ಸಾಗರ | ಗೂಡ್ಸ್ ಆಟೋ ಢಿಕ್ಕಿ; ಚಿಕಿತ್ಸೆ ಫಲಿಸದೆ ಬಾಲಕ ಸಾವು

Date:

ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಗೂಡ್ಸ್ ಆಟೋ ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಬಾಲಕ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ. ಸಾಗರ ತಾಲೂಕಿನ ದಾಸಕೊಪ್ಪದ ನಿವಾಸಿ ತನ್ಮಯ್ (7) ಮೃತ ಬಾಲಕ.

- Advertisement -

ಸೆಪ್ಟೆಂಬರ್ 27ರ ಸಂಜೆ ದಾಸಕೊಪ್ಪ ಗ್ರಾಮದ ಪಾಂಡುರಂಗ ದೇವಸ್ಥಾನದ ಸಮೀಪ ರಸ್ತೆ ಬದಿ ನಿಂತಿದ್ದ ತನ್ಮಯ್‌ಗೆ ಗೂಡ್ಸ್ ಆಟೋ ಡಿಕ್ಕಿ ಹೊಡೆದಿತ್ತು. ಬಾಲಕನ ತಲೆಗೆ ಆಟೋದ ಗ್ರೀಲ್ ಬಡಿದ ಪರಿಣಾಮ ಗಂಭೀರ ಗಾಯವಾಗಿತ್ತು.

ಕೂಡಲೇ ಆನಂದಪುರದ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಮೃತಪಟ್ಟಿದ್ದಾನೆ. ಈ ಕುರಿತಂತೆ ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ತಂದೆ-ತಾಯಿ ಬದುಕಿರುವಾಗಲೇ ಗೌರವಿಸಿ, ಪ್ರೀತಿಸಿ: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ, ತಂದೆ-ತಾಯಿಗಳು ಬದುಕಿರುವಾಗಲೇ ಮಕ್ಕಳಾದ ನಾವು ಅವರನ್ನು ಸದಾ ಗೌರವದಿಂದ ಕಾಣಬೇಕು....

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ ಪ್ರತಿಮೆ ತಲುಪಿದ ರೋಚಕ ಇತಿಹಾಸ!

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ...

ಭದ್ರಾವತಿ | ಜುಗಾರಿ ಅಡ್ಡೆ ಬಗ್ಗೆ ಮಾಹಿತಿ ನೀಡಿದ್ದಕ್ಕೆ ಸಾಮಾಜಿಕ ಕಾರ್ಯಕರ್ತನ ಮೇಲೆ ಹಲ್ಲೆ!

ಭದ್ರಾವತಿ ಅಕ್ರಮ ಇಸ್ಪೀಟು, ತೂರಾ ಬಿಲ್ಲೆ ಜುಗಾರಿ ಅಡ್ಡೆ ಮಾಹಿತಿ ನೀಡಿದಕ್ಕೆ...

ಶಿಕಾರಿಪುರದಿಂದಲೇ ರಾಜಕೀಯ ‘ಶಿಕಾರಿ’ ಆರಂಭ: ಸಚಿವ ಮಧು ಬಂಗಾರಪ್ಪ

ಶಿಕಾರಿಪುರದಿಂದ ರಾಜಕೀಯ ‘ಶಿಕಾರಿ’ ಇಂದಿನಿಂದಲೇ ಆರಂಭವಾಗಿದೆ. ಶಿಕಾರಿಯಾಡುವ ಜವಾಬ್ದಾರಿಯನ್ನು ಇಲ್ಲಿನ ಜನತೆ...