ಶಿವಮೊಗ್ಗ | ಕಬ್ಬಿನ ಬೆಲೆ ನಿಗದಿಗೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ರೈತರ ಪ್ರತಿಭಟನೆ

Date:

ಕಬ್ಬು ಬೆಲೆ ನಿಗದಿ ವಿಚಾರವಾಗಿ ಕಾರ್ಖಾನೆ ಮಾಲೀಕರು ಮತ್ತು ಕಬ್ಬು ಬೆಳೆಗಾರರ ಸಮನ್ವಯ ಸಮಿತಿ ಜೊತೆ ನಡೆಸಿದ ಚರ್ಚೆ ವಿಫಲವಾಗಿದೆ. ಬರಗಾಲದಿಂದ ಕಬ್ಬು ಬೆಳೆ ಒಣಗುತ್ತಿದೆ. ತಕ್ಷಣ ಕಾರ್ಖಾನೆಗಳು ಕಬ್ಬು ಅರೆಯುವಿಕೆಯನ್ನು ಪ್ರಾರಂಭಿಸಬೇಕು. ರಾಜ್ಯ ಸರ್ಕಾರ ಕೇಂದ್ರದ ಮೇಲೆ, ಕೇಂದ್ರ ಸರ್ಕಾರ ರಾಜ್ಯದ ಮೇಲೆ ಹೇಳುವುದನ್ನು ನಿಲ್ಲಿಸಿ ತಕ್ಷಣ ಬೆಲೆ ನಿಗಧಿ ಮಾಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಇಂದು ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದೆ.

- Advertisement -

ಈ ಸಂದರ್ಭದಲ್ಲಿ ಮಾತನಾಡಿದ ರೈತ ಮುಖಂಡ ಹಿತ್ತೂರು ರಾಜು, “ರಾಜ್ಯದ ಕಬ್ಬಿನ ಸಲಹಾ ಸಮಿತಿಯ ಬೆಲೆಯನ್ನು ತಕ್ಷಣ ನಿಗಧಿ ಪಡಿಸಿ ಕಬ್ಬು ಬೆಳೆಗಾರರಿಗೆ ನ್ಯಾಯ ಒದಗಿಸಬೇಕು ಹಾಗೂ ಈ ವರ್ಷ ಹಿಂದೆಂದೂ ಕಾಣದ ಬರಗಾಲ ಪರಿಸ್ಥಿತಿ ಬಂದಿದೆ. ಸರ್ಕಾರ ಯುದ್ದೋಪಾಧಿಯಲ್ಲಿ ರೈತರ ನೆರವಿಗೆ ಬರಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಬ್ಬು ಬೆಳೆಗಾರರ ಬದುಕಿಗೆ ಸಿಹಿಯಾಗದ ಕಬ್ಬಿನ ಬೆಲೆ!

ಕರ್ನಾಟಕದ ಕೃಷಿ ಆರ್ಥಿಕತೆಯಲ್ಲಿ ಕಬ್ಬು ಪ್ರಮುಖ ವಾಣಿಜ್ಯ ಬೆಳೆಯಾಗಿದೆ. ಸಾವಿರಾರು ರೈತ ಕುಟುಂಬಗಳ ಬದುಕು, ಗ್ರಾಮೀಣ ಉದ್ಯೋಗ, ಸಕ್ಕರೆ ಕಾರ್ಖಾನೆಗಳ ಕಾರ್ಯನಿರ್ವಹಣೆ ಮತ್ತು ಅದಕ್ಕೆ ಸಂಬಂಧಿಸಿದ ಕೈಗಾರಿಕೆಗಳ ಆರ್ಥಿಕ ಚಟುವಟಿಕೆ ಕಬ್ಬಿನ ಉತ್ಪಾದನೆಯೊಂದಿಗೆ...

ಹಾಲು, ಮೊಸರು, ದಿನಸಿ ದರ ಏರಿಕೆ ಬೆನ್ನಲ್ಲೇ ಬಸ್...

ಹಾಲು, ಮೊಸರು, ದಿನಸಿ ವಸ್ತುಗಳ ದರ ಹೆಚ್ಚಳದ ಹೊರೆಯ ನಡುವೆ, ಬಸ್ ಪ್ರಯಾಣವೂ ದುಬಾರಿಯಾದರೆ ಬದುಕು ಮತ್ತಷ್ಟು ದುಸ್ತರವಾಗಲಿದೆ. ಕರ್ನಾಟಕದಲ್ಲಿ ದಿನನಿತ್ಯದ ಅಗತ್ಯ ವಸ್ತುಗಳ ಬೆಲೆ ಏರಿಕೆ ಕುರಿತು ಸಾರ್ವಜನಿಕರಲ್ಲಿ ಅಸಮಾಧಾನದ ಹೊಗೆಯಾಡಿದ್ದು,...

ರಾಮನಿಗೆ ₹150 ಕೋಟಿ, ಸೀತೆಗೆ ₹12 ಕೋಟಿ! ಬಿಗ್...

₹4,000 ಕೋಟಿಯ ಬೃಹತ್ ಬಜೆಟ್‌ನ 'ರಾಮಾಯಣ' ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಈ ಹೊತ್ತಿನಲ್ಲಿ ಚಿತ್ರರಂಗದ ಅದೇ ಹಳೆ ಹಣೆಬರಹವೊಂದು ಚರ್ಚೆಗೆ ಸಿಕ್ಕಿದೆ. ರಾಮನ ಪಾತ್ರಕ್ಕೆ ₹150 ಕೋಟಿ, ರಾವಣನಿಗೆ ₹100 ಕೋಟಿ ಸಂಭಾವನೆ!...

ಇನ್ನು ಈ ಕೆಳಗಿನ ಒತ್ತಾಯಗಳನ್ನು ತಿಳಿಸಿದ್ದಾರೆ, “ಕಬ್ಬಿಗೆ ರಾಜ್ಯ ಸರ್ಕಾರ ಎಸ್.ಎ.ಪಿ ದರ ಘೋಷಣೆ ಮಾಡಬೇಕು, ಕೇಂದ್ರ ಸರ್ಕಾರ ಸಕ್ಕರೆ ಮಾರಾಟದ ಕನಿಷ್ಟ ದರವನ್ನು ಹೆಚ್ಚಿಸಬೇಕು ಮತ್ತು ಎಫ್.ಆರ್.ಪಿ ದರವನ್ನು ಏರಿಕೆ ಮಾಡಬೇಕು, ಕೇಂದ್ರ ಮತ್ತು ರಾಜ್ಯ ಸರ್ಕಾರ ಕಬ್ಬಿಗೆ ಟನ್‌ಗೆ 5.500ರೂ. ನಿಗಧಿ ಮಾಡಬೇಕು. ಕಬ್ಬು ಬೆಳೆಗಾರರ ಸಕ್ಕರೆ ಇಳುವರಿ ಮೋಸ, ತೂಕದಲ್ಲಿ ಮೋಸ ತಪ್ಪಿಸಲು ಕ್ರಮ ಕೈಗೊಳ್ಳಬೇಕು. ಕಬ್ಬು ಬೆಳೆಗಾರರಿಗೆ ಕೊಡಬೇಕಾದ ಬಾಕಿ ಹಣವನ್ನು ತಕ್ಷಣವೇ ಕೊಡಿಸಬೇಕು” ಎಂದಿದ್ದಾರೆ.

Advertisements

“ತಕ್ಷಣದಿಂದ ಜನ-ಜಾನುವಾರುಗಳಿಗೆ ಸಮರ್ಪಕ ಕುಡಿಯುವ ನೀರು ಮತ್ತು ಮೇವು ವ್ಯವಸ್ಥೆಯಾಗಬೇಕು. ಬರಗಾಲದ ಪರಿಹಾರವಾಗಿ ತುರ್ತು ಪ್ರತಿ ಎಕರೆಗೆ 25,000 ರೂಪಾಯಿ ಘೋಷಣೆ ಮಾಡಬೇಕು. ರೈತರ ಐ.ಪಿ ಸೆಟ್‌ ಗಳಿಗೆ ಹಗಲು 10ಗಂಟೆ ಸಮರ್ಪಕ ವಿದ್ಯುತ್ ನೀಡಬೇಕು. ಕೊನೆಯದಾಗಿ ವರ್ಷವಿಡಿ ವಿಬಿ ಜಿ ರಾಮ್ ಜಿ ಉದ್ಯೋಗ ಖಾತ್ರಿಯಲ್ಲಿ ಕೆಲಸ ನೀಡಬೇಕು. ಕೃಷಿಗೆ ಮೊದಲು ಆದ್ಯತೆ ನೀಡಬೇಕು” ಎಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸ್ಟಿಂಗ್ ಆಪರೇಷನ್‌ | ತಾನೇ ತೋಡಿದ ಹಳ್ಳಕ್ಕೆ ಬಿದ್ದರಾ ಕುಮಾರಸ್ವಾಮಿ?

ಕರ್ನಾಟಕದ ರಾಜಕೀಯ ಅಂಗಳದಲ್ಲಿ ‘ಸ್ಟಿಂಗ್ ಆಪರೇಷನ್’ ಎಂಬ ಶಸ್ತ್ರವನ್ನು ಹಿಡಿದು ಎದುರಾಳಿಗಳನ್ನು...

ಕಳೆಪೆ-ಕಲಬೆರಕೆ: 20 ಲಕ್ಷ ರೂ. ಮೌಲ್ಯದ ‘ಪತಂಜಲಿ’ ತುಪ್ಪ ಜಪ್ತಿ!

ಮಹಾರಾಷ್ಟ್ರದಲ್ಲಿ ಹಬ್ಬದ ಋತುವಿನ ಸಂದರ್ಭದಲ್ಲಿ ಕಳಪೆ ಮತ್ತು ಕಲಬೆರಕೆ ಆಹಾರ ಪದಾರ್ಥಗಳ...

ರಾಯಚೂರು | ವಕೀಲರ ಮೇಲಿನ ಹಲ್ಲೆ ಖಂಡಿಸಿ ದೇವದುರ್ಗದಲ್ಲಿ ಪ್ರತಿಭಟನೆ

ರಾಜ್ಯಾದ್ಯಂತ ವಕೀಲರ ಮೇಲೆ ನಿರಂತರವಾಗಿ ಹತ್ಯೆ, ಹಲ್ಲೆ, ದೌರ್ಜನ್ಯಗಳು ನಡೆಯುತ್ತಿರುವುದನ್ನು ಖಂಡಿಸಿ,...