಣ ವ್ಯವಸ್ಥೆಯ ಸಮಸ್ಯೆಗಳಿಂದಾಗಿ ಭಾರತವು...

ಶಿವಮೊಗ್ಗ | 74,000 ಅಡಿಕೆ ಮರಗಳನ್ನು ನೆಟ್ಟಿದ್ದೇನೆ, ಕೃಷಿಕರ ಸಮಸ್ಯೆ ಬಗ್ಗೆ ಅರಿವಿದೆ: ಮಧು ಬಂಗಾರಪ್ಪ

ಸಹಕಾರ ಸಂಘಗಳು ರೈತರ ಹಿತಾಸಕ್ತಿಗೆ ಮೊದಲ ಆದ್ಯತೆ ನೀಡಬೇಕು. ರೈತರ ಆರ್ಥಿಕ...

ಪರೀಕ್ಷೆಗಳಲ್ಲಿ ನಾಗರಿಕರನ್ನು ಧ್ವಂಸ ಮಾಡಬೇಕಿರುವ ಮಿಲಿಟರಿ ಟಾರ್ಗೆಟ್‌ಗಳು ಎಂದು ಗುರುತಿಸಿದ AI ಮಾಡೆಲ್‌ಗಳು

ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವು ಯುದ್ಧಭೂಮಿಯಲ್ಲಿ ಮುಕ್ತವಾಗಿ ಬಳಕೆಯಾದರೆ ಭವಿಷ್ಯದಲ್ಲಿ ಎದುರಾಗಬಹುದಾದ...

ವಿಮಾನ ನಿಲ್ದಾಣದಲ್ಲಿ ಶುಲ್ಕದ ಹೆಸರಲ್ಲಿ ಸುಲಿಗೆ: ಟ್ಯಾಕ್ಸಿ, ಕ್ಯಾಬ್‌ ಅಸೋಸಿಯೇಷನ್‌ ಧರಣಿ

ಮಂಗಳೂರು ವಿಮಾನ ನಿಲ್ದಾಣದಲ್ಲಿ ಟ್ಯಾಕ್ಸಿ ಮತ್ತು ಮ್ಯಾಕ್ಸಿ ಕ್ಯಾಬ್ ಗಳಿಂದ ಅತೀ...