ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಸುಧಾರಣೆ ಹಾಗೂ ನೂತನ ಜಿಲ್ಲಾ ಆಸ್ಪತ್ರೆ ಮಂಜೂರಾತಿಗೆ ಶಾಸಕರ ಆಗ್ರಹ​

Date:

“ಜಿಲ್ಲೆಯ ಬಡ ರೋಗಿಗಳ ಆಶಾಕಿರಣವಾಗಿರುವ ಮೆಗ್ಗಾನ್ ಆಸ್ಪತ್ರೆಯಲ್ಲಿ ವೈದ್ಯರ ಕೊರತೆ ಮತ್ತು ಔಷಧಿ ಅಲಭ್ಯತೆಯಿಂದ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿದೆ. ತಕ್ಷಣವೇ ಆಸ್ಪತ್ರೆಯ ವ್ಯವಸ್ಥೆಯನ್ನು ಸರಿಪಡಿಸುವುದರ ಜೊತೆಗೆ ಶಿವಮೊಗ್ಗಕ್ಕೆ ಪ್ರತ್ಯೇಕ ನೂತನ ಜಿಲ್ಲಾ ಆಸ್ಪತ್ರೆಯನ್ನು ಮಂಜೂರು ಮಾಡಬೇಕು,” ಎಂದು ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಸ್. ಎನ್. ಚನ್ನಬಸಪ್ಪ (ಚೆನ್ನಿ) ಅವರು ಒತ್ತಾಯಿಸಿದ್ದಾರೆ.​

- Advertisement -

ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಆರೋಗ್ಯ ಇಲಾಖೆಯ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಗರದ ಆರೋಗ್ಯ ಕ್ಷೇತ್ರದ ಪ್ರಮುಖ ಸಮಸ್ಯೆಗಳ ಕುರಿತು ಮನವಿ ಹಾಗೂ ಬೇಡಿಕೆಗಳನ್ನು ಸಲ್ಲಿಸಿದರು.​

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿರುಕು ಬಿಟ್ಟಿದ್ದ ‘ಕೈ’ ಕೋಟೆಗೆ ಒಗ್ಗಟ್ಟಿನ ಶಕ್ತಿ: ರಾಜಸ್ಥಾನ...

ಗೋವಿಂದ್ ಡೋಟಸರ ಮತ್ತು ಟೀಕಾರಾಮ್ ಜುಲ್ಲಿ ಅವರ ನಡುವಣ ಬಾಂಧವ್ಯ ಕೇವಲ ರಾಜಕೀಯ ಅನಿವಾರ್ಯತೆಯಲ್ಲ; ಅದು ಪರಸ್ಪರ ನಂಬಿಕೆ ಮತ್ತು ಪೂರಕ ಸಾಮರ್ಥ್ಯಗಳ ಸಮ್ಮಿಲನವಾಗಿದೆ. ಡೋಟಸರ ಅವರಲ್ಲಿರುವ ಆಕ್ರಮಣಕಾರಿ ಸಂಘಟನಾ ಶೈಲಿ, ಪ್ರಖರ...

ವನ್ಯಜೀವಿ ಸಂಘರ್ಷದ ಸುಳಿಯಲ್ಲಿ ಅರಣ್ಯದ ಭವಿಷ್ಯ: ಸಂರಕ್ಷಣೆಯ ಹೆಸರಿನಲ್ಲಿ...

ಬಂಡೀಪುರ-ನಾಗರಹೊಳೆ ಅರಣ್ಯಗಳ ಮೇಲೆ ಹೆಚ್ಚುತ್ತಿರುವ ಒತ್ತಡ; ಖಾಸಗಿ ಬಂಡವಾಳ, ಪ್ರವಾಸೋದ್ಯಮ ವಿಸ್ತರಣೆ ಮತ್ತು ಆದಿವಾಸಿಗಳ ಹಕ್ಕುಗಳ ನಡುವೆ ಸಂರಕ್ಷಣೆಯ ಮೂಲ ಆಶಯಕ್ಕೆ ಸವಾಲು. ಮನುಷ್ಯ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತ ಪರಿಹಾರವಿಲ್ಲ; ಅರಣ್ಯಗಳ ಮೇಲಿನ ನಿಯಂತ್ರಣ...

ಶಿವಮೊಗ್ಗ | ನೀರಿಲ್ಲದೆ ಒಣಗುತ್ತಿವೆ ಅಡಿಕೆ ತೋಟಗಳು: ರೈತರ...

ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರ ಪಾಲಿಗೆ ನಾಲೆಗಳ ನೀರು ಕೇವಲ ಕೃಷಿಗೆ ಪೂರಕವಾದ ವ್ಯವಸ್ಥೆಯಲ್ಲ. ಅದು ಅವರ ವಾರ್ಷಿಕ ಆದಾಯ, ಕುಟುಂಬದ ನಿರ್ವಹಣೆ, ಕೃಷಿ ಸಾಲದ ಮರುಪಾವತಿ ಹಾಗೂ ಮುಂದಿನ ಬದುಕಿನ ಭರವಸೆಯಾಗಿದೆ....

ವೈದ್ಯರ ವರ್ಗಾವಣೆ/ನಿಯೋಜನೆ ಬೇಡ : ಮೆಗ್ಗಾನ್ ಆಸ್ಪತ್ರೆಯಲ್ಲಿರುವ ನುರಿತ ವೈದ್ಯರನ್ನು ಬೇರೆ ಕಡೆಗೆ ನಿಯೋಜನೆ ಮಾಡಬಾರದು.

​ನೂತನ ಜಿಲ್ಲಾ ಆಸ್ಪತ್ರೆ ಮಂಜೂರಾತಿ : ಮೆಗ್ಗಾನ್ ಆಸ್ಪತ್ರೆಯು ಜಿಲ್ಲಾ ಬೋಧನಾ ಆಸ್ಪತ್ರೆಯಾಗಿರುವುದರಿಂದ ಜಿಲ್ಲಾ ಆಸ್ಪತ್ರೆಯ ವಿಶೇಷ ಸೌಲಭ್ಯಗಳಿಂದ ವಂಚಿತವಾಗಿದೆ. ಹೀಗಾಗಿ ಪ್ರತ್ಯೇಕ ನೂತನ ಜಿಲ್ಲಾ ಆಸ್ಪತ್ರೆ ಮಂಜೂರು ಮಾಡಬೇಕು.​

ಔಷಧಿ ಕೊರತೆ ನಿವಾರಿಸಿ: ಆಸ್ಪತ್ರೆಯಲ್ಲಿ ಔಷಧಿ ಇಲ್ಲ ಎಂಬ ನೆಪದಲ್ಲಿ ಬಡ ರೋಗಿಗಳನ್ನು ಖಾಸಗಿ ಮೆಡಿಕಲ್‌ಗಳಿಗೆ ಕಳುಹಿಸುವುದನ್ನು ತಪ್ಪಿಸಿ, ಸರ್ಕಾರಿ ಆಸ್ಪತ್ರೆಯಲ್ಲೇ ಉಚಿತ ಔಷಧಿ ದೊರೆಯುವಂತೆ ಕ್ರಮ ಕೈಗೊಳ್ಳಬೇಕು.​ಆಡಳಿತ ಮಂಡಳಿ ಹಾಗೂ ಡಯಾಲಿಸಿಸ್ ಯಂತ್ರ: ಮೆಗ್ಗಾನ್ ಆಸ್ಪತ್ರೆಗೆ ನೂತನ ಆಡಳಿತ ಮಂಡಳಿ ರಚಿಸಬೇಕು ಹಾಗೂ ಹಳೆಯದಾಗಿರುವ ಡಯಾಲಿಸಿಸ್ ಯಂತ್ರಗಳನ್ನು ಬದಲಿಸಿ ನೂತನ ಯಂತ್ರಗಳನ್ನು ಒದಗಿಸಬೇಕು.​

ಪ್ರಾಥಮಿಕ ಆರೋಗ್ಯ ಕೇಂದ್ರಗಳ ಅಭಿವೃದ್ಧಿ: ನಗರದಲ್ಲಿ ಶಿಥಿಲಾವಸ್ಥೆಯಲ್ಲಿರುವ ಪ್ರಾಥಮಿಕ ಚಿಕಿತ್ಸಾ ಕೇಂದ್ರಗಳಿಗೆ ನೂತನ ಕಟ್ಟಡಗಳನ್ನು ಮಂಜೂರು ಮಾಡಬೇಕು ಎಂದು ಶಾಸಕರು ಮನವಿ ಮಾಡಿದರು.

ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಡಿಎಸ್‌ ಅರುಣ್, ಶ್ರೀಮತಿ ಭಾಲ್ಕಿಶ್ ಬಾನು, ಜಿಲ್ಲಾಧಿಕಾರಿಗಳಾದ ಪ್ರಕಾಶ್ ಜಿ ಟಿ, ಜಿಲ್ಲಾ ಎಸ್ಪಿ ನಿಖಿಲ್ ಸೇರಿದಂತೆ ಆರೋಗ್ಯ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಆಸ್ತಿ ವಿವಾದದ ಕಲಹ : ಜೀವಾಪುರ ಗ್ರಾಮದಲ್ಲಿ ಜೋಡಿ ಕೊಲೆ!

ಆಸ್ತಿ ವಿಚಾರವಾಗಿ ಗುಂಪುಗಳ ಮಧ್ಯೆ ಉಂಟಾದ ಕಲಹ ವಿಕೋಪಕ್ಕೆ ತಿರುಗಿ ಇಬ್ಬರನ್ನು...

ಮಂಗಳೂರು | ತುಳು ಅಧಿಕೃತ ಭಾಷೆ : ಸರ್ಕಾರದ ಆದೇಶವನ್ನು ಸ್ವಾಗತಿಸಿದ ತುಳು ಅಕಾಡೆಮಿ

ರಾಜ್ಯದ ಹೆಚ್ಚುವರಿ ಆಡಳಿತ ಭಾಷೆಯಾಗಿ ತುಳು ಭಾಷೆಯನ್ನು ಜಾರಿಗೊಳಿಸಿದ ಸಚಿವ ಸಂಪುಟ...

ವನ್ಯಜೀವಿ ಸಂಘರ್ಷದ ಸುಳಿಯಲ್ಲಿ ಅರಣ್ಯದ ಭವಿಷ್ಯ: ಸಂರಕ್ಷಣೆಯ ಹೆಸರಿನಲ್ಲಿ ಹೊಸ ಹಿತಾಸಕ್ತಿಗಳಿಗೆ ಅವಕಾಶವೇ?

ಬಂಡೀಪುರ-ನಾಗರಹೊಳೆ ಅರಣ್ಯಗಳ ಮೇಲೆ ಹೆಚ್ಚುತ್ತಿರುವ ಒತ್ತಡ; ಖಾಸಗಿ ಬಂಡವಾಳ, ಪ್ರವಾಸೋದ್ಯಮ ವಿಸ್ತರಣೆ...

ಬಾಗಲಕೋಟೆ |ಯುವಜನತೆ ಸಂವಿಧಾನ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ;ಡಾ ಜಿ ಜಿ ಹಿರೇಮಠ

ಪ್ರಜಾಪ್ರಭುತ್ವದ ಭದ್ರ ಬುನಾದಿಯಾಗಿರುವ ಭಾರತದ ಸಂವಿಧಾನ ಪ್ರತಿಯೊಬ್ಬ ನಾಗರಿಕನಿಗೆ ಹಕ್ಕು ಹಾಗೂ...