ಶಿವಮೊಗ್ಗ | ಸಾಮೂಹಿಕ ನಕಲಿಗೆ ಅವಕಾಶ! KSOU ಪ್ರಾದೇಶಿಕ ನಿರ್ದೇಶಕ ಬಿ.ಎಂ ಸ್ವಾಮಿ ವಿರುದ್ಧ ದೂರು

Date:

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ (KSOU) ಶಿವಮೊಗ್ಗ ಪ್ರಾದೇಶಿಕ ಕೇಂದ್ರದಲ್ಲಿ ನಡೆದ ಪರೀಕ್ಷೆಯಲ್ಲಿ ಸಾಮೂಹಿಕ ನಕಲಿಗೆ ಅವಕಾಶ ನೀಡಿದ ಆರೋಪದ ಹಿನ್ನೆಲೆಯಲ್ಲಿ ಪ್ರಾದೇಶಿಕ ನಿರ್ದೇಶಕ ಬಿ.ಎಂ.ಸ್ವಾಮಿ ಸೇರಿದಂತೆ ಸಿಬ್ಬಂದಿ ವಿರುದ್ಧ ತುಂಗಾನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

- Advertisement -

ಪರೀಕ್ಷೆಯಲ್ಲಿ ಮೊಬೈಲ್ ಹಾಗೂ ಪುಸ್ತಕಗಳನ್ನು ಬಳಸಿ ಸಾಮೂಹಿಕವಾಗಿ ನಕಲು ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಈ ಸಂಬಂಧ ಪರೀಕ್ಷಾ ಕೇಂದ್ರದ ದೃಶ್ಯಗಳು ಮಾಧ್ಯಮಗಳಲ್ಲಿ ಪ್ರಸಾರವಾಗಿ, ವಿಡಿಯೋಗಳು ವೈರಲ್ ಆಗಿದ್ದವು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

‘Epstein’ ವಿವಾದದ ನಡುವೆಯೂ ಹರದೀಪ್ ಪುರಿಗೆ ಮಣೆ: ಸಿಖ್...

'Epstein files' ವಿವಾದವು ಹರದೀಪ್ ಸಿಂಗ್ ಪುರಿ ಅವರ ರಾಜಕೀಯ ಬದುಕಿನಲ್ಲಿ ಸಣ್ಣದೊಂದು ಬಿರುಗಾಳಿ ಎಬ್ಬಿಸಿದ್ದು ಸುಳ್ಳಲ್ಲ. ವಿರೋಧ ಪಕ್ಷಗಳ ಟೀಕೆಗಳು ಮತ್ತು ನೈತಿಕ ಹೊಣೆಗಾರಿಕೆಯ ಪ್ರಶ್ನೆಗಳು ಅವರನ್ನು ಸಂಪುಟದಿಂದ ಹೊರಗಟ್ಟುವ ಹಂತಕ್ಕೆ...

ಅಮೆರಿಕದಲ್ಲಿ ನೋಂದಾಯಿಸಿಕೊಂಡ RSS Friends; RSS ಜೊತೆ ಮೌಖಿಕ...

RSS Friends ಎಂಬ ಸಂಘಟನೆಯು ಅಮೆರಿಕದಲ್ಲಿ ಆರ್‌ಎಸ್‌ಎಸ್‌ನ ವಿದೇಶಿ ಏಜೆಂಟ್ ಆಗಿ ನೋಂದಾಯಿಸಿಕೊಂಡಿದೆ. ತನ್ನ ಉದ್ದೇಶಿತ ಚಟುವಟಿಕೆಗಳು ಮುಖ್ಯವಾಗಿ ಮಾಹಿತಿ ಪ್ರಸಾರ, ಶೈಕ್ಷಣಿಕ ಕಾರ್ಯಗಳು, ಸಾರ್ವಜನಿಕ ಸಂಪರ್ಕ ಮತ್ತು ಸಮುದಾಯದೊಂದಿಗಿನ ತೊಡಗಿಸಿಕೊಳ್ಳುವಿಕೆಯನ್ನು ಒಳಗೊಂಡಿರುತ್ತವೆ...

ಪ್ರಕರಣ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿತ್ತು.ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವ ಪ್ರೊ. ಎಂ.ಪಿ. ಸದಾಶಿವ ಅವರು ತುಂಗಾನಗರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ಪರೀಕ್ಷೆಯಲ್ಲಿ ನಡೆದಿರುವ ಅಕ್ರಮಗಳಿಗೆ ಪ್ರಾದೇಶಿಕ ನಿರ್ದೇಶಕ ಬಿ.ಎಂ.ಸ್ವಾಮಿ ಸೇರಿದಂತೆ ಸಂಬಂಧಪಟ್ಟ ಸಿಬ್ಬಂದಿ ಸಾಥ್ ನೀಡಿದ್ದಾರೆ ಎಂಬ ಆರೋಪದ ಕುರಿತು ತನಿಖೆ ನಡೆಸುವಂತೆ ದೂರಿನಲ್ಲಿ ಮನವಿ ಮಾಡಲಾಗಿದೆ.

ಈ ಹಿಂದೆ ಪರೀಕ್ಷೆಯ ಮುಖ್ಯ ಅಧೀಕ್ಷಕರಾಗಿದ್ದ ಬಿ.ಎಂ.ಸ್ವಾಮಿ ಅವರನ್ನು ಘಟನೆಗೆ ಸಂಬಂಧಿಸಿದಂತೆ ಹುದ್ದೆಯಿಂದ ವಜಾಗೊಳಿಸಲಾಗಿತ್ತು. ಬಳಿಕ ಅಮಾನತುಗೊಳಿಸುವ ಕ್ರಮವೂ ಕೈಗೊಳ್ಳಲಾಗಿತ್ತು ಎಂದು ತಿಳಿದುಬಂದಿದೆ.

ಇದೀಗ ವಿಶ್ವವಿದ್ಯಾಲಯದ ಕುಲಸಚಿವರ ದೂರಿನ ಆಧಾರದ ಮೇಲೆ ತುಂಗಾನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಸಾಮೂಹಿಕ ನಕಲು ಆರೋಪ ಹಾಗೂ ಇದರಲ್ಲಿ ಭಾಗಿಯಾಗಿರುವವರ ಪಾತ್ರದ ಕುರಿತು ತನಿಖೆ ಚುರುಕುಗೊಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೌಜನ್ಯ ಪ್ರಕರಣ: ಎಸ್‌ಐಟಿ ಮುಖ್ಯಸ್ಥರನ್ನು ಭೇಟಿಯಾದ ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಸುಪ್ರೀಂ ಕೋರ್ಟ್‌ಗೆ ದೂರು

ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಿಷ್ಪಕ್ಷಪಾತ ತನಿಖೆ ನಡೆಸುತ್ತಿರುವ...

ರೈತರ ನಷ್ಟ ತಡೆಯಲು ಹಾಲಿನ ದರ ಏರಿಕೆ: ಸಿಎಂ ಡಿ ಕೆ ಶಿವಕುಮಾರ್

“ಕಳೆದ ಒಂದೆರಡು ವರ್ಷದಿಂದ ಹಾಲಿನ ದರ ಏರಿಸಲು ಬೇಡಿಕೆ ಇತ್ತು. ರೈತರ...

ಸಿಇಸಿ ಗ್ಯಾನೇಶ್ ವಿರುದ್ಧ ‘ಮಹಾಭಿಯೋಗ’ಕ್ಕೆ ‘ಇಂಡಿಯಾ’ ಒಕ್ಕೂಟದಿಂದ ಅಣಕು ಸಂಸತ್ ಅಧಿವೇಶನ

ಸಿಇಸಿ ಗ್ಯಾನೇಶ್ ಕುಮಾರ್ ಅವರ ವಿರುದ್ಧ ಸಾಂಕೇತಿಕವಾಗಿ 'ಮಹಾಭಿಯೋಗ' (ವಜಾ) ನಿರ್ಣಯ...

ಬ್ಲೂಟೂತ್‌ ಪದಕ್ಕಿದೆ ಸಾವಿರ ವರ್ಷಗಳ ಇತಿಹಾಸ: ಇದು ನಿಮಗೆ ಗೊತ್ತೇ?

ಬ್ಲೂಟೂತ್‌ನ ಲೋಗೋ ಸಹ ಕೇವಲ ಒಂದು ಜ್ಯಾಮಿತೀಯ ವಿನ್ಯಾಸವಲ್ಲ. ಅದು ಹರಾಲ್ಡ್...