ಧೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ಧೆಯೊಬ್ಬರು ನೇಣು ಬಿಗಿದುಕೊಂಡು ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ದೂನ ಗ್ರಾಮದಲ್ಲಿ ನಡೆದಿದೆ.ಮೃತರನ್ನು ದೂನ ಗ್ರಾಮದ ನಿವಾಸಿ ರತ್ನಮ್ಮ (68) ಎಂದು ಗುರುತಿಸಲಾಗಿದೆ.
ಮಾಹಿತಿ ಪ್ರಕಾರ, ರತ್ನಮ್ಮ ಅವರು ಗುರುವಾರ ರಾತ್ರಿ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ವಿಷಯ ತಿಳಿದು ಕುಟುಂಬಸ್ಥರು ಹಾಗೂ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಬಳಿಕ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ರವಾನಿಸಲಾಗಿದೆ. ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಮೃತ್ಯುವಿಗೆ ಅನಾರೋಗ್ಯದಿಂದ ಖಿನ್ನತೆಗೆ ಒಳಗಾಗಿರುವುದೇ ಕಾರಣವಿರಬಹುದು ಎನ್ನಲಾಗಿದ್ದು, ಘಟನೆಗೆ ಸಂಬಂಧಿಸಿದ ನಿಖರ ಕಾರಣ ಪೊಲೀಸ್ ತನಿಖೆಯಿಂದ ತಿಳಿದುಬರಬೇಕಿದೆ.
ಘಟನೆ ಕುರಿತು ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.






