ಶಿವಮೊಗ್ಗ | ಇ.ಎಸ್.ಐ ವಿಮಾದಾರ ಕಾರ್ಮಿಕರ ಒಪಿಡಿ ಸಮಸ್ಯೆ ತಕ್ಷಣ ಪರಿಹರಿಸಿ ; ಕಾರ್ಮಿಕ ಸಚಿವ ಸಂತೋಷ್ ಲಾಡ್‌ಗೆ ಶಾಸಕ ಎಸ್.ಎನ್. ಚನ್ನಬಸಪ್ಪ ಮನವಿ

Date:

“ಶಿವಮೊಗ್ಗ ಜಿಲ್ಲೆಯ ಇ.ಎಸ್.ಐ. (ESI) ಆಸ್ಪತ್ರೆಯ ಒಪಿಡಿಯಲ್ಲಿರುವ (OPD) ಸಮಸ್ಯೆಯನ್ನು ಕೂಡಲೇ ಬಗೆಹರಿಸಬೇಕು ಎಂದು ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್‌.ಎನ್‌. ಚೆನ್ನಬಸಪ್ಪ ಅವರು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅವರ ಬಳಿ ಮನವಿ ಮಾಡಿದರು.

- Advertisement -

ಈ ಸಂಬಂಧ ರಾಜ್ಯ ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್ ಅವರನ್ನು ಭೇಟಿ ಮಾಡಿದ ಶಾಸಕರು, ಶಿವಮೊಗ್ಗದ ಇಎಸ್‌ಐ ಆಸ್ಪತ್ರೆಯ ಹೊರರೋಗಿ ವಿಭಾಗದ ಸೌಲಭ್ಯವನ್ನು ಸ್ಥಗಿತಗೊಳಿಸಲಾಗಿದೆ. ಇದರಿಂದ ಕಾರ್ಮಿಕರು ಕಷ್ಟ ಅನುಭವಿಸುತ್ತಿದ್ದಾರೆ ಎಂದು ಕಾರ್ಮಿಕರ ಕಷ್ಟವನ್ನು ವಿವರಿಸಿದರು. “ಶಿವಮೊಗ್ಗ ಜಿಲ್ಲಾ ಇ.ಎಸ್.ಐ. ವಿಮಾದಾರರ ಹಾಗೂ ಇತರೆ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘವು ನೀಡಿರುವ ದೂರಿನಂತೆ, ಇ.ಎಸ್.ಐ ಜೊತೆ ಒಪ್ಪಂದ ಮಾಡಿಕೊಂಡಿರುವ ಖಾಸಗಿ ಆಸ್ಪತ್ರೆಗಳು ಹಣದ ಆಸೆಗೆ ರೋಗಿಗಳಿಗೆ ಅಗತ್ಯವಿಲ್ಲದಿದ್ದರೂ ಅನಗತ್ಯವಾಗಿ ಎಕ್ಸ್‌-ರೇ, ಸ್ಕ್ಯಾನಿಂಗ್, ರಕ್ತ ಪರೀಕ್ಷೆಯಂತಹ ತಪಾಸಣೆಗಳನ್ನು ನಡೆಸಿ ದುಬಾರಿ ಹಣ ವಸೂಲಿ ಮಾಡುತ್ತಿವೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಟ್ರಂಪ್‌ಗೆ ಮುಖಭಂಗ, ಯುರೋಪಿನಲ್ಲಿ ಆತಂಕ; ಜಗತ್ತಿನಲ್ಲಿ ಬದಲಾಗುತ್ತಿರುವ ಬಲಪಂಥೀಯ...

2026ರ ಅಮೆರಿಕ ಮತ್ತು ಬ್ರೆಜಿಲ್‌ನ ಚುನಾವಣಾ ಫಲಿತಾಂಶಗಳು ಜಾಗತಿಕ ಮಟ್ಟದಲ್ಲಿ ರಾಜಕೀಯ ಒಲವಿನ ಬದಲಾವಣೆಯನ್ನು ದೃಢಪಡಿಸಿವೆ. ಡೆಮಾಕ್ರಟರು ಸಾಧಿಸಿದ 255 ಹೌಸ್ ಮತ್ತು 54 ಸೆನೆಟ್ ಸ್ಥಾನಗಳ ಜಯ, ಹಾಗೂ ಬ್ರೆಜಿಲ್‌ನಲ್ಲಿನ ಅಧಿಕಾರ...

ಹೆಣ್ಣು-ಹಣ-ಚಾರಣ ಹಗರಣ: ಜಾಗತಿಕ ಚಿಪ್ ಸಾಮ್ರಾಜ್ಯದಲ್ಲಿ ಅಲ್ಲೋಲ ಕಲ್ಲೋಲ...

ಚಿಪ್ ಸಾಮ್ರಾಜ್ಯದ ಸಿಇಒ ಸುತ್ತ ಹೆಣೆದುಕೊಂಡಿರುವ ವಿವಾಹೇತರ ಸಂಬಂಧ, ಚೀನಿ ಚಾರಣ ಜಾಲ ಮತ್ತು ಭದ್ರತಾ ಆರೋಪಗಳು ಜಾಗತಿಕ ಮಾರುಕಟ್ಟೆಯನ್ನು ಅಲ್ಲೋಲಕಲ್ಲೋಲಗೊಳಿಸಿವೆ. ತಂತ್ರಜ್ಞಾನ ದೈತ್ಯರ ಒಳಸುಳಿಗಳೇನು? ಭಾರತದ ಡಿಜಿಟಲ್ ಹಾಗೂ ಸೆಮಿಕಂಡಕ್ಟರ್ ಭವಿಷ್ಯಕ್ಕೆ...

ಹೊರಗೆ ‘ರಾಮ’-ಒಳಗೆ ‘ನಾಥೂರಾಮ’: ಗಾಂಧೀಜಿಯವರ ತಾತ್ವಿಕತೆಯ ಮುಂದೆ ಬಲಪಂಥೀಯ...

ಗಾಂಧೀಜಿಯವರನ್ನು ವಿರೋಧಿಸುವ ರಾಜಕೀಯ ಪ್ರಯತ್ನಗಳು ಅವರ ವ್ಯಕ್ತಿತ್ವವನ್ನು ಕುಗ್ಗಿಸುವ ಬದಲು, ಅವರ ಆದರ್ಶಗಳ ಪ್ರಸ್ತುತತೆಯನ್ನು ಮತ್ತಷ್ಟು ಮುನ್ನೆಲೆಗೆ ತರುತ್ತಿವೆ. ಸತ್ಯ, ಅಹಿಂಸೆ, ಮಾನವೀಯತೆ, ಸಾಮಾಜಿಕ ಸಮಾನತೆ ಮತ್ತು ಗ್ರಾಮ ಸ್ವರಾಜ್ಯದ ಪರಿಕಲ್ಪನೆಗಳು ಇಂದಿಗೂ...

“ಇ.ಎಸ್.ಐ. ಯೋಜನೆಯು ಕಾರ್ಮಿಕರು ಮತ್ತು ಮಾಲೀಕರು ನೀಡುವ ಶ್ರಮದ ವಂತಿಗೆಯಿಂದಲೇ ನಡೆಯುತ್ತಿರುವ ವೈದ್ಯಕೀಯ ಸೇವಾ ವ್ಯವಸ್ಥೆಯಾಗಿದೆ. ತಪ್ಪು ಮಾಡಿದ ಆಸ್ಪತ್ರೆಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದನ್ನು ಬಿಟ್ಟು, ಒಟ್ಟಾರೆಯಾಗಿ ಒಪಿಡಿ ಸೌಲಭ್ಯವನ್ನೇ ನಿಲ್ಲಿಸುವುದರಿಂದ ನೂರಾರು ಕಾರ್ಮಿಕರು ನಿತ್ಯ ಚಿಕಿತ್ಸೆಗಾಗಿ ಪರದಾಡುವಂತಾಗಿದೆ.

ಆದ್ದರಿಂದ, ಕಾರ್ಮಿಕ ಇಲಾಖೆಯು ತಕ್ಷಣವೇ ಮಧ್ಯಪ್ರವೇಶಿಸಿ, ಕಾರ್ಮಿಕರ ಸಂಕಷ್ಟವನ್ನು ಬಗೆಹರಿಸಿ ಗುಣಮಟ್ಟದ ಚಿಕಿತ್ಸೆ ಮುಂದುವರಿಯುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಬೇಕು,” ಎಂದು ಶಾಸಕ ಶ್ರೀ ಎಸ್. ಎನ್. ಚನ್ನಬಸಪ್ಪ ಅವರು ಮನವಿ ಮಾಡಿದರು.

+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಸಿ-ಎಸ್‌ಟಿ ಮೀಸಲಾತಿ ಹೆಚ್ಚಳ ರದ್ದುಗೊಳಿಸಿದ ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ ರಾಜ್ಯ ಸರ್ಕಾರ

ಪರಿಶಿಷ್ಟ ಜಾತಿಗಳ ಮೀಸಲಾತಿಯನ್ನು ಶೇಕಡ 15ರಿಂದ 17ಕ್ಕೆ, ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು...

ವಿಜಯಪುರ |ಅಹಿಂದ ಸಮುದಾಯಗಳ ಹಕ್ಕುಗಳಿಗಾಗಿ ಒಗ್ಗಟ್ಟಿನ ಹೋರಾಟಕ್ಕೆ ಕರೆ

ಅಹಿಂದ ಸಮುದಾಯಗಳ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಹಕ್ಕುಗಳನ್ನು ರಕ್ಷಿಸುವುದಾಗಿ ಭರವಸೆ...

ಹೆಣ್ಣು-ಹಣ-ಚಾರಣ ಹಗರಣ: ಜಾಗತಿಕ ಚಿಪ್ ಸಾಮ್ರಾಜ್ಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ Nvidia CEO ಸ್ಕ್ಯಾಮ್ ಹೂರಣವೇನು?

ಚಿಪ್ ಸಾಮ್ರಾಜ್ಯದ ಸಿಇಒ ಸುತ್ತ ಹೆಣೆದುಕೊಂಡಿರುವ ವಿವಾಹೇತರ ಸಂಬಂಧ, ಚೀನಿ ಚಾರಣ...