ಶಿವಮೊಗ್ಗ | ನೆಹರು ಕ್ರೀಡಾಂಗಣದಲ್ಲಿ ಫ್ಲೆಕ್ಸ್‌, ಬ್ಯಾನರ್‌ ಅಳವಡಿಕೆಗೆ ಕಡಿವಾಣ

Date:

ಶಿವಮೊಗ್ಗ ನಗರದ ಹೃದಯಭಾಗದಲ್ಲಿರುವ ಶಿವಮೂರ್ತಿ ಸರ್ಕಲ್ ಸಮೀಪದ ಐತಿಹಾಸಿಕ ನೆಹರು ಕ್ರೀಡಾಂಗಣದ ಮುಂಭಾಗವನ್ನು ಫ್ಲೆಕ್ಸ್‌, ಬ್ಯಾನರ್‌ಗಳ ಹಾವಳಿಯಿಂದ ಮುಕ್ತಗೊಳಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಮಹತ್ವದ ಹೆಜ್ಜೆಯಿಟ್ಟಿದೆ. ಸಾರ್ವಜನಿಕರು ಹಾಗೂ ರಾಜಕೀಯ ಮುಖಂಡರು ತಮ್ಮ ಹುಟ್ಟುಹಬ್ಬ, ಶುಭಾಶಯ, ಅಭಿನಂದನಾ ಸಮಾರಂಭ ಸೇರಿದಂತೆ ವಿವಿಧ ಕಾರ್ಯಕ್ರಮಗಳ ಹೆಸರಿನಲ್ಲಿ ಕ್ರೀಡಾಂಗಣದ ಮುಖ್ಯದ್ವಾರದ ಮುಂಭಾಗದಲ್ಲಿ ಮನಬಂದಂತೆ ಫ್ಲೆಕ್ಸ್‌, ಬ್ಯಾನರ್‌ಗಳನ್ನು ಅಳವಡಿಸುತ್ತಿದ್ದುದಕ್ಕೆ ಜಿಲ್ಲಾಧಿಕಾರಿಗಳ ಆದೇಶದ ಮೂಲಕ ಕಡಿವಾಣ ಬಿದ್ದಿದೆ.

- Advertisement -

ನಗರದ ಪ್ರಮುಖ ಕ್ರೀಡಾಂಗಣಗಳಲ್ಲಿ ಒಂದಾಗಿರುವ ನೆಹರು ಕ್ರೀಡಾಂಗಣವು ಪ್ರತಿನಿತ್ಯ ಕ್ರೀಡಾಪಟುಗಳು, ವಿದ್ಯಾರ್ಥಿಗಳು, ಯುವಜನರು ಹಾಗೂ ಸಾರ್ವಜನಿಕರು ಭೇಟಿ ನೀಡುವ ಪ್ರಮುಖ ತಾಣವಾಗಿದೆ. ಆದರೆ ಕಳೆದ ಸಾಕಷ್ಟು ಸಮಯದಿಂದ ಕ್ರೀಡಾಂಗಣದ ಮುಖ್ಯ ಪ್ರವೇಶದ್ವಾರದ ಸುತ್ತಮುತ್ತ ರಾಜಕೀಯ ಮುಖಂಡರ ಹುಟ್ಟುಹಬ್ಬದ ಶುಭಾಶಯಗಳು, ವಿವಿಧ ಸಂಘಟನೆಗಳ ಕಾರ್ಯಕ್ರಮಗಳು, ಅಭಿನಂದನಾ ಸಮಾರಂಭಗಳು ಸೇರಿದಂತೆ ನಾನಾ ಕಾರಣಗಳಿಗಾಗಿ ಬೃಹತ್ ಫ್ಲೆಕ್ಸ್‌ ಹಾಗೂ ಬ್ಯಾನರ್‌ಗಳನ್ನು ಅಳವಡಿಸಲಾಗುತ್ತಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಉತ್ತರ ಕನ್ನಡ | ಯುವನಿಧಿ ಫಲಾನುಭವಿಗಳ ಸಂಖ್ಯೆ ಹೆಚ್ಚಳ:...

ಉತ್ತರ ಕನ್ನಡ ಜಿಲ್ಲೆಯಲ್ಲಿ ರಾಜ್ಯ ಸರ್ಕಾರದ ಯುವನಿಧಿ ಯೋಜನೆಯ ಫಲಾನುಭವಿಗಳ ಸಂಖ್ಯೆ 10,280ಕ್ಕೆ ಏರಿಕೆಯಾಗಿರುವುದು ಕೇವಲ ಒಂದು ಸರ್ಕಾರಿ ಯೋಜನೆಯ ಫಲಾಫಲದ ಅಂಕಿ-ಅಂಶವಲ್ಲ. ಜಿಲ್ಲೆಯಲ್ಲಿನ ಉದ್ಯೋಗಾವಕಾಶಗಳು, ಯುವಜನರ ಸದೃಢ ಭವಿಷ್ಯ, ಸ್ಥಳೀಯ ಆರ್ಥಿಕ...

ಅಡ್ವಾಣಿ – ಅಧಿಕಾರದ ಆಟದಲ್ಲಿ ಸಿದ್ಧಾಂತವೂ ಒಂದು ಮೆಟ್ಟಿಲಷ್ಟೇ!

1984ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆದ್ದಿದ್ದು ಕೇವಲ ಎರಡು ಸ್ಥಾನಗಳು. ಅಲ್ಲಿಂದ ಪಕ್ಷವನ್ನು ರಾಷ್ಟ್ರೀಯ ಅಧಿಕಾರದ ಕೇಂದ್ರಕ್ಕೆ ತರುವಲ್ಲಿ ಅಡ್ವಾಣಿ ಅವರ ಪಾತ್ರ ದೊಡ್ಡದು. ರಥಯಾತ್ರೆ, ರಾಮಮಂದಿರ ಚಳವಳಿ ಮತ್ತು ಹಿಂದುತ್ವದ ರಾಜಕಾರಣದ...

ಬಡತನದ ಮಾಪನ ಮತ್ತು ವಾಸ್ತವ ಚಿತ್ರಣ: ಆಳ ಅಗಲ

ವಿಶ್ವಬ್ಯಾಂಕ್‌ನ ಬಡತನ ಮತ್ತು ಸಮಾನತೆಯ ಇತ್ತೀಚಿನ ವರದಿಯ ಪ್ರಕಾರ 2011ರಿಂದ 2023ರ ಅವಧಿಯಲ್ಲಿ ಭಾರತದಲ್ಲಿ ಅಂದಾಜು 49.6 ಕೋಟಿ ಜನರು ಬಡತನದಿಂದ ಹೊರಬಂದಿದ್ದಾರೆ. ಈ ವರದಿಯನ್ನು ಆಧರಿಸಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ...

ಇದರಿಂದ ಕ್ರೀಡಾಂಗಣದ ಮುಖ್ಯದ್ವಾರದ ಸೌಂದರ್ಯಕ್ಕೆ ಧಕ್ಕೆಯಾಗುವುದರ ಜೊತೆಗೆ ಸಾರ್ವಜನಿಕ ಕ್ರೀಡಾ ಆಸ್ತಿಯ ಮುಂಭಾಗವೇ ಪ್ರಚಾರದ ಕೇಂದ್ರವಾಗಿ ಮಾರ್ಪಟ್ಟಿತ್ತು. ಕ್ರೀಡಾಪಟುಗಳ ಸಾಧನೆಗೆ ಸಾಕ್ಷಿಯಾಗಬೇಕಿದ್ದ ಕ್ರೀಡಾಂಗಣದ ಪ್ರವೇಶದ್ವಾರವು ವ್ಯಕ್ತಿಗಳ ಪ್ರಚಾರದ ಫ್ಲೆಕ್ಸ್‌ಗಳಿಂದ ಆವೃತವಾಗುತ್ತಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿಯೂ ಅಸಮಾಧಾನ ವ್ಯಕ್ತವಾಗಿತ್ತು.ನೆಹರು ಕ್ರೀಡಾಂಗಣದ ಮುಂಭಾಗದಲ್ಲಿ ನಿರಂತರವಾಗಿ ಅಳವಡಿಸಲಾಗುತ್ತಿದ್ದ ಫ್ಲೆಕ್ಸ್‌, ಬ್ಯಾನರ್‌ಗಳಿಂದ ಉಂಟಾಗುತ್ತಿತ್ತು.

ಕ್ರೀಡಾಂಗಣದ ಯುವಜನ ಕ್ರೀಡಾ ಅಧಿಕಾರಿಯಾಗಿರುವ ರೇಖಾ ನಾಯ್ಕ್ ಅವರ ಗಮನಕ್ಕೂ ಈ ಸಮಸ್ಯೆಯನ್ನು ತರಲಾಗಿತ್ತು. ಕ್ರೀಡಾಂಗಣದ ಮುಖ್ಯದ್ವಾರದ ಸೌಂದರ್ಯ ಕಾಪಾಡುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕೆಂಬ ಅಗತ್ಯವನ್ನು ಅಧಿಕಾರಿಗಳ ಮುಂದಿಡಲಾಗಿತ್ತು.ಜಿಲ್ಲಾಧಿಕಾರಿಗಳು ನೆಹರು ಕ್ರೀಡಾಂಗಣದ ಮುಂಭಾಗದಲ್ಲಿ ಯಾವುದೇ ವ್ಯಕ್ತಿ, ರಾಜಕೀಯ ಮುಖಂಡರು, ಸಂಘಟನೆಗಳು ಅಥವಾ ಸಾರ್ವಜನಿಕರು ಫ್ಲೆಕ್ಸ್‌ ಹಾಗೂ ಬ್ಯಾನರ್‌ಗಳನ್ನು ಅಳವಡಿಸಬಾರದೆಂಬ ಆದೇಶ ಹೊರಡಿಸಿರುವುದು ಮಹತ್ವದ ಬೆಳವಣಿಗೆಯಾಗಿದೆ.

ರಾಜಕೀಯ ಪ್ರಚಾರಕ್ಕಲ್ಲ, ಕ್ರೀಡಾಪಟುಗಳ ಸಾಧನೆಗೆ ಆದ್ಯತೆ ಸಿಗಲಿ..!

ಕ್ರೀಡಾಂಗಣಗಳು ಕ್ರೀಡಾಪಟುಗಳ ಪ್ರತಿಭೆಯನ್ನು ಪ್ರೋತ್ಸಾಹಿಸುವ, ಯುವಜನರಲ್ಲಿ ಕ್ರೀಡಾಸ್ಫೂರ್ತಿ ಬೆಳೆಸುವ ಸಾರ್ವಜನಿಕ ಆಸ್ತಿಗಳಾಗಿವೆ. ಇಂತಹ ಸ್ಥಳಗಳ ಪ್ರವೇಶದ್ವಾರಗಳು ಸ್ವಚ್ಛವಾಗಿ, ಸುಂದರವಾಗಿ ಹಾಗೂ ಸಾರ್ವಜನಿಕರಿಗೆ ಅನುಕೂಲಕರವಾಗಿರುವುದು ಅತ್ಯಂತ ಅಗತ್ಯವಾಗಿದೆ.ಆದರೆ ಹುಟ್ಟುಹಬ್ಬ ಹಾಗೂ ಇನ್ನಿತರ ಕಾರ್ಯಕ್ರಮಗಳ ನೆಪದಲ್ಲಿ ಕ್ರೀಡಾಂಗಣದ ಮುಂಭಾಗವನ್ನು ಪ್ರಚಾರದ ತಾಣವನ್ನಾಗಿ ಮಾಡಿಕೊಳ್ಳುತ್ತಿರುವ ಪ್ರವೃತ್ತಿಗೆ ಜಿಲ್ಲಾಡಳಿತ ಕಡಿವಾಣ ಹಾಕಿರುವುದು ಸ್ವಾಗತಾರ್ಹ ಕ್ರಮವಾಗಿದೆ.

ಜಿಲ್ಲಾಧಿಕಾರಿಗಳು ಹೊರಡಿಸಿರುವ ಆದೇಶ ಕಟ್ಟುನಿಟ್ಟಾಗಿ ಜಾರಿಯಾಗಬೇಕಿದೆ. ಪ್ರಭಾವಿ ರಾಜಕೀಯ ಮುಖಂಡರಾಗಲಿ, ಸಂಘಟನೆಗಳ ಪದಾಧಿಕಾರಿಗಳಾಗಲಿ ಅಥವಾ ಸಾಮಾನ್ಯ ಸಾರ್ವಜನಿಕರಾಗಲಿ, ಎಲ್ಲರಿಗೂ ಒಂದೇ ನಿಯಮ ಅನ್ವಯವಾಗಬೇಕು.

ಮುಂದಿನ ದಿನಗಳಲ್ಲಿ ಯಾರೇ ಕ್ರೀಡಾಂಗಣದ ಮುಂಭಾಗದಲ್ಲಿ ಅನಧಿಕೃತವಾಗಿ ಫ್ಲೆಕ್ಸ್‌, ಬ್ಯಾನರ್‌ಗಳನ್ನು ಅಳವಡಿಸಿದರೂ ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ತೆರವುಗೊಳಿಸುವುದರ ಜೊತೆಗೆ ನಿಯಮಾನುಸಾರ ಕ್ರಮ ಕೈಗೊಳ್ಳಬೇಕಿದೆ.ವಿಶೇಷವಾಗಿ ಕ್ರೀಡಾಂಗಣದ ನಿರ್ವಹಣಾ ಅಧಿಕಾರಿಗಳು ಹಾಗೂ ಸಂಬಂಧಪಟ್ಟ ಇಲಾಖೆಗಳು ಈ ಆದೇಶದ ಅನುಷ್ಠಾನದ ಬಗ್ಗೆ ನಿರಂತರ ನಿಗಾ ವಹಿಸಬೇಕಾಗಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಮೋದಿ ನನ್ನೊಂದಿಗೆ ಮುಖಾಮುಖಿ ಚರ್ಚಿಸಿದರೆ ಪ್ರಧಾನಿಯಾಗಿ ಉಳಿಯುವುದಿಲ್ಲ’: ರಾಹುಲ್ ಗಾಂಧಿ

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮುಕ್ತ ಚರ್ಚೆಗೆ ಆಹ್ವಾನ ನೀಡುವುದನ್ನು ಲೋಕಸಭೆಯ...

ನ.15ರಂದು ತಿತಿಮತಿಯಲ್ಲಿ ಭಗವಾನ್ ಬಿರ್ಸಾ ಮುಂಡಾ ಜಯಂತಿ: ಜನ್‌ಜಾತಿಯ ಗೌರವ ದಿವಸ್ ಆಚರಣೆ

ಭಗವಾನ್ ಬಿರ್ಸಾ ಮುಂಡಾ ಅವರ 151ನೇ ಜಯಂತಿ ಅಂಗವಾಗಿ ನವೆಂಬರ್ 15ರಂದು...

ಬಾಗಲಕೋಟೆ | ಟನ್‌ ಕಬ್ಬಿಗೆ 3800 ರೂ. ಬೆಂಬಲ ಬೆಲೆ ಘೋಷಣೆ; ಸಂಘಟಿತ ಹೋರಾಟಕ್ಕೆ ಸಂದ ಜಯ

ಬಾಗಲಕೋಟೆ ಜಿಲ್ಲೆಯ ರನ್ನನ ನಾಡು ಮುಧೋಳದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ದಿ....

ಮೈಸೂರಿಗೆ ಹಸಿರು ಹೊದಿಕೆ: 2 ಲಕ್ಷ ಗಿಡ ಬೆಳೆಸುವ ಗುರಿ; ‘ಭಾರತ್ ವನ್’ ಯೋಜನೆಗೆ ಚಾಲನೆ

ಸಾಂಸ್ಕೃತಿಕ ನಗರಿ ಮೈಸೂರಿಯಲ್ಲಿ ಹಸಿರು ಹೊದಿಕೆಯನ್ನು ಗಣನೀಯವಾಗಿ ಹೆಚ್ಚಿಸುವ ಮತ್ತು ನಗರ...