ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಶಿವಮೊಗ್ಗ ಜಿಲ್ಲಾ ಆರೋಗ್ಯಾಧಿಕಾರಿ (ಡಿಹೆಚ್‌ಒ) ಆಗಿದ್ದ ಡಾ.ನಟರಾಜ್ ವರ್ಗಾವಣೆಯಾಗಿದ್ದು, ಅವರ ಸ್ಥಾನಕ್ಕೆ ಹಾಸನದ ಜಿಲ್ಲಾ ಆರೋಗ್ಯಾಧಿಕಾರಿಯಾಗಿದ್ದ ಡಾ.ಕಾಂತರಾಜ್ ಕೆ.ಪಿ ನೇಮಕ ಮಾಡಲಾಗಿದೆ.
ಡಾ. ಕಾಂತರಾಜ್ ನಿನ್ನೆ ಶಿವಮೊಗ್ಗದಲ್ಲಿ ಅಧಿಕಾರ ಸ್ವೀಕರಿಸಿದ್ದಾರೆ. ಡಾ. ನಟರಾಜ್ 2 ವರ್ಷ 8 ತಿಂಗಳಿನಿಂದ ಶಿವಮೊಗ್ಗ ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.
ಇದೀಗ ಅವರನ್ನು ಬೆಂಗಳೂರಿನ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರ ಕಚೇರಿಗೆ ವರ್ಗಾವಣೆ ಮಾಡಲಾಗಿದೆ.





