ಶಿವಮೊಗ್ಗ | ಹಾವು ಕಡಿತದಿಂದ ರೈತ ಅಸ್ವಸ್ಥ: ಆಸ್ಪತ್ರೆಗೆ ಸಾಗಿಸಲು ʻ108ʼ ಸಿಬ್ಬಂದಿ ನಕಾರ

Date:

ಶಿವಮೊಗ್ಗ ಜಿಲ್ಲೆಯ ನಗರ ಸಮೀಪದ ಕರಿಮನೆಯ ಕಾಡಿಗೆರೆ ಗ್ರಾಮದ ರೈತ ಜಮೀನಿನಲ್ಲಿ ಹುಲ್ಲು ಕೊಯ್ಯುವ ವೇಳೆ ನಾಗರಹಾವು ಕಡಿದು ಅಸ್ವಸ್ಥಗೊಂಡಿದ್ದು, ತುರ್ತು ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ಕರೆದೊಯ್ಯಲು 108 ಆಂಬುಲೆನ್ಸ್ ಸಿಬ್ಬಂದಿ ನಿರಾಕರಿಸಿರುವ ಆರೋಪ ಕೇಳಿಬಂದಿದೆ.

- Advertisement -

ಕಾಡಿಗೆರೆ ಗ್ರಾಮದ ಉಮೇಶ್ ಎಂಬ ರೈತನಿಗೆ ಜಮೀನಿನಲ್ಲಿ ಹುಲ್ಲು ಕೊಯ್ಯುತ್ತಿದ್ದ ವೇಳೆ ನಾಗರಹಾವು ಕಚ್ಚಿದೆ ಎನ್ನಲಾಗಿದ್ದು, ತಕ್ಷಣ ಅವರನ್ನು ನಗರ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಹೊಸನಗರ ಆಸ್ಪತ್ರೆಗೆ ಕರೆತರಲಾಗಿದೆ. ಉಮೇಶ್ ಅವರಿಗೆ ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದ ಹಿನ್ನೆಲೆಯಲ್ಲಿ ಹೊಸನಗರದಿಂದ ಶಿವಮೊಗ್ಗಕ್ಕೆ ರೆಫರ್ ಮಾಡಲಾಗಿದ್ದು, ಅವರನ್ನು ಶಿವಮೊಗ್ಗಕ್ಕೆ ಕರೆದೊಯ್ಯಲು 108 ಆಂಬುಲೆನ್ಸ್ ಸಿಬ್ಬಂದಿ ಆರಂಭದಲ್ಲಿ ನಿರಾಕರಿಸಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಆಗ್ನೇಯ ಪದವೀಧರ ಕ್ಷೇತ್ರ: ಕಾಂಗ್ರೆಸ್-ಬಿಜೆಪಿ ನಡುವೆ ಬಿರುಸಿನ ಸ್ಪರ್ಧೆ!

ವಿಧಾನ ಪರಿಷತ್ತಿನ ಕರ್ನಾಟಕ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ ಕಾವು ಪಡೆದುಕೊಂಡಿದ್ದು, ಬಿಜೆಪಿ–ಜೆಡಿಎಸ್ ಮೈತ್ರಿ ಮತ್ತು ಕಾಂಗ್ರೆಸ್ ನಡುವೆ ನೇರ ಹಣಾಹಣಿಯ ವಾತಾವರಣ ನಿರ್ಮಾಣವಾಗಿದೆ. ಕಾಂಗ್ರೆಸ್‌ನಿಂದ ಶಶಿ ಹುಲಿಕುಂಟೆಮಠ ಹಾಗೂ ಬಿಜೆಪಿ ಅಭ್ಯರ್ಥಿಯಾಗಿ...

ವಿಜಯಪುರ | ಪ್ಲಾಟ್‌ಫಾರ್ಮ್‌ ಮೇಲೆ ಹರಿವ ಚರಂಡಿ ನೀರು;...

"ಚರಂಡಿ ನೀರಿನ್ಯಾಗ ದಿನ ಹೋಗಾಕ ಹತ್ತಿವಿ…" ಇದು ವಿಜಯಪುರ ಕೇಂದ್ರ ಬಸ್ ನಿಲ್ದಾಣಕ್ಕೆ ಪ್ರತಿನಿತ್ಯ ಆಗಮಿಸುವ ಸಾವಿರಾರು ಪ್ರಯಾಣಿಕರ ಅಳಲು. ಪ್ಲಾಟ್‌ಫಾರ್ಮ್‌-1ರಲ್ಲಿ ಕೊಳಚೆ ನೀರು ಹರಿಯುತ್ತಿದ್ದರೂ, ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ಜವಾಬ್ದಾರಿಯಿಂದ...

ಒಂದು ಆಸ್ಪತ್ರೆಯಿಂದ ಮತ್ತೊಂದು ಆಸ್ಪತ್ರೆಗೆ ರೆಫರ್ ಮಾಡಲಾದ ರೋಗಿಯನ್ನು ಕರೆದೊಯ್ಯುವ ಕುರಿತು 108 ಸೇವೆಯಲ್ಲಿರುವ ನಿಯಮದ ಕಾರಣದಿಂದ ತಾವು ಕರೆದೊಯ್ಯಲು ಸಾಧ್ಯವಿಲ್ಲ ಎಂದು ಸಿಬ್ಬಂದಿ ತಿಳಿಸಿದ್ದಾರೆ ಎನ್ನಲಾಗಿದೆ. ಈ ಸಂದರ್ಭದಲ್ಲಿ ನಗರದಿಂದಲೇ ರೈತನೊಂದಿಗೆ ಬಂದ ಶಾಸಕ ಆರಗ ಜ್ಞಾನೇಂದ್ರ ಅವರ ಆಪ್ತ ಸಹಾಯಕ ರಾಜೇಶ್ ಹಿರಿಮನೆ ಮತ್ತು ನಗರ ನಿತಿನ್ ಸೇರಿದಂತೆ ಆಸ್ಪತ್ರೆ ಆವರಣದಲ್ಲಿದ್ದ ಸಾರ್ವಜನಿಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ನಂತರ ಸಾರ್ವಜನಿಕರ ಒತ್ತಾಯದ ಹಿನ್ನೆಲೆಯಲ್ಲಿ ಉಮೇಶ್ ಅವರನ್ನು 108 ಆಂಬುಲೆನ್ಸ್ ಮೂಲಕ ಶಿವಮೊಗ್ಗದ ಜಿಲ್ಲಾ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಕರೆದೊಯ್ಯಲಾಯಿತು ಎಂದು ತಿಳಿದುಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಫೇಕ್ ಸ್ಕ್ರೀನ್​ ಶಾಟ್​ ನಂಬಿದ ಶಿಕ್ಷಕಿ: 12 ದಿನಗಳಲ್ಲಿ ರೂ.6,85 ಲಕ್ಷಕ್ಕೆ ಪಂಗನಾಮ!

ಆನ್‌ಲೈನ್ ಟ್ರೇಡಿಂಗ್‌ನಲ್ಲಿ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ನೀಡುವುದಾಗಿ ನಂಬಿಸಿದ ವಂಚಕರು,...

ಶಿವಮೊಗ್ಗ | ಸಿಇಒ ಹೇಮಂತ್‌ಗೆ ಬೀಳ್ಕೊಡುಗೆ; ನೂತನ ಸಿಇಒ ರಿಷಿ ಆನಂದ್‌ ಸ್ವಾಗತಿಸಿದ ಜಿ.ಪಂ

ಶಿವಮೊಗ್ಗ ಜಿಲ್ಲಾಡಳಿತ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ನಿಕಟಪೂರ್ವ...

ಅಭಿಮಾನಿಗಳ ಆಸೆಯಂತೆ ದಸರೆಗೆ ಮರಳಿದ ಅಭಿಮನ್ಯು

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಕೊಡಗಿನ ಮತ್ತಿಗೋಡು ಆನೆ ಶಿಬಿರದಿಂದ ಅಭಿಮನ್ಯು...

ಆಗ್ನೇಯ ಪದವೀಧರ ಕ್ಷೇತ್ರ: ಕಾಂಗ್ರೆಸ್-ಬಿಜೆಪಿ ನಡುವೆ ಬಿರುಸಿನ ಸ್ಪರ್ಧೆ!

ವಿಧಾನ ಪರಿಷತ್ತಿನ ಕರ್ನಾಟಕ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ ಕಾವು ಪಡೆದುಕೊಂಡಿದ್ದು,...