ಶಿವಮೊಗ್ಗ | ನಕಲಿ ಚಿನ್ನಾಭರಣ ಅಡವಿಟ್ಟು ಲಕ್ಷಾಂತರ ರೂ. ವಂಚನೆ: ಓರ್ವ ಆರೋಪಿ ಬಂಧನ, ಉಳಿದವರಿಗೆ ಶೋಧ

Date:

ನಕಲಿ ಚಿನ್ನಾಭರಣಗಳನ್ನು ಅಸಲಿ ಚಿನ್ನವೆಂದು ನಂಬಿಸಿ ವಿವಿಧ ಬ್ಯಾಂಕ್‌ಗಳು ಹಾಗೂ ಸಹಕಾರ ಸಂಘಗಳಲ್ಲಿ ಅಡಮಾನ ಇಟ್ಟು ಲಕ್ಷಾಂತರ ರೂಪಾಯಿ ಸಾಲ ಪಡೆದು ವಂಚಿಸುತ್ತಿದ್ದ ಬೃಹತ್ ಜಾಲವನ್ನು ಶಿವಮೊಗ್ಗ ನಗರದ ದೊಡ್ಡಪೇಟೆ ಪೊಲೀಸರು ಭೇದಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಧಿಸಲಾಗಿದೆ. ಇನ್ನೂ ಹಲವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ.

- Advertisement -

ಪ್ರಾಥಮಿಕ ತನಿಖೆಯ ಪ್ರಕಾರ, ಆರೋಪಿಗಳು ಸುಮಾರು 400 ಗ್ರಾಂ ನಕಲಿ ಚಿನ್ನಾಭರಣಗಳನ್ನು 15ಕ್ಕೂ ಹೆಚ್ಚು ಬ್ಯಾಂಕ್‌ಗಳು ಹಾಗೂ ಹಣಕಾಸು ಸಂಸ್ಥೆಗಳಲ್ಲಿ ಅಡಮಾನ ಇಟ್ಟು, ₹30 ಲಕ್ಷಕ್ಕೂ ಅಧಿಕ ಸಾಲ ಪಡೆದು ವಂಚನೆ ನಡೆಸಿರುವುದು ಬೆಳಕಿಗೆ ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕರ್ನಾಟಕದ ಮತಪಟ್ಟಿಯಿಂದ ಒಬ್ಬ ಅರ್ಹ ಮತದಾರನನ್ನೂ ಕೈಬಿಟ್ಟಿಲ್ಲವೇ? ವಾಸ್ತವ...

ಕರ್ನಾಟಕದ ಅಂತಿಮ ಮತದಾರರ ಪಟ್ಟಿಯಲ್ಲಿ ಒಬ್ಬ ಅರ್ಹ ನಾಗರಿಕನನ್ನೂ ಕೈಬಿಟ್ಟಿಲ್ಲ, ಒಬ್ಬ ಅನರ್ಹ ವ್ಯಕ್ತಿಯನ್ನೂ ಸೇರಿಸಿಲ್ಲ ಎಂದು ಚುನಾವಣಾ ಆಯೋಗ ಹೇಳುತ್ತದೆ. ಆದರೆ, ಮತದಾರರ ಪಟ್ಟಿಯಲ್ಲಿರುವ ಅಂಕಿಅಂಶಗಳು ಮತ್ತು ದಾಖಲೆಗಳು ಬೇರೆಯದ್ದೇ ಕಥೆ...

ಮತ ಬದಲಾಗಿಲ್ಲ, ಮನಸ್ಸು ಬದಲಾಗಿದೆ: ಮತಾಂತರವೋ? ಮನಸಾಂತರವೋ?

ಭಾರತದ ಸಂವಿಧಾನ ಪ್ರತಿಯೊಬ್ಬ ನಾಗರಿಕನಿಗೂ ಧಾರ್ಮಿಕ ಸ್ವಾತಂತ್ರ್ಯವನ್ನು ನೀಡಿದೆ. ಆದರೆ ಬಲವಂತ, ಬೆದರಿಕೆ, ವಂಚನೆ ಅಥವಾ ಆಮಿಷದ ಮೂಲಕ ಧಾರ್ಮಿಕ ನಂಬಿಕೆಯನ್ನು ಬದಲಾಯಿಸುವುದು ಕಾನೂನು ಮತ್ತು ನೈತಿಕತೆಯ ದೃಷ್ಟಿಯಿಂದ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ....

ಯುಪಿ ಚುನಾವಣೆ | BJPಗೆ ಕ್ಷೇತ್ರ ಹಂಚಿಕೆ ಸವಾಲು;...

ಉತ್ತರ ಪ್ರದೇಶದ 2027ರ ವಿಧಾನಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ಸಿದ್ಧತೆ ಆರಂಭಿಸಿವೆ. ಸತತ ಮೂರನೇ ಬಾರಿಗೆ ಅಧಿಕಾರ ಉಳಿಸಿಕೊಳ್ಳಲು ಬಿಜೆಪಿ ಹೆಣಗಾಡುತ್ತಿದ್ದು, ಎನ್‌ಡಿಎ ಮಿತ್ರಪಕ್ಷಗಳೊಂದಿಗೆ ಸ್ಥಾನ ಹಂಚಿಕೆ ಮಾತುಕತೆ ಆರಂಭಿಸಿದೆ. ಮತ್ತೊಂದೆಡೆ ಸಮಾಜವಾದಿ...

ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಲ್ಲಿ ಮೊದಲಿಗೆ ಈ ಪ್ರಕರಣ ದಾಖಲಾಗಿತ್ತು. ನಕಲಿ ಚಿನ್ನಾಭರಣಗಳನ್ನು ಅಡಮಾನ ಇಟ್ಟು ಸುಮಾರು ₹7.35 ಲಕ್ಷ ಸಾಲ ಪಡೆದು ವಂಚಿಸಿರುವ ಬಗ್ಗೆ ಬ್ಯಾಂಕ್ ಅಧಿಕಾರಿಗಳು ದೂರು ನೀಡಿದ್ದರು. ಈ ದೂರಿನ ಆಧಾರದ ಮೇಲೆ ತನಿಖೆ ಆರಂಭಿಸಿದ ದೊಡ್ಡಪೇಟೆ ಪೊಲೀಸರು, ಇದೇ ರೀತಿಯ ವಂಚನೆ ಹಲವು ಬ್ಯಾಂಕ್‌ಗಳು ಹಾಗೂ ಸಹಕಾರ ಸಂಘಗಳಲ್ಲಿ ನಡೆದಿರುವುದನ್ನು ಪತ್ತೆಹಚ್ಚಿದ್ದಾರೆ. ತನಿಖೆಯಲ್ಲಿ ಪಂಜಾಬ್ ನ್ಯಾಷನಲ್ ಬ್ಯಾಂಕ್, ಇಂಡಿಯನ್ ಓವರ್‌ಸೀಸ್‌ ಬ್ಯಾಂಕ್, ಡಿಸಿಸಿ ಬ್ಯಾಂಕ್, ಶ್ರೀ ಸುವರ್ಣ ಸಹಕಾರ ಸಂಘ ಹಾಗೂ ತೀರ್ಥಹಳ್ಳಿಯ ಸುವರ್ಣ ವರ್ತಕರ ಸಂಘ ಸೇರಿದಂತೆ ಒಟ್ಟು 15ಕ್ಕೂ ಹೆಚ್ಚು ಸಂಸ್ಥೆಗಳಲ್ಲಿ ನಕಲಿ ಚಿನ್ನಾಭರಣಗಳನ್ನು ಅಡಮಾನ ಇಟ್ಟಿರುವುದು ಬೆಳಕಿಗೆ ಬಂದಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಥಹಳ್ಳಿ ತಾಲೂಕಿನ ಟಿಪ್ಪರ್ ಲಾರಿ ಚಾಲಕ ಲೋಕೇಶ್ ಎಂಬಾತನನ್ನು ಬಂಧಿಸಲಾಗಿದ್ದು, ಈ ವಂಚನಾ ಜಾಲದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎನ್ನಲಾದ ಸುಧಾ, ರಾಹುಲ್ ಸೇರಿದಂತೆ ಇತರ ಆರೋಪಿಗಳಿಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.

ಬಂಧಿತ ಆರೋಪಿಯಿಂದ ಹೆಚ್ಚಿನ ಮಾಹಿತಿ ಕಲೆಹಾಕಲಾಗುತ್ತಿದ್ದು, ಇನ್ನೂ ಹಲವು ಬ್ಯಾಂಕ್‌ಗಳು ಹಾಗೂ ಹಣಕಾಸು ಸಂಸ್ಥೆಗಳಿಗೆ ಇದೇ ರೀತಿಯಲ್ಲಿ ವಂಚನೆ ನಡೆಸಿರುವ ಸಾಧ್ಯತೆ ಇರುವುದರಿಂದ ತನಿಖೆಯನ್ನು ಮತ್ತಷ್ಟು ವಿಸ್ತರಿಸಲಾಗಿದೆ.

ಸ್ಥಳೀಯ ನಿವಾಸಿಯೊಬ್ಬರು ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ನಕಲಿ ಚಿನ್ನ ದಂಧೆ ಬೃಹತ್‌ ಜಾಲವಾಗಿದೆ. ನಕಲಿ ಚಿನ್ನವನ್ನು ಅಡವಿಟ್ಟು, ಪುನಃ ಬಿಡಿಸಿಕೊಳ್ಳಲು ಬಾರದಿದ್ದ ಹಿನ್ನೆಲೆಯಲ್ಲಿ ಅವುಗಳನ್ನು ಅರಾಜಿಗಿಟ್ಟ ಸಂದರ್ಭದಲ್ಲಿ ಪ್ರಕರಣ ಬೆಳಕಿಗೆ ಬಂದಿದೆ. ಇದರ ಜಾಡು ಹಿಡಿದು ಪ್ರತಿ ಬ್ಯಾಂಕ್‌ಗಳಲ್ಲಿಯೂ ತನಿಖೆ ನಡೆಸಲಾಗುತ್ತಿದೆ. ಸುಮಾರು… ಕೋಟ್ಯಂತರ ರೂಪಾಯಿ ಮೋಸವಾಗಿರುವ ಅನುಮಾನವಿದೆ ಎನ್ನಲಾಗುತ್ತಿದೆ” ಎಂದು ತಿಳಿಸಿದರು.

ಇದನ್ನೂ ಓದಿದ್ದೀರಾ? ಯಾದಗಿರಿ | ಕನಿಷ್ಠ ಕೂಲಿ, ಸೇವಾ ಭದ್ರತೆಗೆ ಆಗ್ರಹ; ಹೊರಗುತ್ತಿಗೆ ನೌಕರರ ಪ್ರತಿಭಟನೆ

ಇತ್ತೀಚೆಗೆ ದಕ್ಷಿಣ ಕನ್ನಡದಲ್ಲಿಯೂ ಇದೇ ರೀತಿಯ ಪ್ರಕರಣ ಬೆಳಕಿಗೆ ಬಂದಿದ್ದು, ಬ್ಯಾಂಕ್‌ಗಳಲ್ಲಿ ನಕಲಿ ಚಿನ್ನ ಅಡವಿಟ್ಟು ವಂಚಿಸಲು ಯತ್ನಿಸಿದ ಇಬ್ಬರನ್ನು ದಕ್ಷಿಣ ಕನ್ನಡ ಪೊಲೀಸರು ಬಂಧಿಸಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಸ್ಲೇರಿಯಲ್ಲಿ ಕ್ಯಾನ್ಸರ್‌ ಕಾರಕ ಅಂಶ ಪತ್ತೆ; ಅಂಬಾನಿಯ ‘ಕ್ಯಾಂಪಾ ಶ್ಯೂರ್‌’ ನೀರಿನ ಕತೆ ಏನು?

ನಾವು ಕುಡಿಯುವ ನೀರು ಎಷ್ಟು ಸುರಕ್ಷಿತ? ದಾಹ ತಣಿಸಿಕೊಳ್ಳಲು ನಾವು ನಂಬಿ...

ಈ ದಿನ ಸಂಪಾದಕೀಯ | ದುಷ್ಟರ ದುರಾಸೆಯೂ; ಕಾಡು-ನಾಡು ನಡುವಿನ ಸಂಘರ್ಷವೂ

ಕಾಡಾನೆ ಮತ್ತು ಮಾನವನ ನಡುವಿನ ಸಂಘರ್ಷ ಸಾಮಾನ್ಯ ಸಂಗತಿಯಲ್ಲ. ಇದು ಮುಖ್ಯವಾಗಿ...

ದಿಲ್ಜಿತ್ ದೋಸಾಂಜ್ ಸಂಗೀತ ಕಾರ್ಯಕ್ರಮಕ್ಕೆ ಬಾಂಬ್ ಬೆದರಿಕೆ: ಬೆಂಗಳೂರು ಮೆಟ್ರೋ ಸ್ಫೋಟಿಸುವ ಸಂದೇಶ

ಬೆಂಗಳೂರಿನ ನಿಗದಿಯಾಗಿರುವ ಗಾಯಕ ದಿಲ್ಜಿತ್ ದೋಸಾಂಜ್ ಅವರ ಸಂಗೀತ ಕಾರ್ಯಕ್ರಮಕ್ಕೆ ಅಪರಿಚಿತರು...

ದಕ್ಷಿಣ ಕನ್ನಡ | ಆಶಾ ಕಾರ್ಯಕರ್ತೆಯರ ಪ್ರೋತ್ಸಾಹಧನಕ್ಕೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲಿ: ವಿಜಯೇಂದ್ರಗೆ ಯು.ಟಿ. ಖಾದರ್ ತಿರುಗೇಟು

ಆಶಾ ಕಾರ್ಯಕರ್ತೆಯರು ಕೇಂದ್ರ ಸರ್ಕಾರದ ಅಧೀನದಲ್ಲಿ ಬರುತ್ತಾರೆ. ಅವರಿಗೆ ಪ್ರೋತ್ಸಾಹಧನ ಹೆಚ್ಚಿಸುವಂತೆ...