ಶಿವಮೊಗ್ಗ | ಅಕ್ರಮ ಮರಳು ಗಣಿಗಾರಿಕೆಗೆ ಕಡಿವಾಣ; 28 ಗುತ್ತಿಗೆದಾರರಿಗೆ ರೂ.68 ಕೋಟಿ ದಂಡ

Date:

ಶಿವಮೊಗ್ಗ ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಮರಳು ಗಣಿಗಾರಿಕೆ ಹಾಗೂ ನಿಯಮಬಾಹಿರ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳು ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ. ನಿಯಮಗಳನ್ನು ಉಲ್ಲಂಘಿಸಿದ ಆರೋಪದಡಿ 28 ಮರಳು ಗುತ್ತಿಗೆದಾರರಿಗೆ ಒಟ್ಟು ರೂ.68 ಕೋಟಿ ಅಧಿಕ ದಂಡ ವಿಧಿಸುವ ನೋಟಿಸ್‌ ನೀಡಲಾಗಿದೆ.

- Advertisement -

ಇದೇ ಹಿನ್ನೆಲೆಯಲ್ಲಿ ತೀರ್ಥಹಳ್ಳಿ ತಾಲೂಕಿನ ದಬ್ಬನಗದ್ದೆ ಗ್ರಾಮದಲ್ಲಿ ನಡೆದ ಪ್ರಕರಣವೂ ಗಮನ ಸೆಳೆದಿದೆ. 2,116 ಮೆಟ್ರಿಕ್‌ ಟನ್‌ ಮರಳನ್ನು ಅಕ್ರಮವಾಗಿ ಲೂಟಿ ಮಾಡಿದ ಆರೋಪದಡಿ ಒಬ್ಬ ಗುತ್ತಿಗೆದಾರನಿಗೆ ರೂ.1.08 ಕೋಟಿ ದಂಡ ವಿಧಿಸಲು ನೊಟೀಸ್‌ ನೀಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇಂದು ಭಗತ್ ಸಿಂಗ್ ಹೆಸರು ಬಳಸುವ ಆರ್‌ಎಸ್‌ಎಸ್ ನಾಯಕರಿಗೆ...

ಜಾತ್ಯತೀತತೆ ಮತ್ತು ಸಮಾಜವಾದದ ಬಗ್ಗೆ ಗಟ್ಟಿಯಾಗಿ ಮಾತನಾಡುತ್ತಿದ್ದ, ಕೋಮುವಾದಿ ಧೋರಣೆಗಳನ್ನು ಕಟುವಾಗಿ ವಿಮರ್ಶಿಸುತ್ತಿದ್ದ ಭಗತ್ ಸಿಂಗ್ ಅವರನ್ನು ಇಂದು ಅದೇ ಸಿದ್ಧಾಂತಗಳ ವಿರುದ್ಧ ನಿಂತಿರುವ ಬಿಜೆಪಿ, ಆರ್‌ಎಸ್‌ಎಸ್, ಎಬಿವಿಪಿ ನಾಯಕರು ತಮ್ಮ 'ಸ್ವಂತ...

ಬರಗಾಲ | ಕಾಡಿನ ಮೌನದ ಹಿಂದೆ ಅಡಗಿದೆ ಜೀವಸಂಕುಲದ...

ಒಂದು ಆನೆಗೆ ದಿನಕ್ಕೆ ನೂರಾರು ಲೀಟರ್ ನೀರು ಮತ್ತು ನೂರಾರು ಕೆ.ಜಿ. ಆಹಾರ ಬೇಕಾಗುತ್ತದೆ. ಇನ್ನು ಕಾಡಿನಲ್ಲಿರುವ ಸಾವಿರಾರು ಆನೆಗಳು, ಹುಲಿಗಳು, ಚಿರತೆಗಳು, ಜಿಂಕೆಗಳು, ಕಾಡೆಮ್ಮೆಗಳು ಸೇರಿದಂತೆ ವಿವಿಧ ವನ್ಯಜೀವಿಗಳ ಅಗತ್ಯವನ್ನು ಲೆಕ್ಕಹಾಕಿದರೆ...

ಬಾಗಲಕೋಟೆ | ಸರ್ಕಾರಿ ಮೆಡಿಕಲ್ ಕಾಲೇಜಿನಲ್ಲಿ ತರಗತಿ ಆರಂಭ;...

ಬಾಗಲಕೋಟೆ ಜಿಲ್ಲೆಯ ಜನರ ಬಹುದಿನಗಳ ನಿರೀಕ್ಷೆಗೆ ಕೊನೆಗೂ ಕಾಲ ಕೂಡಿಬಂದಿದೆ. ಬಾಗಲಕೋಟೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಯಾಗಬೇಕು ಎಂಬ ದಶಕಗಳ ಬೇಡಿಕೆಗೆ ಸಾಕಾರ ರೂಪ ಸಿಕ್ಕಿದ್ದು, ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ನಗರದ ಬಹುನಿರೀಕ್ಷಿತ...

ಜಿಲ್ಲೆಯಲ್ಲಿ ಮರಳು ಗಣಿಗಾರಿಕೆ ನಿಯಮಗಳನ್ನು ಪಾಲಿಸದೆ ಅಕ್ರಮವಾಗಿ ಮರಳು ತೆಗೆದು ಸಾಗಿಸುತ್ತಿದ್ದ ಅನೇಕ ಪ್ರಕರಣಗಳು ಬೆಳಕಿಗೆ ಬಂದಿವೆ. ಇಲಾಖೆಯು ಇದಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿ, ನಿಯಮಬಾಹಿರ ಚಟುವಟಿಕೆಗಳಲ್ಲಿ ತೊಡಗಿದ್ದ ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಂಡಿದೆ.

ಟೆಂಡರ್‌-ಕಮ್‌-ಹರಾಜು ಪ್ರಕ್ರಿಯೆಗೆ 2025ರ ಫೆಬ್ರವರಿ 24ರಂದು ಅಧಿಸೂಚನೆ ಹೊರಡಿಸಲಾಗಿತ್ತು. 20 ಮರಳು ಬ್ಲಾಕ್‌ಗಳ ಪ್ರಕ್ರಿಯೆ ಪೂರ್ಣಗೊಂಡಿದ್ದು, ಯಶಸ್ವಿ ಬಿಡ್‌ದಾರರಿಗೆ ಉದ್ದೇಶ ಪತ್ರ ನೀಡಲಾಗಿದೆ. ಕ್ವಾರಿ ಯೋಜನೆಗಳಿಗೂ ಅನುಮೋದನೆ ನೀಡಲಾಗಿದೆ ಎಂದು ತಿಳಿಸಲಾಗಿದೆ.

ಬಿಡ್‌ದಾರರು ಮರಳು ಗಣಿಗಾರಿಕೆ ಗುತ್ತಿಗೆಗಳನ್ನು ಅಧಿಕೃತವಾಗಿ ಜಾರಿಗೊಳಿಸುವ ಮೊದಲು ಪರಿಸರ ಪರಿಣಾಮ ಮೌಲ್ಯಮಾಪನ ಪ್ರಾಧಿಕಾರದಿಂದ ಪರಿಸರ ಅನುಮತಿ ಪಡೆಯಬೇಕಿದೆ.

ಅಕ್ರಮ ಗಣಿಗಾರಿಕೆ ತಡೆಗೆ ಸಮಿತಿಗಳು

ಅಕ್ರಮ ಮರಳು ಮತ್ತು ಕಲ್ಲು ಗಣಿಗಾರಿಕೆ, ಸಂಗ್ರಹಣೆ ಹಾಗೂ ಸಾಗಾಟವನ್ನು ತಡೆಯಲು ಜಿಲ್ಲೆ ಮತ್ತು ತಾಲೂಕು ಮಟ್ಟದಲ್ಲಿ ಸಮಿತಿಗಳನ್ನೂ ಸರ್ಕಾರ ರಚಿಸಿದೆ. ಸಹಾಯಕ ಆಯುಕ್ತರ ನೇತೃತ್ವದಲ್ಲಿ ತಾಲೂಕು ಮಟ್ಟದ ಸಮಿತಿಗಳನ್ನು ರಚಿಸಲಾಗಿದೆ. ಜಿಲ್ಲಾಧಿಕಾರಿ ನೇತೃತ್ವದಲ್ಲಿ ಜಿಲ್ಲಾ ಕಾರ್ಯಪಡೆ ಹಾಗೂ ಜಿಲ್ಲಾ ಮರಳು ಸಮಿತಿಗಳ ರಚನೆ ಮಾಡಲಾಗಿದೆ.

ಅಕ್ರಮ ಗಣಿಗಾರಿಕೆ, ಮರಳು ಸಾಗಾಟ ಹಾಗೂ ದಾಸ್ತಾನು ವಿರುದ್ಧ ಕ್ರಮ ಕೈಗೊಳ್ಳಲು ಕಂದಾಯ, ಅರಣ್ಯ, ಪೊಲೀಸ್ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳಿಗೆ ಅಧಿಕಾರ ನೀಡಲಾಗಿದೆ.

ಜಿಲ್ಲೆಯಲ್ಲಿ ಮರಳು ಮಾಫಿಯಾ ಚಟುವಟಿಕೆಗಳನ್ನು ಹತ್ತಿಕ್ಕುವ ನಿಟ್ಟಿನಲ್ಲಿ ಇಲಾಖೆಗಳು ನಿರಂತರ ಜಾಗೃತಿ ವಹಿಸುತ್ತಿವೆ. ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅರುಣಾಚಲ ಗಡಿ ವಿವಾದ: ಭಾರತ-ಚೀನಾ ಸೇನಾಧಿಕಾರಿಗಳ ಮಹತ್ವದ ಸಭೆ

ಅರುಣಾಚಲ ಪ್ರದೇಶದ ವಾಸ್ತವ ಗಡಿ ರೇಖೆಯ (LAC) ಉದ್ದಕ್ಕೂ ಉಂಟಾಗಿರುವ ಉದ್ವಿಗ್ನತೆಯನ್ನು...

ವಿಜಯಪುರ |ಉನ್ನತ ಶಿಕ್ಷಣದಿಂದ ಮಹಿಳಾ ಸಬಲೀಕರಣ ಸಾಧ್ಯ; ಪ್ರೊ. ಶಾಂತಾದೇವಿ

ಶಿಕ್ಷಣವು ಕೇವಲ ಪ್ರಮಾಣಪತ್ರಕ್ಕೆ ಸೀಮಿತವಾಗದೆ, ಜ್ಞಾನ ಮತ್ತು ಕೌಶಲ್ಯ ಬೆಳೆಸುವ ಸಾಧನವಾಗಬೇಕು....

ಭಾಲ್ಕಿ | ಅಪಘಾತದಲ್ಲಿ ಮೃತಪಟ್ಟ ಹನುಮಂತ ಕುಟುಂಬಸ್ಥರಿಗೆ ಭೀಮರಾಜ್ ಸೇನೆ ನೆರವು

ರಸ್ತೆ ಅಪಘಾತದಲ್ಲಿ ಮೃತಪಟ್ಟ ಭಾಲ್ಕಿ ತಾಲೂಕಿನ ಕಣಜಿ ಗ್ರಾಮದ ಹನುಮಂತ ತಂದೆ...