ಶಿವಮೊಗ್ಗ | ಎಫ್‌ಸಿಐ ಗೋದಾಮಿನ ಹುಳು-ನುಸಿ ಕಾಟದಿಂದ ಬೇಸತ್ತ ಸ್ಥಳೀಯರು: ಸ್ಥಳಾಂತರಕ್ಕೆ ಆಗ್ರಹ

Date:

ಶಿವಮೊಗ್ಗದ ಆಲ್ಕೊಳ ಬಳಿ ಇರುವ ಎಫ್‌ಸಿಐ ಗೋದಾಮಿನಲ್ಲಿ ಸಂಗ್ರಹವಾಗಿರುವ ಅಕ್ಕಿಯಿಂದ ಹುಳು, ಹುಪ್ಪಟೆ, ನುಸಿಗಳು ಹೊರಬಂದು ಸುತ್ತಮುತ್ತಲಿನ ನಿವಾಸಿಗಳಿಗೆ ತೀವ್ರ ಕಿರಿಕಿರಿ ಹಾಗೂ ಆರೋಗ್ಯ ಸಮಸ್ಯೆ ಉಂಟುಮಾಡುತ್ತಿದೆ ಎಂದು ಕೆಪಿಸಿಸಿ ಸದಸ್ಯ ವೈ.ಹೆಚ್. ನಾಗರಾಜ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

ಗೋದಾಮಿನಲ್ಲಿ ಬೂಸು ಹಿಡಿದ ಅಕ್ಕಿಯಿಂದ ಹೊರಬರುತ್ತಿರುವ ಸಾವಿರಾರು ಹುಳುಗಳು ನೇರವಾಗಿ ಪಕ್ಕದ ಮನೆಗಳಿಗೆ ನುಗ್ಗುತ್ತಿವೆ. ಅಡುಗೆ ಮನೆ, ನೀರು, ಆಹಾರ ಪದಾರ್ಥಗಳಿಗೆ ಹುಳುಗಳು ಸೇರುತ್ತಿದ್ದು, ದುರ್ವಾಸನೆ ಹಾಗೂ ಚರ್ಮದ ಖಾಯಿಲೆ, ಉಸಿರಾಟದ ತೊಂದರೆಯಿಂದ ನಿವಾಸಿಗಳು ಬೇಸತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಗ್ಯಾನೇಶ್ ಕುಮಾರ್ ವಿರುದ್ಧದ 20 ವರ್ಷಗಳ ಪ್ರಕರಣಕ್ಕೆ ಮರುಜೀವ;...

ಭಾರತದ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್‌ ಕುಮಾರ್ ವಿರುದ್ಧ 2006ರಲ್ಲಿ ದಾಖಲಾಗಿದ್ದ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣಕ್ಕೆ ಕೇರಳ ಸರ್ಕಾರ ಈಗ ಮರುಜೀವ ನೀಡಿದೆ. ಪ್ರಕರಣವನ್ನು ವಿಜಿಲೆನ್ಸ್ ತನಿಖೆಗೆ ಆದೇಶ ಹೊರಡಿಸಿದೆ....

ನೊಬೆಲ್‌ ಪ್ರಶಸ್ತಿ ಸರಣಿ | ಶಾಸ್ತ್ರೀಯ ಪರಂಪರೆಗೆ ಸಮಕಾಲೀನ...

ಈ ಬಾರಿಯ ಸಾಹಿತ್ಯದ ನೊಬೆಲ್‌ ಪುರಸ್ಕಾರ ಕೆನಡಾದ ಆನ್‌ ಕಾರ್ಸನ್‌ ಅವರ ಮುಡಿಗೇರಿದೆ. ಇವರು ಕವಯತ್ರಿ, ಪ್ರಬಂಧಗಾರ್ತಿ ಹಾಗೂ ಅನುವಾದಕಿ. ಕ್ಲಾಸಿಕಲ್‌ ಗ್ರೀಕ್‌ ಸಾಹಿತ್ಯದ ಪ್ರೇಮಿಯಾದ ಕಾರ್‌ಸನ್‌ ಶಾಸ್ತ್ರೀಯ ಮಾದರಿಯನ್ನು ಸಮಕಾಲೀನ ಸಂದರ್ಭಗಳಲ್ಲಿ...

ಈ ಬಗ್ಗೆ ನಿವಾಸಿಗಳು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಕ್ರಮ ಕೈಗೊಳ್ಳದಿರುವುದು ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಸಾಕ್ಷಿಯಾಗಿದೆ.ಬಡವರ ಹೊಟ್ಟೆ ತುಂಬಬೇಕಾದ ಅನ್ನವನ್ನು ಅಧಿಕಾರಿಗಳು ಹಾಳು ಮಾಡುತ್ತಿದ್ದಾರೆ. ಒಂದೆಡೆ ಬಡವರು ಅನ್ನಕ್ಕಾಗಿ ಪರದಾಡುತ್ತಿದ್ದರೆ, ಇನ್ನೊಂದೆಡೆ ಕೋಟ್ಯಂತರ ರೂಪಾಯಿ ಮೌಲ್ಯದ ಆಹಾರ ಧಾನ್ಯ ಗೋದಾಮಿನಲ್ಲೇ ಕೊಳೆಯುತ್ತಿದೆ. ಇದು ಬಡವರ ಹಸಿವಿನ ಮೇಲೆ ಮಾಡುತ್ತಿರುವ ದ್ರೋಹವಾಗಿದೆ.

ಈ ಕೂಡಲೇ ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಸಾರ್ವಜನಿಕರಿಗೆ ತೊಂದರೆಯಾಗದಂತೆ ಕೊಳೆತ ಅಕ್ಕಿಯನ್ನು ಕೂಡಲೇ ವಿಲೇವಾರಿ ಮಾಡಬೇಕು. ಗೋದಾಮುಗಳನ್ನು ಜನವಸತಿ ಪ್ರದೇಶದಿಂದ ದೂರ ಸ್ಥಳಾಂತರಿಸಬೇಕು, ಇಲ್ಲವೇ ವೈಜ್ಞಾನಿಕವಾಗಿ ಔಷಧಿ ಸಿಂಪಡಿಸಿ ಹುಳು-ನುಸಿ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು.

ಈಗ ತೊಂದರೆಗೀಡಾಗಿರುವ ನಿವಾಸಿಗಳ ಆರೋಗ್ಯದ ಬಗ್ಗೆ ಗಮನ ಹರಿಸಬೇಕು. ಈ ವಿಚಾರದಲ್ಲಿ ಸಂಸದರ ಪಾತ್ರ ಬಹಳ ಮುಖ್ಯವಾಗಿದೆ ಎಂದು ವೈ.ಹೆಚ್.ನಾಗರಾಜ್ ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ರಾಜ್ಯೋತ್ಸವ ಮೆರವಣಿಗೆಯಲ್ಲಿ ಡಿಜೆ ಶಬ್ದಕ್ಕೆ 80 ಡೆಸಿಬಲ್ ಮಿತಿ

ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಬೆಳಗಾವಿ ನಗರದಲ್ಲಿ ನಡೆಯಲಿರುವ ಮೆರವಣಿಗೆಯಲ್ಲಿ ಡಿಜೆ ಬಳಕೆಗೆ...

ಪಶ್ಚಿಮ ಬಂಗಾಳ ಉಪಚುನಾವಣೆ ವೇಳೆ ಅಕ್ರಮದ ಆರೋಪ; ಮರುಮತದಾನಕ್ಕೆ ವಿಪಕ್ಷಗಳ ಆಗ್ರಹ

ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೇಜಿನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ...

ಶಿವಮೊಗ್ಗ | ಸೂಡಾ ನೂತನ ಅಧ್ಯಕ್ಷರಿಗೆ ಶುಭಕೋರಿದ ಸಚಿವ ಮಧು ಬಂಗಾರಪ್ಪ; ಪಕ್ಷ ಸಂಘಟನೆಗೆ ಕರೆ

ಶಿವಮೊಗ್ಗ–ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ (ಸೂಡಾ) ನೂತನ ಅಧ್ಯಕ್ಷರಾದ ಸಿ.ಜಿ. ಮಧುಸೂದನ್ ಅವರು...

ಸಿಎಂಆರ್‌ಎಲ್ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಹೈಕೋರ್ಟ್ ಸೂಚನೆ

ಬಹುಚರ್ಚಿತ ₹1.72 ಕೋಟಿ ಮೊತ್ತದ ಸಿಎಂಆರ್‌ಎಲ್-ಎಕ್ಸಾಲಾಜಿಕ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ...