ಶಿವಮೊಗ್ಗ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣಾ ಕ್ಷೇತ್ರಗಳ ಮೀಸಲಾಟ ಕರಡು ಅಧಿಸೂಚನೆಯನ್ನು ರಾಜ್ಯ ಸರಕಾರ ಶುಕ್ರವಾರ ಪ್ರಕಟಿಸಿದೆ. ಅಧಿಸೂಚನೆಗೆ ಸಂಬಂಧಿಸಿದಂತೆ ಸಾರ್ವಜನಿಕರು ಆಕ್ಷೇಪಣೆಗಳನ್ನು ಅ.19ರಂದು ಸಂಜೆ 5 ಗಂಟೆಯೊಳಗೆ ಪೂರಕ ದಾಖಲೆಗಳೊಂದಿಗೆ ಖುದ್ದಾಗಿ ಅಥವಾ ಅಂಚೆಯ ಮೂಲಕ ‘ಸರಕಾರದ ಕಾರ್ಯದರ್ಶಿ(ಪಂ.ರಾಜ್),ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಬಹುಮಹಡಿಗಳ ಕಟ್ಟಡ, 3ನೇ ಹಂತ, 3ನೇ ಮಹಡಿ, ಡಾ. ಅಂಬೇಡ್ಕರ್ ಬೀದಿ, ಬೆಂಗಳೂರು – 560001 ಇಲ್ಲಿಗೆ ಸಲ್ಲಿಸಬೇಕು.
ಕೊನೆಯ ದಿನಾಂಕದ ನಂತರ ಸ್ವೀಕೃತವಾದ ಆಕ್ಷೇಪಣೆಗಳನ್ನು ಪರಿಗಣಿಸುವುದಿಲ್ಲ, ಹಾಗೂ ಅಂಚೆ ಮೂಲಕ ಆಕ್ಷೇಪಣೆಗಳು ಕಚೇರಿಗೆ ಸ್ವೀಕೃತವಾಗಲು ಆಗುವ ವಿಳಂಬಕ್ಕೆ ಇಲಾಖೆಯು ಜವಾಬ್ದಾರಿಯಾಗುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ.





