ಶಿವಮೊಗ್ಗ | ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ: ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ

Date:

ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡು, ಚಾಲಕನ ಸಮಯಪ್ರಜ್ಞೆಯಿಂದಾಗಿ ಭಾರಿ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದ ಘಟನೆ ಶಿವಮೊಗ್ಗ ಸಮೀಪದ ಪೆಸಿಟ್ (PESIT) ಕಾಲೇಜು ಬಳಿ ಶುಕ್ರವಾರ ರಾತ್ರಿ ನಡೆದಿದೆ.​

- Advertisement -

ಶಿವಮೊಗ್ಗದಿಂದ ರಿಪ್ಪನ್‌ಪೇಟೆ ಕಡೆಗೆ ತೆರಳುತ್ತಿದ್ದ ‘ಗುರುಶಕ್ತಿ’ ಬಸ್‌ನಲ್ಲಿ ಈ ಅವಘಡ ಸಂಭವಿಸಿದೆ. ಶುಕ್ರವಾರ ರಾತ್ರಿ ಸರಿಯಾಗಿ 7 ಗಂಟೆ ಸುಮಾರಿಗೆ ಶಿವಮೊಗ್ಗ ಬಸ್ ನಿಲ್ದಾಣದಿಂದ ಪ್ರಯಾಣಿಕರನ್ನು ತುಂಬಿಕೊಂಡು ಹೊರಟಿದ್ದ ಬಸ್, ಪೆಸಿಟ್ ಕಾಲೇಜಿನ ಬಳಿ ಬರುತ್ತಿದ್ದಂತೆಯೇ ಇಂಜಿನ್ ಬಳಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ.​

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವ್ಯವಸ್ಥೆಯ ವೈಫಲ್ಯಕ್ಕೆ 32 ಬೈಗಾ ಕಂದಮ್ಮಗಳ ಬಲಿ: ಬುಡಕಟ್ಟು...

ಕೇಂದ್ರ, ರಾಜ್ಯ ಸರ್ಕಾರಗಳು ಇಂತಹ ಅಳಿದುಳಿಯುತ್ತಿರುವ ಬುಡಕಟ್ಟು ಸಮುದಾಯದ ಕಡೆಗೆ ತಮ್ಮ ಮತ ಬಾಚುವ ಕಣ್ಣು ಮುಚ್ಚಿ ತನ್ಮ ಕರ್ತವ್ಯದ ಕಣ್ಣು ತೆರೆದು ನೋಡುವುದು ಅಗತ್ಯ. ಬೈಗಾ ಸಮುದಾಯದಂತಹ ಅಪರೂಪದ ಬುಡಕಟ್ಟು ಸಂತತಿಯನ್ನು...

ಆದಿವಾಸಿ ಕಲಾವಿದನ ನಿಧನದ 25 ವರ್ಷಗಳ ನಂತರ ₹18...

ಈ ಚಿತ್ರಕಲಾಕೃತಿಯಲ್ಲಿ ಚಿತ್ರಿತವಾಗಿರುವ ನಾಗ, ಭೂಮಿತಾಯಿಯ ಪ್ರತೀಕ. ನಾಗನ ಮೇಲೆ ನಿಂತಿರುವ ವಿಶಾಲ ವೃಕ್ಷ, ಪ್ರಕೃತಿ ಮತ್ತು ಬದುಕಿನ ಸಂಬಂಧದ ಪ್ರತಿಫಲನ. ಗೊಂಡ್ ಆದಿವಾಸಿ ಕಲಾವಿದನ ಚಿತ್ರ ಕಲಾಕೃತಿಯೊಂದು ಆತನ ಮರಣದ 25...

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಬಸ್‌ ಮುಂಭಾಗದಿಂದ ಹೊಗೆ ಮತ್ತು ಬೆಂಕಿ ಬರುತ್ತಿರುವುದನ್ನು ತಕ್ಷಣ ಗಮನಿಸಿದ ಬಸ್ ಚಾಲಕ, ಸ್ವಲ್ಪವೂ ವಿಳಂಬ ಮಾಡದೆ ಕೂಡಲೇ ಬಸ್ ಅನ್ನು ರಸ್ತೆ ಬದಿಗೆ ನಿಲ್ಲಿಸಿದ್ದಾರೆ. ಬಳಿಕ ಒಳಗಿದ್ದ ಎಲ್ಲಾ ಪ್ರಯಾಣಿಕರನ್ನು ತ್ವರಿತವಾಗಿ ಮತ್ತು ಸುರಕ್ಷಿತವಾಗಿ ಕೆಳಗೆ ಇಳಿಸಿದ್ದಾರೆ.

ಬೆಂಕಿ ಹೊತ್ತಿಕೊಂಡ ತಕ್ಷಣ ಪ್ರಯಾಣಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಆದರೆ, ಚಾಲಕನ ಧೈರ್ಯ ಮತ್ತು ತ್ವರಿತ ನಿರ್ಧಾರದಿಂದಾಗಿ ಯಾವುದೇ ಪ್ರಾಣಹಾನಿ ಅಥವಾ ದೊಡ್ಡ ಅನಾಹುತ ಸಂಭವಿಸಲಿಲ್ಲ.​ನಂತರ ಸ್ಥಳೀಯ ಸಾರ್ವಜನಿಕರ ನೆರವಿನಿಂದ ಬೆಂಕಿಯನ್ನು ಸಂಪೂರ್ಣವಾಗಿ ಆರಿಸುವಲ್ಲಿ ಚಾಲಕ ಮತ್ತು ನಿರ್ವಾಹಕ ಯಶಸ್ವಿಯಾಗಿದ್ದಾರೆ.

Advertisements

ಘಟನೆಯಿಂದ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.ಕೋಣಂದೂರು ಹಾಗೂ ತೀರ್ಥಹಳ್ಳಿ ಕಡೆಗೆ ತೆರಳಬೇಕಿದ್ದ ಪ್ರಯಾಣಿಕರನ್ನು ಬೇರೆ ಬಸ್‌ನಲ್ಲಿ ಕಳುಹಿಸಿಕೊಡಲಾಯಿತು.

ಹೊಸನಗರ ಕಡೆಗೆ ತೆರಳುವ ಪ್ರಯಾಣಿಕರಿಗೆ ಗುರುಶಕ್ತಿ ಸಂಸ್ಥೆಯ ಮತ್ತೊಂದು ಬಸ್‌ ಮೂಲಕ ಪ್ರಯಾಣದ ವ್ಯವಸ್ಥೆ ಮಾಡಲಾಯಿತು.ಚಾಲಕ ಹಾಗೂ ಸಿಬ್ಬಂದಿ ತಕ್ಷಣ ಸ್ಪಂದಿಸಿ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಿದ್ದರಿಂದ ಭಾರಿ ಅನಾಹುತವೊಂದು ತಪ್ಪಿದಂತಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯಕ್ಕೆ ₹3,705.30 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ತಂಡಕ್ಕೆ ಸಿಎಂ ಡಿಕೆಶಿ ಮನವಿ

ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ...

ಶಿವಮೊಗ್ಗ | ಶರಾವತಿ ಸಂತ್ರಸ್ತರ ಸಮಸ್ಯೆ ಪರಿಹಾರಕ್ಕೆ ಶೀಘ್ರವೇ ಕೇಂದ್ರಕ್ಕೆ ಪ್ರಸ್ತಾವನೆ: ಮಧು ಬಂಗಾರಪ್ಪ

ಶರಾವತಿ ಮುಳುಗಡೆ ಸಂತ್ರಸ್ತರ ಅರಣ್ಯ ಭೂಮಿಯನ್ನು ಡಿ-ನೋಟಿಫೈ ಮಾಡಲು ಕೇಂದ್ರ ಸರ್ಕಾರದ...

ಅನ್ಯಾಯದ ವಿರುದ್ಧ ಹೋರಾಟಕ್ಕೆ ಹೊಸ ರೂಪು: ‘ಸತ್ಯಾಗ್ರಹ’ ಪೋರ್ಟಲ್ ಪರಿಚಯಿಸಿದ ರಾಹುಲ್ ಗಾಂಧಿ

ದೇಶಾದ್ಯಂತ ನಡೆಯುತ್ತಿರುವ ವಿವಿಧ ಜನಪರ ಪ್ರತಿಭಟನೆಗಳು ಹಾಗೂ ಹೋರಾಟಗಳನ್ನು ಒಂದೇ ಸೂರಿನಡಿ...

ಫಾರ್ಮ್‌-6 ಮೂಲಕ ಮರುನೋಂದಣಿ ಸಾಧ್ಯವಿದ್ದರೆ SIR ಏಕೆ? ಚುನಾವಣಾ ಆಯೋಗಕ್ಕೆ ಚಿದಂಬರಂ ಪ್ರಶ್ನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಕೈಬಿಡಲಾದ ಮತದಾರರು...